Subscribe to Updates
Get the latest creative news from FooBar about art, design and business.
- ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
- ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
- ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
- ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
- ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
- ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
- ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
- ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
Author: admin
ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಅಗತ್ಯ ವಸ್ತುಗಳನ್ನು ಪೂರೈಸಲು ಒಪ್ಪಿಕೊಂಡಿದೆ ಎನ್ನಲಾಗಿದೆ. ಭಾರತ ಮತ್ತು ಮಾಲ್ಡೀವ್ಸ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಅಡಿಯಲ್ಲಿ 2024-2025 ರ ಅವಧಿಯಲ್ಲಿ ಸರ್ಕಾರವು ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಅಕ್ಕಿ, ಗೋಧಿ, ಹಿಟ್ಟು, ಸಕ್ಕರೆ, ಧಾನ್ಯ, ನದಿ ಮರಳನ್ನು ಒಳಗೊಂಡಂತೆ ಕೆಲವು ಪ್ರಮಾಣದ ಅಗತ್ಯ ವಸ್ತುಗಳನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಒಪ್ಪಿಗೆ ನೀಡಿದೆ ಎಂದು ವರದಿ ತಿಳಿಸಿದೆ. ಈ ವಸ್ತುಗಳ ರಫ್ತು 2024-25 ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಅಥವಾ ಭವಿಷ್ಯದ ಯಾವುದೇ ನಿರ್ಬಂಧ/ನಿಷೇಧದಿಂದ ವಿನಾಯಿತಿ ಪಡೆಯುತ್ತದೆ. ಇದಕ್ಕಾಗಿ ಮಾಲ್ಡೀವ್ಸ್ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದೆ ಜೊತೆಗೆ ದೀರ್ಘಕಾಲ ಇಂತಹ ಗೆಳೆತನ ಬಯಸುವುದಾಗಿ ಹೇಳಿದೆ. ಮಾಲ್ಡೀವ್ಸ್ ನಿಂದ ಭಾರತ ಸ್ಕ್ರ್ಯಾಪ್ ಲೋಹಗಳು ಆಮದು ಮಾಡುತ್ತದೆ. ಆದರೆ ಮಾಲ್ಡೀವ್ಸ್ ಗೆ ಭಾರತ ವಿವಿಧ ಎಂಜಿನಿಯರಿಂಗ್ ಮತ್ತು ಕೈಗಾರಿಕಾ ಉತ್ಪನ್ನಗಳು, ಔಷಧಗಳು, ರಾಡಾರ್ ಉಪಕರಣಗಳು,…
ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ಪಕ್ಷದ ಬಗ್ಗೆ ವಿಚಿತ್ರ ಅಭಿಮಾನ ತೋರುವ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡ ನಿವಾಸಿಯೊಬ್ಬರ ಮದುವೆ ಕಾರ್ಡ್‌ನಲ್ಲಿ ಜನಸೇನಾ ಪಕ್ಷದ ಪ್ರಣಾಳಿಕೆಯನ್ನು ಮುದ್ರಿಸಲಾಗಿದೆ. ವ್ಯಕ್ತಿ ಪಕ್ಷದ ನಾಯಕ ಪವನ್ ಕಲ್ಯಾಣ್ ಬೆಂಬಲಿಗರಾಗಿದ್ದು, ಪಿಠಾಪುರಂನಲ್ಲಿ ಪವನ್ ಕಲ್ಯಾಣ್ ಗೆ ಮತ ನೀಡುವಂತೆ ಆಹ್ವಾನಿತರನ್ನು ಒತ್ತಾಯಿಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿ ಜನರಿಗೆ ಮದುವೆ ಕಾರ್ಡ್‌ಗಳನ್ನು ವಿತರಿಸುತ್ತಿರುವುದನ್ನು ಕಾಣಬಹುದಾಗಿದೆ. ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ ಎಂಬುದು ಗಮನಾರ್ಹ. ಇತ್ತೀಚಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಎನ್ ಡಿಎ ಮೈತ್ರಿಕೂಟದ ಭಾಗವಾಗಿತ್ತು. ಪಕ್ಷವು ಮುಂಬರುವ ಲೋಕಸಭಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ 29 ವಿದ್ಯಾರ್ಥಿನಿಯರು, ಐವರು ಎಚ್ ಬ್ಲಾಕ್ ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ. ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಲು ಕಾರಣ ಇನ್ನೂ ನಿಗೂಢವಾಗಿದ್ದು ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಮೆರಿಕದ ಓಹಿಯೊ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಅಮೆರಿಕದ ಪೊಲೀಸರು ತಿಳಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ವಿದ್ಯಾರ್ಥಿ ಸಾವಿನ ಬಗ್ಗೆ ಖಚಿತಪಡಿಸಿದೆ. ಆದರೆ ಸಾವಿನ ಕಾರಣ ತಿಳಿದು ಬಂದಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದೆ. ಮೃತ ವಿದ್ಯಾರ್ಥಿಯನ್ನು ಉಮಾ ಸತ್ಯಸಾಯಿ ಗದ್ದೆ ಎಂದು ಗುರುತಿಸಲಾಗಿದೆ. ಓಹಿಯೊದ ವಿಶ್ವವಿದ್ಯಾಲಯವೊಂದರಲ್ಲಿ ಉಮಾ ಸತ್ಯಸಾಯಿ ಅಭ್ಯಾಸ ಮಾಡುತ್ತಿದ್ದರು. ವಿದ್ಯಾರ್ಥಿ ಸಾವು ದುರದೃಷ್ಟಕರ. ಉಮಾ ಸತ್ಯಸಾಯಿ ನಿಧನದಿಂದ ತೀವ್ರ ದುಃಖವಾಗಿದೆ. ಮೃತ ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸುವುದು ಸೇರಿದಂತೆ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮಾಡಲಾಗುವುದು ಎಂದು ಭಾರತೀಯ ರಾಯಭಾರಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದು ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅರಾಫತ್ ನಿಗೂಢವಾಗಿ ಮೃತಪಟ್ಟಿದ್ದ. ಈ ವರ್ಷದ…
ಹಾವೇರಿ: ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿಂದು ಬಸವರಾಜ ಬೊಮ್ಮಾಯಿಯವರು ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಮತದಾರರಲ್ಲಿ ಮತಯಾಚನೆ ಮಾಡಿದರು. ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಆದರೆ ಸಿದ್ದರಾಮಣ್ಣನ ಆಡಳಿತದ ಈ ಸರ್ಕಾರಕ್ಕೂ ಸಿದ್ದರಾಮಯ್ಯಗಿರುವ ಅನುಭವವೇ ಬೇರೆಯಾಗಿದೆ. ಈ ಸಿದ್ದರಾಮಣ್ಣನ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು. ಇನ್ನು ಗ್ಯಾರಂಟಿ ಯೋಜನೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಸರಿಯಾದ ಹಣಕಾಸಿನ ವ್ಯವಸ್ಥೆ ಮಾಡಲೇ ಇಲ್ಲ. ಸರಿಯಾದ ವ್ಯವಸ್ಥೆ ಮಾಡದೆಯೇ ಕಾಂಗ್ರೆಸ್‌ನವರು ಗ್ಯಾರೆಂಟಿಗಳನ್ನು ಕೊಡುತ್ತೇವೆ ಎಂದರು. ಆದರೆ, ಇದ್ದ ಹಣಕಾಸಿಗೆ ಕೈ ಹಾಕಿ…
ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ. ಒಂದು ವೇಳೆ ಅವರು ಬಳಕೆ ಮಾಡಿದರೆ ಅದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಹಾಗೂ ಬಿ.ವೈ.ರಾಘವೇಂದ್ರ ನಡುವೆ ನಡೆದ ಮೋದಿ ಫೋಟೋ ವಿವಾದ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಕೆ ಮಾಡಿಕೊಳ್ಳಬಹುದಿತ್ತು. ಬಿಜೆಪಿ ಪಕ್ಷಕ್ಕೆ ಮಾತ್ರ ರಾಜಕೀಯದ ಸಂದರ್ಭದಲ್ಲಿ ಮೋದಿ ಅವರ ಫೋಟೋ ಬಳಸುವ ಅಧಿಕಾರವಿದೆ. ಆದರೆ ಈಶ್ವರಪ್ಪ ಅವರು ಅನಧಿಕೃತವಾಗಿ ಮೋದಿ ಅವರ ಫೋಟೋವನ್ನು ಬಳಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ ನಂತರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. ಈ ಬಾರಿ ಈಶ್ವರಪ್ಪ ಅವರಿಗೆ ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದಾಗಿ ಘೋಷಿಸಿದ್ದರು. ಇನ್ನು…
ತುಮಕೂರು: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇಂದು ನಾಮಪತ್ರ ಸಲ್ಲಿಸಲಾಯಿತು. ನಗರದ ಟೌನ್ ಹಾಲ್ ನಿಂದ ಮೆರವಣಿಗೆಯಲ್ಲಿ ತೆರಳಿ ಎಸ್ ಯುಸಿಐ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ರೈತರು,ಕಾರ್ಮಿಕರು ದುಡಿಯುವ ಜನಗಳ ಸಮಸ್ಯೆಗಳ ಧ್ವನಿಯನ್ನು ಸಂಸತ್ತಿನಲ್ಲಿ ಚರ್ಚಿಸಲು ಎಸ್.ಎನ್.ಸ್ವಾಮಿಯವರನ್ನು ಬೆಂಬಲಿಸಿ, ಎಸ್‌ಯುಸಿಐ ಪಕ್ಷವನ್ನು ಬಲಪಡಿಸಿ ಎಂಬ ಘೋಷಣೆಗಳೊಂದಿಗೆ ಕಾರ್ಯಕರ್ತರು ಕೂಗುತ್ತ ಮೆರವಣಿಗೆ ನಡೆಸಿದರು. ಮೆರವಣಿಗೆಗೆ ಮುಂಚೆ ಮಾತನಾಡಿದ ಅಭ್ಯರ್ಥಿ ಎಸ್.ಎನ್.ಸ್ವಾಮಿ, ಸಮಾಜದಲ್ಲಿ ಬಡವರು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿದೆ. ನಮ್ಮನ್ನು ಆಳುತ್ತಿರುವ ಪಕ್ಷಗಳು ಬಂಡವಾಳ ಶಾಹಿಗಳ ಶ್ರೀಮಂತ ಮನೆತನಗಳ ಲಾಭವನ್ನು ಹೆಚ್ಚಿಸುತ್ತಿವೆ. ದೇಶದಲ್ಲಿ ಜನರು ಬೆಲೆ ಏರಿಕೆ ನಿರುದ್ಯೋಗದಂಥ ಸಮಸ್ಯೆಗಳನ್ನು ತೀರ್ವವಾಗಿ ಎದುರಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಎಡಪಂಥೀಯ ಸಿಪಿಐ, ಸಿಪಿಐಎಂ ಪಕ್ಷಗಳು ಕೆಲವೊಂದು ಸೀಟುಗಳ ಲಾಭಕ್ಕಾಗಿ ಚುನಾವಣಾ ರಾಜಕೀಯದಲ್ಲಿ ಮುಳುಗಿವೆ. ಕಮ್ಯುನಿಸ್ಟ್ ವಿಚಾರಕ್ಕೆ ಕಾರ್ಮಿಕರನ್ನು ಸಜ್ಜುಗೊಳಿಸಬೇಕಾಗಿದ್ದ ಆ ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬೆಂಬಲ ಸೂಚಿಸಿವೆ. ಆದ್ದರಿಂದ ಈ ಚುನಾವಣೆಯಲ್ಲಿ ನಮ್ಮ ಪಕ್ಷವು ತನ್ನ ಶಕ್ತಿ…
ಬೀದರ್: ಜಿಲ್ಲೆಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನ ದಾಖಲಾಗಿದ್ದು, ಹೀಗಾಗಿ ನಾಗರಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹಾಗೂ ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಅವರು ಹಲವು ನಿಯಮಗಳನ್ನು ಸಾರ್ವಜನಿಕರು ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. * ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಿಂದ ಹೊರಗೆ ಹೋಗುವುದನ್ನು ಆದಷ್ಟು ಮುಂದೂಡುವುದು. * ದೇಹದಲ್ಲಿ ನಿರ್ಜಲಿಕರಣ(Dehydration) ಆಗದಂತೆ ಸಾಕಷ್ಟು ನೀರು ಕುಡಿಯುವುದು, ಸಾಧ್ಯವಾದಲ್ಲಿ ಓ.ಆರ್.ಎಸ್. ಬೆರೆಸಿ ಕುಡಿಯಿರಿ. * ಮಕ್ಕಳನ್ನು, ಸಾಕು ಪ್ರಾಣಿಗಳನ್ನು ನಿಲ್ಲಿಸಿದ ವಾಹನಗಳಲ್ಲಿ ಬಿಟ್ಟು ಹೋಗಬೇಡಿ. * ಪ್ರಾಣಿಗಳನ್ನು ಗುಡಿಸಲು/ನೆರಳಿನಲ್ಲಿ ಇರಿಸಿ ಮತ್ತು ಸಾಕಷ್ಟು ಕುಡಿಯಲು ನೀರು ಕೊಡಿ. * ನಿಮ್ಮ ಮನೆಯ ಕಿಟಕಿಗಳಿಗೆ ಪರದೆಗಳನ್ನು ಬಳಸಿ ಬಿಸಿಲಿನಿಂದ ಮನೆಯನ್ನು ತಂಪಾಗಿರಿಸಿ, ರಾತ್ರಿ ಸಮಯದಲ್ಲಿ ಕಿಟಕಿಗಳನ್ನು ತೆರೆದಿಟ್ಟು ಮನೆಯನ್ನು ತಂಪಾಗಿರಿಸಿ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸಹಾರನಪುರ: ಅಧಿಕಾರಕ್ಕೆ ಬಂದ ಬಳಿಕ ‘ಕಮಿಷನ್’ ಹೇಗೆ ಗಳಿಸುವುದು ಎಂಬುದು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಇರಾದೆಯಾಗಿದೆ. ಮತ್ತೊಂದೆಡೆ ಬಿಜೆಪಿ ನೇತೃತ್ವದ ಎನ್ ಡಿಎಗೆ ‘ಮಿಷನ್’ (ಗುರಿ) ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಪ್ರದೇಶದ ಸಹಾರನಪುರದಲ್ಲಿ ಪಕ್ಷದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವುದನ್ನು ಹೇಗಾದರೂ ಮಾಡಿ ತಡೆಯುವುದೇ ಇಂಡಿಯಾ ಮೈತ್ರಿಕೂಟದ ಇರಾದೆಯಾಗಿದೆ’ ಎಂದು ಆರೋಪಿಸಿದ್ದಾರೆ. ‘ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕಮಿಷನ್ ಗಳಿಸುವುದರಲ್ಲೇ ಮಗ್ನವಾಗಿತ್ತು. ಈಗ ಇಂಡಿಯಾ ಮೈತ್ರಿಕೂಟವು ಕಮಿಷನ್ ಗಳಿಸುವ ಗುರಿಯನ್ನೇ ಹೊಂದಿದೆ. ಮತ್ತೊಂದೆಡೆ ಮೋದಿ ಸರ್ಕಾರವು ಒಂದು ಮಿಷನ್‌ನಲ್ಲಿದೆ’ ಎಂದು ಅವರು ಹೇಳಿದರು. ‘ಸಮಾಜವಾದಿ ಪಕ್ಷ ಪ್ರತಿ ಗಂಟೆಗೊಮ್ಮೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಪ್ರಬಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಧೈರ್ಯವಿಲ್ಲ’ ಎಂದು ಅವರು ವಾಗ್ದಾಳಿ ನಡೆಸಿದರು. ‘ಶಕ್ತಿ’ಯನ್ನು ಆರಾಧಿಸುವುದು ನಮ್ಮ ಆಧ್ಯಾತ್ಮಿಕ ಪಯಣದ ಭಾಗವಾಗಿದೆ. ಆದರೆ, ಇಂಡಿಯಾ…
ಕೋಲಾರ: ಕೋಲಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದ್ದಾರೆ. “ನಾವು ಮತ್ತೆ ೨೫ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು. ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು. ಆದರೆ ಆ ರೀತಿ ಆಗಲಿಲ್ಲ ಹಾಗಾಗಿ ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ” ಎಂದು ತಿಳಿಸಿದರು. “ನಾವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ. ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರೆಯುತ್ತದೆ. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕು ಮೋದಿಯನ್ನು ಇಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು” ಎಂದು ಹೇಳಿದರು. ನಮ್ಮತುಮಕೂರಿನ…