Author: admin

ತೀರ್ಥಹಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ದ ಇಡಿ, ಐಟಿ ದಾಳಿ ನಡೆಸುವ ವದಂತಿ ಬಗ್ಗೆ ಸ್ವತಃ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತೀರ್ಥಹಳ್ಳಿಯಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದಾಳಿ ನಡೆಸಲು ಯಾವನು ಬರುತ್ತಾನೋ ನೋಡೋಣ ಎಂದು ಸವಾಲೆಸೆದರು. ನನ್ನ ರಾಜಕೀಯ ಜೀವನದಲ್ಲಿ ಇಂಥವನ್ನು ನಾನು ತುಂಬಾ ಎದುರಿಸಿದ್ದೇನೆ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ” ಎಂದು ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರಿಗೆ ಈಬಾರಿ ಟಿಕೆಟ್‌ ದೊರೆತಿರಲಿಲ್ಲ. ಹಾವೇರಿಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯಿಟ್ಟಿದ್ದರೂ ಸಹ ಪಕ್ಷ ಟಿಕೆಟ್‌ ನೀಡಲು ನಿರಾಕರಿಸಿತ್ತು. ಹೀಗಾಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೀರೇಕಾಯಿ ಸೇವನೆಯಿಂದ ಇದೆ ಹಲವಾರು ಲಾಭ: ಹೀರೇಕಾಯಿಯಲ್ಲಿ ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿದೆ. ಇದು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಕೆ, ಫೋಲೇಟ್, ಪೊಟ್ಯಾಸಿಯಂ, ಕ್ಯಾಲ್ಸಿಯಂ ಮತ್ತು ಮೆಗ್ನಿಸಿಯಂ ಅಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಇವು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಾಯಕಾರಿ. ಹೀರೇಕಾಯಿ ಕರುಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುವ ಅನೇಕ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಎ ಮತ್ತು ಫೈಬ‌ರ್ ಅನ್ನು ಹೊಂದಿರುತ್ತದೆ. ಇದು ಹೊಟ್ಟೆಯನ್ನು ಶುದ್ದೀಕರಿಸಲು ಸಹಾಯ ಮಾಡುತ್ತದೆ. ಕೊತ್ತಂಬರಿಯಲ್ಲಿವೆ ಉತ್ತಮ ಆರೋಗ್ಯ ಪ್ರಯೋಜನಗಳು: ಕೊತ್ತಂಬರಿ ಸೊಪ್ಪು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ತುಂಬಾ ಪರಿಣಾಮಕಾರಿಯಾಗಿದೆ. ನೀವು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರದಲ್ಲಿ ಹಸಿರು ಕೊತ್ತಂಬರಿ ಸೊಪ್ಪನ್ನು ಸೇರಿಸಿ. ಹಸಿರು ಕೊತ್ತಂಬರಿ ಸೊಪ್ಪನ್ನು ಮಜ್ಜಿಗೆಯೊಂದಿಗೆ ಬೆರೆಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಗುಣವಾಗುತ್ತವೆ. ಇನ್ನು ಮಲಬದ್ಧತೆ ಸಮಸ್ಯೆ ಇರುವುದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಚಿಕ್ಕಬಳ್ಳಾಫುರ: ನಗರದ ಪ್ರಶಾಂತ ನಗರದಲ್ಲಿ ಪ್ರೇಯಸಿ ಕೈಕೊಟ್ಟ ಹಿನ್ನಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯುವಕನು ‘ತಾನು ಪ್ರೀತಿಸುತ್ತಿದ್ದ ಪ್ರಿಯತಮೆ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆಂದು’ ಸಂಬಂಧಿಕರ ಬಳಿ ಅಳಲು ತೋಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಸದ್ಯ ಮಹೇಶನ ಪ್ರಿಯತಮೆಯ ವಿರುದ್ಧ ಆತನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ನಗರಠಾಣೆ ಸೇರಿದಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಿನ್ನೀರಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಳ್ಳೂರು ಗ್ರಾಮದ ಜಡಿಯ(56) ಮೃತ ವ್ಯಕ್ತಿ. ಬೇಸಿಗೆಯ ದಗೆ ಹಿನ್ನಲೆ ಹಿನ್ನೀರಿನ ಬಳಿ ನೀರು ಕುಡಿಯಲು ಕಾಡುಪ್ರಾಣಿಗಳು ಆಗಮಿಸಿದ್ದವು. ಇದೇ ವೇಳೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ. ಸದ್ಯ ಸ್ಥಳಕ್ಕೆ ಬಿ.ಆರ್.ಟಿ. ಸಿಸಿಎಫ್ ಹೀರಾಲಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆನೇಕಲ್: ಆನೇಕಲ್​ನ ಮಿರ್ಜಾರಸ್ತೆಯ ಪೊಲೀಸ್ ಕ್ವಾರ್ಟರ್ಸ್​​ ಬಳಿ ಹಿಟ್​​ ಆ್ಯಂಡ್​ ರನ್​ ಗೆ ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಬೈಕ್​ ಗೆ ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿ ಆಗಿದ್ದಾನೆ. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪರಾರಿಯಾಗಿರುವ ವಾಹನ ಚಾಲಕನಿಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಚಾಮರಾಜನಗರ: ತಾಯಿ ಮತ್ತು ಇಬ್ಬರು ಮಕ್ಕಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗುಂಡಲ್ ನಲ್ಲಿ ನಡೆದಿದೆ. ಪುದೂರು ಗ್ರಾಮದ ಮೀನಾ(33), ಪವಿತ್ರಾ(13), ಕೀರ್ತಿ(12) ಮೃತ ದುರ್ದೈವಿಗಳಾಗಿದ್ದಾರೆ. ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ತಾಯಿ ಮೀನಾ ಕಾಲುಜಾರಿ ಜಲಾಶಯಕ್ಕೆ  ಬಿದ್ದಿದ್ದಾರೆ. ತಾಯಿ ಬಿದ್ದದ್ದನ್ನು ಕಂಡ  ತಾಯಿ ರಕ್ಷಿಸಲು ಹೋಗಿ ಇಬ್ಬರು ಮಕ್ಕಳು ಸಹ ನೀರು ಪಾಲಾಗಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲೂಕಿನ ನಾಗಲಮಡಿಕೆ ಗ್ರಾಮದ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ, ಬರ ಪರಿಹಾರದ ಯೋಜನೆಗಳಲ್ಲಿ ಒಂದಾದ ಮೇವು ವಿತರಣಾ ಬ್ಯಾಂಕ್ ಗೆ ಮೇವಿನ ಒರೆಯನ್ನು, ರೈತರಿಗೆ ವಿತರಿಸುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪಾವಗಡ ತಾಲೂಕನ್ನು ಈಗಾಗಲೇ ಬರಪೀಡಿತ ಪ್ರದೇಶ ಎಂದು ಘೋಷಿಸಿಲಾಗಿದೆ.  ಅದೇ ರೀತಿ ಪಾವಗಡ ತಾಲೂಕಿನಲ್ಲಿ ಮೊದಲನೆಯ ಮೇವು ಬ್ಯಾಂಕನ್ನು ನಾಗಲಮಡಿಕೆ ಗ್ರಾಮದಲ್ಲಿ ತೆರೆಯಲಾಗಿದ್ದು, ರೈತರು ಇದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ವೈ ಎನ್ ಹೊಸಕೋಟೆಯಲ್ಲಿ ಎರಡನೇ ಹಂತದ ಮೇವಿನ ಬ್ಯಾಂಕ್ ತೆರೆಯಲಾಗುವುದು” ಎಂದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಹೋರಕೇರಪ್ಪ ಅವರು ಮಾತನಾಡಿ, “ಈಗಾಗಲೇ ಮೇವಿನ ಕೊರತೆ ಇರುವವಂತಹ ರೈತರನ್ನು ಗುರುತಿಸಿ, ನಮ್ಮ ಇಲಾಖೆಯಿಂದ ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಒಂದು ರಾಸುವಿಗೆ ದಿನಕ್ಕೆ ಆರು ಕೆಜಿಯಂತೆ, ಏಳು ದಿನಗಳಿಗೆ 42 ಕೆಜಿ  ಮೇವನ್ನು ಪ್ರತಿ ಕೆಜಿಗೆ ಎರಡು ರೂಪಾಯಿಯಂತೆ ಹಣವನ್ನು ಪಡೆದು ವಿತರಿಸಲಾಗುತ್ತದೆ” ಎಂದರು. ಈ…

Read More

ದೆಹಲಿ: ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, “ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು” ಎಂದಿದ್ದಾರೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕಾಲ್ ಮಾಡುತ್ತಿದ್ದರು ಆದರೆ ಆ ಕಾಲ್ ಗೆ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು. ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಫ್ಲಾಟ್ ಗೆ ತೆರಳಿ ತನಿಖೆ ನಡೆಸಿದಾಗ ಆಕೆಯ ಮೃತದೇಹವು ಕೊಠಡಿಯ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ…

Read More

ನಿಮ್ಮ ಊಟದ ನಂತರ ನೀವು ಐಸ್ ಕ್ರೀಂನಂತಹ ಸಿಹಿತಿಂಡಿಗಳನ್ನು ತಿನ್ನಲು ಬಯಸಿದರೆ, ನೀವು ಈ ಕೆಳಗಿನ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಅವುಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಉತ್ತಮ. ಸಾಮಾನ್ಯವಾಗಿ ನಮ್ಮಲ್ಲಿ ಹೆಚ್ಚಿನವರು ತಿಂದ ನಂತರ ಐಸ್ ಕ್ರೀಮ್, ಗುಲಾಬ್ ಜಾಮೂನ್ ಮುಂತಾದ ಸಿಹಿತಿಂಡಿಗಳನ್ನು ತಿನ್ನುತ್ತೇವೆ. ಅದೂ ಬೇಸಿಗೆಯಲ್ಲಿ ನಾವು ಕುಲ್ಪಿ ಮತ್ತು ಐಸ್ ಕ್ರೀಂನಂತಹ ಘನೀಕೃತ ಆಹಾರಗಳನ್ನು ತಿನ್ನಲು ಇಷ್ಟಪಡುತ್ತೇವೆ. ಆದರೆ ಇವುಗಳು ನಮ್ಮ ದೇಹಕ್ಕೆ ಹಾನಿಕಾರಕ ಎಂಬುದನ್ನು ಅರಿಯುವುದಿಲ್ಲ. ಇಂತಹ ಹೆಪ್ಪುಗಟ್ಟಿದ ಆಹಾರಗಳನ್ನು ಸೇವಿಸುವುದು ತುಂಬಾ ಅಪಾಯಕಾರಿ ಎಂದು ಅನೇಕ ಪೌಷ್ಟಿಕ ತಜ್ಞರು ಹೇಳುತ್ತಾರೆ. ತಾಳೆ ಎಣ್ಣೆಯನ್ನು ಸಾಮಾನ್ಯವಾಗಿ ಹೆಪ್ಪುಗಟ್ಟಿದ ಸಿಹಿತಿಂಡಿಗಳಿಗೆ ಸೇರಿಸಲಾಗುತ್ತದೆ. ಪಾಮ್ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಅಧಿಕವಾಗಿದೆ. ಇದು ನಮ್ಮ ಹೃದಯದ ಆರೋಗ್ಯಕ್ಕೆ ದೊಡ್ಡ ಅಪಾಯವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಷ್ಟೇ ಅಲ್ಲ, ಇಂತಹ ಘನೀಕೃತ ಆಹಾರಗಳು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಕೆಟ್ಟ ಕೊಲೆಸ್ಟ್ರಾಲ್ ನಿಮ್ಮ ಅಪಧಮನಿಗಳನ್ನು ಮುಚ್ಚಬಹುದು. ಅದೇ ರೀತಿ, ಹೆಪ್ಪುಗಟ್ಟಿದ ಸಿಹಿತಿಂಡಿಗಳು (ಕುಲ್ಪಿಯಂತೆ) ಹಾಲನ್ನು ಹೊಂದಿರುವುದಿಲ್ಲ. ಅವುಗಳನ್ನು…

Read More

ಯುದ್ಧ ನಡೆಯುತ್ತಿರುವ ರಣರಂಗದಲ್ಲಿ ಜೀವ ಉಳಿಸಲು ಬಂದ ಅವರು ತಮ್ಮ ಜೀವವನ್ನೇ ಕಳೆದುಕೊಂಡ ಘಟನೆ ಯುದ್ಧದ ಭೀಕರತೆಗೆ ನರಳಿ ಹೋಗಿದ್ದ ಜನರಿಗೆ ನೆರವು ನೀಡಲು ಬಂದಿದ್ದವರು. ಆದರೆ ಅಲ್ಲಿ ಆಗಿದ್ದೇ ಬೇರೆ, ಯುದ್ಧ ನಡೆಯುತ್ತಿರುವ ರಣರಂಗದಲ್ಲಿ ಜೀವ ಉಳಿಸಲು ಬಂದ ಅವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಅಂದಹಾಗೆ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸಿದ ವಾಯು ದಾಳಿಗೆ ಮಾನವೀಯ ನೆರವು ನೀಡಲು ಹೋಗಿದ್ದ 7 ಮಂದಿಯ ಪ್ರಾಣಪಕ್ಷಿ ಹಾರಿ ಹೋಗಿದೆ. ‘ವರ್ಲ್ಡ್ ಸೆಂಟ್ರಲ್ ಕಿಚನ್‌ ಚಾರಿಟೇಬಲ್ ಟ್ರಸ್ಟ್‌’ನ 7 ಸ್ವಯಂ ಸೇವಕರು ಹೀಗೆ ಯುದ್ಧ ಭೂಮಿಯಲ್ಲಿ ಇಸ್ರೇಲ್ ಸೇನೆಯ ದಾಳಿಗೆ ಬಲಿಯಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಕೇಂದ್ರ ಗಾಜಾದ, ಡೇರ್ ಅಲ್ ಬಲ್ಲಾ ಎಂಬಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಸ್ವಯಂ ಸೇವಕರಲ್ಲಿ ಅಮೆರಿಕ, ಕೆನಡಾದ ಇಬ್ಬರು ಕೂಡ ಸೇರಿದ್ದಾರೆ ಎಂಬುದು ಈಗ ಕಿಚ್ಚು ಹೊತ್ತಿಸಿದೆ. ಇನ್ನು ಎಲ್ಲರೂ ತಮ್ಮ ಸ್ವಾರ್ಥ ಮರೆತು, ಯುದ್ಧ ಭೂಮಿಯಲ್ಲಿ ಆಹಾರ ಇಲ್ಲದೆ ಪ್ರತಿನಿತ್ಯ ನರಳಾಡುತ್ತಿದ್ದ ಜನರ…

Read More