Subscribe to Updates
Get the latest creative news from FooBar about art, design and business.
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
Author: admin
ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕು ಎಂದಿದ್ದಾರೆ. ಜೆಡಿಎಸ್ ಶಾಸಕರು, ಮುಖಂಡರು, ನಾಯಕರು, ಕಾರ್ಯಕರ್ತರಲ್ಲಿ ಈ ಮನವಿ ಮಾಡಿದ್ದು ಮರೆಯದೇ 25 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಕರೆ ಕೊಟ್ಟಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಇಬ್ಬರು ಒಗ್ಗಟ್ಟಾಗಿದ್ದೇವೆ. ಕೋಲಾರ, ಮಂಡ್ಯ, ಹಾಸನ ನಮಗೆ ಕೊಟ್ಟಿದ್ದಾರೆ. ಉಳಿದ 25 ಕ್ಷೇತ್ರದಲ್ಲಿ ನೀವು ನಮ್ಮವರು ಬಿಜೆಪಿ ಚಿಹ್ನೆಗೆ ಮತ ಹಾಕಬೇಕು. ಚಾಚೂ ತಪ್ಪದೇ ಮತ ಹಾಕಬೇಕು ಎಂದಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ಮಾಡುತ್ತಾರೆ. 3 ಜೆಡಿಎಸ್ ಕ್ಷೇತ್ರಕ್ಕೂ ಹೋರಾಟ ಮಾಡುತ್ತಾರೆ. ನಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಯಿಂದ ನಿಲ್ಲಿಸಬೇಕು ಎಂದು ಕೇಂದ್ರದ ನಾಯಕರು ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿದರು.ಇವತ್ತು ಡಾ. ಮಂಜುನಾಥ್ ಒಪ್ಪಿಗೆ ಕೊಟ್ಟಿದ್ದಾರೆ ಎಂದರು. ಬುಧವಾರ ಮಂಜುನಾಥ್ ಅವರು ಯಡಿಯೂರಪ್ಪ ಅವರ ಆಶೀರ್ವಾದ…
ಬೆಂಗಳೂರು: ಅಪರಿಚಿತ ಮಹಿಳೆಯ ಕಾಲುಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಮುನಿಮಾರಾಯ್ಯನದೊಡ್ಡಿ ಸಮೀಪ ಮಹಿಳೆಯನ್ನು ಕೊಲೆ ಮಾಡಿ ನಂತರ ಅನುಮಾನ ಬಾರದಿರಲಿ ಎಂದು ಹಂತಕರು ದೇಹವನ್ನು ಕತ್ತರಿಸಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ಕಾಲುಗಳು ಪತ್ತೆಯಾಗಿದ್ದು, ಇದೇ ಜಾಗದ ಸಮೀಪ ಕಳೆದ ಹದಿನೈದು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ. ಇದೀಗ ಕೈ ಸಿಕ್ಕ ಜಾಗದ ಸಮೀಪವೇ ಮಹಿಳೆಯ ಎರಡು ಕಾಲುಗಳು ಸಿಕ್ಕಿದ್ದು, ಆಘಾತಕಾರಿ ವಿಷಯವಾಗಿದೆ. ಮುಂಜಾನೆ ಗ್ರಾಮಸ್ಥರು ಗಮನಿಸಿ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಂತಕರು ಮಹಿಳೆಯನ್ನು ಕೊಂದು ಅಂಗಾಂಗಳನ್ನು ಕತ್ತರಿಸಿ ಬೇರೆ ಬೇರೆ ಕಡೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು,ಸದ್ಯ ಪೊಲೀಸರು ಮಹಿಳೆಯ ಉಳಿದ ಅಂಗಾಂಗಗಳ ಹುಡುಕಾಟವನ್ನು ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳ, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ಹಂತಕರ ಬೆನ್ನತ್ತಿರುವ ಬನ್ನೇರುಘಟ್ಟ ಪೊಲೀಸರು ಕೈ ಮತ್ತು…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಯ ಮೇಲೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗಾಯಕ್ಕೆ ಹೊಲಿಗೆ ಹಾಕಿದ ನಂತರ ಮಮತಾ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಮಮತಾ ಅವರು ತಮ್ಮ ನಿವಾಸದಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. SSKM ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಅವರು ಪ್ರವೇಶ ಪಡೆದು ಪ್ರಾರ್ಥಿಸಿದ್ದಾರೆ ಎಂದು ಎಕ್ಸ್ ಪ್ಲಾಟ್ ಫಾರ್ಮ್ ಮೂಲಕ ಮಾಹಿತಿ ನೀಡಿತ್ತು. ತೃಣಮೂಲ ಕಾಂಗ್ರೆಸ್ ಕೂಡ ಮಮತಾ ಬ್ಯಾನರ್ಜಿ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿರುವ ಚಿತ್ರವನ್ನು ಹಂಚಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್ ಗೆ ಎರಡು ರೂಪಾಯಿ ಇಳಿಕೆಯಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಹೊಸ ದರ ಜಾರಿಯಾಗಲಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಟ್ವಿಟ್ಟರ್ ಅವರ ಪೋಸ್ಟ್ ನಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರೂ. ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಕುಟುಂಬದ ಕಲ್ಯಾಣ ಮತ್ತು ಸೌಕರ್ಯವನ್ನು ತಮ್ಮ ಗುರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (14.2 ಕೆಜಿ) ಮೇಲೆ ರೂ. 100 ಕಡಿಮೆ ಮಾಡಲಾಗಿತ್ತು. ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇರೆಗೆ ಜೈಲು ಸೇರಿದ್ದ ಮೂವರಿಗೆ ನಗರದ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ದಿಲ್ಲಿಯ ಕಿಶನ್ ಗಂಜ್ ನ ಮೊಹಮ್ಮದ್ ಇಲ್ವಾಜ್, ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್. ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿರುವ 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ. ವಿಜೇತ್, ಮೂವರಿಗೂ ಷರತ್ತು ಬದ್ಧ ಜಾಮೀನು ನೀಡಿದೆ. ಮೂವರು ಆರೋಪಿಗಳು ಆರೋಪಿಗಳು ಭಾರತ ಬಿಟ್ಟು ಹೋಗಬಾರದು. ತಲಾ ಒಂದು ಲಕ್ಷ ರೂ. ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ತನಿಖೆ ಹಾಗೂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಪ್ರಕರಣ ಪೊಲೀಸರು ದಾಖಲಿಸುವ ಮುನ್ನ ಪೊಲೀಸರು ಪೂರ್ವಾನುಮತಿ ಪಡೆದಿರಲಿಲ್ಲ. ಜತೆಗೆ, ಆರೋಪಿಗಳಿಗೆ ಸಿಆರ್ ಪಿಸಿ ಕಲಂ 41ರ ಅನ್ವಯ ನೋಟಿಸ್ ನೀಡಿಲ್ಲ, ಆರೋಪಿಗಳು ಘೋಷಣೆ ಕೂಗಿದ್ದಾರೆ ಎಂಬುದು ಸಾಬೀತಾಗಲು ಅವರ ಧ್ವನಿ ಮಾದರಿ…
ಬೆಂಗಳೂರು: ಪಿಎಸ್ ಐಯೊಬ್ಬ ಮಹಿಳಾ ಪಿಎಸ್ ಐಗೆ ಅನುಚಿತವಾಗಿ ವರ್ತಿಸಿರುವ ಘಟನೆ ಬಗ್ಗೆ ಬೆಂಗಳೂರಿನಿಂದ ವರದಿಯಾಗಿದೆ. ಈತ ಮಹಿಳಾ ಪಿಎಸ್ ಐ ಜತೆಗಿನ ಫೋಟೊ ಸೆರೆಹಿಡಿದು ಮದುವೆ ಆಗು ಎಂದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ 28 ವರ್ಷದ ಮಹಿಳಾ ಪಿಎಸ್ ಐ ಕೊಟ್ಟ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳಾ ಪಿಎಸ್ ಐಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮತ್ತೊಬ್ಬ ಪಿಎಸ್ ಐನನ್ನು ಇದೀಗ ಬಂಧಿಸಲಾಗಿದೆ.ಕೆ.ಎಸ್.ಐ.ಎಸ್.ಎಫ್‌ನ ಪಿಎಸ್‌ಐ ಸಂಜಯ್ ಕುಮಾರ್ (34) ಬಂಧಿತ ಆರೋಪಿ. ಸಂಜಯ್ ಕುಮಾರ್ ಹಾಗೂ ಮಹಿಳಾ ಪಿಎಸ್‌ಐ ಬ್ಯಾಚ್ ಮೇಟ್ ಆಗಿದ್ದ. ತರಬೇತಿ ಪಡೆಯುವ ವೇಳೆ ಸಂಜಯ್ ಪ್ರೇಮ ನಿವೇದನೆಯನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಮಹಿಳೆ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದರು ಎಂದು ತಿಳಿದು ಬಂದಿದೆ. ಆದರೂ ಬಿಡದೇ ಹಿಂದೆ ಬಿದ್ದಿದ್ದ ಸಂಜಯ್, ಕೆಎಸ್‌ಐಎಸ್‌ಎಫ್ ನಲ್ಲಿ ಪಿಎಸ್ ಐ ಆಗಿ ಇದ್ದುಕೊಂಡು ನಿಮ್ಮನ್ನು ವಿವಾಹ ಆಗುವುದಿಲ್ಲ. ಯುಪಿಎಸ್ ಸಿ ಮಾಡುತ್ತೇನೆ ನನಗೆ ಓದಲು…
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೊಂದ ಬಾಲಕಿಯ ತಾಯಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ. ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿಯು ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರೀ ದಂಡವನ್ನು ವಿಧಿಸುತ್ತಿದೆ. ಆದರೆ ಅವರು ಸಾವಿರಾರು ಕೋಟಿ ರೂ. ಬಹಿರಂಗಪಡಿಸಲು ಸಿದ್ಧರಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್ ಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಜನರು ದೇಣಿಗೆಯಾಗಿ ನಮ್ಮ ಪಕ್ಷಕ್ಕೆ ಹಣ ನೀಡಿದ್ದಾರೆ. ಆದರೆ ಬಿಜೆಪಿಯವರು ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಈಗ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ. ಆದರೆ ಬಿಜೆಪಿಯವರು ಪಡೆದಿರುವ ಚುನಾವಣಾ ಬಾಂಡ್ ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ. ಏಕೆಂದರೆ ಅವರ ಕಳ್ಳತನ ಹೊರಗೆ ಬರಬಹುದು. ಅವರ ತಪ್ಪು ಕೆಲಸಗಳು ಹೊರಬರಬಹುದು ಎಂದು ಖರ್ಗೆ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮಹಾರಾಷ್ಟ್ರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟಿವಿ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳನ್ನು ಜನರಿಗೆ ತೋರಿಸುವ ಬದಲು ಮೋದಿಯವರನ್ನೇ ತೋರಿಸುತ್ತಾರೆ ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ರೈತರ ಸಮಸ್ಯೆಗಳು, ಹಣದುಬ್ಬರ, ನಿರುದ್ಯೋಗ, ಅಗ್ನಿವೀರರ ಸಮಸ್ಯೆಗಳು ಇಂದು ದೇಶದಲ್ಲಿ ಪ್ರಮುಖವಾಗಿವೆ. ಆದರೆ, ಟಿವಿ ಚಾನೆಲ್‌ಗಳಲ್ಲಿ ಈ ವಿಷಯಗಳ ಬಗ್ಗೆ ನೀವು ಎಂದಿಗೂ ಚರ್ಚೆಯನ್ನು ನೋಡುವುದಿಲ್ಲ. ಬದಲಿಗೆ ಟಿವಿ ಚಾನೆಲ್‌ಗಳು ಮೋದಿಜಿಯನ್ನು 24 ಗಂಟೆಗಳ ಕಾಲ ತೋರಿಸುತ್ತವೆ ಎಂದು ಕಿಡಿ ಕಾರಿದರು. ಮಾಧ್ಯಮಗಳ ಕ್ಯಾಮರಾಗಳು ದಿನದ 24 ಗಂಟೆಗಳ ಕಾಲ ಮೋದಿಯವರ ಬೆನ್ನ ಹಿಂದೆಯೇ ಇರುತ್ತವೆ. ಮೋದಿ ಸಮುದ್ರದಾಳಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಕ್ಯಾಮರಾಗಳೂ ಅವರ ಜೊತೆಗೆ ಸಮುದ್ರಕ್ಕೆ ಇಳಿಯುತ್ತವೆ. ದೇಶದಲ್ಲಿನ ಸಮಸ್ಯೆಗಳತ್ತ ಗಮನ ಕೇಂದ್ರಿಕರಿಸಬೇಕಿದ್ದ ಮಾಧ್ಯಮಗಳು ತಮ್ಮ ಕರ್ತವ್ಯ ಮರೆತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಮೈಸೂರು- ಕೊಡಗು ಲೋಕಸಭಾ ಟಿಕೆಟ್ ಘೊಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಿಜೆಪಿ ಕಚೇರಿಗೆ ಆಗಮಿಸಿ ಹಿರಿಯ ಮುಖಂಡರನ್ನು ಭೇಟಿಯಾಗಿದ್ದಾರೆ. ಕಚೇರಿಗೆ ಆಗಮಿಸಿದ ಯದುವೀರ್ ಗೆ ಆರತಿಯಲ್ಲಿ ಸ್ವಾಗತಿಸಲಾಗಿದೆ. ಇನ್ನು ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ನಾನು ಅವರ ಜೊತೆ ಸಂಪರ್ಕದಲ್ಲಿದ್ದೇನೆ, ಅವರ ಬೆಂಬಲ ನನಗಿದೆ ಎಂದು ಹೇಳಿದ್ದಾರೆ. ಪ್ರತಾಪ್ ಸಿಂಹ ಮೈಸೂರು ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ, ಒಳ್ಳೆಯ ಅಡಿಪಾಯ ಹಾಕಿದ್ದಾರೆ, ಅವರ ಸಹಕಾರ ಮುಂದುವರೆಯಲಿದೆ ಎಂದು ಹೇಳಿದರು. ಇನ್ನು ರಾಜಕೀಯ ಪ್ರವೇಶ ಬಗ್ಗೆ ಮಾತನಾಡಿದ ಅವರು ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296