Author: admin

ತುಮಕೂರು: ಮಾಧ್ಯಮಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾರವಾರ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಇತ್ತೀಚಿಗೆ ಅಂಕೋಲ ತಾಲ್ಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಒಂದರಲ್ಲಿ ಮಾಧ್ಯಮಗಳ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕೂಡಲೇ ಅವರು ಬೇಷರತ್ ಮತ್ತು ಬಹಿರಂಗವಾಗಿ ರಾಜ್ಯದ ಪತ್ರಕರ್ತರ ಸಮುದಾಯದ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ತರವಾದ ಸ್ಥಾನವಿದ್ದು, ತಮಗೆ ಬೇಕಾದ ಮಾಧ್ಯಮವನ್ನು ಹೊಗಳುವುದು, ಬೇಡವೆನ್ನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಚಾರವಾಗಿದೆ ಅನಂತ್ ಕುಮಾರ್ ಹೆಗ್ಗಡೆಯವರು ಜವಾಬ್ದಾರಿಯುತ ಸ್ಥಾನದ ಸಂಸದರಾಗಿದ್ದು, ಆಗಿಂದಾಗ್ಗೆ ಮನಸೋ ಇಚ್ಛೆ ತಮ್ಮ ನಾಲಿಗೆಯನ್ನು ಹರಿದು ಬಿಡುತ್ತಿದ್ದಾರೆ. ಇದನ್ನು ಬಿಜೆಪಿ ಪಕ್ಷವು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತಹವರನ್ನು ಸಾರ್ವಜನಿಕ ಚುನಾವಣೆಗಳಿಂದ ಹೊರಗಿಡಬೇಕು ಜೊತೆಗೆ ಇಂತಹವರ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರವೂ…

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಹೈಕಮಾಂಡ್ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಚಿವ ವಿ.ಸೋಮಣ್ಣ ಜಿಲ್ಲೆಯಲ್ಲಿ ಪ್ರಮುಖ ನಾಯಕರಗಳನ್ನು ಭೇಟಿಯಾಗಿ ಬೆಂಬಲವನ್ನು ಕೇಳುತ್ತಿದ್ದಾರೆ. ಮುಖ್ಯವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿ ಸೋಮಣ್ಣ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು ಮುಂಬರುವ ಚುನಾವಣೆಯ ಕಾರ್ಯತಂತ್ರದ ಭಾಗವಾಗಿ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತವೆ. ಇನ್ನೊಂದೆಡೆ ಲೋಕಸಭೆ ಮಾಜಿ ಉಪಸಭಾಪತಿ ದಿ. ಮಲ್ಲಿಕಾರ್ಜುನಯ್ಯ ರವರು ಶಿವೈಕ್ಯರಾಗಿ ದಶಮಾನದ ಹಿನ್ನಲೆಯಲ್ಲಿ ಅವರ ಸ್ವಗೃಹಕ್ಕೆ ತೆರಳಿ ನಮನ ಸಲ್ಲಿಸಿ, ಮಲ್ಲಿಕಾರ್ಜುನ್ ಅವರ ಪತ್ನಿ ಜಯಮ್ಮ ಮಲ್ಲಿಕಾರ್ಜುನಯ್ಯ ರವರ ಆಶೀರ್ವಾದ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಹಾಸ್ಯನಟ ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಹೊಸ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ 42 ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಕಾರು ಅಪಘಾತದಿಂದ ಜಗದೀಶ್ ಅವರ ಎದೆ ಭಾಗ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇವರಿಗೆ ಕುಣಿಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಜಗದೀಶ್ ಅವರ ಸಂಬಂಧಿಕರು ಯಾರು ಕೂಡ ಬಂದಿರಲಿಲ್ಲ. ಮಧ್ಯ ವ್ಯಸನಿಯಾಗಿದ್ದ ಜಗದೀಶ್ ಅನೇಕ ಬಾರಿ ಇಂತಹ ಅಪಘಾತಗಳಿಂದ ಚೇತರಿಸಿಕೊಂಡಿದ್ದರು. ಈ ಬಾರಿಯೂ ಸಾಮಾನ್ಯ ಎಂಬ ಅಪಘಾತದಿಂದ ಇವರು ಚೇತರಿಸಿಕೊಳ್ಳಲಿದ್ದಾರೆ ಎಂಬ ನಂಬಿಕೆ ಅವರ ಕುಟುಂಬದವರಲ್ಲಿತ್ತು. ಆದರೆ ದುರದೃಷ್ಟವಶಾತ್ ಇಂದು ಮುಂಜಾನೆ 3 ಗಂಟೆ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿತ್ತು, ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ಆಟೋವೊಂದಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ ನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಆರ್ ಸಿಬಿ ಅಭಿಮಾನಿಗಳು ತುಂಬಾನೇ ಜೋಶ್​ ನಲ್ಲಿದ್ದಾರೆ. ಈ ಬಾರಿ ಕಪ್​ ನಮ್ಮದೆ ಎನ್ನುವ ಕೂಗು ಜೋರಾಗಿಯೆ ಇದೆ. ಹೌದು, ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ ನ(ಐಪಿಎಲ್) 17ನೇ ಆವೃತ್ತಿಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿಶ್ವದ ಶ್ರೀಮಂತ ಟಿ20 ಲೀಗ್‌ ಆರಂಭಕ್ಕಾಗಿ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ರೋಚಕ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ ಕೆ) ತಂಡಗಳು ಮುಖಾಮುಖಿಯಾಗಲಿವೆ. ಈ ವೈಭವದ ಕ್ಷಣಕ್ಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯ ಆರ್ ಸಿಬಿ ಬಿಡುಗಡೆ ಮಾಡಿದ ಪ್ರೊಮೊವೊಂದು ಇದೀಗ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ತಲೆಗೆ ಹುಳ ಬಿಟ್ಟಂಗಾಗಿದೆ. ಸಮಾರಂಭದ ಪ್ರೊಮೊವೊಂದು ಬಿಡುಗಡೆಯಾಗಿದ್ದು, ಕಂಬಳದ ಕೋಣಗಳೊಂದಿಗೆ ಸ್ಯಾಂಡಲ್ ​​ವುಡ್​ ನಟ ರಿಷಬ್​ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ…

Read More

ರಾಜಕೀಯವಾಗಿ ನನ್ನ ವಿರೋಧ ಮಾಡಿದವರು ಸಾವನ್ನಪ್ಪಿದ್ದಾರೆ. ಅವರಿಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂಬ ತಮ್ಮ ಹೇಳಿಕೆಯನ್ನು ಬಿಜೆಪಿ ಸಂಸದ ರಮೇಶ್‌ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಎನ್ನಲಾಗಿದೆ. ನನಗೆ 71 ವರ್ಷ ನಾನು ಉಳಿದಿದ್ದೇನಲ್ಲಾ, ಅವರು ಒಬ್ಬರಾದರೂ ಇದ್ದಾರಾ? ಎಂದು ಹೇಳಿದರು. ನಾನು ಎಂದು ಆಕ್ರೋಶವಾಗಿ ಮಾತನಾಡಿಲ್ಲ. ನೀವು ಆಕ್ರೋಶವಾಗಿ ಮಾತನಾಡಿದರೆ ನಾನು ಹೀಗೆ ಮಾತನಾಡುವೆ. ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ. ನಾನು ಟಿಕೆಟ್ ಆಕಾಂಕ್ಷಿಯಲ್ಲ, ನನಗೆ ಟಿಕೆಟ್ ಸಿಗುತ್ತದೆ. ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ ಎಲ್ಲಿಂದ ಮೆಸೇಜ್ ಬರಬೇಕು ಅಲ್ಲಿಂದ ಬಂದಿದೆ ತಿಳಿಸಿದರು. ನನ್ನ ಟಿಕೆಟ್ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಅದು ದೇವರಿಗೆ ಮಾತ್ರ ಸಾಧ್ಯ. ಬೇಕಾದಷ್ಟು ಹಣವಿದ್ದವರು ಹಣ ಕೊಡುತ್ತೇವೆಂದು ತಿರುಗಾಡಲಿ ಅದು ಕೆಲಸಕ್ಕೆ ಬರಲ್ಲ. ಇದು ಗಟ್ಟಿ ಯಾರೂ ಏನೂ ಮಾಡಲಾಗಲ್ಲ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ.…

Read More

ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಅಮೆರಿಕದ ಕಾಂಗ್ರೆಸ್ ಸದಸ್ಯರು. “ನರೇಂದ್ರ ಮೋದಿ ಜನಪ್ರಿಯ ನಾಯಕ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಮರು ಆಯ್ಕೆಯಾಗಲಿದ್ದಾರೆ” ಎಂದು ರಿಚ್ ಮೆಕ್ ಕಾರ್ಮಿಕ್ ಹೇಳಿದ್ದಾರೆ. ಜಾರ್ಜಿಯಾದ ರಿಪಬ್ಲಿಕನ್ ಸಂಸದರು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಮೋದಿ ಅವರು ನಂಬಲಾಗದಷ್ಟು ಜನಪ್ರಿಯರಾಗಿದ್ದಾರೆ. ನಾನು ಪ್ರಧಾನಿ ಮೋದಿ ಮತ್ತು ಇತರ ಶಾಸಕರೊಂದಿಗೆ ಊಟ ಮಾಡಿದ್ದೇನೆ. ಅವರ ಜನಪ್ರಿಯತೆ ಪಕ್ಷದ ಎಲ್ಲೆ ಮೀರಿ ಕಾಣುತ್ತಿತ್ತು. ಅವರು ಸುಮಾರು 70 ಪ್ರತಿಶತದಷ್ಟು ಜನಪ್ರಿಯರಾಗಿದ್ದಾರೆ ಎಂದು ನಾನು ನಂಬುತ್ತೇನೆ. ಅವರು ಮತ್ತೆ ಭಾರತದ ಪ್ರಧಾನಿಯಾಗುತ್ತಾರೆ ಎಂದು ರಿಚ್ ಮೆಕ್‌ಕಾರ್ಮಿಕ್ ಹೇಳಿದ್ದಾರೆ. ಮೋದಿಯವರ ನಾಯಕತ್ವದಲ್ಲಿ ಭಾರತದ ಆರ್ಥಿಕತೆಯು ವಾರ್ಷಿಕವಾಗಿ ನಾಲ್ಕರಿಂದ ಎಂಟು ಶೇಕಡಾ ದರದಲ್ಲಿ ಬೆಳೆಯುತ್ತಿದೆ ಎಂದು ನಾವು ಗಮನಿಸಿದ್ದೇವೆ. “ಚೀನಾ ಮಾಡಿದ ಕೆಲವು ಕೆಲಸಗಳನ್ನು ಭಾರತವು ನಕಲು ಮಾಡಿದೆ. ಭಾರತೀಯ ಮಾರುಕಟ್ಟೆ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದೆ. ಇದು ವ್ಯಾಪಾರ ಕ್ಷೇತ್ರದಲ್ಲಿ ಭಾರತಕ್ಕೆ ನಂಬಲಾಗದ ಪ್ರಭಾವ ಬೀರಲು ಸಹಾಯ…

Read More

ಬಾಲಿವುಡ್ ನಟಿಯರನ್ನು ಡೀಪ್​ ಫೇಕ್ ತಂತ್ರಜ್ಞಾನದ ದುರ್ಬಳಕೆ ಮಾಡುವವರು ಮತ್ತೆ ಮತ್ತೆ ಕಾಡುತ್ತಿದ್ದಾರೆ. ಇತ್ತೀಚೆಗೆ ಈ ವಿಷಯವಾಗಿ ಭಾರಿ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ವಿಷಯದಲ್ಲಿ ಆರೋಪಿಯನ್ನು ಸೆರೆಹಿಡಿಯಲಾಗಿತ್ತು. ಡೀಪ್​ ಫೇಕ್ ​ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದು ಹಲವರು ಹೇಳಿಕೊಳ್ಳದೆ ಸುಮ್ಮನಿದ್ದಾರೆ ಎನ್ನಲಾಗಿದೆ. ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್​ ಫೇಕ್ ವೀಡಿಯೋ ವೈರಲ್ ಆಗಿದೆ. ​ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವೀಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ಹೊಸ ಡೀಪ್​ ಫೇಕ್ ವೀಡಿಯೋದಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಯಾರದೊ ಯುವತಿಯ ದೇಹಕ್ಕೆ ರಶ್ಮಿಕಾ ಮುಖ ಎಡಿಟ್ ಮಾಡಲಾಗದೆ. ಈ ವೀಡಿಯೋ ವೈರಲ್ ಆಗ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಡೀಪ್​ ಫೇಕ್ ವೀಡಿಯೋ ಮಾಡಬೇಡಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಾಸ್ತವಕ್ಕೆ ‘ಒಂದು ದೇಶ ಒಂದು ಚುನಾವಣೆ’ ಪ್ರತಿಪಾದನೆ? ಈ ಕುರಿತು ಅಧ್ಯಯನ ನಡೆಸಲು ನೇಮಕಗೊಂಡಿರುವ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ಅಧ್ಯಯನ ವರದಿಯನ್ನು ಸಲ್ಲಿಸಲಿದೆ. 18,000 ಪುಟಗಳ ವರದಿಯು ‘ಒಂದು ದೇಶ ಒಂದು ಚುನಾವಣೆ’ ಯೋಜನೆಯ ಪರವಾಗಿ ಸಲಹೆಗಳನ್ನು ಹೊಂದಿದೆ ಎಂದು ಸೂಚಿಸಲಾಗಿದೆ. ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಅಧ್ಯಯನ ಮಾಡಲು ಐದು ತಿಂಗಳ ಹಿಂದೆ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಇಂದು ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಲಿದೆ. 2029ರ ಸಾರ್ವತ್ರಿಕ ಚುನಾವಣೆಯಿಂದಲೇ ‘ಒಂದು ದೇಶ ಒಂದು ಚುನಾವಣೆ’ ಜಾರಿಯಾಗಬೇಕು ಎಂದು ವರದಿಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ‘ಒಂದು ದೇಶ ಒಂದು ಚುನಾವಣೆ’ ಎಂಬುದು ದೇಶಕ್ಕೆ ಹೊಸದಲ್ಲ ಎಂಬುದು ಸಮಿತಿಯ ಮೌಲ್ಯಮಾಪನ. ‘ಒಂದು ದೇಶ ಒಂದು ಚುನಾವಣೆ’ ಎಂಬುದು ಆರ್ಥಿಕವಾಗಿ ದೇಶಕ್ಕೆ ಹೆಚ್ಚಿನ ಲಾಭ ತರುವ ಪ್ರಸ್ತಾಪವಾಗಿದೆ ಎಂದು ಸಮಿತಿಯು ಕಂಡುಹಿಡಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ)ಯನ್ನ ಕೇಂದ್ರ ಸರ್ಕಾರ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಎಯನ್ನ ಇಡೀ ದೇಶದಲ್ಲಿ ಜಾರಿಗೆ ತಂದಿದೆ. ಆದರೆ ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ನಾವು ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದರು. ಸಿಎಎ ಮೂಲಕ ಮತಗಳನ್ನು ಪಡೆಯುವ ತಂತ್ರ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅಮಿತ್ ಶಾ, ಈ ರೀತಿ ಹೇಳುವುದು ಅವರ ಇತಿಹಾಸ, ಆದರೆ ಸಿಎಎ ಜಾರಿಗೆ ತಂದಿರುವುದು ಮೋದಿ ಇತಿಹಾಸ, ಮೋದಿಯವರ ಪ್ರತಿ ಭರವಸೆಯೂ ಈಡೇರಿದೆ ಎಂದಿದ್ದಾರೆ. ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ ಏಕೆಂದರೆ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ. ಸಿಎಎ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು…

Read More

“ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮೂಲಭೂತವಾಗಿ ತಾರತಮ್ಯದ ನಡೆಯಾಗಿದೆ.” ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ‘2019ರಲ್ಲಿ ವಿಶ್ವಸಂಸ್ಥೆ ಅಭಿಪ್ರಾಯಪಟ್ಟಂತೆ ಸಿಎಎ ಸ್ವಾಭಾವಿಕವಾಗಿ ತಾರತಮ್ಯ ಭರಿತವಾಗಿದೆ. ಜತೆಗೆ ಇದು ಭಾರತೀಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ,” ಎಂದು ರಾಯಿಟರ್ಸ್ ಸುದ್ದಿಸಂಸ್ಥೆಗೆ ವಿಶ್ವಸಂಸ್ಥೆಯ ಪ್ರಧಾನ ಆಯುಕ್ತರ ಕಚೇರಿಯ ವಕ್ತಾರರು ತಿಳಿಸಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಎಲ್ಲ ಸಮುದಾಯಗಳಿಗೆ ಸಮಾನ ಹಕ್ಕುಗಳು ನೆಲದ ಕಾನೂನು ಅಡಿಯಲ್ಲಿ ದೊರಕಬೇಕು. ಇದು ಪ್ರಜಾಪ್ರಭುತ್ವದ ಭೌಗೋಳಿಕವಾದ ಮೂಲಭೂತ ಸಿದ್ಧಾಂತಗಳಲ್ಲಿ ಪ್ರತಿಪಾದನೆಯಾಗಿದೆ,” ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವಸಂಸ್ಥೆಯ ನಿಲುವಿಗೆ ಅಮೆರಿಕ ಸರಕಾರದ ಕೆಲವು ಇಲಾಖೆಗಳು ಬೆಂಬಲ ಸೂಚಿಸಿವೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More