Subscribe to Updates
Get the latest creative news from FooBar about art, design and business.
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
Author: admin
ಕಾಂತಾರ ಚಿತ್ರ ಸೂಪರ್ ಹಿಟ್ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಅಧ್ಯಾಯ ೧ರ ಚಿತ್ರೀಕರಣ ಆರಂಭಿಸಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್ ಡೇಟ್ ಒಂದು ಹೊರಬಿದ್ದಿದ್ದು, ಈ ಚಿತ್ರದಲ್ಲಿ ತೆಲುಗು ಸೂಪರ್ ಸ್ಟಾರ್ ನಟ ಜೂ. ಎನ್ ಟಿಆರ್ ನಟಿಸಲಿದ್ದಾರೆ ಎನ್ನಲಾಗಿದೆ ಎನ್ನುವ ವಿಚಾರವೊಂದು ಹೊರ ಬಿದ್ದಿದೆ. ಹೌದು..ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲ್ ನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾ ಬಿಡುಗಡೆಯಾದ ದಿನದಿಂದ ಚಿತ್ರಮಂದಿರಗಳು ತುಂಬಿ ತುಳುಕಿದ್ದವು. ಅಷ್ಟರ ಮಟ್ಟಿಗೆ ಕಾಂತಾರ ಪರಿಣಾಮ ಬೀರಿತ್ತು. ಚಿತ್ರ ಪ್ರೇಮಿಗಳಂತು ಈ ಚಿತ್ರದ ಬಗೆಗಿನ ಮತ್ತಷ್ಟು ವಿವರಗಳನ್ನು ಹುಡುಕೋದಕ್ಕೆ ಶುರು ಮಾಡಿದ್ರು. ಸದ್ಯ ಕಾಂತಾರ ಅಧ್ಯಾಯ ೧ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಸಿನಿಮಾದ ಮುಹೂರ್ತ ನಡೆದಿದ್ದು, ಕಲಾವಿದರ ಆಯ್ಕೆಯೂ ಸಹ ಮುಗಿದಿದೆ. ಪಂಜುರ್ಲಿ ದೈವದ ಮೂಲದ ಕಥಾ ಆಧಾರಿತ ಸಿನಿಮಾ ಇದಾಗಿದ್ದು, ಕುತೂಹಲ ಮೂಡಿಸುತ್ತಿದೆ.…
ನೈಜ್ಯ ಹೋರಾಟಗಾರರ ವೇದಿಕೆ ಖಂಡನೆ ತುಮಕೂರು: ಬ್ಯಾಂಕ್ ನಲ್ಲಿದ್ದ ಡೆಪಾಸಿಟ್ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿರುವ ಘಟನೆ ನಡೆದಿದೆ ಘಟನೆ ಅಂಧ್ರ ಪ್ರದೇಶದ ಮಡಕಶಿರಾ ತಾಲೂಕಿನ ನಿದ್ರಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ಲಕ್ಷ್ಮಿ ಎಂಬ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತನ್ನ ಮಗಳಿಗಾಗಿ ತಾಯಿ 4 ಲಕ್ಷ ಹಣ ಡಿಪಾಸಿಟ್ ಮಾಡಿದ್ದರು. ಈ ಹಣವನ್ನು ಲಪಟಾಯಿಸಲು ಬಾಲಕಿಗೆ ದೊಡ್ಡಮ್ಮ ಹಣಕ್ಕಾಗಿ ಬಾಲಕಿಯ ತೊಡೆಯನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದೆ. ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ತುಮಕೂರು: ಜಿಲ್ಲೆ ಸಿರಾ ತಾಲ್ಲೂಕಿನ ಮೆಳೆಕೋಟೆ ಸರ್ಕಾರಿ ಶಾಲೆಯಲ್ಲಿ ಇಂದು ಶಾಲಾ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅಗ್ನಿ ಅವಘಡಕ್ಕೆ ತುತ್ತಾಗಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಸಮಯದಲ್ಲಿ ಮಕ್ಕಳ ರಕ್ಷಣೆಯ ಕುರಿತು ನಿರ್ಲಕ್ಷ್ಯ ವಹಿಸಿದ ಶಿಕ್ಷಕರ ವಿರುದ್ದ ಇಲಾಖಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ನೀಡಲು ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಯೋಗ ಸೂಚಿಸಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ನಮ್ಮತುಮಕೂರಿಗೆ ತಿಳಿಸಿದ್ದಾರೆ. ಅಲ್ಲದೇ ನಾಳೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ದಪಡಿಸಿ ಆಯೋಗಕ್ಕೆ ಸಲ್ಲಿಸಲು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯ ಮಗು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾಳೆ ಮಗುವನ್ನು ಭೇಟಿ ಮಾಡಲಿದ್ದೇನೆ. ನಾಳಿನ ಭೇಟಿ ಹಾಗೂ ಬಂದ ವರದಿಗಳ ಮೇಲೆ ಮುಂದಿನ ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಸಾವು ಸಂಭವಿಸಿದೆ. ಅಸ್ಸಾಂ ಮೂಲದ ಮಹಿಳೆ ಅಜಬಾನು(37) ಆನೆ ದಾಳಿಗೆ ಬಲಿಯಾದ ಮಹಿಳೆಯಾಗಿದ್ದಾರೆ. ಅಜಬಾನು ಅವರು ಇತರ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಆಗ ಆನೆ ದಾಳಿ ಮಾಡಿದೆ. ದಾಳಿ ಮಾಡಿದಾಗ ಅಜಬಾನು ಆನೆಯ ದಾಳಿಗೆ ಸಿಲುಕಿದ್ದಾರೆ. ಕೂಡಲೇ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಅಲ್ಲಿನ ಜನರು ಆಕ್ರೋಶಿತರಾಗಿದ್ದಾರೆ. ಆನೆಗಳು ನಿರಂತರ ದಾಳಿ ನಡೆಸಿ ಪ್ರಾಣಗಳನ್ನೇ ಕಿತ್ತುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗದಿರುವುದು ಬಹುತೇಕ ಖಚಿತವಾಗುಗಿದೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಮೈಸೂರಿನಲ್ಲಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್. ಅಶೋಕ್, “ಪ್ರತಾಪ್ ಸಿಂಹ ತಾಳ್ಮೆಯಿಂದರಬೇಕು. ಧೃತಿಗೆಡುವ ಅಗತ್ಯವಿಲ್ಲ. ಇನ್ನು ಯಾವುದು ನಿರ್ಧಾರವಾಗಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಇನ್ನೂ ದೃಢಪಡದ ಕಾರಣ ಪ್ರತಾಪ್ ಸಿಂಹ ಧೃತಿಗೆಡುವ ಅಗತ್ಯವಿಲ್ಲ, ತಾಳ್ಮೆಯಿಂದಿರಬೇಕು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ವರಿಷ್ಠರು ಮೈಸೂರು ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಟಿಕೆಟ್ ಯಾರಿಗೆ ಸಿಕ್ಕರೂ ಜಿಲ್ಲಾ ಘಟಕದ ಕಾರ್ಯಕರ್ತರೆಲ್ಲ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ ಮತ್ತು ಪ್ರತಾಪದ ಸಿಂಹ ಸಹ ಅಭ್ಯರ್ಥಿಯ ಪರ ಕರಪತ್ರಗಳನ್ನು ಹಂಚುವುದಾಗಿ ಹೇಳಿದ್ದಾರೆ ಎಂದು…
ನವದೆಹಲಿ: ಉತ್ತರಾಖಂಡ ರಾಜ್ಯ ಸರ್ಕಾರ ಸಲ್ಲಿಸಿದ್ದ ಏಕರೂಪ ನಾಗರಿಕ ಸಂಹಿತೆ ಮಸೂದಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದರಿಂದ ಯುಸಿಸಿ ಮಸೂದೆಯು ವಿದ್ಯುಕ್ತವಾಗಿ ಕಾಯಿದೆಯಾಗಿ ಪರಿವರ್ತನೆಯಾಗಲಿದೆ. ಯುಸಿಸಿ ಜಾರಿಯಾದರೆ ಉತ್ತರಾಖಂಡ ದೇಶದಲ್ಲೇ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಮೊದಲ ರಾಜ್ಯವಾಗಿ ಗುರುತಿಸಿಕೊಳ್ಳಲಿದೆ. ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ಪ್ರಸ್ತಾಪ ನೀಡಿತ್ತು. ದೇಶಾದ್ಯಂತ ಯಾವುದೇ ಧರ್ಮ, ಬುಡಕಟ್ಟು, ಮತ ಗಳ ಹೊರತಾಗಿ ಎಲ್ಲರಿಗೂ ಒಂದೇ ಕಾನೂನು ಅನ್ವಯಿಸುವುದು ಯುಸಿಸಿ ಉದ್ದೇಶವಾಗಿದೆ. ಆದರೆ ವಿವಾಹ, ವಿಚ್ಛೇದನ , ಆಸ್ತಿ ಪಾಲು , ದತ್ತು ಮುಂತಾದ ವೈಯಕ್ತಿಕ ವಿಷಯಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸುತ್ತಿದೆ ಎಂದು ಆರೋಪಿಸಿ ಹಲವು ಅಲ್ಪಸಂಖ್ಯಾತರು ಏಕರೂಪ ನಾಗರಿಕ ಸಂಹಿತೆ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ಬಿಜೆಪಿ ಒಂದು ಕೋಮುವಾದಿ ಪಕ್ಷ ಜೆಡಿಎಸ್ ಒಂದು ನೆಲೆ ಇಲ್ಲದ ಪಕ್ಷ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು. ಕೊರಟಗೆರೆ ರಾಜೀವ್ ಭವನದ ಮುಂಭಾಗದಲ್ಲಿ ನಡೆದ ಬೃಹತ್ ಲೋಕಸಭಾ ಚುನಾವಣೆ ಪ್ರಚಾರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಅನೇಕ ಮುಖಂಡರು ಜೆಡಿಎಸ್ ಪಕ್ಷವನ್ನು ತೊರೆದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಜೆಡಿಎಸ್ ಪಕ್ಷದವರನ್ನ ನಮ್ಮ ಜೊತೆ ಸೇರಿಸಿಕೊಂಡು ನಾವು ಒಂದು ಬಾರಿ ಆ ತಪ್ಪನ್ನು ಮಾಡಿದ್ದೆವು ಎಂದರು. ಬಿಜೆಪಿಯವರಿಗೆ 25 ವರ್ಷಗಳಿಂದ ಮಾತ್ರ ಶ್ರೀರಾಮ ಸಿಕ್ಕಿದ್ದಾನೆ. ನಾವು ಚಿಕ್ಕ ವಯಸ್ಸಿನಿಂದಲೂ ಶ್ರೀರಾಮನ ನೋಡುತ್ತಾ ಬಂದಿದ್ದೇವೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ ಅದು ನಮ್ಮ ಸಂವಿಧಾನದಲ್ಲಿ ಇಲ್ಲ ಎಂದರು. ನುಡಿದಂತೆ ನಡೆದಿರುವ ಪಕ್ಷ ಕಾಂಗ್ರೆಸ್, ಎಲ್ಲ ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದೇವೆ ಅನುಮೋದನೆಗೆ ತಂದಿದ್ದೇವೆ. 136 ಸೀಟುಗಳನ್ನು ಗೆಲ್ಲುವುದು ಸುಲಭವಲ್ಲ. ಲೋಕಸಭೆ ಚುನಾವಣೆ ಮುಗಿದ ನಂತರ ಗ್ಯಾರೆಂಟಿಯನ್ನು ನಿಲ್ಲಿಸುತ್ತಾರೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಾವೀಗಾಗಲೇ ಬಜೆಟ್…
ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದರು. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ ಎಂದರು. ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ನುಡಿದ ಡಿಕೆಶಿ, ಮತದಾರರು ಹಾಗೂ ಕಾಂಗ್ರೆಸ್ ನಾಯಕರು ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ನಾವು ನಾಯಕರು ನೆಪ ಮಾತ್ರ. ನಾವು ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ…
ನವದೆಹಲಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದ ಪ್ರೇರಿತವಾಗಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೂ ಮಹಿಳೆಯರಿಗೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ‘ನಾರಿ ನ್ಯಾಯ ಗ್ಯಾರಂಟಿ’ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ನೀಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಆರ್ಥಿಕ ಸಹಾಯವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವುದಾಗಿ ಮತ್ತು ಕೇಂದ್ರ ಸರ್ಕಾರಿ ಉದ್ಯೋದಗಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷವು ಮಹಿಳೆಯರಿಗೆ “ನಾರಿ ನ್ಯಾಯ ಗ್ಯಾರಂಟಿ”ಯನ್ನು ಘೋಷಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷ ರೈತ ನ್ಯಾಯ ಮತ್ತು ಯುವ ನ್ಯಾಯದ ಭರವಸೆಗಳನ್ನು ಘೋಷಿಸಿದೆ ಎಂದು ಹೇಳಿದರು. ನಮ್ಮ ಗ್ಯಾರಂಟಿಗಳು ಖಾಲಿ ಭರವಸೆ ಮತ್ತು ಹೇಳಿಕೆಗಳಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. ನೀವೆಲ್ಲರೂ ಕಾಂಗ್ರೆಸ್…
ಪೀಚ್ ಹಣ್ಣಿನ ಪ್ರಯೋಜನಗಳು ಹಲವು!: ಉಷ್ಣವಲಯದ ಮೂಲ ಪ್ರಭೇದವಾಗಿರುವ ಪೀಚ್ ಹಣ್ಣಿನ್ನು ವಿಶ್ವದ ಹಲವಾರು ದೇಶಗಳಲ್ಲಿ ಬೆಳೆಯಲಾಗುತ್ತದೆ. ಒಳಗೊಂದು ಸ್ವಲ್ಪ ದೊಡ್ಡ ಬೀಜ, ಸುತ್ತೆಲ್ಲ ತಿರುಳು ಹೊಂದಿರುವ ಈ ಹಣ್ಣಿನ ಮೇಲ್ಮಯಲ್ಲಿ ತುಪ್ಪಳದಂಥ ಸಣ್ಣ ರೋಮಗಳನ್ನು ಕಾಣಬಹುದು. ಸಿಹಿ ರುಚಿಯ, ರಸಭರಿತವಾದ ಈ ಹಣ್ಣು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದೆ. ಹಲವಾರು ವಿಟಮಿನ್ ಗಳು, ಉತ್ಕರ್ಷಣ ನಿರೋಧಕಗಳು, ನಾರು ಸೇರಿದಂತೆ ದೇಹಕ್ಕೆ ಪೋಷಣೆ ಒದಗಿಸಬಲ್ಲದು. ಅದರಲ್ಲೂ ವಿಟಮಿನ್ ಸಿ ಹೇರಳವಾಗಿದ್ದು, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕುಂಬಳಕಾಯಿ ತಿರುಳಿನ ಫೇಸ್ ಪ್ಯಾಕ್ ಮಾಡಿ, ಫುಲ್ ಯಂಗ್ ಆಗಿ!: ನೈಸರ್ಗಿಕ ಕುಂಬಳಕಾಯಿಯ ತಿರುಳಿನಿಂದ ಮನೆಯಲ್ಲಿ ತಯಾರಿಸಬಹುದು. ಫೇಸ್ ಪ್ಯಾಕ್ ಗಳು ಚರ್ಮವನ್ನು ಯಂ ಆಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಕುಂಬಳಕಾಯಿ ಫೇಸ್ ಪ್ಯಾಕ್‌ಗಳಲ್ಲಿ ಬಳಸಲು, ಮೊದಲು ಅದನ್ನು ಬೇಯಿಸಿ ಮತ್ತು ಮೃದುವಾದ ಪೇಸ್ಟ್ ಮಾಡಬೇಕು. ಕುಂಬಳಕಾಯಿಯ ತಿರುಳಿನ ಪೇಸ್ಟ್, ಮೊಸರು, ಸ್ವಲ್ಪ ಜೇನುತುಪ್ಪ ಮತ್ತು ಕೆಲವು ಹನಿ ನಿಂಬೆ ರಸವನ್ನು ಮಿಶ್ರಣ ಮಾಡಿ ಮತ್ತು…