Subscribe to Updates
Get the latest creative news from FooBar about art, design and business.
- ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
- ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
- ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
- ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
- ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
- ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
- ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
- ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
Author: admin
ಪಬ್ಲಿಷಿಂಗ್ ನೆಕ್ಸ್ಟ್’ ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ಹಿರಿಯ ಕಲಾವಿದ ಸುಧಾಕರ ದರ್ಬೆ ರೂಪಿಸಿದ ಮುಖಪುಟ ಮೊದಲ ಸ್ಥಾನ ಪಡೆದಿದೆ. ಪ್ರತೀ ವರ್ಷ ಪ್ರಕಾಶನ ರಂಗದ ವಿವಿಧ ವಿಭಾಗಗಳಲ್ಲಿ ‘ಪಬ್ಲಿಷಿಂಗ್ ನೆಕ್ಸ್ಟ್’ ಸ್ಪರ್ಧೆಯನ್ನು ಏರ್ಪಡಿಸುತ್ತಾ ಬಂದಿದ್ದು ಇದೇ ಮೊದಲ ಬಾರಿಗೆ ಕನ್ನಡದ ಕೃತಿಯೊಂದು ತನ್ನ ಮುಖಪುಟ ವಿನ್ಯಾಸಕ್ಕಾಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿದೆ. ಭಾರತದ ಎಲ್ಲಾ ಭಾಷೆಗಳನ್ನು ಒಳಗೊಂಡು ಜರುಗಿದ ಈ ಮುಖಪುಟ ಸ್ಪರ್ಧೆಯಲ್ಲಿ ಅನೇಕ ಪ್ರತಿಷ್ಟಿತ ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದವು. ಈ ಹಿಂದೆ ಬಹುರೂಪಿಯ ‘ದುಪ್ಪಟ್ಟು’ ‘ಛೂಮಂತ್ರಯ್ಯನ ಕಥೆಗಳು’ ಹಾಗೂ ‘ಅಕ್ಕಯ್’ ಕೃತಿಗಳು ರನ್ನರ್ ಅಪ್ ಆಗಿದ್ದವು ಪತ್ರಿಕಾ ವಿನ್ಯಾಸಕಾರರಾದ ಸುಧಾಕರ ದರ್ಬೆ ಅವರು ಪುತ್ತೂರು ಮೂಲದ ದರ್ಬೆ ಗ್ರಾಮದವರು. ಅನೇಕ ಕೃತಿಗಳಿಗೆ ಇವರು ರಚಿಸಿರುವ ಮುಖಪುಟ ಹಾಗೂ ಚಿತ್ರಗಳು ಎಲ್ಲರ ಗಮನ ಸೆಳೆದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚಿತ್ರದುರ್ಗ: ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಅನ್ಯಕೋಮಿಯವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣವೊಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ. ಸಾಮಾಜಿಕ ಕಾರ್ಯಕರ್ತ ಬಿ.ಎಚ್.ಗೌಡ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಈತ ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ. ಇದು ಈ ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್ ಗೌಡರ ಕಾರನ್ನು ಅಡ್ಡಗಟ್ಟಿ ಹೊರಗೆಳೆದು, ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತಮಿಳುನಾಡು:ಇದೀಗ ಡಿಎಂಕೆ ಸದಸ್ಯ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿರುವ ಘಟನೆ ತಮಿಳಿನಾಡಿನಲ್ಲಿ ನಡೆದಿದೆ. ಡಿಎಂಕೆ ನಾಯಕರೊಬ್ಬರು ಆಡಿದ ಮಾತು ತಮಿಳುನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ. ಅದೇನೆಂದರೆ ಚೆನ್ನೈನಲ್ಲಿ ನಡೆದ ಪ್ರಚಾರದ ವೇಳೆ ಮಾತನಾಡಿದ ಡಿಎಂಕೆ ನಾಯಕರೊಬ್ಬರು, ಮೋದಿ ಮತ್ತೊಮ್ಮೆ ಪ್ರದಾನಿಯಾದರೆ ಮಾಂಸ ಪ್ರಿಯರಿಗೆ ಆಘಾತ ಉಂಟಾಗುತ್ತದೆ. ಯಾಕೆಂದರೆ ಆಗ ನೀವು ಮೊಸರನ್ನ, ಸಾಂಬಾರ್ ಮಾತ್ರವೇ ತಿನ್ನಬಹುದು. ಯಾಕೆಂದರೆ ಮಟನ್, ಚಿಕನ್, ಗೋಮಾಂಸ ಹಾಗೂ ಇತರ ಮಾಂಸವನ್ನು ಬ್ಯಾನ್ ಮಾಡಲಾಗುತ್ತದೆ ಎಂದು ಸುಖಾಸುಮ್ಮನೆ ಅಪಪ್ರಚಾರ ಮಾಡಿದ್ದಾರೆ. ಸದ್ಯ ನಾಯಕರ ಈ ಹೇಳಿಕೆಗೆ ಬಿಜೆಪಿಯವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಎಂಕೆ ನಾಯಕನ ಹೇಳಿಕೆಯನ್ನು ಖಂಡಿಸಿದೆ. ತಮಿಳುನಾಡಿನಲ್ಲೀಗ ಕಚ್ಚಾತೀವು ದ್ವೀಪ ವಿವಾದದ ಕಿಡಿ ಹೊತ್ತಿ ಉರಿಯುವಾಗಲೇ ಈ ರೀತಿ ಹೇಳಿಕೆ ಮತ್ತೆ ಇನ್ನಷ್ಟು ಸದ್ದು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ರಾಜ್ಯದಲ್ಲಿ ಉಷ್ಣತೆ ಹೆಚ್ಚಳವಾಗಿದೆ. ತಾಪಮಾನದ ಏರಿಕೆ ಇನ್ನೂ ಕೆಲ ದಿನಗಳ ಕಾಲ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪುಟ್ಟ ಪುಟ್ಟ ಮಕ್ಕಳು ರಣ ಬಿಸಿಲಿಗೆ ಅಂಗನವಾಡಿಗೆ ಹೋಗಲು ಹಿಂದೇಟು ಹಾಕುತ್ತಿರುವ ಕುರಿತು ಅರಿತ ಸರಕಾರ ಇದೀಗ ಅಂಗನವಾಡಿಗಳ ಸಮಯವನ್ನು ಎರಡು ತಿಂಗಳ ಕಾಲ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ಕಿತ್ತೂರು ಕರ್ನಾಟಕ ಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು. ಬದಲಾದ ವೇಳಾಪಟ್ಟಿಗೆ ತಕ್ಕಂತೆ ಐಸಿಡಿಎಸ್ ಸೇವೆ ನಿಯಮಾನುಸಾರ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಗುಜರಾತ್: 11 ವರ್ಷದ ಬಾಲಕನೊಬ್ಬ ತನ್ನ ನೆರೆಹೊರೆಯ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನ ಸೂರತ್ ನಗರದಲ್ಲಿ ನಡೆದಿದೆ. ಮಾ.29 ರಂದು ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ತಮ್ಮ ಮನೆಗಳ ಬಳಿ ಆಟವಾಡುತ್ತಿದ್ದು, ಬಾಲಕ ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ಯಾರ ಬಳಿ ಹೇಳಿದರೆ ಚಪ್ಪಲಿಯಿಂದ ಹೊಡೆದು ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಬೆದರಿದ ಈಕೆ ಯಾರಲ್ಲೂ ಈ ವಿಷಯವನ್ನು ಹೇಳಲಿಲ್ಲ. ಆದರೆ ಮರುದಿನ ಈಕೆಯ ಗುಪ್ತಾಂಗದಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಆಘಾತಕಾರಿ ಸತ್ಯವನ್ನು ಹೇಳಿದ್ದಾರೆ. ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಆಕೆಯ ಜನನಾಂಗದಲ್ಲಿ ಗಾಯವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಮನೆಯವರು ಆಘಾತಗೊಂಡಿದ್ದು, ಕೂಡಲೇ ಬಾಲಕಿಯನ್ನು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ಹೇಳಿದ್ದಾಳೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೇರೆ ಆಸ್ಪತ್ರೆಗೆ…
ಯುವತಿಯೋರ್ವಳು ವೃದ್ದನಿಗೆ ವಿಡಿಯೋ ಕಾಲ್ ಮಾಡಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ವಂಚಕರು ಮೊದಲಿಗೆ ಯುವತಿಯಿಂದ ವಿಡಿಯೋ ಕಾಲ್ ಮಾಡಿಸುತ್ತಾರೆ. ನಂತರ ವಿಡಿಯೋ ಕಾಲ್ನಲ್ಲಿ ಯುವತಿ ನಗ್ನವಾಗಿ ಬಳಿಕ ವೃದ್ಧರನ್ನು ನಗ್ನವಾಗುವಂತೆ ತಿಳಿಸುತ್ತಾರೆ.ನಂತರ ಕೆಲವು ಸಮಯಗಳ ಬಳಿಕ ನೀನು ನನ್ನ ವಿಡಿಯೋ ಕಾಲ್ ಅನ್ನು ಸ್ಕ್ರೀನ್ ರೆಕಾರ್ಡ್ ಮಾಡಿದ್ದೀಯಾ ನಾನು ನಿನ್ನ ಮೇಲೆ ಪೊಲೀಸರಿಗೆ ದೂರು ನೀಡುತ್ತೆನೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ಇದಾದ ಕೆಲವೆ ಗಂಟೆಗಳಲ್ಲಿ ಡೆಲ್ಲಿ ಸೈಬರ್ ಪೊಲೀಸ್ ಎಸಿಪಿ ವಿಕ್ರಮ್ ರಾಥೋಡ್ ಎಂದು ಕರೆ ಮಾಡುತ್ತಾರೆ. ನಿಮ್ಮ ಮೇಲೆ ಯುವತಿ ಒಬ್ಬರು ದೂರು ನೀಡಿದ್ದಾರೆ. ನೀವು ಅವರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿದ್ದೀರಿ ಎಂದು ದೂರು ಬಂದಿದೆ. ನಾನು ನಿಮಗೆ ಸಹಾಯ ಮಾಡುತ್ತೇನೆ 50 ಸಾವಿರ ಹಣ ನೀಡಿ ಎಂದು ಬ್ಲ್ಯಾಕ್ ಮೇಲ್ ಮಾಡುತ್ತಾರೆ. ನಂತರ ವಂಚಕರು ವೃದ್ದನಿಗೆ ಕಾಲ್ ಮಾಡಿ ಪುಣೆ ಎಸಿಪಿ ಅರುಣ ಎಂದು ನಂಬಿಸಿ ನಿಮ್ಮ ಹೆಸರು…
ಕಾಡೆಮ್ಮೆಯನ್ನು ಶೂಟ್ ಮಾಡಿ ಕೊಂದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಮಾಂಸಕ್ಕಾಗಿ ಶೂಟ್ ಮಾಡಿದ್ದು,ಅದನ್ನು ತಿನ್ನುತ್ತಿರುವ ವೇಳೆಯೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಐವರು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಹೊಸೂರು ಎಸ್ಟೇಟ್‌ನ ಉಮೇಶ್, ರವಿ ಬಂಧಿತ ಆರೋಪಿಗಳು. ಸಕಲೇಶಪುರ ತಾಲೂಕಿನ ಹೊಸೂರು ಎಸ್ಟೇಟ್‌ನಲ್ಲಿ ಘಟನೆ ನಡೆದಿತ್ತು. ಹೊಸೂರು ಎಸ್ಟೇಟ್ ಸಮೀಪ ಮಾಂಸಕ್ಕಾಗಿ ಬಂದೂಕಿನಿಂದ ಕಾಡೆಮ್ಮೆ ಮೇಲೆ ಉಮೇಶ್ ಹಾಗೂ ರವಿ ಶೂಟ್ ಮಾಡಿದ್ದರು. ನಂತರ ಕಾಡೆಮ್ಮೆಯನ್ನು ಕತ್ತರಿಸಿ ಮಾಂಸ ಸೇವನೆ ಮಾಡುವಾಗ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಶಿಲ್ಪಾ ನೇತೃತ್ವದ ತಂಡ ದಾಳಿ ಮಾಡಿದೆ. ಕಾಡೆಮ್ಮೆಯ ಸುಮಾರು 10 ಕೆಜಿ ಮಾಂಸ ವಶವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮಧು, ಆಕಾಶ್, ಅಜೀಜ್, ಸೋಮಣ್ಣ, ಇಕ್ಕೀಲ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR…
ಪಾವಗಡ: ಬುಧವಾರ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದ ಖಾಸಗಿ KA 16 D 4333 ನಂಬರಿನ ಮಾಧವಿ ಬಸ್ ಮತ್ತು ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ KA 40 F 1174 ನಂಬರ್ ನ ಬಸ್ ಗಳ ನಡುವೆ ಕೋಟಗುಡ್ಡ ಗ್ರಾಮದ ಎಸ್. ಬಿ .ಐ ಬ್ಯಾಂಕ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ ಕೋಟಗುಡ್ಡ ಗ್ರಾಮದ ಎಸ್ ಬಿ ಐ ಬ್ಯಾಂಕ್ ಬಳಿ ಎರಡು ಬಸ್ ಗಳು ಬಂದ ಸಮಯದಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ, ಪರಿಣಾಮವಾಗಿ ಎರಡು ಬಸ್ ಗಳ ಮುಂಭಾಗದಲ್ಲಿರುವ ಗಾಜು ಪುಡಿಪುಡಿ ಆಗಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಕೆ.ಎಸ್.ಆರ.ಟಿ.ಸಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಭವಿಸಿ ಸುಮಾರು 30…
ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೂವರು ಅಪರಾಧಿಗಳಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್. ಟಿ.ಎಸ್.ಸಿ.(ಪೋಕ್ಸೋ)ವು ಜೀವಾವಧಿ ಶಿಕ್ಷೆ ಹಾಗೂ ತಲಾ 2 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ನೊಂದ ಬಾಲಕಿ 14 ವರ್ಷ ವಯಸ್ಸಿನವಳಾಗಿದ್ದಾಳೆ. ಆಕೆಯ ತಾಯಿ ತವರು ಮನೆಗೆ ಹೋಗಿದ್ದ ವೇಳೆ ಬಾಲಕಿ ಹಾಗೂ ತಂದೆ ಮಾತ್ರವೇ ಮನೆಯಲ್ಲಿದ್ದರು. ಬಾಲಕಿಯ ತಂದೆ ಕುಡಿತದ ಚಟ ಹೊಂದಿದ್ದರು. ಇದೇ ಸಂದರ್ಭದಲ್ಲಿ 1ನೇ ಆರೋಪಿ ಬ್ಯಾಡರಹಳ್ಳಿಯ ರಾಮಚಂದ್ರಯ್ಯ(55) ನೊಂದ ಬಾಲಕಿಗೆ ತಿನ್ನಲು ತಿಂಡಿಗೆ ಹಣ ನೀಡುವುದಾಗಿ ಪುಸಲಾಯಿಸಿ ಬಲವಂತವಾಗಿ ಆಕೆಯ ಮೇಲೆ ಹಲವಾರು ಬಾರಿ ಅತ್ಯಾಚಾರ ನಡೆಸಿದ್ದು, ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು. ಬಳಿಕ ಆಕೆಯನ್ನು ರಾಮಣ್ಣ ಎಂಬ ವ್ಯಕ್ತಿಯ ಉಪ್ಪು ನೇರಳೆ ತೋಟಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಬಾರಿ ಅತ್ಯಾಚಾರ ನಡೆಸಿದ್ದನು. ಈ ದೃಶ್ಯವನ್ನು 2ನೇ ಆರೋಪಿ ಹೊಸವಿರಾಮಯ್ಯ…
ಉತ್ತರಾಖಂಡ: ಅಧಿಕಾರದಿಂದ ಹೊರಗುಳಿದು 10 ವರ್ಷಗಳು ಕಳೆದ ಬಳಿಕ ದೇಶದಲ್ಲಿ ಕಿಚ್ಚು ಹೊತ್ತಿಸುವ ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡುವ ಮಾತೇ? ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ನೀಡಿದ್ದ ದೇಶ ವಿಭಜನೆ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದ ಓರ್ವ ನಾಯಕ ದಕ್ಷಿಣ ಭಾರತವನ್ನು ದೇಶದಿಂದ ಬೇರ್ಪಡಿಸುವ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ಶಿಕ್ಷೆ ನೀಡುವ ಬದಲು ಲೋಕಸಭೆ ಟಿಕೆಟ್ ನೀಡಿದ್ದಾರೆ. ಕಾಂಗ್ರೆಸ್ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ ಅವರನ್ನು ಈ ಬಾರಿ ಅಧಿಕಾರಕ್ಕೆ ಬರಲು ಬಿಡಬೇಡಿ ಎಂದು ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ. ಡಿ.ಕೆ. ಸುರೇಶ್ ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ, ‘ ಕರ್ನಾಟಕಕ್ಕೆ ಕೇಂದ್ರದಿಂದ ಸಾಕಷ್ಟು ಅನುದಾನ ಬರುತ್ತಿಲ್ಲ, ದಕ್ಷಿಣ ಭಾರತವನ್ನು ಪ್ರತ್ಯೇಕಿಸುವುದು ಬಿಟ್ಟು ಬೇರೆ ದಾರಿ ಕಾಣುತ್ತಿಲ್ಲ’ ಎಂಬ…