Subscribe to Updates
Get the latest creative news from FooBar about art, design and business.
- ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
- ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
- ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
Author: admin
ಮಧುಗಿರಿ: ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನಾ ಸಮಾರಂಭ ಅ.24 ಭಾನುವಾರ ಹಾಗೂ 25 ಸೋಮವಾರ ನೆಡೆಯಲಿದ್ದು ಭಕ್ತಾದಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಡಾ.ಮನೋಹರ್ ಗುರೂಜಿ ತಿಳಿಸಿದರು. ತಾಲ್ಲೂಕಿನ ಕಸಬಾ ಹೋಬಳಿಯ ಪುಟ್ಟೇನಹಳ್ಳಿ ಗ್ರಾಮದಲ್ಲಿ ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನೆ, ಗಣಪತಿ, ಶಿವ, ಮತ್ತು ಅದೃಷ್ಠ ಭೈರವಿದೇವಿ ದೇವರುಗಳ ಪ್ರತಿಷ್ಟಾಪನೆ ಮತ್ತು ಕುಂಬಾಭಿಷೇಕ ಕಾರ್ಯಕ್ರಮ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಬೇಕು ಎಂದರು. ಭಕ್ತಾಧಿಗಳಿಗೆ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದ್ದು ಸಕಾಲಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಲಾಗಿದೆ. ವರದಿ: ಅಬೀದ್, ಮಧುಗಿರಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿಯೊಬ್ಬ ಹೇಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ದೊರಕಿದೆ. ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ ಮ್ಯಾನ್ ನನ್ನ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ ಮ್ಯಾನ್ ಗೆ ಎಸ್ ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆದಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿಗೆ ಅವರು ಉತ್ತರಿಸುತ್ತಿದ್ದರು. ಈ ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು. ಬಿಜೆಪಿಯವರ ಸಾರ್ವಜನಿಕ ಕ್ಷಮಾಪಣೆಯ ಆಗ್ರಹ ತಳ್ಳಿಹಾಕಿದ ಸಿಎಂ ಸದನದಲ್ಲಿ ಮತ್ತೊಮ್ಮೆ ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಸಿಎಂ ಅವರು, ನನಗೆ ಈ ಘಟನೆ ತುಂಬಾ ಡಿಸ್ಟರ್ಬ್ ಮಾಡಿದೆ. ಇಂಥ ದುರಂತ ಆಗಬಾರದಿತ್ತು, ಆಗಿಹೋಗಿದೆ. ನಾನು ಘಟನೆ ನಡೆದ ದಿನವೇ ವಿಷಾದ ವ್ಯಕ್ತಪಡಿಸಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಇಂಥ ಕಹಿ ಘಟನೆ ಯಾವತ್ತೂ ಆಗಿರಲಿಲ್ಲ. ಕಾಲ್ತುಳಿತದಿಂದ 11 ಜನರ ಸಾವನ್ನು ನಾನು ನೋಡೇ ಇರಲಿಲ್ಲ. ದುರ್ಘಟನೆಗೆ ನಾನು ತುಂಬಾ…
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಈ ಬಾರಿಯ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು. ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು. ಹಾಗಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ ಎಂದರು. ಈ ಬಾರಿ 11 ದಿನ ದಸರಾ ನಡೆಯಲಿದೆ. ಸೆಪ್ಟೆಂಬರ್ 22ರಿಂದ ದಸರಾ ಆರಂಭ ಆಗಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ ಇದೆ. ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೂಡ್ಲಿಗಿ: ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು, ಸರ್ವರೂ ಸೌಹಾರ್ದತೆಯಿಂದ ಆಚರಿಸುವ ಮೂಲಕ, ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಪೊಲೀಸ್ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ತಿಳಿಸಿದರು. ಅವರು ಪಟ್ಟಣದ ಪ್ರವಾಸಿ ಮಂದಿರಲ್ಲಿ ಜರುಗಿದ ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬ ಶಾಂತಿ ಸಭೆಯಲ್ಲಿ ಮಾತನಾಡಿದರು. ಶ್ರೀಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತರುವ ಮೆರವಣಿಗೆ, ಹಾಗೂ ಶ್ರೀಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಮತ್ತು ಮೂರ್ತಿ ವಿಸರ್ಜನೆ ಮಾಡುವ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಆಯೋಜಕರು ಅಗತ್ಯ ಮುಂಜಾಗ್ರತೆ ಅನುಸರಿಸಬೇಕು. ಬೆಂಕಿ , ನೀರು, ವಿದ್ಯುತ್ ಅವಘಡಗಳು, ಕೋಮು ಗಲಭೆಗಳು ಗುಂಪು ಘರ್ಷಣೆಗಳು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ತೀವ್ರ ಎಚ್ಚರವಹಿಸಬೇಕಿದೆ ಎಂದರು. ಹಬ್ಬ ಸಡಗರ ಸಂಭ್ರಮದಿಂದ ಶಾಂತಿಯುತವಾಗಿ ಜರುಗಿಸುವ ಮೂಲಕ, ಸಾರ್ವಜನಿಕರು ಆಯೋಜಕರು ನಾಗರಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು. ಇಲಾಖೆಯ ನಿಯಮಾವಳಿಗಳನ್ನು , ಆಯೋಜಕರು ಖಡ್ಡಾಯವಾಗಿ ಪಾಲಿಸತಕ್ಕದ್ದು ಎಂದರು. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ ಮಾತನಾಡಿ, ಶಾಂತಿ…
ತಿಪಟೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ದಿವಂಗತ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ್ ಅರಸುರವರ 110 ನೇ ಜನ್ಮ ದಿನೋತ್ಸವ ಅಂಗವಾಗಿ ಅರಣ್ಯ–ಬಗರ್ ಹುಕುಂ ಸಾಗುವಳಿದಾರರಿಗೆ “ಒನ್ ಟೈಮ್ ಸೆಟಲ್ ಮೆಂಟ್” ಮೂಲಕ “ಭೂಮಿ–ವಸತಿ” ಹಕ್ಕು ಮಾನ್ಯ ಮಾಡುವ “ಸಾಮಾಜಿಕ ನ್ಯಾಯ”ಕ್ಕಾಗಿ ಆಗ್ರಹಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸ್ವಾತಂತ್ರ್ಯ ಪೂರ್ವದಿಂದಲೂ ಭೂಮಿಯ ಕನಸು ಕಂಡ ಅದೆಷ್ಟೋ ಜೀತಗಾರರು…. ಇನ್ನೊಬ್ಬರ ಭೂಮಿಯನ್ನೇ ಆಧರಿಸಿ ಗೇಣಿಯಲ್ಲೇ ಜೀವನ ಕಳೆದವರು ಒಪ್ಪತ್ತು ಊಟಕ್ಕಾಗಿಯೇ ಬದುಕು ಸವೆಸುತ್ತಿದ್ದ ಬಡ ಕೂಲಿಕಾರರು….ಇಂಥಹ ಬದುಕಿಗೆ ತರೆ ಎಳೆದು “ಉಳುವವನೇ ಭೂ ಒಡೆಯ” ಕಾನೂನು ಜಾರಿ ಮಾಡುವ ಮೂಲಕ, ಅಂದಿನ ಜನ ಹೋರಾಟಗಳ ಒತ್ತಡದಿಂದಲೂ ಲಕ್ಷಾಂತರ ದಲಿತ-ಹಿಂದುಳಿದ ಸಮುದಾಯಗಳಿಗೆ ಭೂಮಿ ಹಕ್ಕು ದೊರೆಕಿಸಿ ಕೊಟ್ಟ ಕೀರ್ತಿ ಅಂದಿನ ಕಾಂಗ್ರೆಸ್ ಸರ್ಕಾರದ ಕರ್ನಾಟಕ ಮುಖ್ಯ ಮಂತ್ರಿಗಳಾಗಿದ್ದ ದಿವಂಗತ ಡಿ.ದೇವರಾಜ್ ಅರಸ್ ರವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಭೂಸುದಾರಣಾ ಕಾಯ್ದೆಗೆ ತಿದ್ದುಪಡಿಯ ಮೂಲಕ ಉಳುವವನೇ ಭೂ ಒಡೆಯ…
ಸರಗೂರು: ಎನ್.ಕೆ.ರಾಜಣ್ಣರವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಂತರವಾಗಿ ನಾವುಗಳು ಹೋರಾಟ ಮಾಡುತ್ತೇವೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಎಂ.ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಪ್ರವಾಸಿ ಮಂದಿರದಲ್ಲಿ ಗುರುವಾರದಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಎನ್.ಕೆ.ರಾಜಣ್ಣ ಹಾಗೂ ನಾಗೇಂದ್ರರವರನ್ನು ಸಂಪುಟದಿಂದ ವಜಾಗೊಳಿಸಿರವುದನ್ನು ಖಂಡಿಸಿ ಆ.29 ರಂದು ಮೈಸೂರು ಮತ್ತು ಚಾಮರಾಜನಗರ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲೂಕುಗಳಿಗೆ ಭೇಟಿ ಕೊಟ್ಟು ನಮ್ಮ ಸಮಾಜದ ಬಂಧುಗಳಿಗೆ ಆಹ್ವಾನ ಪತ್ರಿಕೆ ನೀಡಿ ಈ ಬೃಹತ್ ಪತ್ರಿಭಟನೆಗೆ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಕರಪತ್ರ ಹಂಚಿ ಹೆಚ್ಚಿನ ಜನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಪ್ರತಿಭಟನೆಯಲ್ಲಿ ಮೈಸೂರಿನ ಟೌನ್ ಹಾಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಪ್ರತಿಭಟನೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ನಾಯಕ ಸಮಾಜದ ಮುಖಂಡರು ಭಾಗವಹಿಸುತ್ತಿದ್ದಾರೆ. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ…
ಬೆಂಗಳೂರು: ಕರಾವಳಿ ಮೂಲದ ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆಗೆ ಶೀಘ್ರವೇ ವಿವಾಹವಾಗಲಿದ್ದಾರೆ. ವರದಿಗಳ ಪ್ರಕಾರ ಆ.28ರಂದು ಅನುಶ್ರೀ ಹಾಗೂ ರೋಷನ್ ಸಪ್ತಪದಿ ತುಳಿಯಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ. `ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಸಿ ಮಹಾದೇವಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಚಿವರನ್ನು ಭೇಟಿ ಮಾಡಿದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರ ಮನವಿಗೆ ಸ್ಪಂದಿಸಿ ಅವರು ಈ ಆಶ್ವಾಸನೆ ನೀಡಿದರು. ಚಿಕ್ಕಪೇಟೆಯ ಸರ್ವೇ ಸಂಖ್ಯೆ 61 ರಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಂದು ಎಕರೆ ಜಮೀನು ಒದಗಿಸಿದೆ. 12 ವರ್ಷ ಗಳ ಹಿಂದೆ ರೂ.50 ಲಕ್ಷ ಅನುದಾನ ಕೂಡ ಮಂಜೂರು ಮಾಡಿದೆ. ಆದರೆ ಈ ಅನುದಾನದಲ್ಲಿ ಭವನ ನಿರ್ಮಾಣ ಅಸಾಧ್ಯವಾಗಿದೆ ಎಂದು ಜಾನಸನ್ ಘೋಡೆ ಸಚಿವರ ಗಮನ ಸೆಳೆದರು. ಭವನ ನಿರ್ಮಾಣದಿಂದ ಜಿಲ್ಲಾ ಕೇಂದ್ರದಲ್ಲಿ ವಾಸಿಸುವ ದೀನ ದಲಿತರು ಹಾಗೂ ಬಡವರಿಗೆ ಸಭೆ ಸಮಾರಂಭ ಹಾಗೂ ಇತರ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಹೀಗಾಗಿ ಭವನಕ್ಕೆ ರೂ.5 ಕೋಟಿ ವಿಶೇಷ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಮ್ಮ ಮನವಿಗೆ…
ನವದೆಹಲಿ: ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಈ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ಮಂಜುನಾಥ್ ಅವರು ಹೇಳಿದ್ದಾರೆ. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರು, ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC