Subscribe to Updates
Get the latest creative news from FooBar about art, design and business.
- ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
- ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್ ಲೈನ್ ಸಹಿ ಸಂಗ್ರಹ
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ ವಿಸ್ಕಿ, ಬಿಯರ್ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅಷ್ಟೇ ಅಲ್ಲ ಅಗ್ಗದ ದರದ ಬಿಯರ್ ಬಾರ್ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಹಳ್ಳಿಯಲ್ಲಿ ಬಿಯರ್ ಬಾರ್ ತೆರೆಯುವುದಾಗಿ ಹೇಳಿದರು. ಮಹಾರಾಷ್ಟ್ರದ ಈ ಸ್ವತಂತ್ರ ಅಭ್ಯರ್ಥಿಯು 2024 ರ ಲೋಕಸಭಾ ಚುನಾವಣೆಗೆ ಇಂತಹ ಭರವಸೆಗಳನ್ನು ನೀಡಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಮದ್ಯವನ್ನು ಆಮದು ಮಾಡಿಕೊಡುತ್ತೇನೆ. ಬಡವರು ಕಷ್ಟಪಟ್ಟು ದುಡಿಯುತ್ತಾರೆ. ಮದ್ಯ ಕುಡಿದು ಸಮಾಧಾನ ಕಂಡುಕೊಳ್ಳುತ್ತಾರೆ. ಗುಣಮಟ್ಟದ ಬಿಯರ್, ವಿಸ್ಕಿಯನ್ನು ಅವರು ಖರೀದಿ ಮಾಡಲು ಆಗುವುದಿಲ್ಲ. ಹಳ್ಳಿಗಾಡಿನ ಮದ್ಯ ಸೇವೆ ಮಾಡುತ್ತಾರೆ ಎಂದು ಅವರು ಹೇಳಿದರು. ಅಷ್ಟು ಮಾತ್ರವಲ್ಲದೇ ಲೋಕಸಭಾ ಚುನಾವಣೆ 2024 ರಲ್ಲಿ ಅಧಿಕಾರಕ್ಕೆ ಬಂದರೆ ತಾನು ಜನರಿಗೆ ಸಬ್ಸಿಡಿ ದರದಲ್ಲಿ…
ಕರ್ನಾಟಕದಾದ್ಯಂತ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ತಾಪಮಾನಕ್ಕೆ ಜನ ಒಂದು ಕಡೆ ಸೊರಗಿ ಹೋಗಿದ್ದರೆ, ಒಂದು ಕಡೆ ಕುಡಿಯಲು ನೀರಿನ ಸಮಸ್ಯೆಯನ್ನು ಬೆಂಗಳೂರಿನ ಜನತೆ ಅನುಭವಿಸುತ್ತಿದ್ದಾರೆ. ಇದೀಗ ವಾರಾಂತ್ಯದಲ್ಲಿ ವರುಣ ಈ ಕೆಳಗೆ ನೀಡಿದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಡೆ ಬಿರುಸಿನ ಮಳೆಯ ಸಂಭವನೀಯತೆಯನ್ನು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ವಿವಿಧೆಡೆ ವಾರಾಂತ್ಯಕ್ಕೆ ಸಾಧಾರಣ ಮಳೆ ಆಗುವ ಎಲ್ಲಾ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯೊಂದನ್ನು ನೀಡಿದೆ. ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಕೆಲವು ಕಡೆ ಎಪ್ರಿಲ್ 6 ರಂದು ಹಗುರ ಮಳೆಯಾಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಬೀದರ್ ಹಾವೇ, ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ, ಯಾದಗಿರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಕೊಡಗು, ದಾವಣಗೆರೆ ತುಮಕೂರು, ವಿಜಯಪುರ, ಮಂಡ್ಯ, ಮೈಸೂರು, ದಕ್ಷಿಣ ಒಳನಾಡಿದ ಯಾದಗಿರಿ ಇಲ್ಲೆಲ್ಲ ಎಪ್ರಿಲ್ 7 ರಂದು ಮಳೆಯಾಗುವ ಸಂಭವನೀಯತೆ…
ತಿ. ನರಸೀಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು. ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ. ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% GST ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು GST ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ. ಅಂದರೆ, ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು?…
ತುಮಕೂರು: ಲೋಕಸಭಾ ಚುನಾವಣೆಗೆ ಸ್ಪರ್ದಿಸಲು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಸುದೀರ್ಘ ಪ್ರಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿಯಾಗಿರೊ ಸೋಮಣ್ಣ ಫೀಲ್ಡ್ ಗಿಳಿಯುತ್ತಿರೋ ಅವರು ನಗರದಲ್ಲಿ ವಾಕಿಂಗ್ ಮಾಡುವಾಗಲೂ ಮತಬೇಟೆಯಲ್ಲಿ ತೊಡಗಿದ್ದಾರೆ. ಬೆಳಿಗ್ಗೆ ತುಮಕೂರು ವಿಶ್ವವಿದ್ಯಾಲಯ ವಾಕಿಂಗ್ ನೆಪದಲ್ಲಿ ಮತದಾರರನ್ನ ಭೇಟಿಯಾಗಿ ಮತದಾರರನ್ನು ಮಾತನಾಡಿಸಿ, ತಮಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲೇ ಮೈದಾನದಲ್ಲಿ ತರಭೇತಿ ಪಡೆಯುತ್ತಿದ್ದ ಕ್ರೀಡಾಪಟುಗಳ ಜೊತೆಯೂ ಅವರು ಕಾಲ ಕಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: SSLC ಪರೀಕ್ಷಾ ಕೇಂದ್ರಗಳನ್ನು ಅವಲೋಕಿಸಲು ತಮಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅವರು ಪತ್ರ ಬರೆದಿದ್ದು, ರಾಜ್ಯದಲ್ಲಿ ಪ್ರಸ್ತುತ ಎಸ್.ಎಸ್.ಎಲ್.ಸಿ. ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಿರುವ ಮಕ್ಕಳ ಸ್ನೇಹಿ ವಾತಾವರಣ ಹಾಗೂ ವ್ಯವಸ್ಥೆಗಳನ್ನು ಅವಲೋಕಿಸಲು ಭೇಟಿ ನೀಡುವ ಬಗ್ಗೆ ಸೂಚಿಸಿದ್ದೀರಿ. ಅದರಂತೆ ನಾನು ತುಮಕೂರು ಜಿಲ್ಲೆಯ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸಿರಾ ತಾಲ್ಲೂಕಿನ ಆಯ್ದ ಕೆಲವು ಪರೀಕ್ಷಾ ಕೇಂದ್ರಗಳಿಗೆ ದಿ.30/03/2024 ರಂದು ಭೇಟಿ ನೀಡಲು ಯೋಜಿಸಿದ್ದೆ. ಈ ಬಗ್ಗೆ ತಿಳಿಸಲು ಸದರಿ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರನ್ನು ಹಾಗೂ ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದಾಗ ‘ನಮ್ಮ ಇಲಾಖೆಯ ಆಯುಕ್ತರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳ ಹಕ್ಕುಗಳ…
ತಿ. ನರಸೀಪುರ: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ, ತಿ. ನರಸೀಪುರದಲ್ಲಿ ನಡೆದ ಸುನಿಲ್ ಬೋಸ್ ಪರ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಪ್ರಧಾನಿಯಾಗಿ 10 ವರ್ಷ ಆಯ್ತು. ಅವರು ಕೊಟ್ಟ ಭರವಸೆಯಲ್ಲಿ ಒಂದೇ ಒಂದನ್ನಾದ್ರೂ ಈಡೇರಿಸಿದ್ದಾರಾ ಹೇಳಿ. ಹೀಗಾಗಿ ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಮೋದಿ ಬರೀ ಮಾತಲ್ಲಿ ಮನೆ ಕಟ್ಟಿದ್ದು ಸಾಕು ಎಂದು ದೇಶದ ಜನ ತೀರ್ಮಾನಿಸಿದ್ದಾರೆ ಎಂದರು. ದೇಶದಲ್ಲಿರುವ ಕಪ್ಪು ಹಣವನ್ನೆಲ್ಲಾ ಕರಗಿಸ್ತೀನಿ ಎಂದು ಹೇಳಿ ಡಿಮಾನೆಟೈಸೇಷನ್ ಮಾಡಿದರು. ಆದರೆ, ಇದರಿಂದ ಕಪ್ಪು ಹಣ ಕರಗಲಿಲ್ಲ. ಇದರಿಂದ ಲಾಭ…
ತುಮಕೂರು: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಉಪನಿರೀಕ್ಷಕ ಕಾಂತರಾಜು ಅವರು ಗೌರವ ರಕ್ಷೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅಬ್ದುಲ್ ಖಾದರ್, ಮರಿಯಪ್ಪ ಹಾಜರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ 31 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಲೋಕಸಭೆ ಚುನಾವಣೆ ಹೊಸ್ತಿನಲ್ಲಿ ತುಮಕೂರಿನಲ್ಲಿ ಪಕ್ಷಾಂತರ ಪರ್ವ ಭರ್ಜರಿಯಾಗಿ ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಮುಖಂಡರು ಪಕ್ಷ ಬದಲಿಸುತ್ತಿದ್ದಾರೆ. ಲೋಕಸಭೆ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ ರಚಿಸಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಬಿಜೆಪಿಯ ವಿ. ಸೋಮಣ್ಣ ಅವರ ಗೆಲುವಿಗೆ ಮಾಜಿ ಪ್ರಧಾನಿ ದೇವೇಗೌಡ ತುಮಕೂರು ಪ್ರವಾಸ ಆರಂಭಿಸಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಎಚ್. ನಿಂಗಪ್ಪ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನ ನೀಡಿದ್ದ ಎಚ್ ಡಿಡಿ ಅವರ ನಡೆ ಕಾಂಗ್ರೆಸ್ ಮುಖಂಡರ ಕಣ್ಣು ಕೆಂಪಾಗಿಸಿದೆ. ಇದೇ ವೇಳೆ ದಳಪತಿಗಳಿಗೆ ಶಾಕ್ ಕೊಡಲು ಮುಂದಾದ ಕೈ ಪಡೆಯು ಎಚ್ ಡಿಡಿ ಭೇಟಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ರಿವರ್ಸ್ ಆಪರೇಷನ್ ಮಾಡುತ್ತಿದೆ. ಜೆಡಿಎಸ್ ಮುಖಂಡನಿಗೆ ಗಾಳ ಹಾಕಿದ ಕೈ ನಾಯಕರು, ತುಮಕೂರು ನಗರದ ಜೆಡಿಎಸ್ ಮುಖಂಡ ಗೋವಿಂದರಾಜುಗೆ ಪಕ್ಷ ಸೇರ್ಪಡೆಗೆ ಆಹ್ವಾನ ನೀಡಿದ್ದಾರೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ…
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು, ಇಂದು ರೋಣ ವಿಧಾನಸಭಾ ಮತಕ್ಷೇತ್ರದ ಕಣಗಿನಹಾಳ ಗ್ರಾಮದಲ್ಲಿ ಮತಯಾಚನೆಯನ್ನು ಮಾಡಿದರು. ಇನ್ನೂ ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ ಸೇರಿದಂತೆ ಹಲವಾರು ಪ್ರಮುಖರು ಹಾಜರಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಗ್ರಾಮದ ಸಹಕಾರಿ ರಂಗದ ಪಿತಾಮಹ ಶ್ರೀ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ತದನಂತರ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್ ಆಗಿರುವ ಯದುವೀರ್ ಈ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರಲ್ಲಿ ಯಾವುದೇ ಕೃಷಿ ಭೂಮಿಯಾಗಲಿ, ಸೈಟ್ ಆಗಲಿ, ಮನೆ ಆಗಲಿ ಇಲ್ಲ ಎಂದು ತಮ್ಮ ಅಫಿಡವಿಟ್ ನಲ್ಲಿ ಘೋಷಿಸಿಕೊಂಡಿದ್ದಾರೆ. ಯದುವೀರ್ ಒಡೆಯರ್ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ. ನಗದನ್ನು ಹೊಂದಿದ್ದು, ವಿವಿಧ ಬ್ಯಾಂಕ್ ಅಕೌಂಟ್ ಗಳಲ್ಲಿ 1.36 ಕೋಟಿ ರೂ. ಅನ್ನು ಹೊಂದಿದ್ದಾರೆ. 3.25 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂ. ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ. ಚರಾಸ್ತಿಯನ್ನು ಯದುವೀರ್ ಈ ವೇಳೆ ಘೋಷಿಸಿಕೊಂಡಿದ್ದಾರೆ. ಇನ್ನು, ಅವರ ಪತ್ನಿ ತ್ರಿಷಿಕಾ ಬಳಿ 75 ಸಾವಿರ ರೂ. ನಗದು ಇದ್ದು, ಎಚ್ ಡಿಎಫ್ ಸಿ ಬ್ಯಾಂಕ್‌ನಲ್ಲಿ 1…