Author: admin

ಶಿವಮೊಗ್ಗ: ನೀರಿನ ಬಕೆಟ್ ​ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಕೊನೆಯುಸಿರೆಳೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಆಸೀಫ್-ಅಂಜುಮ್ ದಂಪತಿಯ ಪುತ್ರಿ ಆನಮ್ ಫಾತಿಮಾ ಸಾವನ್ನಪ್ಪಿದ ಮಗುವಾಗಿದೆ. ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾಬೂಲ್: ಆಗ್ನೇಯ ಅಫ್ಘಾನಿಸ್ತಾನದಲ್ಲಿ ನೆಲಬಾಂಬ್‌ ನಿಂದ ಉಂಟಾದ ಸ್ಫೋಟದಲ್ಲಿ ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳು ಗುಂಪಾಗಿ ಆಟವಾಡುತ್ತಿದ್ದಾಗ ನೆಲಬಾಂಬ್ ಸ್ಪೋಟಗೊಂಡಿದೆ. ರಷ್ಯಾದ ಆಕ್ರಮಣದ ಸಂದರ್ಭದಲ್ಲಿ ಸ್ಫೋಟಗೊಳ್ಳದ ಉಳಿದಿದ್ದ ನೆಲಬಾಂಬ್ ಮಕ್ಕಳ ಕೈಗೆ ಸಿಕ್ಕಿದ್ದು, ಅವರು ಅದರಲ್ಲಿ ಆಟವಾಡುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರಾಗಿದ್ದಾರೆ. ಮಾಹಿತಿಯ    ಪ್ರಕಾರ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು, ಇದೇ ಕಾರಣದಿಂದಾಗಿ ತನ್ನ ಇಬ್ಬರು ಮಕ್ಕಳೊಂದಿಗೆ ಪತಿ ನಾರಾಯಣಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಜಾಮೀನು ಆದೇಶವನ್ನು ಹರಿದು ನ್ಯಾಯಾಧೀಶರನ್ನು ನಿಂದಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟ‌ರ್ ಹರೀಶ್ ವಿರುದ್ಧದ ದೂರಿನ ವಿಚಾರಣೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. “ಕೋರ್ಟ್ ಆರೋಪಿಯೊಬ್ಬನಿಗೆ ನೀಡಿದ್ದ ಜಾಮೀನು ಆದೇಶವನ್ನು ಹರಿದು ಹಾಕಿ ಅದನ್ನು, ನೆಲದ ಮೇಲೆ ಎಸೆದು, ಜಾಮೀನು ನೀಡಿದ ಸೆಷನ್ಸ್ ನ್ಯಾಯಾಧೀಶರನ್ನು ಕೆಟ್ಟದಾಗಿ ನಿಂದಿಸಿದ್ದು, ಅವರ ಪೊಲೀಸ್‌ ಠಾಣೆಗೆ ತಾವೇ ನ್ಯಾಯಾಧೀಶರಂತೆ ವರ್ತಿಸಿದ್ದು, ಇಂತಹ ಪೊಲೀಸ್ ಅಧಿಕಾರಿಯನ್ನು ಕಾನೂನು ಪ್ರಕಾರ ವಿಚಾರಣೆಗೆ ಒಳಪಡಿಸಿ ಶಿಕ್ಷಿಸಬೇಕು. ನ್ಯಾಯಾಲಯ ಈ ಅಧಿಕಾರಿಯ ಬಗ್ಗೆ ಯಾವುದೇ ಸಹಾನುಭೂತಿಯನ್ನು ತೋರಿಸಲು ಸಾಧ್ಯವಿಲ್ಲ ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶ ನಟರಾಜ್ ಅವರು ಪೋಲಿಸ್ ಇನ್ಸ್ ಪೆಕ್ಟರ್ ಹರೀಶ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹರೀಶ್‌ ನಿಂದ ಇಂತಹ ಕೃತ್ಯ ಎಸಗಿದ್ದಕ್ಕಾಗಿ ಇಲಾಖಾ ವಿಚಾರಣೆ ನಡೆಸುವ ಮೂಲಕ ಪೊಲೀಸ್ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಹೇಳಿದೆ. ದೂರುದಾರರಿಗೆ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿದ್ದು ಮಾತ್ರವಲ್ಲದೆ,…

Read More

ಪಕ್ಕದ ಮನೆಯ ಯುವತಿ ನಿತ್ಯ ಮನೆ ಮುಂದಿನ ರಂಗೋಲಿಯನ್ನು ತುಳಿದು ಅಳಿಸಿ ಹಾಕಿ, ಕಿರುಕುಳ ನೀಡುತ್ತಿದ್ದಾಳೆ ಎಂದು ದಂಪತಿ ದೂರಿದ್ದಾರೆ. ನೆರೆ-ಹೊರೆಯವರ ಗಲಾಟೆ ಪ್ರಕರಣವು ಠಾಣೆ ಮೆಟ್ಟಿಲೇರಿದ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟಮೆಂಟ್‌ನಲ್ಲಿ ನಡೆದಿದೆ. ಪಕ್ಕದ ಮನೆಯಾಕೆ ರಂಗೋಲಿ ಅಳಿಸುವುದು, ಶೂ ರ್ಯಾಕ್ ಅನ್ನು ಕಾಲಿನಲ್ಲಿ ಒದ್ದು ಬೀಳಿಸುತ್ತಿದ್ದಾಳೆ. ಈ ರೀತಿ ಸಾಕಷ್ಟು ಬಾರಿ ಮಾನಸಿಕ ಕಿರಿಕುಳ ನೀಡುತ್ತಿದ್ದಾಳೆ ಎಂದು ಸರಿತಾ ಎಂಬಾಕೆ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಈಕೆಯಿಂದ ಮಾನಸಿಕವಾಗಿ ಕಿರುಕುಳವಾಗುತ್ತಿದೆ. ಪ್ರತಿ ದಿನ ಜಗಳವಾಡಲು ಆಗುವುದಿಲ್ಲ. ಪ್ರಶ್ನೆ ಮಾಡಿದರೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾಳೆ ಎಂದು ಸರಿತಾ ಶಿಂಧೆ ಪೋಸ್ಟ್‌ ಮಾಡಿದ್ದಾರೆ. ಇನ್ನೂ ನಾವು ದೂರು ಕೊಟ್ಟರೆ ಪೊಲೀಸರು ಎನ್‌ಸಿಆರ್ ಮಾಡುತ್ತಾರೆ. ಆದರೆ ನಮ್ಮ ಮೇಲೆ ಪ್ರತಿ ದೂರು ಕೊಟ್ಟರೆ ಎಫ್ಐಆರ್ ಮಾಡುತ್ತಾರೆ ಎಂದು ದಂಪತಿ ದೂರಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬಿಜೆಪಿ ಎಂಎಲ್ ಸಿ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವ‌ರ್ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ನಿಶಾ ಅವರು ಕಾಂಗ್ರೆಸ್ ಸೇರಲು ತನ್ನ ತಂದೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಗುಮಾನಿ ಹಬ್ಬಿತ್ತು. ಆದರೆ ಈಗ ಸ್ವತಃ ನಿಶಾ ಯೋಗೇಶ್ವರ ಅವರೇ ಕಾಂಗ್ರೆಸ್ ಸೇರುವುದಾಗಿ ಹೇಳಿಕೊಂಡಿದ್ದಾರೆ. ನಾನು ಕಾಂಗ್ರೆಸ್ ಸೇರುವುದರ ಬಗ್ಗೆ ತಂದೆಯವರಿಗೆ ಯಾವುದೇ ಆಕ್ಷೇಪವಿಲ್ಲ, ಅವರ ಸಂಪೂರ್ಣ ಬೆಂಬಲ ನನಗಿದೆ. ತಂದೆ ಚಿಕ್ಕವಯಸ್ಸಿನಿಂದಲೂ ನನಗೆ ಸಂಪೂರ್ಣ ಸ್ವತಂತ್ರ ನೀಡಿದ್ದಾರೆ‌ ಎಂದು ನಿಶಾ ಅವರು ತಿಳಿಸಿದ್ದಾರೆ. ನಿಶಾ ಅವರ ನಿರ್ಧಾರವು ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಡಿ.ಕೆ. ಸುರೇಶ್‌ ಗೆ ಹೆಚ್ಚಿನ ಮತಗಳನ್ನು ಪಡೆಯಲು ಸಹಾಯ ಮಾಡುತ್ತದೆ. ನಿಶಾ ಅವರು ಸುರೇಶ್ ಮತ್ತು ಕೆಪಿಸಿಸಿ ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಜೆಡಿಎಸ್…

Read More

ಇಂಗ್ಲೆಂಡ್ ‌ನಲ್ಲಿ ಮಹಿಳೆಯೊಬ್ಬರಿಗೆ ಅವಳಿ ಮಕ್ಕಳು ಜನಿಸಿದೆ. ಇದರಲ್ಲೇನು ವಿಶೇಷ ಅಂತೀರಾ? ಹೌದು, ಇಲ್ಲೊಂದು ವಿಚಿತ್ರವಾದ ಘಟನೆ ನಡೆದಿದೆ. ಮೊದಲ ಮಗು ಜನಿಸಿದ 22 ದಿನಗಳ ನಂತರ ಎರಡನೇ ಮಗು ಜನಿಸಿತ್ತು. ಇದು ಬಹಳ ಅಪರೂಪದ ಪ್ರಕರಣ. ಏನಿದು ಘಟನೆ ? ಬನ್ನಿ ತಿಳಿಯೋಣ. ವರದಿ ಪ್ರಕಾರ, ಇಂಗ್ಲೆಂಡ್ ನಿವಾಸಿ ಕೇಲಿ ಡಾಯ್ಲ್ ಗರ್ಭಿಣಿಯಾಗಿದ್ದರು. ತಾನು ಅವಳಿ ಮಕ್ಕಳ ತಾಯಿಯಾಗಲಿದ್ದೇನೆ ಎಂದು ವೈದ್ಯರು ಹೇಳಿದಾಗ ಆಕೆ ಖುಷಿಯಿಂದ ಕುಣಿದಾಡಿದ್ದರು. ಎಲ್ಲಾ ಸ್ಕ್ಯಾನ್‌ ಗಳು ಸಾಮಾನ್ಯವಾಗಿದ್ದವು. ಆಗ ವೈದ್ಯರು, ಮಕ್ಕಳಿಬ್ಬರೂ ಆರೋಗ್ಯವಾಗಿದ್ದಾರೆ. 22ನೇ ವಾರದವರೆಗೂ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೊಟ್ಟೆಯಲ್ಲಿ ಭಯಾನಕ ನೋವು ಕಾಣಿಸಿಕೊಂಡಿತು. ಹಾಸಿಗೆಯಿಂದ ಏಳುವುದು ಕಷ್ಟವಾಯಿತು, ಕೈಲಿಯನ್ನು ಆಸ್ಪತ್ರೆಗೆ ಕರೆದೊಯ್ದು ಐದು ದಿನಗಳ ಕಾಲ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಆಕೆ ತನ್ನ ಮೊದಲ ಮಗು ಆರ್ಲೋಗೆ ಸ್ವಾಭಾವಿಕವಾಗಿ ಜನ್ಮ ನೀಡಿದಳು. ಆದರೆ ಮಗು ಕೇವಲ 1.1 ಪೌಂಡ್ ತೂಕವನ್ನು…

Read More

ಇತ್ತೀಚಿನ ದಿನಮಾನದಲ್ಲಿ ಯುವ ಜನಾಂಗಕ್ಕೆ ಕಾಡುತ್ತಿರುವ ಅತಿ ದೊಡ್ಡ ಕಾಯಿಲೆ ಎಂದರೆ ಅದು ನಿದ್ರಾಹೀನತೆ. ಅದು ಎಷ್ಟರ ಮಟ್ಟಿಗೆಂದರೆ ಸ್ವತಃ ತಾಯಿಯೇ ಬಂದು ಲಾಲಿ ಹಾಡಿದರೂ ನಿದ್ದೆ ಮಾತ್ರ ಸಾಧ್ಯವಿಲ್ಲದಂತಾಗಿದೆ. ಇತ್ತೀಚೆಗೆ ಭಾರತದಲ್ಲಿನ ಸರಿಸುಮಾರು ಶೇ.58 ರಷ್ಟು ಜನರು ರಾತ್ರಿ ಹನ್ನೆರಡು ಗಂಟೆಯ ನಂತರ ಮಲಗುತ್ತಿದ್ದಾರೆ. ಈ ರೀತಿ ತಡವಾಗಿ ಮಲಗುವುದರಿಂದ ಬೆಳಗ್ಗೆ ಲೇಟಾಗಿ ಏಳುವುದು, ಎದ್ದಾಗ ನಿಶಕ್ತಿಯ ಭಾವನೆ ಅನುಭವಿಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಇತ್ತೀಚೆಗೆ ವಿಶ್ವ ನಿದ್ರಾ ದಿನದ ಹಿನ್ನೆಯಲ್ಲಿ ಗ್ರೇಟ್ ಇಂಡಿಯನ್ ಸ್ಟೀಪ್ ಸ್ಕೋರ್‌ ಕಾರ್ಡ್, ವರದಿಯೊಂದನ್ನು ಬಿಡುಗಡೆ ಮಾಡಿದ್ದು ಈ ವರದಿಯಲ್ಲಿ ನಿದ್ರಾಹೀನತೆಗೆ ಮುಖ್ಯ ಕಾರಣ ಅತಿಯಾದ ಡಿಜಿಟಲ್ ಸಾಮಗ್ರಿಗಳ ಬಳಕೆ ಹಾಗೂ ಅತಿಯಾದ ಒತ್ತಡ ಕಾರಣ ಎಂದು ತಿಳಿಸಿದೆ. ಈ ಸಮೀಕ್ಷೆಯಲ್ಲಿ ಒಟ್ಟಾರೆ 10,000 ಜನರನ್ನು ಬಳಸಿಕೊಳ್ಳಲಾಗಿದೆ. ಒಟಿಟಿ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ಶೇ.54ರಷ್ಟು ಜನರು ಸರಿಯಾದ ಸಮಯದಲ್ಲಿ ಮಲಗದೆ ಇರುವುದು ಹಾಗೂ ಶೇ.88ರಷ್ಟು ಜನರು ಮಲಗುವುದಕ್ಕೂ ಮುನ್ನ ಮೊಬೈಲ್ ಬಳಕೆ…

Read More

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಇಂದು, ಸಿದ್ದಗಂಗಾ ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ಗದ್ದುಗೆ ದರ್ಶನ ಪಡೆದ ಡಾ ಮಂಜುನಾಥ್ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕೂಡ ಅವರೊಂದಿಗೆ ಜೊತೆಗೂಡಿ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ, ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗದ್ದುಗೆಗೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು. ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರೋ ವಿ. ಸೋಮಣ್ಣ ಇಂದು ಮೊದಲ ಸೆಟ್ ನ ನಾಮಪತ್ರ ಸಲ್ಲಿಸಿದರು. ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ತುಮಕೂರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರೋ ಶುಭಕಲ್ಯಾಣ್ ಗೆ ನಾಮಪತ್ರ ಸಲ್ಲಿದರು. ಸೋಮಣ್ಣಗೆ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸಾತ್ ನೀಡಿದರು. ತಮ್ಮ ಆರಾಧ್ಯ ಧೈವವಾಗಿರೋ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ವಿನೋಭಾ ನಗರದ ಅರ್ಧನಾರೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More