Subscribe to Updates
Get the latest creative news from FooBar about art, design and business.
- ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್ ಲೈನ್ ಸಹಿ ಸಂಗ್ರಹ
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
Author: admin
ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ಬನ್ನೇರುಘಟ್ಟ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಒಂದು ಸಲಹೆಯನ್ನು ನೀಡಿದೆ. ಬೆಂಗಳೂರು ಮೆಟ್ರೋ ನಿರ್ಮಾಣದ ಪರಿಣಾಮವಾಗಿ, ಆನೆಪಾಳ್ಯ ಜಂಕ್ಷನ್ ಗೆ MICO ಸಿಗ್ನಲ್ ನ ಉದ್ದಕ್ಕೂ ಒಂದು ವರ್ಷದವರೆಗೆ ಭಾಗಶಃ ಸಂಚಾರ ಮುಚ್ಚಲಾಗುತ್ತದೆ. ಈ ಸಂಬಂಧ BMRCL ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ MICO ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್ ಗೆ ಉತ್ತರದ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಏಪ್ರಿಲ್ 1, 2024 ರಿಂದ ಒಂದು ವರ್ಷದವರೆಗೆ ರಸ್ತೆ ಬಂದ್ ಆಗಲಿದೆ. ದಕ್ಷಿಣ ಭಾಗದ ಪ್ರವೇಶದ ನಿರ್ಮಾಣದಿಂದಾಗಿ ಈ ರಸ್ತೆ ಬಂದ್ ಅನಿವಾರ್ಯವಾಗಿದೆ. ಈ ಅವಧಿಯಲ್ಲಿ, ಬನ್ನೇರುಘಟ್ಟ ಮುಖ್ಯರಸ್ತೆಯಿಂದ ಆನೆಪಾಳ್ಯ ಜಂಕ್ಷನ್ ಗೆ ತಲುಪಲು ಉದ್ದೇಶಿಸಿರುವ ವಾಹನ ಚಾಲಕರನ್ನು MICO ಸಿಗ್ನಲ್ ನಲ್ಲಿ ಬಲ ತಿರುವು ಪಡೆಯಲು ಮರುನಿರ್ದೇಶಿಸಲಾಗುತ್ತದೆ, BOSCH ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ಗೆ ತೆರಳಿ ನಂತರ ಅವರು ಎಡ ತಿರುವು ಪಡೆಯಬೇಕು. ಆದರೆ, ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ವೃತ್ತದ ಕಡೆಗೆ…
ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಉದ್ಯಮಿಯಾಗಿಯೂ ವೃತ್ತಿ ಆರಂಭಿಸಿದ್ದಾರೆ. ಹೋಟೆಲ್ ಉದ್ಯಮದ ನಂತರ ಇದೀಗ ಆಭರಣ ಮಳಿಗೆಗೆ ತನಿಷಾ ಚಾಲನೆ ನೀಡಿದ್ದು ಎಲ್ಲೆಡೆ ಸುದ್ದಿಯಾಗಿದೆ. ನಟಿಯ ಹೊಸ ಹೆಜ್ಜೆಗೆ ‘ಬಿಗ್ ಬಾಸ್’ ಸ್ಪರ್ಧಿಗಳು ಕೂಡ ಸಾಥ್ ನೀಡಿದ್ದಾರೆ. ಬಿಗ್ ಬಾಸ್ ಮುಗಿಯುತ್ತಿದ್ದಂತೆ ತಮಗೆ ಸಿಕ್ಕಿರುವ ಜನಪ್ರಿಯತೆಯನ್ನು ಸದುಪಯೋಗಪಡಿಸಿಕೊಳ್ತಿದ್ದಾರೆ. ಈಗೀನ ಕಾಲಕ್ಕೆ ತಕ್ಕಂತೆ ಮಹಿಳಾ ಮಣಿಗಳಿಗೆ ಇಷ್ಟವಾಗುವ ಹಾಗೇ ಸ್ಟೈಲೀಶ್ ಆಭರಣಗಳು ತನಿಷಾ ಜ್ಯುವೆಲ್ಲರಿಯಲ್ಲಿ ಸಿಗಲಿದೆ. ತನಿಷಾ ಹೊಸ ಹೆಜ್ಜೆಗೆ ಸಾಥ್ ನೀಡಲು ಲೂಸ್ ಮಾದ ಯೋಗಿ ದಂಪತಿ, ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಮಹೇಶ್, ಸಿರಿ, ಪವಿ ಪೂವಪ್ಪ, ರಕ್ಷಕ್, ನಮ್ರತಾ ಗೌಡ, ವರ್ತೂರು ಸಂತೋಷ್, ವಿನಯ್ ಗೌಡ, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ಕಿರುತೆರೆ ನಟಿ ಭವ್ಯಾ ಗೌಡ, ಕಾರುಣ್ಯ ರಾಮ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಏಪ್ರಿಲ್‌ನಲ್ಲಿ 14 ದಿನಗಳ ಕಾಲ ಬ್ಯಾಂಕ್ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ. ಈ ಪಟ್ಟಿಯ ಪ್ರಕಾರ ಮುಂಬರುವ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳುಳಿಗೆ ರಜೆಯಿದೆ. ಇತ್ತೀಚೆಗೆ ಆರ್‌ಬಿಐ ಮಾರ್ಚ್ 31 ರ ಭಾನುವಾರ ಕೂಡ ಬ್ಯಾಂಕ್‌ಗಳಿಗೆ ರಜೆಯಿಲ್ಲ. ಕೆಲಸ ಮಾಡಬೇಕು ಎಂದು ಘೋಷಿಸಿದೆ. ಹಣಕಾಸು ವರ್ಷದ ಮುಕ್ತಾಯವಾಗಿರುವುದಿಂದ ವಾರ್ಷಿಕ ಲೆಕ್ಕಪತ್ರಗಳ ಕೆಲಸ ಹೆಚ್ಚಾಗಿದೆ. ಇದೆ ಕಾರಣಕ್ಕೆ ಮಾರ್ಚ್ 30 ರ ಶನಿವಾರ ಮತ್ತು ಮಾರ್ಚ್ 31ರ ಭಾನುವಾರ ಆರ್‌ಬಿಐ ಕಚೇರಿಗಳು ಓಪನ್ ಇರಲಿವೆ. ಏಪ್ರಿಲ್ 1, 2024: ಏಪ್ರಿಲ್ 1 ರಂದು ಬ್ಯಾಂಕುಗಳು ಮುಚ್ಚಿರಲಿದೆ. ಆದರೆ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಮತ್ತು ಮೇಘಾಲಯದಂತಹ ಕೆಲವು ರಾಜ್ಯಗಳಲ್ಲಿ ಬ್ಯಾಂಕ್ ಗಳು ಕಾರ್ಯನಿರ್ವಹಿಸಲಿವೆ. ಏಪ್ರಿಲ್ 5, 2024: ಬಾಬು ಜಗಜೀವನ್ ಮತ್ತು ಜುಮಾ-ಉಲ್-ವಿದಾ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಯಾಂಕ್‌ಗಳು…
ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದರೆ ಗೆಲುವು ನಿಶ್ಚಿತ. ಪ್ರೀತಿ, ವಿಶ್ವಾಸದಿಂದ ಕುಮಾರಣ್ಣರನ್ನು ಕೇಂದ್ರ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಕಾಯಲು ಮೋದಿಜೀ, ಕಾವೇರಿ ಕಾಯಲು ಕುಮಾರಣ್ಣ ಬೇಕು. ನಾವು ಬಿಜೆಪಿ ಕಾರ್ಯಕರ್ತರು ಕುಮಾರಣ್ಣನ ಬೆನ್ನಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಕಾಲಿಟ್ಟ ಕೂಡಲೇ ರಾಜ್ಯಕ್ಕೆ ಬರ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕುಮಾರಣ್ಣ ಸಿಎಂ ಆಗಿದ್ದಾಗ ಮಳೆ, ಬೆಳೆ ಚೆನ್ನಾಗಿತ್ತು. ಕೆಆರ್ ಎಸ್ ಬರಿದಾಗುವಾಗ ಸ್ಟಾಲೀನ್ ತಗಾದೆ ತೆಗೆಯಬೇಡಿ ಎನ್ನಲಿಲ್ಲ. ಆದರೆ ಚುನಾವಣೆಗಾಗಿ ಕೈ ಕೈ ಹಿಡಿದು ನಿಂತರು. ಇವತ್ತು ಕುಡಿಯುವ ನೀರಿಗೂ ಹೆಣಗಾಡುವ ಪರಿಸ್ಥಿತಿ ಇದೆ ಎಂದರು. ಅಸೆಂಬ್ಲಿಯಲ್ಲಿ ಜೆಡಿಎಸ್ ಎನ್ನುವ ಕಾರ್ಯಕರ್ತರು ಎಂಪಿ ಚುನಾವಣೆ ಬಂದಾಗ ಮೋದಿ ಪರ ನಿಲುತ್ತಾರೆ. ಮಂಡ್ಯದವರು ಸ್ವಾಭಿಮಾನಿಗಳು. ಮಂಡ್ಯ, ಮೈಸೂರಿಗೆ ಅವಿನಾಭಾವ ಸಂಬಂಧ ಇದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಹಾಸನ: ಹಿಟ್ ಆ್ಯಂಡ್ ರನ್ ಗೆ ಮಾವ ಮತ್ತು ಅಳಿಯ ಬಳಿಯಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು(35) ಹಾಗೂ ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ(65) ಮೃತ ರ್ದುದೈವಿಗಳು. ಬೆಂಗಳೂರಿನಿಂದ ಮಾವ, ಪತ್ನಿ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು, ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ಕಾರಿನ ಟೈರ್ ಪಂಚರ್ ಆದ ಹಿನ್ನೆಲೆ ಟೈರ್ ಬದಲಾಯಿಸುವಾಗ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಮಧು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ಗ್ರಾಮಾಂತರ:ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(43) ಮೃತ ರ್ದುದೈವಿ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ರೈತರೊಬ್ಬರು ಬಾವಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಬೀದರ ಜಿಲ್ಲಾ ಔರಾದ ತಾಲೂಕಿನ ಮುಸ್ತಾಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹುಲೆಪ್ಪ ಎಂಬವರ ಪುತ್ರ ಉಮಾಕಾಂತ(46) ಸಾವಿಗೆ ಶರಣಾದವರಾಗಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ಕೊರಟಗೆರೆ: ಕೇಂದ್ರ ಸರಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ ಇದು ಕೇವಲ ಭರವಸೆ ಅಲ್ಲ ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರಥಮ ಆದ್ಯತೆ. ಸಿದ್ದರಬೆಟ್ಟ ಮತ್ತು ಏಳುಸುತ್ತಿನ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ರೂಪುರೇಷೆ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಕಾವಲುಗಾರನಾಗಿ ನಾನು ಹಗಲುರಾತ್ರಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು. ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದರೇ ರಾಜ್ಯಕ್ಕೆ ಬರಗಾಲವು ತಾನಾಗಿಯೇ ಬರುತ್ತೇ. ಕುಡಿಯುವ ನೀರು ಮತ್ತು ಮೇವಿಗೆ ಹಾಹಾಕಾರ ಎದುರಾಗಿದೆ. ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ. ವಿ.ಸೋಮಣ್ಣ ಅಭಿವೃದ್ದಿಯ ಪರವಾದ ಜನಸ್ನೇಹಿ ನಾಯಕ. ತುಮಕೂರು ಜಿಲ್ಲೆಯನ್ನ ಅಭಿವೃದ್ದಿಗೆ ಅವರ ಕೊಡುಗೆ ನೀಡ್ತಾರೇ ಎಂದು ಹೇಳಿದರು. ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ…
ನಟಿ, ರಾಜಕಾರಣಿ ಖುಷ್ಬೂ ಸುಂದರ್ ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಕಳೆದ ವರ್ಷ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನೇಮಕಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ ತಮ್ಮ ಜೀವನದ ಕಹಿ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಬಹುತೇಕ ತಂದೆಯರಿಗೆ ಮಕ್ಕಳ ಮೇಲೆ ಪ್ರೀತಿ ಇರುತ್ತದೆ. ಆದರೆ, ಖಷ್ಬೂ ತಂದೆಗೆ ಮಗಳ ಮೇಲೆ ಇದ್ದಿದ್ದು ಕಾಮ ಎಂದು ಅವರು ಹೇಳಿದ್ದಾರೆ. ‘ಸಣ್ಣ ವಯಸ್ಸಿನಲ್ಲಿದ್ದಾಗ ಮಗುವಿನ ಮೇಲೆ ದೌರ್ಜನ್ಯ ನಡೆದರೆ, ಆ ಕಹಿ ನೆನಪು ಕೊನೆಯವರೆಗೂ ಇರುತ್ತದೆ. ಅದು ಹುಡುಗನೇ ಆಗಿರಬಹುದು, ಹುಡುಗಿಯೇ ಆಗಿರಬಹುದು. ನನ್ನ ತಂದೆಯಿಂದ ನಾನು ಸಾಕಷ್ಟು ಕಿರುಕುಳ ಅನುಭವಿಸಿದ್ದೇನೆ. ಆತ ನನ್ನ ತಾಯಿಗೆ ಸಾಕಷ್ಟು ಹೊಡೆಯುತ್ತಿದ್ದ. ಹೆಂಡತಿಗೆ ಹಾಗೂ ಮಕ್ಕಳಿಗೆ ಹೊಡೆಯೋದು, ಮಗಳಿಗೆ ಲೈಂಗಿಕ ಕಿರುಕುಳ ನೀಡೋದು ಆತನ ಕೆಲಸ ಆಗಿತ್ತು. ಅದನ್ನು ಅವನು ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದ’ ಎಂದು ಖುಷ್ಬೂ ಸುಂದರ್ ಹೇಳಿಕೊಂಡಿದ್ದರು. ಖುಷ್ಬೂ ಸುಂದರ್ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಆಗಿತ್ತು. ಆಗ ಅವರಿಗೆ 8 ವರ್ಷ ವಯಸ್ಸು. ವರ್ಷಗಳು…
ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ರಾಜ್ಯದಲ್ಲಿ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫೈಯಿಂಗ್ ಸ್ಕ್ಯಾಡ್, ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ಉಚಿತ 8.63 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. 27 ಕೋಟಿಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರಗಳು ಸೇರಿದಂತೆ ಇತರವುಗಳು. ಇಲ್ಲಿಯವರೆಗೆ…