Author: admin

ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದ್ದು, ಇದಕ್ಕೆ ಜಲಕ್ಷಾಮ ಕಾರಣ ಎನ್ನಲಾಗಿದೆ. ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ ಟಿಪಿಎಸ್‌ ನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ ಟಿಪಿಎಸ್‌ ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ. ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ…

Read More

ಹಾಸನ: ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಗೋವುಗಳನ್ನು ಹತ್ಯೆ ಮಾಡಿದ ನಂತರ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಮುದ್ರದಲ್ಲಿ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದ್ದು, ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ಹೆದರಿದ್ದಾರೆ ಎನ್ನಲಾಗಿದೆ, ಈ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್​ ರಾವ್​ ಮಾಹಿತಿ ನೀಡಿದ್ದು, ಇದು ಪಫ್ಫರ್​ ಫಿಶ್​ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್​ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ಮುಖವನ್ನು ಹೋಲುತ್ತದೆ ಎನ್ನಲಾಗಿದೆ. ಈ ಪಫ್ಪರ್ ಫಿಶ್​ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್‌ ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್​ ನಲ್ಲಿ…

Read More

ಮುಟ್ಟಿನ ಹೊಟ್ಟೆನೋವು ಸಾಮಾನ್ಯವಾಗಿ ಎಲ್ಲಾ ಮಹಿಳೆಯರಲ್ಲೂ ಇರುತ್ತೆ. ಕೆಲವೊಬ್ಬರಿಗೆ ಆ ನೋವು ವಿಪರೀತವಾಗಿರಲೂ ಬಹುದು. ಹೀಗೆ 14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಮುಟ್ಟಿನ ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಮುಂಬೈನ ಮಲಾಡ್‌ ನಲ್ಲಿ ನಡೆದಿದೆ. ಈ ಬಾಲಕಿಗೆ ಮುಟ್ಟಿನ ಬಗ್ಗೆ ಮಾಹಿತಿ ತಿಳಿಯದೇ ಇರುವುದೇ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 26 ರಂದು ತಡರಾತ್ರಿ ಈ ಘಟನೆ ನಡೆದಿದ್ದು, ಮೊದಲ ಬಾರಿಗೆ ಋತುಸ್ರಾವವಾದಾಗ ನೋವಿನ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ನೋವಿನ ಜೊತೆಗೆ ಮಾನಸಿಕ ಒತ್ತಡವನ್ನು ಅನುಭವಿಸಿದ್ದಳು. ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಏನೂ ಪ್ರಯೋಜನವಾಗಲಿಲ್ಲ. ಪೊಲೀಸರು ಇದೀಗ ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ, ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಸಲುವಾಗಿ ಆಕೆಯ ಖಿನ್ನತೆಯ ಬಗ್ಗೆಇನ್ನಷ್ಟು ತಿಳಿದುಕೊಳ್ಳಲು ಸ್ನೇಹಿತರ…

Read More

ಶೋಕಿಗಾಗಿ ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುವ ಮೂಲಕ, ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ಸೃಷ್ಠಿಸಿದ ಇಬ್ಬರ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದಿದ್ದ ಇಬ್ಬರು ಯುವಕರ ಮೇಲೆ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿಯ ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬುವ ಯುವಕರೇ ನಕಲಿ ಲೈಟರ್ ಮಾದರಿ ಪಿಸ್ತೂಲ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಟ್ಟ ಯುವಕರು ಎಂದು ಗುರುತಿಸಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಯುವಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಅವರಿಂದ ನಕಲಿ‌ ಲೈಟರ್ ಮಾದರಿ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದ್ದು‌, ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳನ್ನು ಹರಿಬಿಡುವ ಮೂಲಕ ಅಶಾಂತಿ ಸೃಷ್ಠಿಸದಂತೆ ಎಚ್ಚರಿಸಿದ್ದಾರೆ. ಪೊಲೀಸರು ಬಿಸಿ ಮುಟ್ಟಿಸಿದ ನಂತರ ಯುವಕರು, ಇನ್ನು ಈ ರೀತಿಯಲ್ಲಿ ನಕಲಿ ಪಿಸ್ತೂಲ್ ಮಾರಕಾಸ್ತ್ರಗಳನ್ನು ಹಿಡಿದ ಭಾವಚಿತ್ರಗಳನ್ನು ಸಾಮಾಜಿಕ…

Read More

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ನಿನ್ನೆ  ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಂದಿನ ತಿಂಗಳು ಏಪ್ರಿಲ್ ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ. ಈ ಪಟ್ಟಿಯ ಪ್ರಕಾರ ಮುಂಬರುವ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳಿಗೆ ರಜೆಯಿದೆ. ಇತ್ತೀಚೆಗೆ ಆರ್‌ಬಿಐ ಮಾರ್ಚ್ 31 ರ ಭಾನುವಾರ ಕೂಡ ಬ್ಯಾಂಕ್‌ ಗಳಿಗೆ ರಜೆಯಿಲ್ಲ. ಕೆಲಸ ಮಾಡಬೇಕು ಎಂದು ಘೋಷಿಸಿದೆ. ಹಣಕಾಸು ವರ್ಷದ ಮುಕ್ತಾಯವಾಗಿರುವುದಿಂದ ವಾರ್ಷಿಕ ಲೆಕ್ಕಪತ್ರಗಳ ಕೆಲಸ ಹೆಚ್ಚಾಗಿದೆ. ಇದೆ ಕಾರಣಕ್ಕೆ ಮಾರ್ಚ್ 30 ರ ಶನಿವಾರ ಮತ್ತು ಮಾರ್ಚ್ 31ರ ಭಾನುವಾರ ಆರ್‌ ಬಿಐ ಕಚೇರಿಗಳು ಓಪನ್ ಇರಲಿವೆ. ಏಪ್ರಿಲ್ 1, 2024: ಏಪ್ರಿಲ್ 1 ರಂದು ಬ್ಯಾಂಕುಗಳು ಮುಚ್ಚಿರಲಿದೆ. ಆದರೆ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಮತ್ತು ಮೇಘಾಲಯದಂತಹ ಕೆಲವು ರಾಜ್ಯಗಳಲ್ಲಿ ಬ್ಯಾಂಕ್‌ ಗಳು ಕಾರ್ಯನಿರ್ವಹಿಸಲಿವೆ. ಏಪ್ರಿಲ್ 5, 2024: ಬಾಬು ಜಗಜೀವನ್ ಮತ್ತು ಜುಮಾ-ಉಲ್-ವಿದಾ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು, ತೆಲಂಗಾಣ…

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮರೆಯಾಗದ ಜಾತಿಪದ್ದತಿ ಇದ್ದು, ದಲಿತರು ಎಂಬ ಒಂದು ಕ್ಷುಲ್ಲಕ ಕಾರಣಕ್ಕೆ ಮಲ್ಲಿಗೆರೆ ದಲಿತ ಕಾಲೋನಿ ಜನತೆಗೆ ಅಧಿಕಾರಿಗಳು ನೀರು ಬಿಟ್ಟುಕೊಡುತ್ತಿಲ್ಲ. ದಲಿತರಾಗಿ ಹುಟ್ಟಿದ್ದೇ ತಪ್ಪಾ..? ಎಂದು ಕಾಲೋನಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಿಗೆರೆ ದಲಿತ ಕಾಲೋನಿ ಜನತೆ ನೀರಿಲ್ಲದೇ ಪರದಾಡ್ತಿದ್ದಾರೆ. ಇದು ಚಿಕ್ಕನಾಯಕನಹಳ್ಳಿ ಮಲ್ಲಿಗೆರೆ ಗ್ರಾಮ ಪಂಚಾಯತಿಯ ಕರ್ಮಕಾಂಡವಾಗಿದ್ದು, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮಲ್ಲಿಗೆರೆಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳು ದಲಿತ ಕಾಲೋನಿಗೆ ತಿಂಗಳಿಂದ ನೀರು ಬಿಡದೇ ತಾರತಮ್ಯ ಮಾಡುತ್ತಿದ್ದಾರೆ. ಮೇಲ್ವರ್ಗದ ಜನರ ರಸ್ತೆಗೆ ನೀರು ಬಿಡುವಾತ ಕಾಲೋನಿಗೆ ನೀರು ಬಿಡದೆ ತಾರತಮ್ಯ ಮಾಡುತ್ತಿದ್ದಾರೆ. ದಲಿತ ಕಾಲೋನಿ ಎಂಬ ಕಾರಣಕ್ಕೆ ನೀರು ಬಿಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಮೇಲ್ವರ್ಗದವರ ಮನೆಯ ಮುಂದೆ ನೀರು ಹಿಡಿಯಲು ಹೋದಾಗ ಗಲಾಟೆ ಮಾಡಿದ್ದಾರೆ. ಇದರಿಂದಾಗಿ, ಸದ್ಯ ಖಾಲಿ ಕೊಡ ಹಿಡಿದು ದಲಿತ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಜಾತಿ ತಾರತಮ್ಯ ಮಾಡುವ ಅಧಿಕಾರಿಗಳನ್ನ ಅಮಾನತು ಮಾಡುವಂತೆ ಒತ್ತಾಯ ಮಾಡಿದ್ದಾರೆ. ಶೀಘ್ರವೇ…

Read More

ತುಮಕೂರು: ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಕುಣಿಗಲ್ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ. ಟ್ರೈನ್ ಸ್ವಲ್ಪ ಮುಂದೆ ಸಾಗಿದ್ರು ಶಾಕ್ ನಿಂದ ಹೊತ್ತಿ ಉರಿಯೋ ಸಾಧ್ಯತೆಯಿತ್ತು, ಸಾವಿರಾರು ಜನ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ತರುತ್ತಿತ್ತು. ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಸಾವಿರಾರು ಜನ ಪ್ರಯಾಣಿಸುತ್ತಿದ್ದರು. ಕುಣಿಗಲ್ ಬಳಿ ರೈಲ್ವೆ ಟ್ರಾಕ್ ನಲ್ಲಿ ಹೈವೊಲ್ಟೇಜ್ ಎಲೆಕ್ಟ್ರಿಕ್ ವೈರ್ ಬಿದ್ದಿತ್ತು. ವಿದ್ಯುತ್ ಲೈನ್ ಕಟ್ ಆಗಿರೋದು ನೋಡಿದ ಚಾಲಕ ತಕ್ಷಣ ಟ್ರೈನ್ ನಿಲ್ಲಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ. ಚಾಲಕನ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುರುವೇಕೆರೆ: ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಾರಂಭವಾಗಲಿದೆ. ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ಮಾನ ದಂಡಗಳನ್ನು ಅನುಸರಿಸಿ ಖರೀದಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ ತಿಳಿಸಿದ್ದಾರೆ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಬ್ಬೇಘಟ್ಟ(ಗಾಂಧಿಗ್ರಾಮ) -1 ದಂಡಿನಶಿವರ(ಮುನಿಯೂರು) -1 ಟಿ.ಬಿ. ಕ್ರಾಸ್ (ಮಾಯಸಂದ್ರ)-2 ಕಸಬಾ ಹೋಬಳಿಗೆ ಪಟ್ಟಣದ ಎ.ಪಿ.ಎಂ.ಸಿ. ಆವರಣದಲ್ಲಿ -3 ಕೌಂಟರ್ ಗಳನ್ನೂ ತೆರೆಯಲಾಗಿದ್ದು, ಆಯಾ ಭಾಗದ ಹೋಬಳಿಯ ರೈತರು ನಿಗದಿ ಪಡಿಸಿದ ಕೌಂಟರ್ ನಲ್ಲಿ ಕೊಬ್ಬರಿಯನ್ನು ಮಾರಾಟ ಮಾಡಬೇಕು. ದಿನಕ್ಕೆ10ರೈತರಿಂದ ಮಾತ್ರ ಖರೀದಿಸಲಾಗುವುದು. ನಿಗದಿಯಾದ ದಿನ ಬಾರದ ರೈತರ ಕೊಬ್ಬರಿಯನ್ನು ಮಾರನೇ ದಿನ ಖರೀದಿಸುವುದಿಲ್ಲ. ಅದಕ್ಕೆ ಬೇರೆ ದಿನ ನಿಗದಿಪಡಿಸಲಾಗುತ್ತದೆ. ಕೌಂಟರ್ ಹತ್ತಿರ ರೈತರ ಹೆಸರುಗಳನ್ನು ಹಾಕಲಾಗುವುದು. ಅವರುಗಳು ಮಾತ್ರ ಕೊಬ್ಬರಿಯನ್ನು ತರುವುದು. ಉಂಡೆ ಕೊಬ್ಬರಿಯನ್ನು ಪರೀಕ್ಷಿಸುವ ನೆಪದಲ್ಲಿ ಅದನ್ನು ಚೂರು ಮಾಡಬೇಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು. ಪ್ರತಿ ರೈತರಿಂದ ನೋಂದಣಿಯಾದ ಕೊಬ್ಬರಿಯನ್ನು…

Read More