Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ತುರುವೇಕೆರೆ: “ಮತದಾನ ಬಹಿಷ್ಕರಿಸಿ ಲೋಕಸಭಾ ಚುನಾವಣೆ ಸಂಬಂಧ ಮತದಾನದ ಹಕ್ಕನ್ನು ಚಲಾಯಿಸದೆ ಇರಬೇಡಿ. ನಿಮ್ಮ ಹಕ್ಕನ್ನು ನೀವು ಚಲಾಯಿಸದಿದ್ದರೆ ಒಂದು ಅಧ್ಬುತವಾದ ಶಕ್ತಿಯನ್ನುಕಳೆದುಕೊಳ್ಳುತ್ತೀರಿ. ನಿಮ್ಮ ಹೋರಾಟ ಏನೇ ಇದ್ದರೂ ನಾವು ಅದಕ್ಕೆ ಸ್ಫಂದಿಸುತ್ತೇವೆ” ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ ಮಾಡಿದರು. ಕೋಬಾಲ್ಡ್ ಹಾಗೂ ನಿಕ್ಕಲ್ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಸ್ಥಳೀಯ ರೈತರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿದ್ದ ಹಿನ್ನಲೆಯಲ್ಲಿ, ತಿಪಟೂರು ಉಪವಿಭಾಗಾಧಿಕಾರಿಗಳು ಕೋಡಿಹಳ್ಳಿ ಕುಣಿಕೇನಹಳ್ಳಿ ಗ್ರಾಮಗಳಲ್ಲಿ ಮತದಾನ ಜಾಗೃತಿ ಸಭೆ ನಡೆಸಿದರು. ಚುನಾವಣಾಧಿಕಾರಿ ಜಿ.ಎನ್. ಮಂಜುನಾಥ್, ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ಕುಣಿಗಲ್ ಡಿ.ವೈ.ಎಸ್ ಪಿ ಓಂ ಪ್ರಕಾಶ್ ಸರ್ಕಲ್ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ರೆವಿನ್ಯೂ ಇಲಾಖಾಧಿಕಾರಿಗಳು ಮಂಗಳವಾರ ದುಂಡ ಗ್ರಾಮಕ್ಕೆ ಆಗಮಿಸಿದ ಸಂಧರ್ಭದಲ್ಲಿ, ಗ್ರಾಮಸ್ಥರು ಒಕ್ಕೊರಲಿನಿಂದ “ಗಣಿಗಾರಿಕೆ ಬಗ್ಗೆ ನಿಖರ ಮಾಹಿತಿ ನೀಡುವವರೆಗೂ ನಾವ್ಯಾರೂ ಮತ ಹಾಕುವುದಿಲ್ಲ” ಎಂಬ ವಿಚಾರವಾಗಿ ಇಂದು, ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಕೋಡಿಹಳ್ಳಿ ಹಾಗೂ ಕುಣಿಕೇನ ಹಳ್ಳಿಯಲ್ಲಿ ಸುತ್ತಮುತ್ತಲ ಗ್ರಾಮಸ್ಥರನ್ನು ಸೇರಿಸಿ…
ಹಲಸಿನ ಹಣ್ಣಿನಲ್ಲಿದೆ ಇಷ್ಟೆಲ್ಲ ಆರೋಗ್ಯ ಲಾಭ!: ಹಲಸಿನ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಇದೆ. ಇದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ರೋಗಗಳು, ಸೋಂಕುಗಳು ಮತ್ತು ವೈರಸ್ ಗಳ ವಿರುದ್ಧ ಹೋರಾಡಲು ದೇಹವನ್ನು ಅನುಮತಿಸುತ್ತದೆ. ವೈರಲ್ ಸೋಂಕಿನ ಅಪಾಯವನ್ನು ಕಡಿಮೆ ಮಾಡಲು ಹಲಸು ಉಪಯುಕ್ತವಾಗಿದೆ. ಇದು ದೃಷ್ಟಿ ಸುಧಾರಿಸುವ, ಕಣ್ಣಿನ ಸಮಸ್ಯೆಗಳನ್ನು ತಡೆಗಟ್ಟುತ್ತದೆ. ಹಲಸು ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ, ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ. ಪಾರಿಜಾತ ಹೂವು ಅನೇಕ ಪ್ರಯೋಜನಗಳನ್ನು ಹೊಂದಿದೆ: ಪಾರಿಜಾತ ಗಿಡವನ್ನು ಕೆಮ್ಮಿಗೆ ಔಷಧಿಯಾಗಿ ಬಳಸುತ್ತಾರೆ. ಮರದ ತೊಗಟೆಯನ್ನು ಆಯುರ್ವೇದ ಔಷಧಿಯಾಗಿ ಬಳಸಲಾಗುತ್ತದೆ. ಇದರ ಎಲೆ, ತೊಗಟೆ, ಹೂವುಗಳನ್ನು ತೆಗೆದುಕೊಂಡು ನೀರಿನಲ್ಲಿ ಕುದಿಸಿ ಕಷಾಯವನ್ನು ಕುಡಿಯುತ್ತಾರೆ. ಇದನ್ನು ಹೆಚ್ಚಾಗಿ ಆಯುರ್ವೇದ ಚಿಕಿತ್ಸೆಯಾಗಿ ಬಳಸಲಾಗುತ್ತದೆ. ಶೀತ ಮತ್ತು ಕೆಮ್ಮಿಗೆ ಪಾರಿಜಾತ ಹೂವಿನ ಚಹಾ ಅಥವಾ ಕಷಾಯವು ತುಂಬಾ ಉಪಯುಕ್ತವಾಗಿದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.…
ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆಗಳು, ಪ್ರತಿಪಕ್ಷಗಳನ್ನು ಶಕ್ತಿ ಪ್ರದರ್ಶನವಾಗಿ ಪರಿವರ್ತಿಸಲು, ನಾಳೆ ದೆಹಲಿಯಲ್ಲಿ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರತಿಭಟನಾ ಸಭೆ ನಡೆಯಲಿದೆ. ಪಕ್ಷದ ಎಲ್ಲ ಹಿರಿಯ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಮಮತಾ ಬ್ಯಾನರ್ಜಿ ಬದಲಿಗೆ ಪಕ್ಷದ ಹಿರಿಯ ನಾಯಕರೊಬ್ಬರು ಟಿಎಂಸಿಯನ್ನು ಪ್ರತಿನಿಧಿಸಲಿದ್ದಾರೆ. ನಾಳೆಯ ರ್ಯಾಲಿಯ ಸಂಘಟನೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ಣಯಿಸಲು ಇಂಡಿಯಾ ಫ್ರಂಟ್ ನ ನಾಯಕರು ಇಂದು ಸಂವಹನ ನಡೆಸಲಿದ್ದಾರೆ. ಇಡಿ ಕಸ್ಟಡಿಯಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಗೋವಾದ ಮುಖಂಡರನ್ನು ಕೂರಿಸಿ ವಿಚಾರಣೆ ನಡೆಸಲಾಗುವುದು ಎಂದು ಇಡಿ ಮಾಹಿತಿ ನೀಡಿದೆ. ಇದೇ ವೇಳೆ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರತಿಕ್ರಿಯಿಸಿದ್ದು, ಮದ್ಯ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದಲ್ಲಿ ವಿದೇಶಗಳು ಹಸ್ತಕ್ಷೇಪ ಮಾಡಬಾರದು. ಬೇರೆ ದೇಶಗಳು ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಬೆಂಗಳೂರಿನಲ್ಲಿ ಕಳೆದ 5 ವರ್ಷಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ದಾಖಲಾದ ತಾಪಮಾನ ಹೋಲಿಸಿದರೆ ಇದು 3 ನೇ ಅತಿ ಹೆಚ್ಚು ಉಷ್ಣಾಂಶ. ಇನ್ನು ಕಳೆದ 15 ವರ್ಷಗಳಲ್ಲಿ ದಾಖಲಾದ ತಾಪಮಾನಕ್ಕೆ ಹೋಲಿಸಿದರೆ ಇದು 4 ನೇ ಅತಿ ಹೆಚ್ಚು. HAL ವಿಮಾನ ನಿಲ್ದಾಣದ ಇತಿಹಾಸದಲ್ಲಿ 6 ನೇ ಅತಿ ಹೆಚ್ಚು: 35.5 ° C (+1.7 ° C) ದಾಖಲಾಗಿದೆ. ಅದೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 36.4°C (+2°C) ದಾಖಲಾಗಿತ್ತು. 2017 ಮತ್ತು 2019 ರಲ್ಲಿ 37°C+ ಉಷ್ಣಾಂಶ ದಾಖಲಾಗಿತ್ತು. 29 ನೇ ಮಾರ್ಚ್ 1996 ರಂದು ಇಲ್ಲಿಯತನಕ ದಾಖಲಾದ ಅತ್ಯಂತ ಉಷ್ಣಾಂಶವಾಗಿದ್ದು,ಅಂದು 37.3°C ದಾಖಲಾಗಿತ್ತು. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮೇಲೆಯೇ ಇಂದೂ ಇರಲಿದ್ದು, ದಾಖಲಾಗಿ ವಾತಾವರಣದ ಉಷ್ಣಾಂಶ ದಾಖಲೆ ಸ್ಥಾಪಿಸುತ್ತಿದೆ. ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ…
ಆತ ಶತ್ರುವೇ ಆಗಿರಲಿ ರಕ್ಷಣೆ ಕೋರಿ ಬಂದವರನ್ನು ರಕ್ಷಿಸುವುದು ನಮ್ಮ ಭಾರತೀಯರ ಗುಣ. ಅದೇ ರೀತಿಯಲ್ಲಿ ಭಾರತೀಯ ನೌಕಾಪಡೆ ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯಿಂದ 23 ಜನ ಪಾಕಿಸ್ತಾನ ಸಿಬ್ಬಂದಿಯನ್ನು ರಕ್ಷಣೆ ಮಾಡಿದೆ. ಅರಬ್ಬೀ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯನ್ನು ಹಿಮ್ಮೆಟ್ಟಿಸಿರುವ ಭಾರತೀಯ ನೌಕಾಪಡೆಯು, 12 ಗಂಟೆಗಳ ಕಾಲ ನಡೆದ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯಲ್ಲಿ, ಇರಾನಿನ ಮೀನುಗಾರಿಕಾ ಹಡಗನ್ನು ವಶಕ್ಕೆ ಪಡೆದು ಅದರಲ್ಲಿದ್ದ 23 ಪಾಕಿಸ್ತಾನಿ ಸಿಬ್ಬಂದಿಯನ್ನು ರಕ್ಷಿಸಿದೆ. “ಮಾರ್ಚ್ 28ರ ತಡರಾತ್ರಿ ಇರಾನಿನ ಮೀನುಗಾರಿಕಾ ಹಡಗು ‘ಅಲ್-ಕಂಬರ್ 786’ ನಲ್ಲಿ ಸಂಭವಿಸಬಹುದಾದ ಕಡಲ್ಗಳ್ಳತನದ ಘಟನೆಯ ಮಾಹಿತಿಯ ಆಧಾರದ ಮೇಲೆ, ಅರೇಬಿಯನ್ ಸಮುದ್ರದಲ್ಲಿ ಕಡಲ ಭದ್ರತಾ ಕಾರ್ಯಾಚರಣೆಗಾಗಿ ನಿಯೋಜಿಸಲಾದ ಎರಡು ಭಾರತೀಯ ನೌಕಾಪಡೆಯ ಹಡಗುಗಳು, ಅಪಹರಣಕ್ಕೊಳಗಾದ ಮೀನುಗಾರಿಕಾ ಹಡಗುಗಳನ್ನು ತಡೆಯಲು ಕಳುಹಿಸಲಾಯಿತು” ಎಂದು ನೌಕಾಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾ ತಂಡಗಳು ನಂತರ ಹಡಗನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಪುನರಾರಂಭಿಸಲು, ಸುರಕ್ಷತೆಯ ದೃಷ್ಟಿಯಿಂದ ಅದು ಸಮುದ್ರದಲ್ಲಿ ಸಾಗುವ ಸಾಮರ್ಥ್ಯ ಪರಿಶೀಲಿಸಿತು…
ಖ್ಯಾತ ನಟ ಡೇನಿಯಲ್ ಬಾಲಾಜಿ ಅವರು ತಮ್ಮ 48 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮ್ಮ ಅದ್ಬುತ ನಟನೆಗೆ ಹೆಸರಾದ ತಮಿಳು ನಟನ ಹಠಾತ್ ನಿಧನದಿಂದಾಗಿ ಚಿತ್ರರಂಗಕ್ಕೆ ದೊಡ್ಡ ಆಘಾತವಾಗಿದೆ. ಅನೇಕ ನಾಟಕಗಳು ಮತ್ತು ಚಲನಚಿತ್ರಗಳಲ್ಲಿ ಇವರು ಕೆಲಸ ಮಾಡಿದ್ದಾರೆ. ನಟನ ಮೃತ ದೇಹವನ್ನು ಇಂದು ಅಂದರೆ ಶನಿವಾರದಂದು ಪುರಸೈವಲಕಂನಲ್ಲಿರುವ ಅವರ ನಿವಾಸದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ವರದಿಯಾಗಿದೆ. ವಡಾ ಚೆನ್ನೈನ ವೆಟ್ಟೈಯಾಡು ವಿಲಾಯಡು, ತಂಬಿ ಚಿತ್ರಗಳಲ್ಲಿ ಅದ್ಭುತ ನಟನೆಗೆ ಹೆಸರುವಾಸಿಯಾಗಿರುವ ಡೇನಿಯಲ್ ಬಾಲಾಜಿ ತಮ್ಮ ಉತ್ತಮ ನಟನೆಗೆ ಹೆಸರು ವಾಸಿಯಾಗಿದ್ದು. ಶುಕ್ರವಾರ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಡೇನಿಯಲ್ ತನ್ನ ನಟನಾ ವೃತ್ತಿಜೀವನವನ್ನು ಪ್ರಸಿದ್ಧ ಧಾರಾವಾಹಿ ಚಿಥಿಯೊಂದಿಗೆ ಪ್ರಾರಂಭಿಸಿದ್ದು, ಇದಾದ ನಂತರ ಹಿಂತಿರುಗಿ ನೋಡದೆ ಕಾಕ ಕಾಖ, ಪೊಲ್ಲಾಧವನ್, ವೆಟ್ಟೈಯಾಡು ವಿಲಾಯಡು, ವಡ ಚೆನ್ನೈ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ ತಮ್ಮದೇ ಛಾಪು ಮೂಡಿಸಿದರು. ನಟ ತನ್ನ ಜೀವನದಲ್ಲಿ…
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 28 ಕ್ಷೇತ್ರಗಳಲ್ಲೂ ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಷ್ಠೆ ಬದಿಗಿಟ್ಟು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಈ ಹಿಂದೆ ಬಿಎಸ್ವೈ ಜೊತೆ ಸರ್ಕಾರ ಮಾಡಿದ್ದಾಗ ಒಳ್ಳೆಯ ಆಡಳಿತ ಕೊಟ್ಟಿದ್ದೆವು. ಕೆಲವು ಪರಿಸ್ಥಿತಿಗಳಲ್ಲಿ ಮೈತ್ರಿ ಮುಂದುವರೆಯಲು ಸಾಧ್ಯವಾಗಲಿಲ್ಲ. ಆಗ ನಮ್ಮ ತಂದೆಯವರಿಗೆ ಕೆಲವರು ತಪ್ಪು ಮಾಹಿತಿ ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರೀ ನಾವು ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಬರಲು ಸಾಧ್ಯವಾಗುತ್ತಿರಲಿಲ್ಲ. ನಮ್ಮಲ್ಲಿದ್ದ ಒಡಕುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಪ್ರತಿದಿನ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಮಾತನಾಡುತ್ತಿದ್ದಾರೆ. ದೇಶದ ಭದ್ರತೆಗೆ ಮೋದಿಯವರ ದುಡಿಮೆ ನೋಡಿದ್ದೇವೆ. ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದ ಈ ಮೈತ್ರಿಯಾಗಿದೆ. ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಬಂದಿರಬಹುದು, ಅದರಿಂದಾಗಿ ತಾವು ನಿರಾಸೆ ಒಳಗಾದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಕೆಲವೊಂದು ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯ ಇದ್ದಾವೆ. ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು. ನಮ್ಮತುಮಕೂರಿನ…
ರಾಮನಗರ: ಸುಳ್ಳು ಹೇಳುವುದು ಬಿಜೆಪಿಯವರ ಚಾಳಿ, ಹೇಗೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳೂ ಹೌದು ಬೆಳ್ಳಗಿದೆ ಅಂತಾರೆ ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತ ವಾದ ಮಾಡ್ತಾರೆ, ಬಿಜೆಪಿಯವರು ನರೇಂದ್ರ ಮೋದಿಯವರು ಏನು ಹೇಳುತ್ತಾರೋ ಅದಕ್ಕೆ ತಮಟೆ ಹೊಡೆಯುವುದು ಅವರ ಅಭ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ನಾನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಒಂದು ಪ್ರಶ್ನೆ ಕೇಳುತ್ತೇನೆ, 2023-24ನೇ ಸಾಲಿನ ಬಜೆಟ್ ನಲ್ಲಿ ಏನು ಹೇಳಿದ್ದೀರಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೇಂದ್ರದಿಂದ ನೀಡುತ್ತೇವೆ ಎಂದು ಹೇಳಿದರು. ಅವರು ಕೇಂದ್ರದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನು ಈ ಹಣಕಾಸು ವರ್ಷ ಮುಗಿಯುತ್ತಾ ಬಂದರೂ ಇದುವರೆಗೆ ಒಂದು ರೂಪಾಯಿಯೂ ಬಂದಿಲ್ಲ ಇದು ಸುಳ್ಳಾ, ನಿಜವೇ ನೀವೇ ಹೇಳಿ ನಿರ್ಮಲಾ ಸೀತಾರಾಮನ್ ಅವರೇ ಎಂದು ಕೇಳಿದರು. ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ…
ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ನಾಯಕ ಮತ್ತೊಬ್ಬರಿಲ್ಲ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, “ಸಹಕಾರ, ಒಗ್ಗಟ್ಟಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ. ಮೋದಿ ಹೆಸರು ಮಾತ್ರವೇ ಟ್ರಂಪ್ ಕಾರ್ಡ್ ಆಗಿದೆ” ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿಡಿ, ಕಾಂಗ್ರೆಸ್ ನವರಿಂದ ಹೊರ ರಾಜ್ಯಕ್ಕೂ ಹಣ ಸರಬರಾಜು ಆಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ನಿವಾಸದಲ್ಲಿ ಬಿ-ಫಾರಂ ವಿತರಿಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸೇರಿದಂತೆ ಹಲವು ಬಿ-ಫಾರಂ ಪಡೆದರು. ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ ಅವರಿಗೆ ಡಿ.ಕೆ. ಶಿವಕುಮಾರ್ ಬಿ-ಫಾರಂ ವಿತರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296