Subscribe to Updates
Get the latest creative news from FooBar about art, design and business.
- ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
- ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
- ತುಮಕೂರು | ಅದ್ದೂರಿ ಕನ್ನಡ ರಾಜ್ಯೋತ್ಸವ, ಉಚಿತ ಆರೋಗ್ಯ ತಪಾಸಣಾ ಶಿಬಿರ
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
Author: admin
ಸರಗೂರು: ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದವತಿಯಿಂದ ಆ.29ರಂದು ಪ್ರತಿಭಟನೆ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಅವರ ನೇತೃತ್ವದಲ್ಲಿ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಪಟ್ಟಣದ 9 ವಾರ್ಡ್ ನ ಚಿಕ್ಕ ದೇವಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ನಾಯಕ ಸಮಾಜದ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಶಾಸಕ ಎನ್.ಕೆ.ರಾಜಣ್ಣರವರ ಸಚಿವ ಸ್ಥಾನ ನೇಮಕ ಮಾಡಿಕೊಡಕೊಳ್ಳಬೇಕು, ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಜಯಪ್ರಕಾಶ್ ಮಾತನಾಡಿ, ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದರು. ‘ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ ನೋಟೀಸ್ ನೀಡದೆ ಕಾಂಗ್ರೆಸ್ ಹೈಕಮಾಂಡ್ ವಜಾ ಮಾಡಿರುವುದನ್ನು ಸಮಾಜ ಖಂಡಿಸುತ್ತದೆ’ ಎಂದರು. ‘ಮುಖ್ಯಮಂತ್ರಿಗಳ ಬೆನ್ನೆಲುಬಾಗಿದ್ದರು ಎಂಬ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ನಾಯಕ ಸಮಾಜದಿಂದ…
ಬೆಂಗಳೂರು: ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ. ತನ್ವಿ (10) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಮಿಲೆನಿಯಂ ಸ್ಕೂಲ್ ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ವಿ, ತನ್ನ ತಾಯಿ ಹರ್ಷಿತಾ ಜೊತೆಗೆ ಸ್ಕೂಟಿಯಲ್ಲಿ ಸ್ಕೂಲ್ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಯಲಹಂಕದ ಕೋಗಿಲು ಮುಖ್ಯ ರಸ್ತೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹರ್ಷಿತಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಸ್ಕಿಡ್ ಆಗಿದೆ. ಈ ವೇಳೆ ವಾಹನದಿಂದ ಕೆಳಗೆ ಬಿದ್ದ ಬಾಲಕಿಯ ತಲೆ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದಿದ್ದು, ಬಾಲಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಸರಗೂರು: ಪಟ್ಟಣದ ನಾಲ್ಕನೇ ವಾರ್ಡಿನಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮುದಾಯದ ಭವನದಲ್ಲಿ ಬುಧವಾರ ಲೋಕಾಯುಕ್ತ ಪೊಲೀಸರಿಂದ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆಗಳ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಳೆದ ಸಭೆಯಲ್ಲಿ ಪಡೆದ ಅರ್ಜಿಗಳಿಗೆ ಕೈಗೊಂಡ ಕ್ರಮದ ಬಗ್ಗೆ ತಿಳಿಸುವಂತೆ ಒತ್ತಾಯಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕಂದಾಯ ಇಲಾಖೆ, ಗ್ರಾಪಂಗಳ ವಿರುದ್ಧ ಸಾರ್ವಜನಿಕರು ಹಾಗೂ ರೈತರಿಂದ ಸಾಲು ಸಾಲು ದೂರುಗಳ ಸುರಿಮಳೆಯಾಗಿದೆ. ನಂತರ ಸಭೆ ಪ್ರಾರಂಭವಾಗಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಸ್ವೀಕಾರ ಮಾಡಲಾಯಿತು. ಮನುಗನಹಳ್ಳಿ ಗ್ರಾ.ಪಂ. ಲಂಕೆ ರಮೇಶ್ ಮಾತನಾಡಿ ನಮ್ಮ ದೊಡ್ಡಪ್ಪನ ಹೆಸರಿನಲ್ಲಿ ಜಮೀನು ಇದೆ. ಅದರೆ ಅದನ್ನು ಬೇರೆಯವರಿಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಕಳೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರೂ ಯಾವುದೇ ಕಂದಾಯ ಇಲಾಖೆ ಬಂದಿಲ್ಲ ಎಂದರು. ಪೌತಿಖಾತೆ ಮಾಡಲು ಹಾಗೂ ನೆಮ್ಮದಿ ಕೇಂದ್ರದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಸ್ವಾಧೀನದಲ್ಲಿದ್ದು 53 ಮತ್ತು 57…
ಸರಗೂರು: ಎನ್ ಎಂ ಎಂ ಎಸ್ ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅದರಲ್ಲಿ ರಿನಿವಲ್ ಅರ್ಜಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನೊಂದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅನುದಾನಿತ ಶಾಲೆಗಳ ಎಂಟನೇ ತರಗತಿಯಲ್ಲಿ ಎನ್ ಎಂ ಎಂ ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಾಗುತ್ತಿದ್ದು.ಇದರಲ್ಲಿ ಉತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವರೆಗೆ ಪ್ರತಿ ವರ್ಷ 12,000 ರೂಗಳಂತೆ ನೀಡಲಾಗುತ್ತದೆ. ಇದರೆ ಎರಡು ವರ್ಷಗಳಿಂದ ಎಸ್ಸಿ ಎಸ್ಟಿ ಮಕ್ಕಳಿಗೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಎಸ್ಸಿ ಎಸ್ಟಿ ಮಕ್ಕಳ ರೀನಿವಲ್ ಅರ್ಜಿಗಳನ್ನು ಸಲ್ಲಿಸಿದ್ದರೂ ಅದನ್ನು ತಿರಸ್ಕರಿಸಿದ್ದಾರೆ. ಆ ವಿದ್ಯಾರ್ಥಿವೇತನದಿಂದ ವಿದ್ಯಾಬ್ಯಾಸ ಮಾಡಲು ಅನುಕೂಲವಾಗುವಂತೆ ವಿದ್ಯಾರ್ಥಿಗಳು ವ್ಯಾಸಂಗ ಮಾಡಿಕೊಂಡು ಬರುತ್ತಿದ್ದಾರೆ. ಇವಾಗ ಕೇಂದ್ರ ಸರ್ಕಾರ ಮಟ್ಟದಲ್ಲಿ ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ ನೊಂದ ವಿದ್ಯಾರ್ಥಿಗಳು ಆಗ್ರಹಿಸಿದರು. ಸಾಮಾನ್ಯ ವರ್ಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ.ಎಸ್ಸಿ ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ವೇತನವನ್ನು ಸರ್ಕಾರ ಅನ್ಯಾಯ…
ಸರಗೂರು: ಕಳೆದ 10 ವರ್ಷಗಳಿಂದ ತಾಲೂಕಿನಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿರುವ ಕಾರ್ಯಕರ್ತರ ಕನಸನ್ನು ನನಸು ಮಾಡಲು ಕ್ಷೇತ್ರದಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡುವುದಾಗಿ ಕೆ.ಎಂ.ಕೃಷ್ಣನಾಯಕ ತಿಳಿಸಿದರು. ಸೋಮವಾರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ. ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು ಅನುಭವಿಸುತ್ತಿರುವ ನೋವನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಲು ಶ್ರಮಿಸಬೇಕು ಎಂದರು. ಮುಂದಿನ ಎರಡೂರು ತಿಂಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆ ನಡೆಯಲಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲ್ಲಿರುವ ಅಸಮಾಧಾನ ಮರೆತು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದ ಅವರು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಕೂಚಿ ಎಂದರು. ತಾಲೂಕು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ದುರಾಡಳಿತ, ಹಗರಣಗಳಲ್ಲಿ ಸರ್ಕಾರ ನಿರತವಾಗಿದೆ. ರಾಜ್ಯದ ಅಭಿವೃದ್ಧಿಗೆ ಹಣಕಾ ಸಿನ ಕೊರತೆ ಎದುರಾಗಿದ್ದು, ಖಜಾನೆ…
ಸರಗೂರು: ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ಜೊರಹಳ್ಳ ಗ್ರಾಮಕ್ಕೆ ಬಸ್ ವ್ಯವಸ್ಥೆ ಇರಲಿಲ್ಲ. ಗ್ರಾಮಸ್ಥರು ಶಾಸಕರಿಗೆ ಹಾಗೂ ಕೆಎಸ್ಸಾರ್ಟಿಸಿ ಇಲಾಖೆ ಅಧಿಕಾರಿಗಳಿಗೆ ಮನವಿಕ್ಕೆ ಸ್ಪಂದಿಸಿ. ಮಂಗಳವಾರದಂದು ಬಸ್ ವ್ಯವಸ್ಥೆ ಪ್ರಾರಂಭಿಸಲಾಯಿತು. ಬಸ್ ಗೆ ಪೂಜೆ ಸಲ್ಲಿಸಿದ ನಂತರ ಚಾಲಕ ನಿರ್ವಾಹಕರಿಗೆ ಸನ್ಮಾನಿಸಿ ನಂತರ ಪ್ರಭಾವಿ ಮುಖಂಡ ದೇವಲಾಪುರ ನಾಗೇಂದ್ರ ಮಾತನಾಡಿ, ಸರಗೂರು ಪಟ್ಟಣದಿಂದ ಸಾಗರೆ ಚನ್ನೀಪುರ, ಹೆಗ್ಗನೂರು ಮಾರ್ಗವಾಗಿ ಜೊರಹಳ್ಳ ಗ್ರಾಮಕ್ಕೆ ನೇರವಾಗಿ ಬಸ್ ಸಂಪರ್ಕ ಕಲ್ಪಿಸುವ ಕುರಿತು ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ಸ್ಪಂದಿಸಿದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಈ ಗ್ರಾಮಕ್ಕೆ ಬಸ್ ಕಲ್ಪಿಸಿ ಮೂಲಕ ಕ್ರಮ ಕೈಗೊಂಡಿದ್ದಾರೆ ಎಂದರು. ನಾವು ಶಾಸಕ ಅನಿಲ್ ಚಿಕ್ಕಮಾದುರವರಿಗೆ ಬಸ್ ಸಮಸ್ಯೆ ಇರುವುದರಿಂದ ಅವರಿಗೆ ಮನವರಿಕೆ ಮಾಡಿಕೊಂಡು ನಂತರ ಸ್ಥಳದಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು. ಬಸ್…
ಔರಾದ: ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ.ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ತುಕಾರಾಮ ಹಸನ್ಮುಖಿ, ಆರೋಗ್ಯ ಸೇವೆ ಎಂದರೆ ಮಾನವೀಯತೆಗೂ, ಸಮಾಜ ಸೇವೆಗೂ ಸಮಾನ. ನಮ್ಮ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ನಿಮ್ಮಂತಹ ಜ್ಞಾನ, ಅನುಭವ ಹಾಗೂ ಸೇವಾ ಮನೋಭಾವವುಳ್ಳ ವೈದ್ಯರು ಸಂತಪುರ ಆಸ್ಪತ್ರೆಗೆ ಆಗಮಿಸಿರುವುದು ನಮಗೆ ಸಂತಸದ ವಿಷಯ ಎಂದರು. ಇದೇ ವೇಳೆ ಭೀಮವಾದ ದಸಂಸ ತಾಲೂಕು ಸಂಚಾಲಕ ತುಕಾರಾಮ ಹಸನ್ಮುಖಿ, ಮಲ್ಲಿಕಾರ್ಜುನ ಜೋನ್ನೇಕೆರಿ, ಕಾಶೀನಾಥ ಗಾಯಕವಾಡ, ಅನಿಲ ಬಿರಾದರ, ಓಂಕಾರ್ ಮೇತ್ರೆ, ರತಿಕಾಂತ್ ಪಾಟೀಲ್, ಸಂಜುಕುಮಾರ್ ಸೇಂಬೆಳ್ಳೆ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿದ ಆಕ್ಷೇಪಕ್ಕೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವರು, ಸ್ವಾಧೀನಪತ್ರವಿಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಅಲ್ಲದೆ ಕಳೆದ ಮಾ.13 ರಂದು ಈ ಸಂಬಂಧ ಕೆಇಆರ್ ಸಿ ಆದೇಶವಿದೆ. ಕಾಯ್ದೆಗೆ ತಿದ್ದುಪಡಿಯಾಗದ ಹೊರತು ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದಿಲ್ಲ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯುತ್ ಸಂಪರ್ಕಕ್ಕಾಗಿ 4 ಲಕ್ಷ ಕಟ್ಟಡ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಸ್ವಾಧೀನಪತ್ರ ಹಾಗೂ ಕಟ್ಟಡ ಮುಕ್ತಾಯದ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದೆಂಬ ಸುಪ್ರೀಂಕೋರ್ಟ್‌ನ ಆದೇಶವಿದ್ದರೆ ನೀಡಲಿ. ಇಂದೇ ಸರ್ಕಾರ ಆದೇಶ ಹೊರಡಿಸಿ ಪ್ರತಿಯೊಬ್ಬರಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು. ಈ ಸಂಬಂಧ ವಿಸ್ತೃತವಾಗಿ ಮಾಹಿತಿ ನೀಡುವ ಭರವಸೆ ನೀಡಿದ ಅವರು, 4 ಲಕ್ಷ ಅರ್ಜಿದಾರರಲ್ಲಿ ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ಹಣ ಪಾವತಿಸಿದವರು ಇದ್ದಾರೆ. ಗಮನ ಸೆಳೆಯುವ ಸೂಚನೆ ವಿಚಾರದಲ್ಲಿ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದ ಬಿಎಂಆರ್ ಸಿಎಲ್ ಅಧಿಕಾರಿಗಳು ಇದೀಗ ಲಗೇಜ್ ಗೂ ಶುಲ್ಕ ವಿಧಿಸಲು ಮುಂದಾಗಿದ್ದಾರೆ. ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು ಇನ್ನು ಮುಂದೆ ತಾವು ಕೊಂಡೊಯ್ಯುವ ಲಗೇಜ್‌ಗಳಿಗೂ ಟಿಕೆಟ್ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ದೇಶದಲ್ಲೇ ಬೆಂಗಳೂರು ಮೆಟ್ರೋ ಅತ್ಯಂತ ದುಬಾರಿ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಮಯದಲ್ಲೇ ಲಗೇಜ್‌ಗೂ ಶುಲ್ಕ ವಿಧಿಸಿರುವ ಈ ಕ್ರಮ ಜನಾಕ್ರೋಶಕ್ಕೆ ಕಾರಣವಾಗಿದೆ. ತಾವು ಮೆಟ್ರೋದಲ್ಲಿ ಸಂಚರಿಸುತ್ತಿದ್ದಾಗ ತಮ ಬಳಿ ಇದ್ದ ಒಂದು ಬ್ಯಾಗ್ ಗೆ 30 ರೂ. ಶುಲ್ಕ ವಿಧಿಸಿರುವುದನ್ನು ಪೋಟೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅಪ್‌ಲೋಡ್ ಮಾಡಿ ತಮ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ದಾವಣಗೆರೆ: ಬೀದಿ ನಾಯಿಗಳ ದಾಳಿಗೊಳಗಾಗಿ ರೇಬಿಸ್ ಕಾಯಿಲೆಯಿಂದ ಕಳೆದ 4 ತಿಂಗಳಿನಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಾಸ್ತ್ರಿ ಲೇಔಟ್‌ನ ನಿವಾಸಿ ಮೊಹಮ್ಮದ್ ಶಾಕೀರ್ ಆಲಿ, ಅತೀಹಾ ಖಾನಂ ದಂಪತಿಯ ಮಗಳು ಖದೀರಾ ಬಾನು (4) ಮೃತ ಬಾಲಕಿ. ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಿ ಮನೆಗೆ ಕರೆತಂದಿದ್ದರು. ಆದರೆ. ಒಂದು ತಿಂಗಳ ಹಿಂದೆ ಬಾಲಕಿ ವಾಂತಿ ಮಾಡಿಕೊಂಡು ಅಸ್ವಸ್ಥಳಾಗಿದ್ದಳು. ಗಾಬರಿಗೊಂಡ ಪೋಷಕರು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತಪಾಸಣೆ ನಡೆಸಿದ ವೈದ್ಯರು ಮಗುವಿಗೆ ರೇಬಿಸ್ ತಗಲಿರುವುದನ್ನು ಪತ್ತೆ ಮಾಡಿದ್ದರು. ಕೂಡಲೇ ಐಸಿಯುನಲ್ಲಿರಿಸಿ ಚಿಕಿತ್ಸೆ ಆರಂಭಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಭಾನುವಾರ…