Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ನವದೆಹಲಿ: ಟೈಮ್ಸ್ ನೌ ಶೃಂಗಸಭೆ 2024 ಯಲ್ಲಿ ಮಾತನಾಡಿದ ಸೀತಾರಾಮನ್, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಪಕ್ಷವು ನನಗೆ ಆಫರ್ ನೀಡಿತು. ಈ ಬಗ್ಗೆ ಹತ್ತು ದಿನಗಳ ಕಾಲ ಯೋಚಿಸಿ, ಹಿಂದಿರುಗಿ ಹೋಗಿ, ನನ್ನಿಂದ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನನ್ನತ್ರ ಚುನಾವಣೆಗೆ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಸ್ಫರ್ಧೆ ಮಾಡುವುದಿಲ್ಲ ಎಂದು ಹೇಳಿಬಂದೆ ಎಂದು ವಿತ್ತಸಚಿವೆ ಬಹಿರಂಗಪಡಿಸಿದರು. ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಲೋಕಸಭೆಗೆ ಸ್ಪರ್ಧಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಆಫರ್ ನೀಡಿ, ಆಯ್ಕೆಯನ್ನು ನನಗೇ ಬಿಟ್ಟಿದ್ದರು. ಆದರೆ, ಬಿಜೆಪಿ ಬಳಸುವ ವಿವಿಧ ಗೆಲುವಿನ ಮಾನದಂಡಗಳು ಮತ್ತು ಆ ಪಾತ್ರಕ್ಕೆ ತನ್ನ ಸೂಕ್ತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕ್ರೋಡೀಕರಿಸಿದ ನಿಧಿ ಅಲ್ಲ ಎಂದು ಸೀತಾರಾಮನ್ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯೆಯಾಗಿದ್ದೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ…
ಕಲಬುರಗಿ: ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂದಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಫುರ: ಐದು ಹೆಣ್ಣು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿಲಮತ್ತೂರು ಬಳಿಯ ಮರ್ಕತ್ ಪಲ್ಲಿಯಲ್ಲಿ ನಡೆದಿದೆ. ತಾಯಿ ಅನಿತಾ, ಮಕ್ಕಳಾದ ಲಾವಣ್ಯ (11), ಧರಣಿ(9), ಕಾವ್ಯ(8), ರಕ್ಷಿತಾ(5), ಶ್ರೀವಲ್ಲಿ(2) ವಿಷ ಸೇವಿಸಿದವರು. ವಿಷ ಕುಡಿದು ಅಸ್ವಸ್ಥರಾಗಿದ್ದ ಆರು ಮಂದಿಗೆ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಅನಿತಾ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನಿತಾ ಗರ್ಭಿಣಿಯಾಗಿದ್ದು, ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಡಗು: ಜಿಲ್ಲೆಯ ಸೋಮವಾರಪೇಟೆಯ ಸುವಿದ್ ಲಾಡ್ಜ್ ನಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತೆಲಂಗಾಣದ ರಾಜು (55) ಮತ್ತು ಸ್ವಾತಿ (53) ನೇಣಿಗೆ ಶರಣಾದ ದಂಪತಿಗಳಾಗಿದ್ದಾರೆ. ಎರಡೂವರೆ ತಿಂಗಳಿಂದ ಲಾಡ್ಜ್ ನಲ್ಲಿದ್ದ ದಂಪತಿ, ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ಎರಡೂವರೆ ತಿಂಗಳಿಂದ ನಿತ್ಯವೂ ಲಾಡ್ಜ್ ಬಿಲ್ ಪಾವತಿಸುತ್ತಿದ್ದ ದಂಪತಿ, ಏನೂ ಕೆಲಸ ಮಾಡದೇ ಸುತ್ತಾಡಿಕೊಂಡಿದ್ದರು ಎನ್ನಲಾಗಿದೆ. ಹಣಕಾಸಿನ ಸಮಸ್ಯೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೋಮವಾರಪೇಟೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತೆಲುಗು ಸ್ಟಾರ್ ನಟ ಚಿರಂಜೀವಿಯವರು ನಟನೆ ಮಾತ್ರವಲ್ಲದೆ ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ಇದೀಗ ಅವರು ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ್ದು, ನೀರನ್ನು ಸಂಗ್ರಹಿಸಿ ಉಳಿಸುವ ವಿಧಾನವನ್ನು ತಿಳಿಸಿದ್ದು, ವಿಶೇಷವಾಗಿ ಕನ್ನಡದಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಬರೆದಿರುವ ನಟ ಚಿರಂಜೀವಿಯವರು, “ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು. ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಗುಂಡಿಗಳನ್ನು ನಿರ್ಮಿಸುವ ಅಗತ್ಯವನ್ನು ಒತ್ತಿಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುತ್ತೇನೆ. ಬೆಂಗಳೂರಿನ ನನ್ನ ಫಾರ್ಮ್ ಹೌಸ್ ಗಾಗಿ ನಾನು ಮಾಡಿದ್ದನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. 20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು ಸೈಟ್ ನಾದ್ಯಂತ ಆಯಕಟ್ಟಿನ ಬಿಂದುಗಳಲ್ಲಿ ಸ್ಥಾಪಿಸಲಾಗಿದ್ದು, ರೀಚಾರ್ಜ್ ಬಾವಿಗಳಿಗೆ ಮೇಲ್ಮೈ ನೀರಿನ ಹರಿವನ್ನು ನಿರ್ದೇಶಿಸಲು ಸಾಕಷ್ಟು ಇಳಿಜಾರುಗಳಿವೆ. ಪ್ರತಿಯೊಂದು ಬಾವಿಯು ಫಿಲ್ಟರ್ ವ್ಯವಸ್ಥೆಯನ್ನು…
ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ಅಲ್ಲಿನ ಹಾಲಿ ಸಂಸದ ಅನಂತ ಕುಮಾರ್ ಹೆಗಡೆಯವರಿಗೆ, ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಮಾಡಿದೆ. ಆದರೆ ಈ ಬೆನ್ನಲ್ಲೇ ಅನಂತ್ ಕುಮಾರ್ ಹೆಗಡೆ ಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ ಎಂದು ಮೂಲಗಳು ಹೇಳುತ್ತಿವೆ. ಹೇಳಿಕೆಗಳ ಮೂಲಕ ಸುದ್ದಿಯಾಗುವ, ಐದಾರು ಬಾರಿ ಸಂಸದರಾಗಿರುವ ಕಟ್ಟಾ ಹಿಂದುತ್ವವಾದಿ ಅನಂತ್ ಕುಮಾರ್ ಹೆಗಡೆ ಪಾಲಿನ ಟಿಕೆಟ್ ಈ ಸಲ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹೆಗಡೆ ತಮ್ಮ ಕ್ಷೇತ್ರದ ಜನಕ್ಕೆ ಭಾವುಕ ಪತ್ರವನ್ನೂ ಬರೆದಿದ್ದರು. ಇದೆಲ್ಲದರ ನಡುವೆ ಅನಂತ್ ಕುಮಾರ್ ಹೆಗಡೆಯವರನ್ನು ರಾಜ್ಯ ರಾಜಕಾರಣಕ್ಕೆ ತಂದು ಮುಖ್ಯಮಂತ್ರಿ ಮಾಡುವ ಉದ್ದೇಶ ಹೈಕಮಾಂಡ್ ಮುಂದಿದೆ ಎನ್ನುವ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಅನಂತಣ್ಣ ಮನಸ್ಸುಮಾಡಿದರೆ ಏನು ಬೇಕಾದರೂ ಮಾಡಿಯಾರು..! ಎಂಬುದು ಉತ್ತರ ಕನ್ನಡದ ಎಲ್ಲೆಡೆ ಕೇಳುವ ಮಾತು. ಈಗಾಗಲೇ ಅವರು 5 ಬಾರಿ ಸಂಸದರಾಗಿರುವದೇ ಇದಕ್ಕೆ…
ಉದ್ಯಮಿಯೋರ್ವರಿಗೆ ಟಿಕೆಟ್ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಪ್ರಕರಣದ ಪ್ರಮುಖ ಆರೋಪಿಯಾದ ಧನರಾಜ್ ಎಂಬಾತ ಬೇಲ್ ಮೇಲಿಂದ ಜೈಲಿನಿಂದ ಹೊರಬಂದಿದ್ದು, ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಜೈಲಿನಿಂದ ಹೊರ ಬಂದಿರುವ ಧನರಾಜ್ ಗೆ ನ್ಯಾಯಾಲಯವು ಕಳೆದ ತಿಂಗಳು ಷರತ್ತುಬದ್ಧ ಜಾಮೀನನ್ನು ನೀಡಿತ್ತು. ಮಾ.25ರಂದು ಕಡೂರಿನ ಹೋಟೆಲ್ ನಲ್ಲಿ ಹಲ್ಲೆ ಆಗಿರುವ ಕುರಿತು ರಾಮು ಅವರು ಬೀರೂರು ಪೊಲೀಸರಿಗೆ ದೂರನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಬೀರೂರು ಪೊಲೀಸರು ಮಾತ್ರ ಪ್ರಕರಣ ದಾಖಲು ಮಾಡಿಲ್ಲ ಎಂದು ವರದಿಯಾಗಿದೆ. ಹಾಗಾಗಿ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿಯ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಕಡೂರಿನ ರಾಮು ಸಲೂನ್ ನಲ್ಲಿ ಚೆನ್ನಾ ನಾಯ್ಕಗೆ ಗೋಪಾಲ್ ಜೀ ಪಾತ್ರ ಸೃಷ್ಟಿಸಿ ಧನರಾಜ್ ಮೇಕಪ್ ಮಾಡಿಸಿದ್ದ. ಈ ಕಾರಣದಿಂದ ಈ…
ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ. ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ. ಈ ಬಗ್ಗೆ…
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜಕೀಯ ನಾಯಕರ ನಡುವೆ ಪರಸ್ಪರ ಕಚ್ಚಾಟಗಳು ಸಹ ಶುರುವಾಗಿವೆ. ಇತ್ತೀಚೆಗೆ ಮೇಕೆದಾಟು ವಿಚಾರವಾಗಿ ದೇವೇಗೌಡರ ನಿಲುವಿನ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಎಚ್.ಡಿ. ದೇವೇಗೌಡರದ್ದು ಅನುಕೂಲ ಸಿಂಧು ರಾಜಕಾರಣ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಜೆಡಿಎಸ್ ಅಂದರೆ ಜಾತ್ಯಾತೀತ ಜನತಾದಳ. ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ? ಮೇಕೆದಾಟು ಯೋಜನೆಯನ್ನು ಎನ್‍ಡಿಎ ಮೂಲಕ ಮಾಡಿಸುವುದಾಗಿ ಹೇಳುತ್ತಾರೆ. ಬಿಜೆಪಿ ಕಡೆಯಿಂದ ಯಾಕೆ ಮಾಡಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ. ಮೈಸೂರು, ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿಯವರ ಕೊಡುಗೆಗಳೇನು? ಬಿಜೆಪಿ ಎಂದರೆ ಲೂಟಿಕೋರರು. ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವವರನ್ನು ಜನರು ಬೆಂಬಲಿಸಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಜ್ಞಾನವಿರುವ ಈ ಎಲ್ಲರೂ ಜನರ ಧ್ವನಿಯಾಗಿ ದೇಶದ ಸಂಸತ್ತಿನಲ್ಲಿ ಕೆಲಸ ಮಾಡುವಂತಾಗಬೇಕು.…
ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಗಳು ಮತ್ತೆ ತಮ್ಮ ಬಾಲ ಬಿಚ್ಚಲು ಶುರು ಮಾಡಿದ್ದು, ಅದರ ಭಾಗವಾಗಿ ಸುಪಾರಿ ಕಿಲ್ಲರ್ ದಿನೇಶ್ ನನ್ನು ಹೋಟೆಲ್ ರೂಮಿನಲ್ಲಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಬೆಂಗಳೂರಿನ ಕಮನಹಳ್ಳಿಯಲ್ಲಿರುವ ಓಯೋ ಹೋಟೆಲ್ ರೂಮ್ ನಲ್ಲಿ ರೌಡಿಶೀಟರ್ ದಿನೇಶ್ ತನ್ನ ಸ್ನೇಹಿತನ ಜೊತೆಗಿದ್ದ. ಈ ಸಮಯದಲ್ಲಿ ಏಳು ಮಂದಿ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಬಂದು ಲಾಂಗು, ಮಚ್ಚುಗಳಿಂದ ದಿನೇಶ್ ನನ್ನು ಬರ್ಬರವಾಗಿ ಕೊಚ್ಚಿ ಮಾಡಿದ್ದಾರೆ. ಇನ್ನು ಈ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಬಾಣಸವಾಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296