Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ತುರುವೇಕೆರೆ : ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜನೆ ಮಾಡಲಾಗಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪೌರಕಾರ್ಮಿಕರೊಂದಿಗೆ ಜಾಥಾ ಮೂಲಕ ಸಂಚರಿಸಿ ಮತದಾನದ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮಾತನಾಡಿ, ಕಡ್ಡಾಯವಾಗಿ ಮತದಾನ ಮಾಡಿ, ಮತದಾನವನ್ನು ಹಬ್ಬವನ್ನಾಗಿ ಆಚರಿಸಿ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿ ಎಂದು ಹೇಳಿದರು. ಈ ಅಭಿಯಾನದಲ್ಲಿ ಸೆಕ್ಟರ್ ಆಫೀಸರ್ ರಾಘವೇಂದ್ರ, ಕಂದಾಯ ಹಾಗೂ ಆರೋಗ್ಯ ನಿರೀಕ್ಷಕ ರಂಗನಾಥ್, ಸಿಬ್ಬಂದಿಗಳಾದ ಸದಾನಂದ, ನರಸಿಂಹಮೂರ್ತಿ, ಕೃಷ್ಣಮೂರ್ತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಲೋಕಸಭೆ ಅತ್ಯಂತ ಪ್ರಮುಖವಾದ ಮನೆ. ದೇಶ ಯಾವರೀತಿ ಸಾಗಬೇಕು ಎಂಬುದರ ಬಗ್ಗೆ ಗಂಭೀರವಾದ ತೀರ್ಮಾನ ತೆಗೆದುಕೊಳ್ಳುವ ಮನೆಯಾಗಿದೆ. ಕಾನೂನುಗಳನ್ನು ರಚನೆ ಮಾಡುವ ಮನೆಯಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಹುತೇಕ ಸ್ಪರ್ಧಿಗಳು ವಕೀಲರಾಗಿದ್ದಾರೆ ಎಂದರು. ನಾನು ಲೋಕಸಭಾ ಸದಸ್ಯನಾದ ಮೇಲೆ ಎಚ್ ಎಎಲ್ ಕಾರ್ಖಾನೆ ಜಾಗವನ್ನು ಇಸ್ರೊಗೆ ನೀಡಲಾಗಿದೆ. ಎಚ್ ಎಂಟಿ ಶಿಫ್ಟ್ ಮಾಡಬೇಕು ಅಂತಾ ಗೋವಾಕ್ಕೆ ನಿರ್ಧಾರ ಆಯಿತು. ಆದರೆ ನಾನು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಬಹಳ ಹೋರಾಟ ಮಾಡಿದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಯಿತು. ಜನಗಳ ಹಣವನ್ನು ಸದ್ವಿನಿಯೋಗ ಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಿದ್ದೇನೆ. ತೆಂಗು ಬೆಲೆ ಕುಸಿತವಾಗಿದೆ. ನಾನು ಇದ್ದಾಗ ಅದರ ಬಗ್ಗೆ ಚರ್ಚೆ ಮಾಡಿ 18 ಸಾವಿರ ನೀಡಲಾಗಿತ್ತು. ಆದರೆ ಈಗ ಕುಸಿತವಾಗುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ…
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್ ಡಿ ಕೆ ಕಣಕ್ಕಿಳಿದಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮಗನನ್ನೇ ಗೆಲ್ಲಿಸಲಾಗದವರು ತಾವು ಗೆಲ್ಲುವರೇ ಎಂಬ ಪ್ರಶ್ನೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಎಷ್ಟೇ ಭಾವನಾತ್ಮಕವಾಗಿ ಮಾತನಾಡಿದರೂ ಮಂಡ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹಾಸನದವರಾದ ಅವರಿಗೆ ಮಂಡ್ಯ ಹೇಗೆ ಕರ್ಮಭೂಮಿಯಾದಿತು ಎಂದು ಪ್ರಶ್ನಿಸಿದರು. ಇನ್ನು ಹೆಚ್ ಡಿಕೆ ಎದುರು ಕಾಂಗ್ರೆಸ್ ಅಭ್ಯರ್ಥಿ ವೀಕ್ ಆದರೆ? ಎಂಬ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು ಸ್ಟಾರ್ ಚಂದ್ರು ವೀಕ್ ಕ್ಯಾಂಡಿಡೇಟ್ ಅಲ್ಲ, ಮಂಡ್ಯ ಕ್ಷೇತ್ರಕ್ಕೆ ಅಪರಿಚಿತರೂ ಅಲ್ಲ ನಾಗಮಂಗಲದವರು, ಯಾವ ರೀತಿಯಲ್ಲೂ ದುರ್ಬಲ ಅಭ್ಯರ್ಥಿ ಅಲ್ಲ ಎಂದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಅವರಿಗೆ ತಮ್ಮ ಮಗನನ್ನ ಗೆಲ್ಲಿಸಲು ಆಗಲಿಲ್ಲ ಈಗ ಅವರು ಗೆಲ್ಲುತ್ತಾರೆಯೇ ಎಂದು ಸಿಎಂ ವ್ಯಂಗ್ಯವಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ದೇಶಾದ್ಯಂತ ನಡೆದ ವಿವಿಧ ದಾಳಿಗಳಲ್ಲಿ ಇಡಿ ವಶಪಡಿಸಿಕೊಂಡಿರುವ ಸುಮಾರು 3000 ಕೋಟಿ ರೂ. ಅನ್ನು ವಿವಿಧ ಯೋಜನೆಗಳ ಮೂಲಕ ಬಡ ಜನರಿಗೆ ನೀಡುವುದಾಗಿ, ರಾಜ್ಯದ ಜನತೆಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೃಷ್ಣನಗರ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಾ ರಾಯ್ ಅವರಿಗೆ ಕರೆ ಮಾಡಿದ ಸಂದರ್ಭ ಈ ವಿಚಾರವನ್ನು ತಿಳಿಸಿದ್ದಾರೆ. ಅಮೃತಾ ರಾಯ್ ಅವರು ಲೋಕಸಭಾ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯ ಮಹುವಾ ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅಮೃತಾ ರಾಯ್ ಜೊತೆಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಇಡಿ ಭ್ರಷ್ಟರಿಂದ ವಶಪಡಿಸಿಕೊಂಡ ಹಣವನ್ನು ಬಡ ಜನರಿಗೆ ನೀಡಲು ಕಾನೂನು ರೂಪಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಪಕ್ಷಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ನೀವು ಬೇಸರಿಸಿಕೊಳ್ಳದಿರಿ. ರಾಜಕೀಯವನ್ನು ಈಗ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಒಂದು…
ಮಡಿಕೇರಿ: ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಬಿಜೆಪಿ ಸೇರಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರ ಪ್ರಯತ್ನದಿಂದ ಯದುವೀರ್ ಒಡೆಯರ್ ಅವರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು. 2004ರಿಂದ ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತ ಹಗರಣಗಳಿಂದ ತುಂಬಿ ತುಳುಕುತ್ತಿತ್ತು. ಹೀಗಾಗಿ ದೇಶದ ಜನ ಯುಪಿಎ ಸೋಲಿಸಿ ಬಿಜೆಪಿ ಗೆಲ್ಲಿಸಿದರು. ಆಡಳಿತಾತ್ಮಕ ಯಶಸ್ಸಿನ ನಂತರ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ. ಪ್ರಧಾನಿಯವರ ಜನಪ್ರಿಯತೆ ಇನ್ನೂ ಮುಂದುವರೆದಿರುವುದರಿಂದ ಮತದಾರರು ಮೂರನೇ ಬಾರಿಗೆ ಮೋದಿಯವರನ್ನು ಮರು ಆಯ್ಕೆ ಮಾಡುತ್ತಾರೆ ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ತಪ್ಪುಗಳಿಂದಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಎಂದು ವಿಶ್ಲೇಷಿಸಿದ ವಿಜಯೇಂದ್ರ, ”ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಒಂದು ರೂಪಾಯಿ…
ಬೆಂಗಳೂರು: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಲಿದ್ದೇವೆ. ಅಗತ್ಯಬಿದ್ದರೆ ಸುಮಲತಾ ಅಂಬರೀಷ್ ಜೊತೆಗೆ ಮಾತನಾಡಲು ಸಿದ್ಧ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ನಾರಾಯಣಗೌಡರ ಮನವೊಲಿಸಿದ್ದಾರೆ, ಅವರು ನಮ್ಮ ಪಕ್ಷದಿಂದಲೇ ಶಾಸಕರಾಗಿದ್ದರು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದವು ಈಗ ಎಲ್ಲ ಸರಿ ಹೋಗಿದೆ. ವೈಯಕ್ತಿಕವಾಗಿ ಹೆಚ್ ಡಿಕೆ ಮೇಲೆ ನಾರಾಯಣಗೌಡರಿಗೆ ಗೌರವ ಇದೆ, ಕುಮಾರಸ್ವಾಮಿ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ ಎಂದು ನಿಖಿಲ್ ಹೇಳಿದರು. ನಮಗೆ ಆರೋಗ್ಯಕರ ಚುನಾವಣೆ ಬೇಕು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಲುತ್ತೇವೆ. ಅಗತ್ಯ ಬಿದ್ದರೆ ಸುಮಲತಾ ಅಂಬರೀಷ್ ಜೊತೆಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ, ಎಲ್ಲಾ ಭಿನ್ನಾಭಿಪ್ರಾಯಗಳನ್ನೂ ತಿಳಿಗೊಳಿಸಿ ಒಟ್ಟಾಗಿ ಕೆಲಸ ಮಾಡಲು ಸಿದ್ಧ ಎಂದು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ನಾನು ಸಮಾಜಮುಖಿಯಾಗಿ ಕೆಲಸ ಮಾಡಲು ಮುಖ್ಯ ಕಾರಣ ಮಾಜಿ ಪ್ರಧಾನಿ ದೇವೇಗೌಡರು. ನಾನು ಈ ಕ್ಷೇತ್ರಕ್ಕೆ ಬರುವ ವೇಳೆ ಆನಂದ ಆಗುವ ಬದಲಾಗಿ ಸ್ವಲ್ಪ ಎಮೋಷನಲ್ ಆಗಿದೆ. 1996ರಲ್ಲಿ ದೇವೇಗೌಡರು ಪ್ರಧಾನಿ ಆಗಿರಲಿಲ್ಲ ಎಂದಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ ಜ್ಯೋತಿ ಬಸ್ಸು, ನಿರಂತರವಾಗಿ 30 ವರ್ಷಗಳ ಮುಖ್ಯಮಂತ್ರಿಗಳು ಆಗಿದ್ದಂತೆ ದೇವೇಗೌಡರು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿರುತ್ತಿದ್ದರು. ವಿಧಿ ನಿಯಮದಂತೆ ಯಾವ ಕಾಲದಲ್ಲಿ ಏನು ಆಗಬೇಕೋ ಅದು ಆಗಿದೆ ಎಂದು ಬಿಜೆಪಿ ಅಭ್ಯರ್ಥಿ ಸೋಮಣ್ಣ ತಿಳಿಸಿದರು. ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಬೇಕೆಂದ್ರೆ ಜೆಡಿಎಸ್ ಮತ್ತು ಬಿಜೆಪಿ ಒಂದಾಗಬೇಕಿದೆ ಎಂಬ ಚಿಂತನೆಯನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಎಂಟು ಸೂಚನೆಗಳನ್ನು ನೀಡಿದ್ದು, ಅದನ್ನು ಎಲ್ಲರೂ ಪಾಲಿಸಬೇಕಿದೆ ಎಂದು ಹೇಳಿದರು. ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಗೊಂದಲವಾದ್ರೆ ಅದನ್ನು…
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಹಿಳೆಯೊಬ್ಬರು ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮಹಿಳೆಯು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೂ ಮುನ್ನ ಮಹಿಳೆ ತನ್ನ ಸಹೋದರಿನಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಳು. “ತಾನು ಗಂಡು ಮಗು ಹೆತ್ತಿಲ್ಲ ಎನ್ನುವ ಕಾರಣಕ್ಕೆ ಅತ್ತೆಯ ಮನೆಯಲ್ಲಿ ಎಲ್ಲರೂ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಳು. ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು ಅದರ ತನಿಖೆ ಮಾಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: “ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರವಾಗಿ ಕೆಲಸ ಮಾಡುವುದಿಲ್ಲ” ಎಂಬ ಹೇಳಿಕೆಗಳನ್ನು ಪದೇಪದೇ ಕೊಡುತ್ತಲೇ ಇರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮುಂದುವರಿದಿದೆ. ಇಂದು ಬೆಳಗ್ಗೆ ಅಭ್ಯರ್ಥಿ ವಿ. ಸೋಮಣ್ಣ, ಚಿಕ್ಕನಾಯಕನಹಳ್ಳಿಯ ಅವರ ಮನೆಗೆ ಮಾಜಿ ಸಚಿವ ಬಿಸಿ ನಾಗೇಶ್ ಅವರೊಂದಿಗೆ ತೆರಳಿ ಸುದೀರ್ಘ ಕಾಲ ಮಾತುಕತೆ ನಡೆಸಿದರು. ಮಾತುಕತೆಯ ನಂತರ ಮಾಧುಸ್ವಾಮಿ ಕುದ್ದು ಇಬ್ಬರನ್ನು ಕಳುಹಿಸಿಕೊಡಲು ಮನೆಯವರೆಗೂ ಬಂದು ಸಂಭಾಷಣೆಯಲ್ಲಿ ತೊಡಗಿದರು. ಈ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವಂತಹ ಸರ್ವ ಪ್ರಯತ್ನಗಳು ಮುಂದುವರಿದಿದೆ ಎಂದು ಹೇಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸುರೇಂದ್ರ ಮೂರ್ತಿ ಎಂಬುವವರು ವಿಶೇಷ ಚೇತನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಸುರೇಂದ್ರ ಮೂರ್ತಿ ಹಾಗೂ ವಿಶೇಷ ಚೇತನ ಯುವತಿಗೆ ಮೊದಲು ಪರಿಚಯವಾಗಿ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರಲ್ಲಿ ಸಲುಗೆ, ನಂಬಿಕೆ ಹೆಚ್ಚಾದ ಬಳಿಕ, ಸುರೇಂದ್ರ ಮೂರ್ತಿ ತನ್ನೊಂದು ಬ್ಯುಸಿನೆಸ್ ಮಾಡುವ ಸಲುವಾಗಿ ಹಣ ಬೇಕೆಂದು ಯುವತಿ ಬಳಿ ಕೇಳಿದ್ದ. ಇದನ್ನು ನಂಬಿದ ಯುವತಿಯು, ತನ್ನ ಪ್ರಿಯತಮನಿಗಾಗಿ ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು, ಸಾಲ ಮಾಡಿ ಪ್ರಿಯತಮನಿಗೆ ಹಣ ನೀಡಿದ್ದರು. ಆದರೆ ಹಣವೆಲ್ಲ ಪಡೆದ ಬಳಿಕ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ ಪ್ರೀತಿಯಲ್ಲಿದ್ದ ವೇಳೆ ಲೈಂಗಿಕವಾಗಿಯೂ ಬಳಸಿಕೊಂಡಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ಸದ್ಯ ವಿಶೇಷ ಚೇತನ ಯುವತಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…