Author: admin

ಮುಂಬೈ: ತನ್ನ ಹೆಂಡತಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ವ್ಯಕ್ತಿಗೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ರ ಅಡಿಯಲ್ಲಿ 3 ಕೋಟಿ ರೂ.ಗಳ ಪರಿಹಾರ ಮತ್ತು ಮಾಸಿಕ 1.5 ಲಕ್ಷ ರೂ.ಗಳ ಜೀವನಾಂಶವನ್ನು ಪಾವತಿಸುವಂತೆ ನಿರ್ದೇಶಿಸಿದೆ. ಮುಂಬೈನಲ್ಲಿ ವಿವಾಹವಾದ ಇವರಿಬ್ಬರು, ವೈವಾಹಿಕ ಭಿನ್ನಾಭಿಪ್ರಾಯದಿಂದಾಗಿ, ಹೆಂಡತಿ ತನ್ನ ತಾಯಿಯ ಮನೆಗೆ ಸ್ಥಳಾಂತರಗೊಂಡರೆ, ಪತಿ 2014 ರಲ್ಲಿ ಯುಎಸ್ ‌ಎಗೆ ಸ್ಥಳಾಂತರಗೊಂಡರು. ಅದಾದ ನಂತರ ಪತಿ ಯುಎಸ್‌ ಎದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು ಮತ್ತು ಪತ್ನಿ ಮುಂಬೈನಲ್ಲಿ ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿ ಅವರ ವಿರುದ್ಧ ದೂರು ದಾಖಲಿಸಿದರು. ಯುಎಸ್ ನ್ಯಾಯಾಲಯವು ವಿಚ್ಛೇದನಕ್ಕೆ ಅನುಮತಿ ನೀಡಿತು. ನೇಪಾಳದಲ್ಲಿ ಮಧುಚಂದ್ರದ ಸಮಯದಲ್ಲಿ ನಡೆದ ಒಂದು ಅವಮಾನಕರ ಘಟನೆ ಸೇರಿದಂತೆ ತಮ್ಮ ಮದುವೆಯ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಸರಣಿಯನ್ನು ಪತ್ನಿ ತನ್ನ ಅರ್ಜಿಯಲ್ಲಿ ವಿವರಿಸಿದ್ದಾರೆ. ತನ್ನ ಪತಿ, ಕ್ರೌರ್ಯದಿಂದ, ಹಿಂದಿನ ಮುರಿದುಬಿದ್ದ ನಿಶ್ಚಿತಾರ್ಥದಿಂದಾಗಿ ತನ್ನನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಹೇಗೆ ಬ್ರಾಂಡ್ ಮಾಡುತ್ತಾನೆ ಎಂದು…

Read More

ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ ನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಹಾಗೂ ಹಾಸ್ಯನಟ ಮುನಾವರ್ ಫಾರೂಕಿ ಅವರನ್ನು ನಿನ್ನೆ ತಡರಾತ್ರಿ ಮುಂಬೈ ಪೊಲೀಸರು ವಶಕ್ಕೆ ಪಡೆದ್ದಾರೆ. ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಯ ಪ್ರಕಾರ, ಮುಂಬೈ ಪೊಲೀಸ್‌ ಸಮಾಜ ಸೇವಾ ಶಾಖೆಯು ‘ಸಬಲನ್‌ ಹುಕ್ಕಾ ಬಾರ್‌’ ಮೇಲೆ ದಾಳಿ ನಡೆಸಿತ್ತು. ತಂಬಾಕು ಆಧಾರಿತ ಹುಕ್ಕಾ ಬಳಕೆ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಮುಂಬೈ ಪೊಲೀಸರು ಹುಕ್ಕಾಬಾರ್ ಮೇಲೆ ದಾಳಿ ಮಾಡಿದ್ದರು ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಂಚೆ ಮತದಾನದ ಪದ್ಧತಿ ನಮ್ಮ ದೇಶದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರದಲ್ಲಿ ಮತ ಚಲಾಯಿಸಲು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದ ಮತದಾರರು ಈ ವ್ಯವಸ್ಥೆಯನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗವು ಈ ಮತದಾರರಿಗೆ ಅಂಚೆ ಮತದಾನದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಕಲ್ಪಿಸಿದೆ. ಕಾಲಾನಂತರದಲ್ಲಿ ಅದರ ವ್ಯವಸ್ಥೆಗಳನ್ನು ಸಹ ನವೀಕರಿಸಲಾಗಿದೆ. ಈಗ ಇ-ಮೇಲ್ ಮತದಾನ ವ್ಯವಸ್ಥೆಯ ಮೂಲಕವೂ ಅಂಚೆ ಮತದಾನ ಮಾಡಲಾಗುತ್ತಿದೆ. ಇದರೊಂದಿಗೆ ಪ್ರತಿ ಚುನಾವಣೆಯಲ್ಲಿ ಮತಯಂತ್ರಗಳನ್ನು ಎಣಿಕೆ ಮಾಡುವಾಗ ಮೊದಲು ಅಂಚೆ ಮತಪತ್ರಗಳನ್ನು ಎಣಿಸಲಾಗುತ್ತದೆ. ಈ ವ್ಯವಸ್ಥೆಯನ್ನು ಚುನಾವಣಾ ಕರ್ತವ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಭಾರತ ಸರ್ಕಾರದ ಸಶಸ್ತ್ರ ಪಡೆಗಳ ನೌಕರರು, ದೇಶದ ಹೊರಗೆ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳು, ಸೇನಾ ಕಾಯಿದೆ 1950 ರ ಅಡಿಯಲ್ಲಿ ಎಲ್ಲಾ ಪಡೆಗಳು ಬಳಸುತ್ತಾರೆ. ಮತಗಟ್ಟೆಗೆ ತಲುಪಲು ಸಾಧ್ಯವಾಗದ ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸಹ ನೋಂದಾಯಿಸಿದ ನಂತರ ಮತ ಚಲಾಯಿಸಬಹುದು. ಅವರು ಈಗಾಗಲೇ…

Read More

ಬಸ್ ಟಿಕೆಟ್ ವಿಚಾರವಾಗಿ  ಮಹಿಳೆ ಮೇಲೆ ಹಲ್ಲೆ ಮಾಡಿದ ಬಿಎಂಟಿಸಿ ಬಸ್ ನಿರ್ವಾಹಕರೊಬ್ಬರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊನ್ನಪ್ಪ ಎಂಬುವವರೇ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಬಿಎಂಟಿಸಿ ಕಂಡಕ್ಟರ್. ಸಿದ್ದಾಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಟಿಕೆಟ್​ ಕೇಳಿದ್ದಾರೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ‌ ಇರಿ ಎಂದಿದ್ದು, ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಹಿಳೆ ಮೇಲೆ ಕಂಡಕ್ಟರ್ ಹೊನ್ನಪ್ಪ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಂಡಕ್ಟರ್ ಹೊನ್ನಪ್ಪರನ್ನು  ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಹೊನ್ನಪ್ಪ ಜಂಬೂಸವಾರಿದಿಣ್ಣೆಯಲ್ಲಿರುವ ಬಿಎಂಟಿಸಿ ಬಸ್ ಡಿಪೋ 34ರ ಕಂಡಕ್ಟರ್ ಆಗಿದ್ದಾರೆ.  ಹಲ್ಲೆ ನಡೆದಿರುವ ದೃಶ್ಯ ಪ್ರಯಾಣಿಕರ ಮೊಬೈಲ್​ನಲ್ಲಿ ಸೆರೆಯಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇಸ್ಲಾಮಿಕ್ ರಾಷ್ಟವಾದ ಸೌದಿ ಅರೇಬಿಯಾದಲ್ಲಿ ಮೊಟ್ಟ ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಗೆ ಭಾಗವಹಿಸಲು ಅವಕಾಶ ನೀಡಿದೆ. ರೂಮಿ ಅಲ್ ಕಹ್ತಾನಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಮೊದಲ ಸೌದಿ ಯುವತಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಸೌಂದರ್ಯ ಸ್ಪರ್ಧೆಯ ಹೆಸರುಗಳಿಸಿರುವ ರೂಮಿ ಅಲ್ಕಹ್ತಾನಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ  ಈ ಸುದ್ದಿಯನ್ನು ಪ್ರಕಟಿಸಿದ್ದು, ಅವರು ವಿಶ್ವದ ಅತ್ಯಂತ ಜನಪ್ರಿಯ ಸ್ಪರ್ಧೆಗಳಲ್ಲಿ ಇಸ್ಲಾಮಿಕ್ ರಾಷ್ಟವನ್ನು ಪ್ರತಿನಿಧಿಸಲಿದ್ದಾರೆ. ಅವರು ತಮ್ಮ ಮನಮೋಹಕ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಮಾಡೆಲ್ ಸ್ಟ್ರಾಪ್ಲೆಸ್ ಸೀಕ್ವಿನ್ಡ್ ಗೌನ್ ಧರಿಸಿರುವುದನ್ನು ಕಾಣಬಹುದು. ಫೋಟೋಗಳ ಜೊತೆಗೆ, “ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾಗವಹಿಸಲು ನನಗೆ ಅಭಿಮಾನವಿದೆ ಎಂದು ಅವರು ತಿಳಿಸಿದ್ದಾರೆ.. ಇದು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾದ ಮೊದಲ ಭಾಗವಹಿಸುವಿಕೆ” ಎಂದು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮೊಬೈಲ್ ನಲ್ಲಿ ಜೋರಾಗಿ ಮಾತನಾಡಿದಳೆಂಬ ಕಾರಣಕ್ಕೆ ತಂಗಿಯೇ ಅಕ್ಕನನ್ನು ಕೊಲೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಗುಡಿಯಾ ದೇವಿ( 29) ಕೊಲೆಯಾದವರು. ತಂಗಿ ಗೀತಾಕುಮಾರಿ ಹಾಗೂ ಗೆಳೆಯ ರಾಜೇಶ್‌ ಕುಮಾರ್‌(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 8.15 ರ ಸುಮಾರಿಗೆ ಗುಡಿಯಾದೇವಿ ಮೊಬೈಲ್‌ ನಲ್ಲಿ ಜೋರಾಗಿ ಮಾತನಾಡುತ್ತಿದ್ದಕ್ಕೆ ತಂಗಿ ಗೀತಾ ಆಕ್ಷೇಪಿಸಿದ್ದರು. ಇದಕ್ಕೆ ಇಬ್ಬರ ನಡುವೆ ಜೋರು ಜಗಳ ನಡೆದಿತ್ತು. ಮನೆಯಲ್ಲಿಯೇ ಇದ್ದ ರಾಜೇಶ್‌, ಜಗಳ ಬಿಡಿಸಲು ಮುಂದಾಗಿದ್ದರು. ಆದರೆ, ಮಾತು ಕೇಳದ ಗುಡಿಯಾ ಮೇಲೆ ಹಲ್ಲೆನಡೆಸಿದ್ದ.ಕುಸಿದು ಬಿದ್ದ ಗುಡಿಯಾ ಅವರ ಕತ್ತನ್ನು ದೊಣ್ಣೆಯಿಂದ ಅದುಮಿಕೊಂಡಿದ್ದ. ಪರಿಣಾಮ ಉಸಿರುಗಟ್ಟಿ ಗುಡಿಯಾ ಮೃತಪಟ್ಟಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ʼರಾಜರಿಂದಲೇ ರಾಜರ ಕಥೆಗಳುʼ ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ ಎಂದು ವರದಿ ತಿಳಿಸಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ದೂರಿನಲ್ಲಿ…

Read More

ಹಾವು ಎಂದಾಕ್ಷಣ ಭಯಪಡುವವರೇ ಹೆಚ್ಚು. ಅತ್ಯಂತ ಅಪಾಯಕಾರಿ ಜೀವಿಗಳಲ್ಲಿ ಹಾವೂ ಕೂಡಾ ಒಂದು. ಆದರೆ ಕೆಲವು ಸ್ಥಳಗಳಲ್ಲಿ ಜನರು ಹಾವುಗಳ ಜತೆ ವಾಸಮಾಡುತ್ತಾರೆ ಅನ್ನೋದರ ಬಗ್ಗೆ ನಿಮ್ಗೊತ್ತಾ?ಹೆಚ್ಯಾಕೆ ಅವುಗಳ ರಕ್ತವನ್ನು ಕುಡಿಯುತ್ತಾರೆ ಅನ್ನೋದನ್ನನೀವು ಕೇಳಿದ್ದೀರಾ?ಹಾಗಾದರೆ ಇದು ಎಲ್ಲಿ? ಯಾಕೆ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ… ಹೌದು, ಹಾವಿನ ರಕ್ತವು ಅನೇಕ ಗುಣಗಳನ್ನು ಹೊಂದಿದೆ ಎಂದು ಚೀನಿಯರು ನಂಬುತ್ತಾರೆ. ಇದಲ್ಲದೆ, ಹಾವಿನ ರಕ್ತವು ಮಾನವನ ಚರ್ಮಕ್ಕೆ ಒಳ್ಳೆಯದು ಎಂದು ಅನೇಕ ಜನರು ನಂಬುತ್ತಾರೆ. ಹಾವಿನ ವಿಷವು ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಪ್ರತಿವಿಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಚೀನೀಯರು ನಂಬುತ್ತಾರೆ. ಅದಕ್ಕಾಗಿಯೇ ಕೆಲವರು ಹಾವಿನ ರಕ್ತವನ್ನು ಕುಡಿಯುತ್ತಾರೆ ಎನ್ನಲಾಗಿದೆ. ವಿಯೆಟ್ನಾಮೀಸ್ ಸಂಸ್ಕೃತಿಯಲ್ಲಿ ಸ್ನೇಕ್ ವೈನ್ ಆರೋಗ್ಯ ಮತ್ತು ಪುರುಷತ್ವವನ್ನು ಸುಧಾರಿಸುತ್ತದೆ ಎಂದು ಕೆಲವು ವ್ಯಕ್ತಿಗಳು ನಂಬುತ್ತಾರೆ. ಹಾವಿನ ಮಾಂಸವನ್ನು ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಬಳಸಲಾಗುತ್ತದೆ, ಆದರೆ ಪಿತ್ತ, ಮೂಳೆಗಳು ಮತ್ತು ಹಾವಿನ ಚರ್ಮವನ್ನು ಮೈಗ್ರೇನ್ ಮತ್ತು ಕೀಲು ನೋವಿನಂತಹ ಕಾಯಿಲೆಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಚೀನಾದಲ್ಲಿ ‘ದೈವಿಕ…

Read More

ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ತಿಳಿದು ಬಂದಿದೆ. ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ ಹೊರಟ ಐದು ವಾಹನದಲ್ಲಿ ಬಂದ ಎನ್‌ಐಎ ತಂಡ ತನಿಖೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವಿನ ಮೂಲಕ ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಸ್ಫೋಟ ಪ್ರಕರಣಕ್ಕೆ ಕುರಿತು ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಉದರಂಪೊಯಿಲ್‌ ನಲ್ಲಿ ಎರಡೂವರೆ ವರ್ಷದ ಬಾಲಕಿಯ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಲಿಕಾವ್ ನಿವಾಸಿ ಮುಹಮ್ಮದ್ ಫೈಝ್ ಮತ್ತು ಶಹಬಾತ್ ದಂಪತಿಯ ಪುತ್ರಿ ಫಾತಿಮಾ ನಸ್ರಿನ್ ನಿನ್ನೆ ಸಂಜೆ ಮೃತಪಟ್ಟ ಬಾಲಕಿಯಾಗಿದ್ದಾರೆ. ಮಗುವಿನ ಸಾವು ಅಸ್ವಾಭಾವಿಕ ಎಂದು ತಾಯಿ ಹಾಗೂ ಸಂಬಂಧಿಕರು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸರು ತಂದೆ ಫಯೀಜ್ ನನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ನರ್ಸ್ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನನಶಹಬಾತ್ ಮತ್ತು ಆತನ ಸಂಬಂಧಿಕರು ಫಯೀಜ್ ಮಗುವನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿಗೆ ಗಂಟಲಲ್ಲಿ ಆಹಾರ ಸಿಕ್ಕಿದೆ ಎಂಬ ನೆಪದಲ್ಲಿ ವಂದೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ನಸ್ರೀನ್ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ಮಾಹಿತಿ ನೀಡಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮಗುವಿನ ಮೃತದೇಹವನ್ನು ಮಂಚೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಕಾಳಿಕಾವು…

Read More