Author: admin

ಕಾಂಗ್ರೆಸ್ ಬೆಂಬಲಿಗರು ಕರೆ ಮಾಡಿ ನನ್ನನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರೂ ತಮಗೆ ಬೆಂಬಲ ನೀಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ‌. ಶಿವಮೊಗ್ಗದಲ್ಲಿ ‘ಶುಭ ಮಂಗಳ’ಸಮಾವೇಶದಲ್ಲಿ ಗ್ರಾಮೀಣ ಮತಗಟ್ಟೆ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿಗರು ನನಗೆ ಕರೆ ಮಾಡಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವುದಾಗಿ ಭರವಸೆ ನೀಡಿದರು, ಆದರೆ ಅವರು ನನಗೆ ನೇರವಾಗಿ ಬೆಂಬಲ ವ್ಯಕ್ತಪಡಿಸದಿರಬಹುದು, ಆದರೆ ಚುನಾವಣೆಯಲ್ಲಿ ಅವರು ನನಗೆ ಮತ ಹಾಕಬಹುದು ಅಥವಾ ಹಾಕದೆಯೂ ಇರಬಹುದು. ಸಾರ್ವಜನಿಕವಾಗಿ, ಇದೆಲ್ಲ ತಿಳಿದಿದ್ದರೂ, ನಿಮ್ಮಲ್ಲಿ ಅನೇಕರು ಇಲ್ಲಿಗೆ ಬಂದಿದ್ದೀರಿ, ನಾನು ನಿಮ್ಮನ್ನು ಅಭಿನಂದಿಸಬೇಕು. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕೇಳಿದಾಗ ಕೇಂದ್ರ ನಾಯಕರ ಮಾತಿಗೆ ಒಪ್ಪಿದ್ದೇನೆ ಎಂದರು. ಆದರೆ ನನ್ನ ಮಗನಿಗೂ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಇದು ನನ್ನ ತಪ್ಪೇ?” ಎಂದು ಪ್ರಶ್ನಿಸಿದ ಅವರು, “ನಾನು ರಾಷ್ಟ್ರೀಯ ನಾಯಕರ…

Read More

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು, ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ. 7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು. ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡುತ್ತಿದ್ದಳು ಎನ್ನಲಾಗಿದೆ. ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್…

Read More

ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ ಟಾಪ್ ‌ಗಳನ್ನು ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು ಎನ್ನಲಾಗಿದ್ದು, ಈಕೆ ಬ್ಯಾಂಕ್ ಉದ್ಯೋಗಿಯಾಗಿದ್ದಳು ಎಂದು ವರದಿ ತಿಳಿಸಿದೆ. ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈಕೆ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್‌ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು. ಎಚ್ ‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು ಬಂಧಿಸಿದ್ದಾರೆ. ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್ ‌ಎಎಲ್ ಸುತ್ತಮುತ್ತ ಲ್ಯಾಪ್‌ ಟಾಪ್ ‌ಗಳನ್ನು ಕಳ್ಳತನ ಮಾಡಿದ್ದಳು. ಸದ್ಯ ಲ್ಯಾಪ್‌ ಟಾಪ್ ಕಳ್ಳಿಯನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬಂಧಿತಳಿಂದ 10 ಲಕ್ಷ ಮೌಲ್ಯದ 24 ಲ್ಯಾಪ್‌ ಟಾಪ್‌ ಗಳನ್ನು ಸೀಜ್ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ನಮ್ಮ ಬೆಂಗಳೂರು ಗ್ರೀನ್ ಸಿಟಿ, ಐಟಿ ಸಿಟಿ ಹೀಗೆ ವಿವಿಧ ಹೆಸರುಗಳಿಂದ ಕರೆಯಲ್ಪಡುವ ಬೆಂಗಳೂರು, ಇಡೀ ವಿಶ್ವದಲ್ಲಿ ಅತ್ಯುತ್ತಮ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ನಿದರ್ಶನವೆಂಬಂತೆ 21 ವರ್ಷ ವಯಸ್ಸಿನ ಯುವಕನ ದೇಹದಲ್ಲಿ ಎರಡು ವರ್ಷಗಳಿಂದ ಸಿಲುಕಿದ್ದ ಬುಲೆಟ್’ನ್ನು ನಮ್ಮ ಬೆಂಗಳೂರು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ, ಹೊರತೆಗೆದಿದ್ದಾರೆ. ಸಾಮಾನ್ಯವಾಗಿ ಅರಬ್ ದೇಶಗಳಲ್ಲಿ ಆಗಾಗ ಯುದ್ಧಗಳು ಸಂಭವಿಸುತ್ತಿರುತ್ತವೆ. ಆ ರೀತಿಯ ಯುದ್ಧಗಳಲ್ಲಿ ಪಾಲ್ಗೊಂಡಿದ್ದ ಯುವಕನಿಗೆ ಒಮ್ಮೆ ಯುದ್ಧದಲ್ಲಿ ಅನೇಕ ಗುಂಡುಗಳು ಹೊಕ್ಕಿದ್ದವು. ಈ ವೇಳೆ ಆತನ ತೋಳಿನ ಮೂಳೆ ಮುರಿದಿತ್ತು. ತದನಂತರ ಅಲ್ಲಿನ ವೈದ್ಯರು ಗುಂಡುಗಳನ್ನು ಹೊರ ತೆಗೆದು ಅದನ್ನು ಸರಿಪಡಿಸಿದ್ದರು. ಆದರೆ ಅದರಲ್ಲಿ ಒಂದು ಗುಂಡು ಮಾತ್ರ ಅವನ ಬಲ ಶ್ವಾಸಕೋಶದಲ್ಲಿ ಸಿಲುಕಿಕೊಂಡಿತ್ತು. ಆದರೆ ಗುಂಡು ಪತ್ತೆಹಚ್ಚಲು ಯೆಮನ್ ವೈದ್ಯರಿಗೆ ಸಾಧ್ಯವಾಗಲಿಲ್ಲ. ಬಳಿಕ ವಾಸಿಮ್ ನಗರದಲ್ಲಿ ಲಭ್ಯವಿರುವ ಇಂತಹ ಶಸ್ತ್ರಚಿಕಿತ್ಸೆಗಳ ಬಗ್ಗೆ ಓದಿದ ನಂತರ ಬೆಂಗಳೂರಿಗೆ ಶಸ್ತ್ರ ಚಿಕಿತ್ಸೆಗೆ ಬಂದಿದ್ದರು. ಆದರೆ ಆತನಿಗೆ ನಿರಂತರ ಕೆಮ್ಮು, ಉಸಿರಾಟದ…

Read More

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಹೀನಾಯವಾಗಿ ಸೋತ ಡಾ.ಕೆ. ಸುಧಾಕರ್ ಅವರಿಗೆ ಇದೀಗ ಅದೇ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುತ್ತಿದೆ. ಆದರೀಗ, ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಚಿಕ್ಕಬಳ್ಳಾಪುರದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಆದರೆ ಈ ಬೆನ್ನಲ್ಲೇ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ರೊಚ್ಚಿಗೆದ್ದು, ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವೈರಲ್ ಆಗಿರುವ ಕರಿಮಣಿ ಮಾಲಿಕ ಹಾಡನ್ನು ತಿರುಚಿ ‘ಓ ನಲ್ಲಾ ನೀ ನಲ್ಲಾ, ಚಿಕ್ಕಬಳ್ಳಾಪುರಕ್ಕೆ ನೀ ಲಾಯಕ್ಕಲಾ’ ಎಂದು ಘೋಷಣೆ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಯುವ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ವೈದ್ಯೆ ಅಭಿರಾಮಿ ಮೃತಪಟ್ಟಿದ್ದಾರೆ. ವೈದ್ಯೆ ಅಭಿರಾಮಿ ತಿರುವನಂತಪುರದ ವೆಲ್ಲನಾಡು ಮೂಲದವರು. ಮೆಡಿಕಲ್ ಕಾಲೇಜು ಸಮೀಪದ ಪಿಟಿ ಚಾಕೋ ನಗರದ ಫ್ಲ್ಯಾಟ್‌ ನಲ್ಲಿ ಮೃತದೇಹ ಪತ್ತೆಯಾಗಿದೆ. ಅರಿವಳಿಕೆ ಔಷಧಿಯ ಮಿತಿಮೀರಿದ ಸೇವನೆಯೇ ಸಾವಿಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರ ಪ್ರಕಾರ ಇವರು ಮಧ್ಯಾಹ್ನದ ಊಟದ ನಂತರ ತನ್ನ ಮನೆ ಲಾಕ್‌ ಮಾಡಿದ್ದರು. ಈಕೆಯ ಫ್ಲ್ಯಾಟ್‌ ಮೇಟ್ಸ್‌ ಬಲವಂತದಿಂದ ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ತನ್ನ ಬೆಡ್‌ ಮೇಲೆ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಅಲ್ಲಿ ವೈದ್ಯರು ಆಕೆಯನ್ನು ಮೃತ ಎಂದು ಘೋಷಣೆ ಮಾಡಿದ್ದಾರೆ. ಪೊಲೀಸರು ಕೊಠಡಿಯಿಂದ ಸಿರಿಂಜ್ ಮತ್ತು ಡೆತ್‌ ನೋಟ್ ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಸಾಗಿಸಲಾಗಿದೆ. ಮಿತಿಮೀರಿದ ಮಾದಕ ದ್ರವ್ಯ ಸೇವನೆಯಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವ ವೈದ್ಯೆ ಕೊಲ್ಲಂನ ರಾಮನ್‌ ಕುಲಂಗರ…

Read More

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಮಹಿಳಾ ನಾಯಕಿ, ಕಾಂಗ್ರೆಸ್ ಶಾಸಕನ ಪತ್ನಿ ವೀಣಾ ಕಾಶಪ್ಪನವರ್ ಗೆ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಅವರು ಬಾಗಲಕೋಟೆಯಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವಾಗಿದ್ದಾರೆ. ಬಾಗಲಕೋಟೆಯಿಂದ ಕಾಂಗ್ರೆಸ್, ಸಂಯುಕ್ತಾ ಪಾಟೀಲ್‌ಗೆ ಲೋಕಸಭಾ ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೇ ಭಾರೀ ನಿರಾಸೆಗೊಂಡ ವೀಣಾ ಕಾಶಪ್ಪನವರ್ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಮುಟ್ಟಿಸಲು ರೆಡಿಯಾಗಿದ್ದಾರೆ. ಪಕ್ಷವು ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ದೊಡ್ಡ ಆಘಾತ ಎದುರಾಗಿದೆ. ವೀಣಾ ಅವರು ಪಕ್ಷೇತರವಾಗಿ ಸ್ಪರ್ಧಿಸುವುದನ್ನು ಅನೌನ್ಸ್ ಮಾಡಿದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್‌ ಕುಲಕರ್ಣಿ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆಸಿದೆ. ಆದರೂ ಕೂಡ ಇದು…

Read More

ತುಮಕೂರು:  ಹಾಡಹಗಲೇ ತೋಟದ ಮನೆಗೆ ನುಗ್ಗಿದ ದರೋಡೆಕೋರರು ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಮೂರು ಲಕ್ಷ ರೂ. ಹಣವನ್ನು ದೋಚಿರುವ ಘಟನೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಉರ್ಕಿಹಳ್ಳಿ ಗ್ರಾಮದಲ್ಲಿ  ನಡೆದಿದೆ. ಉರ್ಕೆಹಳ್ಳಿ ಗ್ರಾಮದ ಗಂಗಯ್ಯ (56) ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಮತ್ತು ಅವರ ಕುಟುಂಬ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಂತೆ ಇರುವ ಉರ್ಕಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಮನೆ ಬಳಿ ಬಂದು ಕುಡಿಯಲು ನೀರು ಕೊಡಿ ಎಂದು ಪುಷ್ಪಲತಾ ಅವರನ್ನು ಕೇಳಿದ್ದಾರೆ. ಈ ವೇಳೆ ಪುಷ್ಪಲತಾ ತನ್ನ ತಾಯಿ ಗಂಗಮ್ಮನಿಗೆ ಯಾರೋ ಕುಡಿಯಲು ನೀರು ಕೇಳುತ್ತಿದ್ದಾರೆ ಎಂದು ತಿಳಿಸಿದ್ದು ಗಂಗಮ್ಮ ಕುಡಿಯಲು ನೀರು ತರಲೆಂದು ಮನೆ ಒಳಗೆ ಹೋಗಿದ್ದ ವೇಳೆ ಏಕಾಏಕಿ ದರೋಡೆಕೋರರು ಒಳಗೆ ನುಗ್ಗಿ ಮನೆಯಲ್ಲಿದ್ದ ಮೂರು ಲಕ್ಷ ರೂ. ನಗದನ್ನು ದೋಚಲು ಯತ್ನಿಸಿದ್ದಾರೆ. ಇದರಿಂದ ಗಾಬರಿಗೊಂಡ ಪುಷ್ಪಲತಾ ತೀವ್ರ ವಿರೋಧ…

Read More

ಸ್ಯಾಂಡಲ್‌ ವುಡ್‌ ನ ಬ್ಯೂಟಿ ಕ್ವೀನ್ ರಮ್ಯಾ ಅವರು ರಾಜಕೀಯದ ಕಾರಣಕ್ಕೆ ಸಡನ್​ ಆಗಿ ನಟನೆಯಿಂದ ದೂರಾಗಿದ್ದರು. ಆದರೆ ಹಲವು ಸಮಯಗಳ ನಂತರ ‘ಉತ್ತರಕಾಂಡ’  ಸಿನಿಮಾವನ್ನು ಅವರು ಒಪ್ಪಿಕೊಂಡಾಗ ಜನರು ತುಂಬಾ ಉತ್ಸುಕರಾಗಿದ್ದರು. ಆದರೆ ಈಗ ರಮ್ಯಾ  ಅವರು ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಿಂದ ಹೊರಬಂದಿರುವುದಾಗಿ ಅವರು ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಆ್ಯಕ್ಟೀವ್​ ಆಗಿದ್ದು, ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಅವರು ಈ ಸುದ್ದಿ ನೀಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂಬುದನ್ನು ಅವರು ತಿಳಿಸಿದ್ದಾರೆ. ಹಾಗಂತ ರಾಜಕೀಯದಲ್ಲಿ ತೊಡಗಿಕೊಳ್ಳಬಹುದೇ ಎಂಬ ಅನುಮಾನ ಮೂಡುವುದು ಸಹಜ. ಆದರೆ ಆ ಬಗ್ಗೆ ಕೂಡ ಅವರು ಸ್ಪಷ್ಟನೆ ನೀಡಿಲ್ಲ. ಡೇಟ್ಸ್​ ಕೊರತೆಯಿಂದಾಗಿ ನಾನು ಉತ್ತರಕಾಂಡದಲ್ಲಿ ಕೆಲಸ ಮಾಡುತ್ತಿಲ್ಲ.ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ. ರಮ್ಯಾ ಅವರು ಸಿನಿಮಾದಿಂದ ಹೊರಬಂದಿರುವುದರಿಂದ ಚಿತ್ರದ ಕೆಲಸಗಳು ಇನ್ನಷ್ಟು ತಡವಾಗಬಹುದು.ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಮ್ಯಾ ಅವರು ರಾಜ್​ ಬಿ.…

Read More

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಪ್ರಸ್ತುತ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೆ ಒಟ್ಟು 23 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು. ಈ ಹಿಂದೆ ದಿನಾಂಕ 15-03-2024, 19-03-2024, 23-03-2024 ರಂದು ಮೊದಲ, ಎರಡನೇ ಮತ್ತು ಮೂರನೇ ಪಟ್ಟಿಯಲ್ಲಿ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಲಾಗಿತ್ತು. ಇಂದು ಚಿಕ್ಕೋಡಿ ಹಾಗೂ ಬಳ್ಳಾರಿ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗಿದೆ. KRS ಪಕ್ಷವು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದು, ಈ ನಿಟ್ಟಿನಲ್ಲಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು ಆ ಕ್ಷೇತ್ರಗಳಿಗೆ ಶೀಘ್ರದಲ್ಲಿಯೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.  ಇಂದು ನಡೆದ ಪತ್ರಿಕಾಘೋಷ್ಠಿಯ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಅಭ್ಯರ್ಥಿಗಳನ್ನು ಮಾದ್ಯಮಗಳ ಮೂಲಕ ನಾಡಿನ ಜನತೆಗೆ ಪರಿಚಯಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಧ್ಯೇಯ, ತತ್ವ-ಸಿದ್ದಾಂತಗಳಿಗೆ ಹಾಗು ಪ್ರಾಮಾಣಿಕವಾಗಿ ಚುನಾವಣಾ ಪ್ರಚಾರ ಮಾಡುವ ಬಗ್ಗೆ ವಾಗ್ದಾನ ಮತ್ತು ಪ್ರತಿಜ್ಞೆ ಮಾಡಿಸಲಾಯಿತು.  ಅಭ್ಯರ್ಥಿಗಳ ಪಟ್ಟಿ: ಚಿಕ್ಕೋಡಿ —         ಕುಮಾರ್ ಸಂಭಾಜಿ ಡೋಂಗರೆ…

Read More