Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್ ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಇದೇ ವೇಳೆ ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು. ಜನಾರ್ದನ ರೆಡ್ಡಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಬೆಂಗಳೂರಿನ ತಮ್ಮ ನಿವಾಸ ‘ಪಾರಿಜಾತ’ದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ್ದರು ಎನ್ನಲಾಗಿದೆ. ಜನಾರ್ದನ ರೆಡ್ಡಿ ಬಿಜೆಪಿಗೆ ವಾಪಸಾಗಿದ್ದರಿಂದ ಆನೆ ಬಲ ಬಂದಂತಾಗಿದೆ. ಜನಾರ್ದನರೆಡ್ಡಿ ಬಿಜೆಪಿಗೆ ವಾಪಸಾಗಿದ್ದರಿಂದ ಖುಷಿಯಾಗಿದೆ. ಅವರನ್ನ ಮುಂದಿನ ದಿನಗಳಲ್ಲಿ ಸೂಕ್ತವಾಗಿ ಬಳಸಿಕೊಳ್ಳುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿಪಟೂರು: ಕೃಷಿ ಉತ್ಪನ್ನಕ್ಕೆ ಲಾಭದಾಯಕ ಧಾರಣೆಯನ್ನು ಕಾನೂನಿನ ಚೌಕಟ್ಟಿಗೆ ತಂದು, “ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು” ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಟಿ.ಎನ್. ಪ್ರಕಾಶ್ ಕಮ್ಮರಡಿ ತಿಳಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಉತ್ಪನ್ನಕ್ಕೆ ಲಾಭದಾಯಕ ಧಾರಣೆಯನ್ನು ಕಾನೂನಿನ ಚೌಕಟ್ಟಿಗೆ ತಂದು, “ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು” ಎನ್ನುವ ರೈತರ ಹೊಸ ಹಕ್ಕೊತ್ತಾಯ ಇಂದು ದೇಶದಾದ್ಯಂತ ಕೇಳಿಬರುತ್ತಿದೆ. ಕಾಂಗ್ರೆಸ್ ಪಕ್ಷ ಇದನ್ನು ಜಾರಿಗೊಳಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಆಶ್ವಾಸನೆ ನೀಡಿರುತ್ತಾರೆ. ಬೆಳೆ ವೈವಿಧ್ಯಗೊಳಿಸುವುದಾದಲ್ಲಿ ನೋಂದಾಯಿಸಿದ ರೈತರಿಂದ ಬೆಂಬಲ ಬೆಲೆಯಲ್ಲೇ ದ್ವಿದಳ ಧಾನ್ಯ, ಜೋಳ, ಹತ್ತಿ ಕೊಳ್ಳಲು ಸಿದ್ಧವಿರುವುದಾಗಿ ಭಾಜಪ ನೇತೃತ್ವದ ಕೇಂದ್ರ ಸರ್ಕಾರ ತಿಳಿಸಿರುತ್ತದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಭಾವನಾತ್ಮಕ ವಿಚಾರಗಳು, ವಿಭಜಕ ನಿರೂಪಣೆಗಳು ಸ್ವಲ್ಪ ಹಿಂದೆ ಸರಿದು ರೈತರ ಗಂಭೀರ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ. ‘ಕರ್ನಾಟಕ ಕೃಷಿ ಬೆಲೆ ಆಯೋಗ’ ಬೆಂಬಲ ಬೆಲೆ ಖಾತರಿಸುವ…
ಹೋಳಿ ಹಬ್ಬದ ಸಲುವಾಗಿ ಬಣ್ಣ ಹಾಕಿಕೊಂಡು ನದಿಯಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಹೈದರಾಬಾದ್’ನ ಕುಮುರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವಾರ್ಧಾ ನದಿಯಲ್ಲಿ ನಡೆದಿದೆ. ನಾಲ್ವರು ಯುವಕರ ತಂಡ ಹೋಳಿ ಸಂಭ್ರಮಾಚರಣೆ ಮುಗಿಸಿಕೊಂಡು ನದಿಯಲ್ಲಿ ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಾದೃಷ್ಟವಶಾತ್ ಅವರಲ್ಲಿ ಯಾರಿಗೂ ಈಜು ಬಾರದ ಕಾರಣ ಒಬ್ಬರ ಹಿಂದೆ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಮುರಂ ಭೀಮ್ ಆಸಿಫಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಕೆ. ಸುರೇಶ್ ಕುಮಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಮೃತರು 22-25ರ ವಯೋಮಾನದವರು ಎನ್ನಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇವರೆಲ್ಲರೂ ಪಾನಮತ್ತರಾಗಿದ್ದರು ಎಂದು ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ(General, IT, Home Science)., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.4,950/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-10,450/-., ಬಿ.ಕಾಂ.-ರೂ.7,450/-., ಬಿ.ಸಿ.ಎ/ಬಿ.ಎಸ್ಸಿ-ರೂ.20,450/-., ಎಂ.ಎ-ರೂ.8,900/-., ಎಂ.ಎಸ್ಸಿ/ಎಂ.ಬಿ.ಎ-ರೂ.25,450/-., ಎಂ.ಕಾಂ-ರೂ.10,450/-. ಎಂ.ಸಿ.ಜೆ-ರೂ.13,700/-., ಎಂ.ಎಲ್.ಐ.ಎಸ್ಸಿ-ರೂ.15,450/-ಗಳಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ. ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC/Minority ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮುಖಾಂತರ…
ತುಮಕೂರು: ತುರುವೇಕೆರೆ ಮೈತ್ರಿ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ ಸಮರ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಸಭೆಯಲ್ಲಿ ಅಸಮಾಧಾನ ಹೊರಹಾಕಿದ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್ ಅವರನ್ನು ಕಂಡು ಅಭ್ಯರ್ಥಿ ಸೋಮಣ್ಣ ಕೆಲಕಾಲ ಗೊಂದಲಕ್ಕೆ ಒಳಗಾದರು. ಕಳೆದ ಬಾರಿ ನಾನು ಸೋಲೋದಕ್ಕೆ ಕೊಂಡಜ್ಜಿ ವಿಶ್ವನಾಥ್ ಕೂಡ ಕಾರಣ ಎಂದಿದ್ದ ಶಾಸಕ ಎಂ.ಟಿ. ಕೃಷ್ಣಪ್ಪ. ಸಭೆಯ ಭಾಷಣದಲ್ಲಿ ಹೇಳಿದ್ದ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರ ಭಾಷಣ ಮುಗಿಯುತ್ತಿದ್ದಂತೆ, ಅದಕ್ಕೆ ಸಮಜಾಯಿಷಿ ನೀಡಲು ಮುಂದಾದ ಕೊಂಡಜ್ಜಿ ವಿಶ್ವನಾಥ್ ಅವರನ್ನು, ಇದಕ್ಕೆ ಬೇಡ ಎಂದು ಸೋಮಣ್ಣ ಹೇಳಿದರು. ಈ ವೇಳೆ ಶಾಸಕ ಕೃಷ್ಣಪ್ಪ ವಿರುದ್ಧ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ವೇದಿಕೆಯ ಮುಂಭಾಗದಲ್ಲಿ ಇದ್ದ ಜೆಡಿಎಸ್ ಕಾರ್ಯಕರ್ತ ಸತೀಶ್ ಎಂಬಾತ ಆಕ್ಷೇಪ ವ್ಯಕ್ತಪಡಿಸಿದರು. “ಅಣ್ಣ ಹೀಗಾದ್ರೆ ಬೇಡ ಬಾ ಅಣ್ಣ ಹೋಗೋಣ” ಎಂದು ಶಾಸಕ ಕೃಷ್ಣಪ್ಪರನ್ನ ಕರೆದ ಸತೀಶ್, ನಿಜ ಹೇಳಿದ್ದಾರೆ ಶಾಸಕರು ಹೇಳಲಿ…
ತುಮಕೂರು: ತಾಲೂಕಿನ ಕುಚ್ಚಂಗಿ ಗ್ರಾಮದ ಕೆರೆಯಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಮೂರು ಮೃತದೇಹಗಳಿಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಾ ಗೇಟ್ ಬಡಾವಣೆಯಲ್ಲಿ ವಾಸವಾಗಿರುವ ಪಾತರಾಜು ಮತ್ತು ಗಂಗರಾಜು ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಈಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಆರು ಮಂದಿ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಆರೋಪಿಗಳು ಈಗಾಗಲೇ ಕೊಲೆಯಾಗಿರುವ ಇಶಾಕ್ ಸೀಮಮ್, ಶಾಹುಲ್ ಹಮೀದ್, ಸಿದ್ದಿಕ್ ಅವರೊಂದಿಗೆ ಸಂಪರ್ಕ ಹೊಂದಿದ್ದರು. ಅಲ್ಲದೆ, ಈ ಮೂವರು ಮೃಪಟ್ಟವರು ಆರೋಪಿ ಪಾತರಾಜುವಿನ ಜೊತೆ ಸೇರಿ ಸುಮಾರು ಆರು ತಿಂಗಳಿನಿಂದ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದರು. ಪಾತರಾಜನಿಗೆ ಸುಮಾರು ಆರು ಲಕ್ಷ ರೂ. ಹಣವನ್ನು ನೀಡಿದ್ದರು. ಹಣ ಪಡೆದು ಆರು ತಿಂಗಳು ಕಳೆದರೂ ನಿಧಿ ಹುಡುಕಿ ಕೊಟ್ಟಿಲ್ಲವಾದ್ದರಿಂದ, ಹಣ ವಾಪಸ್ ಕೊಡುವಂತೆ ಇಲ್ಲವಾದರೆ, ಪೊಲೀಸರಿಗೆ ದೂರು ನೀಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರು. ಅವರನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂಬ…
ಸೋರೆಕಾಯಿ ತಿನ್ನುವುದರಿಂದ ಈ ರೋಗಗಳು ಗುಣವಾಗುತ್ತವೆ: ಸೋರೆಕಾಯಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹೀಗಾಗಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ವಿಶೇಷವಾಗಿ ಋತುಮಾನದ ರೋಗಗಳು ದೂರವಾಗುತ್ತವೆ. ಸೋರೆಕಾಯಿ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಸೋರೆಕಾಯಿಯ ನಿಯಮಿತ ಸೇವನೆಯು ಕೀಲು ನೋವು ಮತ್ತು ಉರಿಯೂತವನ್ನು ತಡೆಯುತ್ತದೆ. ಸಂಧಿವಾತ ಮತ್ತು ಕೀಲು ನೋವಿನಂತಹ ಸಮಸ್ಯೆಗಳಿರುವವರು ಸೋರೆಕಾಯಿ ಸೇವಿಸಿದರೆ ಪರಿಹಾರ ಕಂಡುಕೊಳ್ಳಬಹುದು. ಈ ಆಹಾರ ಪದಾರ್ಥ ದೇಹವನ್ನು ನಾಶಮಾಡುತ್ತವೆ..!: ಹೆಚ್ಚಿನ ಮಳಿಗೆಗಳಲ್ಲಿ, ಫ್ರೆಂಚ್ ಫ್ರೈಗಳನ್ನು ತಯಾರಿಸಲು ಒಂದು ಎಣ್ಣೆಯನ್ನು ಅನೇಕ ಬಾರಿ ಬಳಸಲಾಗುತ್ತದೆ. ಇದರಲ್ಲಿ ಅಧಿಕ ಕೊಬ್ಬು ಮತ್ತು ಕ್ಯಾನ್ಸರ್ ಉಂಟುಮಾಡುವ ಅಂಶಗಳು ಹೆಚ್ಚಾಗುತ್ತವೆ. ಹೃದಯಾಘಾತವನ್ನು ತಪ್ಪಿಸಲು ಈ ಆಹಾರಗಳಿಂದ ದೂರವಿರಬೇಕು. ಯಕೃತ್ತು, ಮೂತ್ರಪಿಂಡ, ಗೋಮಾಂಸ ಮುಂತಾದ ಮಾಂಸವನ್ನು ಸೇವಿಸಿದರೆ ಮೂತ್ರಪಿಂಡದ ಕಲ್ಲುಗಳು ಸಂಭವಿಸಬಹುದು. ಏಕೆಂದರೆ ಈ ಆಹಾರಗಳು ಯೂರಿಕ್ ಆಮ್ಲವನ್ನು ಹೆಚ್ಚಿಸುವ ಪ್ಯೂರಿನ್ ಅನ್ನು ಹೊಂದಿರುತ್ತವೆ. ವೈನ್ & ಬಿಯರ್ ಕುಡಿದರೆ ಪ್ಯೂರಿನ್ ದೇಹವನ್ನು ಪ್ರವೇಶಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ, ಬಿಜೆಪಿ ನಾಯಕ ಸಿಟಿ ರವಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತಂಗಡಗಿಯನ್ನು ಸಂಪುಟದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ ಎಂದು ಹೇಳಬೇಕು ಅಂದುಕೊಂಡಿದ್ದೆ. ಆದರೆ, ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ. ಇಂಥವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ. ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ್ದ ತಂಗಡಗಿ, ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದರು. ಪ್ರಧಾನಿ ನರೇಂದ್ರ…
ಮೈಸೂರು: ಮನೆ ಯಜಮಾನನನ್ನು, ಕಳೆದುಕೊಂಡ ನೋವಲ್ಲಿ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೀತಾ (40), ಮಗಳು ಪೂರ್ಣಿಮ (15) ಎಂದು ಗುರುತಿಸಲಾಗಿದೆ. ಹಲವು ದಿನಗಳ ಹಿಂದೆ ಗೀತಾ ಅವರ ಪತಿ ರಾಜನಾಯಕ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತಿಯ ಅಗಲಿಕೆಯಿಂದ ಪತ್ನಿ ಗೀತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತ ತಾಯಿ ಸಾವಿನ ಸುದ್ದಿ ಕೇಳಿ ಮಗಳು ಪೂರ್ಣಿಮಾ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸರಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ತಮಿಳುನಾಡು ಮೂಲದ ರಮೇಶ್ (67) ಮೃತ ವ್ಯಕ್ತಿಯಾಗಿದ್ದಾರೆ. ಪಟಾಕಿಗಳ ತುಂಬುವಾಗ ಸ್ಫೋಟ ಸಂಭವಿಸಿದ್ದು, ಸ್ಫೋಟದಿಂದಾಗಿ ರಮೇಶ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗಲಿಂಗ ಹಾಗೂ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಘಟನೆ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296