Author: admin

ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ ಮಗನೇ ತಂದೆಯನ್ನು ಚಾಕುವಿನಿಂದ ಚುಚ್ಚು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (51)  ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ ಪುತ್ರ ರಂಜನ್ (21) ಕೊಲೆ ಗೈದ ಆರೋಪಿಯಾಗಿದ್ದಾನೆ. ಆರೋಪಿ ರಂಜನ್ ಆ.16ರ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿಕೊಂಡು ಮನೆ ಬಂದಿದ್ದ. ಈ ವೇಳೆ ತಂದೆ ತಾಯಿಯ ನಡುವೆ ಜಗಳ ನಡೆಯುತ್ತಿತ್ತು. ಜಗಳ ಬಿಡಿಸಲು ಹೋದ ರಂಜನ್ ತಂದೆಗೆ ಹಿಂದಿನಿಂದ ಚಾಕುವಿನಿಂದ ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಚುಚ್ಚಿದ ಗಾಯಕ್ಕೆ ಅರಿಶಿಣ ಪುಡಿ ಹಚ್ಚಿ ಮಲಗಿಸಿದ್ದರು. ರಾತ್ರಿ ತೀವ್ರ ರಕ್ತಸ್ರಾವದಿಂದ ಮಂಜುನಾಥ್ ಮೃತಪಟ್ಟಿದ್ದರು. ಬೆಳಗ್ಗೆ ತಂದೆ ಸಾವನ್ನಪ್ಪಿರುವ ವಿಚಾರ ತಿಳಿದ ಪುತ್ರ ಜಗಳ ಬಿಡಿಸುವ ವೇಳೆ ಚಾಕು ತಾಗಿ ಗಾಯವಾಗಿದೆ ಎಂದು ಕೆಲವರ ಬಳಿ ಹೇಳಿದರೆ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಅಂತ ಇನ್ನು ಕೆಲವರ ಬಳಿ ಹೇಳಿಕೊಂಡಿದ್ದ. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು ಪುತ್ರನನ್ನು ವಿಚಾರಣೆ ನಡೆಸಿದ…

Read More

ಬೀದರ್: ಜಿಲ್ಲೆಯ ಔರಾದ –ಕಮಲನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದ ಬಹುತೇಕ ಜಮೀನುಗಳಿಗೆ ನೀರು ನುಗ್ಗಿದೆ. ಔರಾದ್ ಕಮಲನಗರ, ಠಾಣಕುಶನೂರ್, ಬೆಳಕುಣಿ (ಚೌದ್ರಿ) ದಾಬಕಾ, ಸಂತಪುರ, ವಡಗಾಂವ್, ಸೇರಿದಂತೆ ಮತ್ತಿತರ ಗ್ರಾಮಗಳ ಜಮೀನುಗಳು ಜಲಾವೃತವಾಗಿವೆ ಎಂದು ರೈತರು ಅಳಲು ತೋಡಿಕೊಂಡರು. ಜಮೀನುಗಳಲ್ಲಿ ನೀರು ನಿಂತ ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಲ್ಲಿ ಹತ್ತಿ, ಉದ್ದು ಹೆಸರು ಮತ್ತು ತೊಗರಿ ಸೋಯಾ, ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಒತ್ತಾಯಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಹಾಸನ: ಭಾರೀ ಬಾಳೆ ಮಳೆಯ ಹಿನ್ನೆಲೆ ಶಾಲೆಯ ಗೋಡೆಯೊಂದು ಕುಸಿದು ಬಿದ್ದಿರುವ ಘಟನೆ ಸಕಲೇಶಪುರದ ಕಡಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿತ್ತು. ಆ.18ರಂದು ಶಾಲೆಗೆ ರಜೆ ಕೂಡ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಶಾಲೆಯ ಗೋಡೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ನೀಡಿದ್ದರಿಂದಾಗಿ ಭಾರೀ ಅನಾಹುತವವೊಂದು ತಪ್ಪಿದಂತಾಗಿದೆ. ಶಾಲೆ ಬೀಳುವ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಕೇಳಿ ಬಂದಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತಿಪಟೂರು: ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಮೇರೆಗೆ ಎಸ್ ಐಟಿ ನೇತೃತ್ವದಲ್ಲಿ ನಡೆಯುತ್ತಿರುವ ಶೋಧ ಕಾರ್ಯ ಬೆಟ್ಟ  ಅಗೆದು ಇಲಿ ಹಿಡಿದರು ಎಂಬಂತಾಗಿದ್ದು, ಸರ್ಕಾರದ ಲಕ್ಷಾಂತರ ಹಣ ಸುಮ್ಮನೆ ಖರ್ಚಾಗಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ನಿವೃತ್ತ ಎಸಿಪಿ ಹಾಗೂ ತಿಪಟೂರು ಹೋರಾಟಗಾರ ಸಮಿತಿಯ ಲೋಕೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ಎಸ್ ಐಟಿ ರಚಿಸಿ ಅದಕ್ಕೆ ಡಿಜಿ ನೇಮಕ ಮಾಡಿ ಅನವಶ್ಯಕವಾಗಿ ದೊಡ್ಡ ತಂಡವನ್ನೇ ರಚಿಸಲಾಗಿದೆ, ಇದರಿಂದ ಸ್ಥಳೀಯ ಭಾಗದ ಪೊಲೀಸರ ನಂಬಿಕೆ ಕಡಿಮೆ ಮಾಡಿದಂತಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಂದಲೇ ತನಿಖೆ ಮಾಡಿಸಬಹುದಿತ್ತು, ಅದು ಬಿಟ್ಟು ಇಷ್ಟೊಂದು ಹಣ ಖರ್ಚು ಮಾಡಿ ಬೇರೆ ಅಧಿಕಾರಿಗಳನ್ನು ನೇಮಿಸಿ ಸಮಯ ವ್ಯರ್ಥ ಮಾಡುವ ಅವಶ್ಯಕತೆ ಇರಲಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದು, ಸಂಪುಟದ ಸದಸ್ಯರಿಗೆ ಈ ವಿಚಾರವೇ ಗೊತ್ತಿಲ್ಲ ಎಂದು ತಿಳಿಸಿದರು. ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜನರ ಗಮನ ಬೇರೆಡೆ ಸೆಳೆಯಲು ಧರ್ಮಸ್ಥಳ…

Read More

ಕೊರಟಗೆರೆ : ಜನ ಮೆಚ್ಚಿದ ನಾಯಕ, ಆಧುನಿಕ ಭಗೀರಥ ಮಾಜಿ ಶಾಸಕ ಪಿ.ಆರ್.ಸುಧಾಕರ್‌ ಲಾಲ್‌ರವರ 58ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸುಧಾಕರ್‌ ಲಾಲ್ ಅಭಿಮಾನಿ ಬಳಗ ಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ, ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದ್ದು, ಮಾಜಿ ಶಾಸಕ ಸುಧಾಕರ್‌ ಲಾಲ್ ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು. ಮಾಜಿ ಶಾಸಕ ಪಿ.ಆರ್.ಸುಧಾಕರ್‌ ಲಾಲ್ ಶ್ರೀಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅಪ್ಪಾಜಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಣ್ಣನವರ, ವಿ.ಸೋಮಣ್ಣ, ಹಾಗೂ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಬಡವರ ಕೆಲಸಗಳನ್ನು ಮುಂದುವರೆಸಿಕೊಂಡು ಬಂದಿದ್ದೇನೆ, ಇಂದು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳ ಬಳಗವು ನನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿ ಅಭಿಮಾನ ತೋರಿದ್ದು, ಪ್ರತಿಯೊಬ್ಬರ ಪ್ರೀತಿಗೂ ಅಭಾರಿಯಾಗಿರುತ್ತೇನೆ ಎಂದು ಹೇಳಿದರು. ಜೆಡಿಎಸ್ ಪಕ್ಷದ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಮಾಜಿ ಶಾಸಕ ಸುಧಾಕರ್‌ ಲಾಲ್…

Read More

ಕೊರಟಗೆರೆ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ  ಆಂಜನೇಯಸ್ವಾಮಿ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮದ್ಯೆ ಸಮನ್ವಯತೆ ಇರಬೇಕು ಆಗ ಮಾತ್ರ ದೇಶ ಮತ್ತು ರಾಜ್ಯಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದರು. ಈ ದೇಶಕ್ಕೆ ನರೇಂದ್ರ ಮೋದಿಯವರು ಪ್ರಧಾನಿಯಾಗದ್ದಿದ್ದರೆ ದೇಶ ಪರಿಸ್ಥಿತಿ ಈಗ ಏನು ಆಗುತ್ತಿತೋ ಗೊತ್ತಿಲ್ಲ, ಅಪರೇಷನ್ ಸಿಂಧೂರ ಈ ದೇಶದ ಸ್ವಾಭಿಮಾನ ಪ್ರತೀಕ. ಸ್ವಾತಂತ್ರ್ಯದ ದಿನದಂದು ದೇಶದಲ್ಲಿ ಗ್ರಾ.ಪಂ ಅಧ್ಯಕ್ಷರನ್ನು ಕರಸಿ ಗೌರವಿಸುವ ಕಾರ್ಯವನ್ನು 10 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ದೇಶದ ಜನರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗೆ ೫ ಲಕ್ಷ ಕೋಟಿ ನೀಡಿದ್ದಾರೆ. ಇತಂಹ ಪ್ರದಾನಿ ವಿಶ್ವದಲ್ಲೇ ವಿರಳ ಎಂದರು. ಡಾ.ಜಿ.ಪರಮೇಶ್ವರ ಬಗ್ಗೆ ಮೆಚ್ಚುಗೆ: ಕೇಂದ್ರ ಸಚಿವ ಸೋಮಣ್ಣ ಗೃಹ ಸಚಿವ ಡಾ.ಜಿ.ಪರಮೇಶ್ವರರನ್ನು ಬಿಜೆಪಿ ಮತ್ತು…

Read More

ಕೋಲಾರ: ತಲ್ವಾರ್‌ ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ ತಮ್ಮ ಮುನಿರಾಜು (40) ಕೊಲೆ ಮಾಡಿ ಬಳಿಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಬೆಳಗ್ಗೆ 6:30ರ ಸುಮಾರಿಗೆ ಕುರಿಗಳಿಗೆ ಮೇವು ನೀಡಲು ಹೋದ ಅಣ್ಣನನ್ನು ತಲ್ವಾರ್‌ನಿಂದ ಕೊಚ್ಚಿ ತಮ್ಮ ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ರಾಮಾಪುರದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಣ್ಣ ಚಲಪತಿ ಜಮೀನಿನಲ್ಲಿ ಸರಿಯಾಗಿ ಭಾಗ ಕೊಡದ ಹಿನ್ನೆಲೆ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಹಾಗೂ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೀದರ್: ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು ಔರಾದ ತಾಲೂಕಿನ ಬೊಂತಿ ತಾಂಡಾ ಸಮೀಪದ ಸೇತುವೆ ಮಳೆ ಕೊಚ್ಚಿ ಹೋಗಿರುವ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಔರಾದ್ ತಹಶೀಲ್ದಾರ್ ಮಹೇಶ್ ಪಾಟೀಲ್, ಬೀದರ್ ಎಸಿ ಶಕೀಲ್, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಸೇರಿದಂತೆ ಗ್ರಾಮಸ್ಥರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್‌ ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದರು. ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ತುಂಗಭದ್ರಾ ಜಲಾಶಯ ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು. ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ…

Read More

ಪಾವಗಡ: ಕರ್ನಾಟಕ ರಾಜ್ಯ ದಕ್ಷಿಣ ಭಾರತದ ಐತಿಹಾಸಿಕ ಪವಿತ್ರ ಪುಣ್ಯಭೂಮಿ ನಿಡಗಲ್ಲು ದುರ್ಗದ ಶ್ರೀರಾಮತೀರ್ಥ ಬಳಿ ನಿಡಗಲ್ಲು ಉತ್ಸವ ಕಾರ್ಯಕ್ರಮ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ ನಿಡಗಲ್ಲು ಹಾಗೂ ದೇವರಾಯನರೋಪ್ಪ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಿಡಗಲ್ ದುರ್ಗದ ಅಭಿಮಾನಿಗಳ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ 2025ರ  ನಿಡಗಲ್ಲು ಕಲಾವಿದರ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಐತಿಹಾಸಿಕ ಹಿನ್ನೆಲೆ ಉಳ್ಳ ಪವಿತ್ರ ಪುಣ್ಯ ಭೂಮಿ. ರಾಜ ಮಹಾರಾಜರು ಪಾಳೆಗಾರರು ಆಳ್ವಿಕೆ ನಡೆಸಿದ ಪವಿತ್ರ ನೆಲ. ಸಾಧು ಸಂತರು ತಪೋಗೈದ ಪುಣ್ಯಭೂಮಿ ಇಂತಹ ಐತಿಹಾಸಿಕ ನಿಡಗಲ್ ದುರ್ಗದ ಉತ್ಸವವನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ವಾರದಲ್ಲಿ ಆಚರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಉತ್ಸವ ಸಮಿತಿ ಸಂಚಾಲಕರಾದ ಪಾಳೇಗಾರ್ ಲೋಕೇಶ್ ಮಾತನಾಡಿ, ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ವಿವಿಧ ಸಂಘ–ಸಂಸ್ಥೆಗಳೊಂದಿಗೆ ನಿಡಗಲ್ಲು ಉತ್ಸವವನ್ನ ಆಚರಿಸುತ್ತಿದ್ದು ಪ್ರತಿ ವರ್ಷವೂ ಎಲ್ಲ ಜನಪ್ರತಿನಿಧಿಗಳು…

Read More