Author: admin

ಬೆಳಗಾವಿ: ಜಗದೀಶ್​​ ಶೆಟ್ಟರ್‌ ಗೆ ಮೊದಲು ಬಾಲ ಕಟ್ ಮಾಡಿದರು. ಈಗೀಗ ಜಗದೀಶ್​ ಶೆಟ್ಟರ್​ ಬಾಲ ಮತ್ತೆ ಚಿಗುರುತ್ತಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​​ ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು. ಬಿ.ಎಸ್.​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದರು. ಆದರೆ, K.S. ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ.ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆಯ ತಂತ್ರ ಪ್ರತಿತಂತ್ರಗಳನ್ನು ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನು ಜನರಿಗೆ ತಲುಪಿಸಬೇಕು. ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿಗಳಿಗೆ 55 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಕಲಬುರಗಿ-ಸೇಡಂ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಮುಖಂಡ ಮಲ್ಲಿನಾಥ ಸಿಂಘೆ (35) ಅವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಶಹಾಬಾದ್‌ನವರಾದ ಮಲ್ಲಿನಾಥ ಅವರು ಕಲಬುರಗಿಯಲ್ಲಿ ನೆಲೆಸಿದ್ದರು. ವಾಡಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್‌ ಮೇಲಿಂದ ಕೆಳಕ್ಕೆ ಬಿದ್ದಿದ್ದು, ಅಪಘಾತದ ರಭಸಕ್ಕೆ ತಲೆಯ ಭಾಗಕ್ಕೆ ತೀವ್ರ ಹಾನಿಯಾಗಿದ್ದು, ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಾಡಬೂಳ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು:  ಮಾರ್ಚ್ 31 ರೊಳಗಳೇ ಎಲ್ಲ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಏಪ್ರಿಲ್ 1 ರಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು: •ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು: *ಮತದಾರರ ಗುರುತಿನ ಚೀಟಿ *ಆಧಾರ್ ಕಾರ್ಡ್ *ವಯಸ್ಸಿನ…

Read More

ಇಂದೋರ್: ಇಂದು ಮುಂಜಾನೆ 5.50ರ ಸುಮಾರಿಗೆ ದೇಗುಲದ ಗರ್ಭಗುಡಿಯಲ್ಲಿ ಬೆಂಕಿ ಅವಘಢ ಸಂಭವಿಸಿ, ಅರ್ಚಕರು ಹಾಗೂ ಸಹಾಯಕರು ಸೇರಿ ಒಟ್ಟು 14 ಮಂದಿ ಗಾಯಗೊಂಡಿದ್ದಾರೆ. ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ನಡೆದ ಬೆಂಕಿ ಅವಘಡ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಉಜ್ಜಯಿನಿಯ ಮಹಾಕಾಳ ದೇಗುಲದಲ್ಲಿ ನಡೆದ ಘಟನೆಯು ನೋವುಂಟು ಮಾಡಿದೆ. ಅವಘಢದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆ ಆಶಿಸುವೆ. ರಾಜ್ಯ ಸರ್ಕಾರದ ಮೇಲುಸ್ತುವಾರಿಯಲ್ಲಿ ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವುಗಳನ್ನು ನೀಡುವ ಕಾರ್ಯದಲ್ಲಿ ನಿರತವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ‘ಘಟನೆಯಲ್ಲಿ ಗಾಯಗೊಂಡ 14 ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಕರೆ ಮಾಡಿ ಗಾಯಗೊಂಡಿರುವವರ ವಿವರಗಳನ್ನು ಕೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಫೋನ್ ಕರೆ ಮಾಡಿ ವಿಚಾರಿಸಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.’ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಲಂಡನ್‌: ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಲಂಡನ್‌ ನಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟ ಘಟನೆ ನಡೆದಿದೆ. ಚೇಸ್ತಾ ಕೊಚ್ಚಾರ (36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಚೇಸ್ತಾ ಕೊಚ್ಚಾರ ಅವರು ಗುರುಗ್ರಾಮ ಮೂಲದವರು. ‘ಲಂಡನ್‌ ಸ್ಕೂಲ್ ಆಫ್ ಎಕಾನಾಮಿಕ್ಸ್‌’ನಲ್ಲಿ ಪಿಎಚ್‌.ಡಿ. ಅಧ್ಯಯನ ಮಾಡುತ್ತಿದ್ದ ಚೇಸ್ತಾ ಕೊಚ್ಚಾರ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಕಾಲೇಜಿನಿಂದ ಸೈಕಲ್‌ ನಲ್ಲಿ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ಚೇಸ್ತಾ ಅವರ ಮೇಲೆ ಲಾರಿಯೊಂದು ಹರಿದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸನಿಹದ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಂಡನ್ ಮೆಟ್ರೊಪಾಲಿಟನ್ ಪೊಲೀಸರು, ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ತನಿಖೆಗೆ ಸಹಕರಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಚೇಸ್ತಾ ಕೊಚ್ಚಾರ ಅವರು ಗುರುಗ್ರಾಮ ಮೂಲದವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್ ‍ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ನುಡಿದರು. ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ತಿಳಿಸಿದರು. ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ ಎಂದು…

Read More

ವೀಳ್ಯದೆಲೆ ಜೊತೆ ತುಳಸಿ ಬೀಜ ತಿಂದ್ರೆ ಹಲವು ಆರೋಗ್ಯ ಪ್ರಯೋಜನಗಳು: ವೀಳ್ಯದೆಲೆ ಮತ್ತು ತುಳಸಿ ಬೀಜಗಳನ್ನ ಒಟ್ಟಿಗೆ ಸೇವಿಸುವುದರಿಂದ ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದನ್ನುಸೇವಿಸುದರಿಂದ ವಸಡು ಉರಿಯೂತ ಮತ್ತು ಹಲ್ಲುಗಳ ಹಳದಿ ಬಣ್ಣದಿಂದ ಪರಿಹಾರವನ್ನು ನೀಡುತ್ತದೆ. ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಗಳು ನಿವಾರಣೆಯಾಗುತ್ತವೆ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬಾಳೆಹಣ್ಣು – ತುಪ್ಪ ಜೊತೆಗೆ ತಿಂದರೆ ಇಷ್ಟೆಲ್ಲಾ ಪ್ರಯೋಜನ…!! ಬಾಳೆಹಣ್ಣು ಮತ್ತು ತುಪ್ಪ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಪದಾರ್ಥಗಳಾಗಿವೆ. ಎರಡರಲ್ಲೂ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಳು ಸಿಗುತ್ತವೆ. ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪ್ರೊಟೀನ್, ಫೈಬರ್ ಮತ್ತು ವಿಟಮಿನ್ ಸಿಗುತ್ತದೆ. ದೈಹಿಕ ದೌರ್ಬಲ್ಯಗಳನ್ನೂ ದೂರ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಪ್ಪ ತುಂಬಾ ಉಪಯುಕ್ತವಾಗಿದೆ. ವೈರಸ್, ಜ್ವರ, ಕೆಮ್ಮು, ಶೀತ ಇತ್ಯಾದಿಗಳಿಂದ ರಕ್ಷಣೆ ನೀಡುತ್ತದೆ. ನಮ್ಮತುಮಕೂರಿನ…

Read More

ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧದಲ್ಲಿ ಬದಲಾವಣೆಯಾಗಲಿದೆ ಎಂದು, ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಸುಳಿವು ನೀಡಿದ್ದಾರೆ. ಆಗಸ್ಟ್ 2019 ರಿಂದ ಸ್ಥಗಿತಗೊಂಡಿರುವ ಭಾರತದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮರುಸ್ಥಾಪಿಸಲು ಪರಿಗಣಿಸುವುದಾಗಿ ಪಾಕಿಸ್ತಾನ ಹೇಳಿದೆ. ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವ ಪಾಕಿಸ್ತಾನವು ಮಂದಗತಿಯ ಆರ್ಥಿಕ ಬೆಳವಣಿಗೆ ಮತ್ತು ಹೊಸ ಹೂಡಿಕೆಗಳ ಕೊರತೆಯಿಂದಾಗಿ ವಿದೇಶಿ ಸಾಲಗಳನ್ನು ಮರುಪಾವತಿಸಲು ಹೆಣಗಾಡುತ್ತಿದೆ. ಬ್ರಸೆಲ್ಸ್‌ ನಲ್ಲಿ ನಡೆದ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಲಂಡನ್ ‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಶಾದ್, ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು. ಭಾರತದೊಂದಿಗೆ ವ್ಯಾಪಾರ ವ್ಯವಹಾರಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಪಾಕಿಸ್ತಾನ್ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಇತ್ತೀಚೆಗೆ ನಡೆದ ಪಾಕಿಸ್ತಾನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಶಹಬಾಜ್ ಷರೀಫ್ ಅವರನ್ನು ಅಭಿನಂದಿಸಿದರು. ಇದು ಪಾಕಿಸ್ತಾನ ಮತ್ತು ಭಾರತ ನಡುವಿನ ವ್ಯಾಪಾರ ಸಂಬಂಧಗಳಲ್ಲಿ ಸುಧಾರಣೆಯನ್ನು ಸೂಚಿಸುತ್ತದೆ.…

Read More

ಭಾರತದಲ್ಲಿ ಜಾಸ್ತಿ ಮನೆ ಕೆಲಸ ಮಾಡುವವರು ಯಾರು ಗಂಡಸರಾ ಹೆಂಗಸರಾ ಅಂತ ಯಾರನ್ನಾದರೂ ಕೇಳಿದರೆ ಥಟ್ಟನೆ ಸರಿ ಉತ್ತರ ಬಂದೇ ಬರುತ್ತೆ. ಅದು ಹೆಂಗಸರು ಅಂತ. ಅದೇ ಪ್ರಶ್ನೆಯನ್ನು ಸ್ವಲ್ಪ ವಿಸ್ತರಿಸಿ ಕೇಳಿ. “ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತೀಯ ಮಹಿಳೆಯರು ಪುರುಷರಿಗಿಂತ ಎಷ್ಟು ಪಟ್ಟು ಹೆಚ್ಚು, ಈ ವೇತನವಿಲ್ಲದ ಮನೆಕೆಲಸ ಹಾಗೂ ಆರೈಕೆ ಕೆಲಸಗಳನ್ನು ಮಾಡುತ್ತಾರೆಂದು? ರೆಡಿಮೇಡ್ ಉತ್ತರ ನಿಮ್ಮಲ್ಲಿ ಇಲ್ಲ ಅಲ್ಲವೇ? ಈಗ ಅದಕ್ಕಾಗಿ ಉತ್ತರ ಹುಡುಕುತ್ತಾ ಅಧ್ಯಯನವೊಂದು ನಡೆದಿದೆ. ಆ ಸ್ಟಡಿ, ಇಂಟರೆಸ್ಟಿಂಗ್ ಮಾಹಿತಿಯನ್ನು ಹೊರಹಾಕಿದೆ. ಭಾರತದ ಮಹಿಳೆಯರು ವಿಶ್ವದ ಇತರ ದೇಶಗಳಿಗಿಂತ ಬರೋಬ್ಬರಿ 10 ಪಟ್ಟು ಹೆಚ್ಚು ಮನೆ ಕೆಲಸ ಮಾಡುತ್ತಾರಂತೆ! ಇದು ಮುಂಬೈನಲ್ಲಿರುವ ಇಂಟರ್ನ್ಯಾಶನಲ್ ಇನ್ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್) ಮತ್ತು ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್ಎಸ್) ಜಂಟಿಯಾಗಿ ನಡೆಸಿದ ಸಂಶೋಧನೆಯಾಗಿದ್ದು, ಅಲ್ಲಿ ನಮ್ಮ ಭಾರತೀಯ ಮಹಿಳೆಯರ ಮನೆಕೆಲಸದ ತೀವ್ರತೆಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮನೆ ಕೆಲಸದಲ್ಲೂ ವಿಶ್ವದಲ್ಲಿ ನಮ್ಮ ಮಹಿಳೆಯರೇ…

Read More

ವಿಶ್ವದ ಮೊದಲ ಫ್ಲೈಯಿಂಗ್ ಟ್ಯಾಕ್ಸಿ ಸೇವೆಯನ್ನು ಆರಂಭಿಸಲು ಕಾಲ ಸನ್ನಿಹಿತವಾಗಿದೆ. ಜಟಕಾ ಗಾಡಿ ಆಯ್ತು, ತದನಂತರ ಆಟೋರಿಕ್ಷಾ ಬಂತು. ಮುಂದೆ ಓಲಾ ಉಬರ್ ಕಾರುಗಳ ಅಬ್ಬರ. ಈಗ ಅದೂ ಹಳೆಯದಾಗಿದೆ. ಇನ್ಮುಂದೆ ಏರ್ ಟ್ಯಾಕ್ಸಿ ಬರಲಿದೆ. ಯಾವುದೇ ಸ್ಟಾಪ್ ಇಲ್ಲ, ಸಿಗ್ನಲ್ ಟ್ರಾಫಿಕ್ ಸಮಸ್ಯೆ ಇರಲ್ಲ. ಕೆಲವೇ ನಿಮಿಷಗಳ ಪ್ರಯಾಣದಲ್ಲಿ ಗಮ್ಯವನ್ನು ಸುರಕ್ಷಿತವಾಗಿ ಸೇರಿಕೊಳ್ಳಬಹುದು. ಎಲ್ಲ ಅಂದುಕೊಂಡಂತೆ 2025ರ ವೇಳೆ ಏರ್ ಟ್ಯಾಕ್ಸಿ ಸೇವೆ ಆರಂಭವಾಗುತ್ತದೆ. ಆದರೆ ಇದು ಶುರುವಾಗುತ್ತಿರುವುದು ಭಾರತದಲ್ಲಿ ಅಲ್ಲ, ಬದಲಿಗೆ ತೈಲ ಸಂಪತ್ ಭರಿತ ರಾಷ್ಟ್ರ ದುಬೈನಲ್ಲಿ. ದುಬೈನಲ್ಲಿ, ಅಮೆರಿಕಾ ಮೂಲದ ಜಾಬಿ ಏವಿಷೇಯನ್ ತನ್ನ ಸ್ವದೇಶಕ್ಕಿಂತ ಮೊದಲು ಅರಬ್ ರಾಷ್ಟ್ರದಲ್ಲಿ ಫ್ಲೈಯಿಂಗ್ ಟ್ಯಾಕ್ಸಿಯನ್ನು ಹಾರಿಸಲು ಎಲ್ಲಾ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಗಲ್ಫ್ ಎಮಿರೇಟ್‌ ನೊಂದಿಗೆ ಈ ವರ್ಷದ ಆರಂಭದಲ್ಲಿ ಶುರುವಾದ ಏರ್ ಟ್ಯಾಕ್ಸಿಯ ಕೆಲಸವು ವೇಗವಾಗಿ ಮುಂದುವರಿದಿದೆ ಎಂದು, ಜಾಬಿ ಏವಿಯೇಷನ್ ಕಾರ್ಯಾಚರಣೆಗಳ ಅಧ್ಯಕ್ಷ ಬೊನ್ನಿ ಸಿಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಮೊದಲು ನಾವು ದುಬೈನಲ್ಲಿ ಈ…

Read More