Subscribe to Updates
Get the latest creative news from FooBar about art, design and business.
- ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
- ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
- ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
- ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
- ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
- ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
- ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
- ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
Author: admin
ಮೋದಿ ಹೆಸರನ್ನು ಹಾಕಿ ಕಾಗದ ಪ್ರಿಂಟ್ ಆಗಿರೋದ್ರ ಬಗೆಗಿನ ಸುದ್ದಿ ಈ ಹಿಂದೆಯೂ ವೈರಲ್ ಆಗಿತ್ತು. ಇದೀಗ ಈ ವಿಭಿನ್ನ ಮದುವೆ ಕಾಗದ ಕೂಡ ವೈರಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಪಠಾಣ್ ಚೆರುವಿನ ವ್ಯಕ್ತಿಯೊಬ್ಬರು ತಮ್ಮ ಮಗನ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸಿದ, ಮದುವೆ ಕಾರ್ಡ್ ಈಗ ವೈರಲ್ ಆಗಿದೆ. ನಂದಿಕಾಂತಿ ನರಸಿಂಹ ಪಟಾನ್ ಚೆರುವಿನಲ್ಲಿ ಬಾಂಗ್ ಡೀಲರ್. ಇವರು ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿ. ನರಸಿಂಹ ಅವರ ಪುತ್ರ ಸಾಯಿಕುಮಾರ್ ಮದುವೆ ಪತ್ರಿಕೆಗಳಲ್ಲಿ ನರೇಂದ್ರ ಮೋದಿ ಅವರ ಚಿತ್ರ ಮುದ್ರಿಸಿ, ‘ನನ್ನ ಮದುವೆಗೆ ನಿಮ್ಮ ಉಡುಗೊರೆ ನರೇಂದ್ರ ಮೋದಿ ಅವರಿಗೆ ಮತ ನೀಡಿ’ ಎಂದು ಮೋದಿ ಅವರ ಫೋಟೋವನ್ನು ಮುದ್ರಿಸಿ ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ಕುಟುಂಬಕ್ಕೆ ಇರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಮದುವೆಗೆ ಬರುವವರು ವಿಶೇಷ ಉಡುಗೊರೆಗಳನ್ನು ನೀಡುವ ಅಗತ್ಯವಿಲ್ಲ, ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಹೇಳಿದ್ದಾರೆ. ಈ ಮದುವೆಯ ಪತ್ರಿಕೆಯನ್ನು ಬಿಜೆಪಿ ಪಕ್ಷದ ನಾಯಕರು ನರೇಂದ್ರ ಮೋದಿ…
ಯೂಟ್ಯೂಬ್ ನಿಂದ ಕಾಶ್ಮೀರ್ ನಲ್ಲಿ ಬೆಳೆಯುವ ಸೇಬನ್ನು ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಬೆಳೆದು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಂದಹಾಗೆ ಕಾಶ್ಮಿರದ ಚುಮು ಚುಮು ಚಳಿ ಮಳೆಯಂತೆ ಬೀಳುವ ಮಂಜಿನ ನಡುವೆ ಬೆಳೆಯ ಬೇಕಾದ ಸೇಬನ್ನು ಸಿಲಿಕಾನ್ ಸಿಟಿ ಹೊರವಲಯದ ಹೊಸಕೋಟೆ ಬಳಿ ಬೆಳೆದಿದ್ದು, ರುಚಿಯಲ್ಲೂ ಕಾಶ್ಮೀರಿ ಸೇಬುವಿನಂತೆ ಎಲ್ಲರ ಮನಸೆಳೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿಯ ಸಿದ್ದೇನಹಳ್ಳಿ ಗ್ರಾಮದ ರೈತ ಬಸವರಾಜು, ಏನಾದ್ರು ವಿಭಿನ್ನವಾಗಿ ಬೆಳೆ ಬೆಳೆದು ಎಲ್ಲರಿಗೂ ಮಾದರಿಯಾಗಬೇಕು ಅಂತಿರುವಾಗಲೇ ಸೇಬು ಬೆಳೆ ಬೆಳೆಯುವ ವೀಡಿಯೋವನ್ನ ಯೂಟ್ಯೂಬ್ ನಲ್ಲಿ ನೋಡಿದ್ದರಂತೆ. ಹೀಗಾಗಿ ಯೂಟ್ಯೂಬ್ ನಲ್ಲಿ ವೀಡಿಯೋ ನೋಡಿ ಬಿಜಾಪುರದ ರೈತರನ್ನ ಸಂಪರ್ಕಿಸಿದ ರೈತ ಬಸವರಾಜು ನಂತರ ಬಿಜಾಪುರದಿಂದ 450 ಗಿಡಗಳನ್ನ ತಂದು ಇಲ್ಲಿ ನಾಟಿ ಮಾಡಿದ್ದಾರೆ. ಜೊತೆಗೆ ಸೇಬು ಗಿಡಗಳಿಗೆ ಯಾವುದೇ ರಾಸಾಯನಿಕ ಔಷದಿಗಳನ್ನ ಬಳಸದೆ ಕಪ್ಪು ಮಣ್ಣು, ಹೊಂಗೆ ಹಿಂಡಿ ಮತ್ತು ಬೇವಿನ ಹಿಂಡಿಯನ್ನ ಹಾಕಿ ಬೆಳೆ ಬೆಳೆದಿದ್ದು ಇದೀಗ ಭರ್ಜರಿ ಸೇಬು ಬೆಳೆ…
ಇದು ಇತಿಹಾಸದಲ್ಲಿಯೇ ಮೊದಲ ಪ್ರಕರಣವಾಗಿರಲಿದ್ದು, ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ದ ಸರ್ವೋಚ್ಚ ನ್ಯಾಯಾಲದ ಮೊರೆ ಹೋಗಿದೆ ಎಂದು ವರದಿ ತಿಳಿಸಿದೆ. ಕಳೆದ ನವೆಂಬರ್ ತಿಂಗಳಲ್ಲಿ ರಾಜ್ಯಪಾಲರು, ಮಸೂದೆಗಳನ್ನು ಅಂಗೀಕರಿಸದೇ ಬಾಕಿಯಿಟ್ಟು, ಸರ್ಕಾರದ ವಿರುದ್ದ ಪದೇಪದೇ ಗದಾಪ್ರಹಾರ ನಡೆಸುತ್ತಿದ್ದಾರೆಂದು ಕೇರಳ ಸರ್ಕಾರ, ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈಗ, ಅದೇ ರೀತಿ ರಾಷ್ಟ್ರಪತಿಗಳ ವಿರುದ್ದ ಕೇರಳ ಸರ್ಕಾರ ಸುಪ್ರೀಂ ಮೆಟ್ಟಲೇರಿದೆ. ಇತ್ತೀಚೆಗೆ ಕೇರಳದ ಪಿಣರಾಯಿ ವಿಜಯನ್ ಸರ್ಕಾರ, ವಿಧಾನಸಭೆಯಲ್ಲಿ ನಾಲ್ಕು ಮಸೂದೆಗಳನ್ನು ಮಂಡಿಸಿ, ಅಂಗೀಕರಿಸಿ ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದುವರೆಗೂ ರಾಷ್ಟ್ರಪತಿಗಳಿಂದ ಅಂಕಿತ ಬಿದ್ದಿರಲಿಲ್ಲ. ಇದರಿಂದಾಗಿ, ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮಸೂದೆ ತ್ವರಿತ ವಿಲೇವಾರಿಗೆ ಅರ್ಜಿ ಸಲ್ಲಿಸಿದೆ. ಕೇರಳ ಸರ್ಕಾದ ಪರವಾಗಿ ಹಿರಿಯ ವಕೀಲ ಸಿ.ಕೆ. ಶಶಿ ವಾದ ಮಂಡಿಸಲಿದ್ದಾರೆ. ಕೇರಳ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳದ ರಾಜ್ಯಪಾಲ ಆಸಿಫ್ ಮೊಹಮ್ಮದ್ ಖಾನ್, ರಾಜ್ಯಪಾಲರ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ. ವಿಶ್ವವಿದ್ಯಾಲಯ ಕಾನೂನುಗಳ…
ಕರ್ನಾಟಕದ ಮತ್ತು ತಮಿಳುನಾಡಿನ ಕಾಡುಗಳ್ಳ, ಆನೆ ದಂತ ಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ನಾಮ್ ತಮಿಳರ್ ಕಚ್ಚಿ (NTK) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧಿಸುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ಎನ್ ಟಿಕೆ ಪಕ್ಷದ ಮುಖ್ಯಸ್ಥ ಸೀಮನ್ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದಷ್ಟೇ ವಿದ್ಯಾರಾಣಿ ಎನ್ ಟಿಕೆ ಪಕ್ಷವನ್ನು ಸೇರ್ಪಡೆಯಾಗಿದ್ದರು. ನಟ-ನಿರ್ದೇಶಕ ಸೀಮನ್ ನೇತೃತ್ವದ ಪಕ್ಷ ಅದಾಗಿದೆ. “ವಿದ್ಯಾರಾಣಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭೆ ಕ್ಷೇತ್ರದಲ್ಲಿ ಎನ್ ಟಿಕೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ” ಎಂಬುದಾಗಿ ಎನ್ ಟಿಕೆ ಮುಖ್ಯಸ್ಥ ಸೀಮನ್ ಮಾಹಿತಿ ನೀಡಿದ್ದಾರೆ. ವಿದ್ಯಾರಾಣಿ ವೃತ್ತಿಯಿಂದ ವಕೀಲರಾಗಿದ್ದಾರೆ. ಇವರು ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಅಧ್ಯಯನ ಮಾಡಿದ್ದಾರೆ ಮತ್ತು ಕೃಷ್ಣಗಿರಿಯಲ್ಲಿ ಶಾಲೆಯೊಂದನ್ನು ಮುನ್ನಡೆಸುತ್ತಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಡಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. 2020ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ವಿದ್ಯಾರಾಣಿ, ರಾಜ್ಯ ಬಿಜೆಪಿ ಯುವ…
ಸೈಬರ್ ಕಳ್ಳರು ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಿಗೆ, ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪದಡಿ, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್‍ನ ಭದ್ರತಾ ಅಧಿಕಾರಿಗಳಾದ ಇನ್‍ಸ್ಪೆಕ್ಟರ್ ಜಿ. ಶೋಭಾ ಮತ್ತು ಸಬ್ ಇನ್‍ಸ್ಪೆಕ್ಟರ್ ಎ.ಆರ್. ರಘುನಾಯ್ಕ ನೀಡಿದ ದೂರಿನನ್ವಯ, ಪ್ರತ್ಯೇಕ ಎರಡು ಪ್ರಕರಣಗಳು ದಾಖಲಿಸಿಕೊಂಡಿರುವ ವಿಧಾನಸೌಧ ಠಾಣಾ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಾ.15ರಂದು ಹೈಕೋರ್ಟ್‍ನ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿರುವ ಅಪರಿಚಿತ ಇಬ್ಬರು ಆರೋಪಿಗಳು, ಡಿ.ಒ.ಪಿ.ಟಿ ಇಲಾಖೆಯಿಂದ ಕರೆ ಮಾಡುತ್ತಿದ್ದೇನೆ. ತಾವು ಒಂದು ಸಿಮ್ ಕಾರ್ಡ್ ಹೊಂದಿದ್ದೀರಿ. ಆ ಸಿಮ್ ಕಾರ್ಡ್‍ನಿಂದ ಕಾನೂನು ಬಾಹಿರವಾಗಿ ಜಾಹೀರಾತು ಹಾಗೂ ಆಕ್ಷೇಪಾರ್ಹ ಮೆಸೇಜ್ ಹಾಕುತ್ತಿದ್ದೀರಿ. ಇದರಿಂದ ನಿಮ್ಮ ಮೇಲೆ ಮುಂಬೈನ ಅಂದೇರಿ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೇಕಾದರೆ ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ, ಅವರ ಜೊತೆ ಮಾತನಾಡಿ ನಿಮ್ಮ ಪ್ರಕರಣವನ್ನು…
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ, ತನ್ನ ಸಾಮಾಜಿಕ ಜಾಲತಾಣದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಪ್ರಕಟ ಮಾಡಿದ ಕೃತಜ್ಞತಾ ಪತ್ರ ಭಾರೀ ವೈರ್ ಆಗಿದೆ. ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. ಯಾವುದೇ ಪೂಜೆ,…
ಪಾಕ್ ಆಕ್ರಮಿತ ಪ್ರದೇಶವು ಭಾರತಕ್ಕೆ ಸೇರಬೇಕೆಂಬ ಭಾರತೀಯರ ಹಲವು ವರ್ಷಗಳ ಕನಸು ಇದೀಗ ನೆರವೇರುವ ಕಾಲ ಹತ್ತಿರವಾಗಿದೆ. ಈ ಕುರಿತು ಶೀಘ್ರವೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗುತ್ತದೆ ಎಂದು ದೇಶದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಘೋಷಣೆ ಮಾಡಿದ್ದಾರೆ. ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಇತ್ತೀಚಿನ ಟೀಕೆಗಳ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ತವರು ಭಾರತದೊಂದಿಗೆ ವಿಲೀನದ ಬೇಡಿಕೆಯನ್ನು ಎತ್ತುತ್ತಿದ್ದು, ಅಲ್ಲಿನ ಜನ ಖಂಡಿತಾ ಭಾರತದೊಂದಿಗೆ ವಿಲೀನಗೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶೆಹಬಾಜ್ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್ ಅವರು ಶೆಹಬಾಜ್ ಎಂದಾದರೂ ಕಾಶ್ಮೀರವನ್ನು ತೆಗೆದುಕೊಳ್ಳಬಹುದೇ? ಅವರು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚಿಂತಿಸಬೇಕು. ಸುಮಾರು ಒಂದೂವರೆ ವರ್ಷಗಳ ಹಿಂದೆಯೇ, ನಾವು ದಾಳಿ ಮಾಡಿ ಆಕ್ರಮಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದೆ. ಏಕೆಂದರೆ ಅಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಪಿಒಕೆ ಜನರೇ ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ…
ಚಂದ್ರಯಾನ 3 ಚಂದ್ರನ ಲ್ಯಾಂಡಿಂಗ್ ಸೈಟ್ ಗಾಗಿ ಭಾರತದ ಶಿವಶಕ್ತಿ ಪಾಯಿಂಟ್ ಗೆ ಅಂತರರಾಷ್ಟ್ರೀಯ ಮನ್ನಣೆ. ಭಾರತದ ಹೆಮ್ಮೆಯ ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಸೈಟ್ ಗೆ ದೇಶವು ನೀಡಿದ ‘ಶಿವ ಶಕ್ತಿ ಪಾಯಿಂಟ್’ ಹೆಸರನ್ನು ಅಂತರರಾಷ್ಟ್ರೀಯ ಖಗೋಳ ಒಕ್ಕೂಟ (IAU) ಒಪ್ಪಿಕೊಂಡಿದೆ. ಚಂದ್ರಯಾನ 3 ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾಗಿ ಇಳಿಯಿತು. 26ರಂದು ಮೋದಿ ಹೆಸರನ್ನು ಘೋಷಿಸಿದರು. IAU ಈ ತಿಂಗಳ 19 ರಂದು ಇದೆ. ಈ ಹೆಸರನ್ನು ಅನುಮೋದಿಸಲಾಗಿದೆ. ಗ್ರಹಗಳ ಮೇಲ್ಮೈಗಳನ್ನು ಹೆಸರಿಸಲು ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟಿರುವ ಪ್ರಾಧಿಕಾರವಾದ IAU, ಗ್ರಹಗಳು ಮತ್ತು ಚಂದ್ರಗಳ ಮೇಲ್ಮೈ ಲಕ್ಷಣಗಳನ್ನು ಗುರುತಿಸುತ್ತದೆ. IAU ಗ್ರಹಗಳ ವ್ಯವಸ್ಥೆಯ ನಾಮಕರಣದ ಕುರಿತಾದ IAU ನ ಕಾರ್ಯಕಾರಿ ಗುಂಪು ಶಿವಶಕ್ತಿ ಪಾಯಿಂಟ್ ಎಂಬ ಹೆಸರನ್ನು ಅನುಮೋದಿಸಿದೆ ಎಂದು ಸಂಸ್ಥೆಯು ಅಧಿಕೃತವಾಗಿ ಘೋಷಿಸಿತು. ಈಗ ಈ ಹೆಸರನ್ನು ಯಾವುದೇ ವಿಜ್ಞಾನ-ಸಂಬಂಧಿತ ವೇದಿಕೆ ಮತ್ತು ಪ್ರಕಟಣೆಗಳಲ್ಲಿ ಬಳಸಬಹುದು. ಭಾರತೀಯ ತತ್ತ್ವಶಾಸ್ತ್ರದ ಪ್ರಕಾರ, ಶಿವ ಪುರುಷ ಮತ್ತು ಶಕ್ತಿ…
ಸಂಸದ, ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ರಾಜಕರಾಣದಿಂದ ದೂರ ಉಳಿದಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ರಾಜಕೀಯ ಶುದ್ಧೀಕರಣದ ಕೆಲಸ ನಾ ಮಾಡುವೆ. ನನ್ನೊಂದಿಗೆ ಕೈ ಜೋಡಿಸುವ ಸಮಾನ ಮನಸ್ಕರಿಗೆ ಸ್ವಾಗತವಿದೆ ಎಂದು ಅವರು ಭಾನುವಾರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಸುದ್ದಿಗಾರರೊಂದಿಗೆ ಹೇಳಿದರು. ಗುಂಪುಗಾರಿಕೆಯ ಕಾರಣದಿಂದ ಬಿಜೆಪಿ ಕಳೆದ ಬಾರಿ ಅಧಿಕಾರ ಕಳೆದುಕೊಂಡಿತ್ತು. ನಾನು ಗುಂಪುಗಾರಿಕೆ ರಾಜಕಾರಣ ಮಾಡುವುದಿಲ್ಲ. ನನ್ನದು ಬಿಜೆಪಿ ಗುಂಪು ಮಾತ್ರ ಎಂದು ಹೇಳಿದರು. ಮೋದಿ ಅವರು ಕಳೆದ ಹತ್ತು ವರ್ಷದಿಂದ ಸ್ವಾರ್ಥರಹಿತ ರಾಜಕಾರಣ ಮಾಡಿದ್ದಾರೆ. ಮುಕ್ತ, ಭ್ರಷ್ಟಾಚಾರ ಮುಕ್ತ, ಜಾತಿವಾದ ಮುಕ್ತ, ರಾಜನೀತಿಯ ಪರಿಕಲ್ಪನೆ ಇದು ಮೋದಿ ವಾಕ್ಯ. ಇದು ಸಾಕಾರಗೊಳ್ಳಲೇ ಬೇಕು. ಈ ಬಾರಿಯ ಚುನಾವಣೆಯಲ್ಲಿ ಅದು ಆಗಬೇಕು. ನನ್ನ ಪ್ರಾಮಾಣಿಕತನ, ಸಚ್ಚಾರಿತ್ರ್ಯಕ್ಕೆ ನನಗೆ ಯಾರದ್ದೂ ಸರ್ಟಿಫಿಕೇಟ್ ಬೇಕಿಲ್ಲ. ಕರ್ನಾಟಕದಲ್ಲಿ ಪ್ರಾಮಾಣಿಕತೆ, ಸಚ್ಚಾರಿತ್ರ್ಯ ಅರ್ಥ ಕಳೆದುಕೊಳ್ಳುವ ರಾಜನೀತಿ ಇದೆ.…
ಬಣ್ಣಗಳ ಹಬ್ಬ ಹೋಳಿಯನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಧಾರ್ಮಿಕ ನಗರಿ ಅಯೋಧ್ಯೆಯಲ್ಲಿ ಹಲವು ದಿನಗಳಿಂದ ಹಬ್ಬದ ವಾತಾವರಣವಿದೆ. ಯಾಕೆಂದರೆ ಈ ಬಾರಿಯ ಹೋಳಿ ವಿಶೇಷ. ಅಯೋಧ್ಯೆಯ ಜೊತೆಗೆ, ದೇಶ ಮತ್ತು ಪ್ರಪಂಚದಾದ್ಯಂತ ಎಲ್ಲಾ ಕಡೆ ಇರುವ ರಾಮ ಭಕ್ತರಿಗೆ ಈ ಬಾರಿಯ ಹೋಳಿ ವಿಶೇಷವಾಗಿದೆ. ಎಲ್ಲರೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಬಾರಿಯ ಹೋಳಿಗೆ ವ್ಯಾಪಕ ವ್ಯವಸ್ಥೆ ಮಾಡಿದೆ. ಮತ್ತೊಂದೆಡೆ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮಲಲ್ಲ ಅವರಿಗೆ ವಿಶೇಷ ಹರ್ಬಲ್ ಗುಲಾಲ್ ಕಳುಹಿಸಿದ್ದಾರೆ. ಬಾಲಕ ರಾಮನಿಗೆ ಇದು ಮೊದಲ ಹೋಳಿಯಾಗಿದ್ದು, ಫಾಲ್ಗುಣ ಶುಕ್ಲಾ ಏಕಾದಶಿ ಅಥವಾ ರಂಗಭಾರಿ ಏಕಾದಶಿ ನಿಮಿತ್ತ ಹೋಳಿಯ ಬಣ್ಣಗಳನ್ನು ಹಚ್ಚಿ ಪೂಜೆ ಮಾಡಲಾಗಿದೆ. ಭಕ್ತರು ಕೂಡಾ ಹೋಳಿಯ ಬಣ್ಣದಿಂದ ಅಲಂಕೃತಗೊಂಡ ಬಾಲಕ ರಾಮನ ದರ್ಶನ ಪಡೆದು ಖುಷಿಗೊಂಡಿದ್ದಾರೆ. ಕಳೆದ ಬುಧವಾರ, ರಂಗಭಾರಿ ಏಕಾದಶಿಯಂದು, ರಾಮನಗರಿಯ ಋಷಿಗಳು ಮತ್ತು ಸಂತರು ತಮ್ಮ ನೆಚ್ಚಿನ ದೇವರಾದ ಭಗವಾನ್ ರಾಮ ಮತ್ತು ಅವರ ಪರಮ…