Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ಬೆಂಗಳೂರು: ಈ ಬಾರಿ ಬೆಳಗಾವಿಯಲ್ಲಿ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್ ಪರ ಅಲೆ ಇದೆ ಎನ್ನುವುದು ನಮ್ಮ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. ಹಾಗಾಗಿ ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಲೋಕಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ವಶಕ್ಕೆ ಬರಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಬಳಗದೊಂದಿಗೆ ಅವರು ಮಾತನಾಡಿದರು. ಲೋಕಸಭೆಯ ಚುನಾವಣೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ ಡಿ.ಕೆ. ಶಿವಕುಮಾರ, ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ನಾವು ಅತ್ಯಧಿಕ ಸ್ಥಾನ ಗೆದ್ದಿದ್ದೇವೆ. ಅದೇ ಒಗ್ಗಟ್ಟು ಮತ್ತು ಪರಿಶ್ರಮ ಹಾಕಿ ಮೂರೂ ಕ್ಷೇತ್ರಗಳನ್ನು ಗೆಲ್ಲಿಸಬೇಕು. ನಮ್ಮಿಂದ ಯಾವುದೇ ಸಹಕಾರ ಬೇಕೆದ್ದರೂ ನೀಡಲು ಸಿದ್ಧರಿದ್ದೇವೆ. ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಎದುರಿಸಿ ಎಂದು ಸಲಹೆ ನೀಡಿದರು. ಪ್ರತಿಬಾರಿ ಒಂದೊಂದು ಅಲೆಯನ್ನೇ ನಂಬಿಕೊಳ್ಳುವ ಬಿಜೆಪಿಗೆ ಈ ಬಾರಿ ಯಾವ ಅಲೆಯೂ ಇಲ್ಲ. ಈಗ ಏನಿದ್ದರೂ ಕಾಂಗ್ರೆಸ್ ಅಲೆ. ಗ್ಯಾರಂಟಿಗಳ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಿರುವ ಕಾಂಗ್ರೆಸ್…
ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದರೆ, ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಿಸಿದೆ. ಈ ಬೆನ್ನಲ್ಲೇ ಇದೀಗ ವಿಧಾನಪರಿಷತ್ತಿನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೂಡ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜೂನ್ ತಿಂಗಳಲ್ಲಿ ಅವರ ವಿಧಾನಪರಿಷತ್ ಸದಸ್ಯ ಸ್ಥಾನದ ಅವಧಿಯೂ ಮುಕ್ತಾಯಗೊಳ್ಳುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು, ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿತ್ತು. ಆದರೆ ಅವರು ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ತೇಜಸ್ವಿನಿ, ಕನಕಪುರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಿ ಮುನ್ನೆಲೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರನ್ನೇ ರಾಜಕೀಯ ಗುರುಗಳೆಂದಿದ್ದ ತೇಜಸ್ವಿನಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಾಗ ಡಿಕೆಶಿ ಸಹೋದರರ ವಿರುದ್ಧ ಕಟು ಶಬ್ದ ಬಳಸಿದ್ದರು. ಈಗ ಮತ್ತೆ…
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೂಡಾ ಪ್ರಶ್ನಿಸುತ್ತಿದೆ. ಈ ನಡುವೆ ಮುಖ್ಯಮಂತ್ರಿಯನ್ನು, ಪ್ರಧಾನಮಂತ್ರಿಯನ್ನು ಮತ್ತು ರಾಷ್ಟ್ರಪತಿಯನ್ನು ಬಂಧಿಸಬಹುದಾ ಎನ್ನುವ ಪ್ರಶ್ನೆ ಜನರಲ್ಲಿ ಮೂಡುತ್ತಿದೆ. ಅದಕ್ಕೆ ಸಂಪೂರ್ಣ ಉತ್ತರ ಇಲ್ಲಿದೆ. ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯನ್ನು ಕೂಡ ಅವರ ಪದವಿಯಲ್ಲಿರುವಾಗಲೇ ಬಂಧಿಸಬಹುದು. ಕಾನೂನಿನ ದೃಷ್ಟಿಯಲ್ಲಿ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಸಾಮಾನ್ಯ ವ್ಯಕ್ತಿ. ಅರೆಸ್ಟ್ ಮಾಡುವ ಕ್ರಮವನ್ನು ತಡೆಯಲು ಯಾವುದೇ ನಿಯಮಗಳಿಲ್ಲದ ಕಾರಣ ಅವರ ವಿರುದ್ಧ ಕ್ರಿಮಿನಲ್ ಅಪರಾಧವನ್ನು ದಾಖಲಿಸಿದರೆ ಪ್ರಧಾನಿಯನ್ನು ಕೂಡಾ ಬಂಧಿಸಬಹುದು. ಆದರೆ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಇದೆ ದೊಡ್ಡ ವಿನಾಯಿತಿ: ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ (ಗಣರಾಜ್ಯದ ಅಧ್ಯಕ್ಷರು ಮತ್ತು ಗವರ್ನರ್ ಗಳು) ತಮ್ಮ ಅಧಿಕಾರದ ಅವಧಿ ಮುಗಿಯುವವರೆಗೆ, ಅಥವಾ ತಾವು ಅಧಿಕಾರದಲ್ಲಿ ಇರುವ ತನಕ ಅವರಿಬ್ಬರನ್ನು…
‘ಆಪರೇಷನ್ ಕಮಲ’ ಮತ್ತೆ ಸುದ್ದಿ ಮಾಡಿದೆ. ಅದರ ಭಾಗವಾಗಿ ಇದೀಗ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ಪಕ್ಷವು ತಲಾ 50 ಕೋಟಿ ರೂಪಾಯಿಗಳ ಆಮಿಷ ಒಡ್ಡುತ್ತಿದೆ, ಅಲ್ಲದೆ ಅವರು ರಾಜೀನಾಮೆ ನೀಡಿ, ನಂತರ ನಡೆಯೋ ಉಪಚುನಾವಣೆಯಲ್ಲೂ ಕೂಡಾ ಹಣ ನೀಡುವುದಾಗಿ ಭರವಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪವನ್ನು ಮಾಡಿದ್ದಾರೆ. ನಿನ್ನೆ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ “ಆಪರೇಷನ್ ಕಮಲ” ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಈ ಪ್ರಯತ್ನ ಇವತ್ತೂ ಕೂಡಾ ನಡೆಯುತ್ತಿದೆ. ಈಗ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುತ್ತಿದ್ದಾರೆ. ನೀವು ರಾಜೀನಾಮೆ ಕೊಡಿ, ನಿಮ್ಮ ಚುನಾವಣಾ ಖರ್ಚನ್ನು ನಾವೇ ನೋಡಿಕೊಳ್ಳುತ್ತೇವೆ ಎಂಬ ಭರವಸೆಯನ್ನು ಅವರು ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನವರು ಗುರುತರವಾದ ಆರೋಪವನ್ನು ಮಾಡಿದ್ದಾರೆ. ಈ ಎಲ್ಲಾ ಹಣ ಎಲ್ಲಿಂದ ಬರುತ್ತದೆ? ಇದು ಕಪ್ಪು ಹಣ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಎಲ್ಲೆಲ್ಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ,…
ತುಮಕೂರು: ಮಾಜಿ ಸಂಸದ ಮೂಡಲಗಿರಿಯಪ್ಪ ಇಂದು ವಯಸ್ಸಾಹಜ ಕಾಯಿಲೆಯಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 85 ವರ್ಷ ವಯಸ್ಸಿನ ಮೂಡಲಗಿರಿಯಪ್ಪ ಅವರಿಗೆ ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಒಂದು ಗಂಟೆಗೆ ಮೃತಪಟ್ಟಿದ್ದಾರೆ. ಮೂಡಲಗಿರಿಯಪ್ಪ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಒಮ್ಮೆ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿಯೂ ಚುನಾಯಿತರಾಗಿದ್ದರು. ಇಂದು ಸಂಜೆ ವೇಳೆಗೆ ಅವರ ಪಾರ್ಥಿವ ಶರೀರವನ್ನು ತುಮಕೂರು ನಗರದ ಕುಂಚಿಟಿಗರ ಸಂಘದ ಸಭಾಭವನದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ನಂತರ ನಾಳೆ ಶಿರಾ ತಾಲೂಕಿನ ಚಿರತನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇನ್ಮುಂದೆ ದೇವಸ್ಥಾನಗಳಿಗೆ ಹೆಂಗೆಂಗೋ, ಯಾವುದೋ ಡ್ರೆಸ್ ನಲ್ಲಿಹೋದ್ರೆ ಒಳಕ್ಕೆ ಪ್ರವೇಶಿಸೋಕೆ ಬಿಡಲ್ಲ, ಹೌದು, ರಾಜಧಾನಿಯ ಹಲವು ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆಯನ್ನು ಶುರುಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಹಲವು ಕಡೆಗಳಲ್ಲಿ ಬಿಗಿ ಮಾಡಲಾಗಿದೆ. ರಾಜ್ಯದ ಕೆಲವು ದೇವಸ್ಥಾನಗಳ ಎದುರು ಭಾಗದಲ್ಲಿ ಈ ಬಗ್ಗೆ ಫಲಕ ಅಳವಡಿಸಿದ್ದರೂ ಕೆಲವರು ಕ್ಯಾರೇ ಅನ್ನುತ್ತಿರಲಿಲ್ಲ. ಇದೀಗ ಬೆಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಈ ಕುರಿತು ಬೋರ್ಡ್ ಅಳವಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸೀರೆ, ಚೂಡಿದಾರ್ ಬಿಟ್ರೆ ಮಹಿಳೆಯರಿಗೆ ಬೇರೆ ಡ್ರೆಸ್ ಹಾಕಿಕೊಂಡು ಬಂದ್ರೆ ಒಳ ಪ್ರವೇಶವಿಲ್ಲ ಅನ್ನೋ ಬೋರ್ಡ್‌ಗಳನ್ನು ಕೆಲ ಪ್ರಸಿದ್ಧ ದೇವಸ್ಥಾನಗಳ ಮುಂದೆ ನೀವು ನೋಡಿರಬಹುದು. ಇದೀಗ ಸದ್ಯ ಸಾಂಪ್ರದಾಯಿಕ ಹಾಗೂ ಸಭ್ಯ ಉಡುಪು ಧರಿಸಿ ಬಂದವರಿಗೆ ಮಾತ್ರ ದೇವಸ್ಥಾನದೊಳಗೆ ಪ್ರವೇಶ ನೀಡಲಾಗುತ್ತದೆ. ಶಾರ್ಟ್ಸ್, ಟೀ ಶರ್ಟ್, ನೈಟ್ ಪ್ಯಾಂಟ್ ಧರಿಸಿ ಬಂದವರಿಗೆ ಪ್ರದೇಶವಿಲ್ಲ ಎಂದು ಸೂಚಿಸುವ ಫಲಕಗಳನ್ನು ಬೆಂಗಳೂರಿನ ಕೆಲ ದೇವಸ್ಥಾನಗಳ ಎದುರಲ್ಲಿ ಬೋರ್ಡ್ ಅಳವಡಿಸಲಾಗಿದೆ. ಇತ್ತೀಚೆಗೆ, ದೇವಾಲಯದ ಒಳಗೆ ವಸ್ತ್ರ ಸಂಹಿತೆ ಪಾಲಿಸುವಂತೆ, ವಿದೇಶಿ…
ಕನ್ನಡದ ಖ್ಯಾತ ಚಲನಚಿತ್ರ ನಟ ಶಿವರಾಜ್ ಕುಮಾರ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದರಿಂದ, ಅಭಿನಯಿಸಿರುವ ಚಿತ್ರಗಳು ಮತ್ತು ಇರುವ ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ ಎನ್ನಲಾಗಿದೆ. ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಬಿಜೆಪಿ ಮನವಿ ಮಾಡಿದೆ. ಶಿವರಾಜ್ ಕುಮಾರ್ ನೀತಿ ಸಂಹಿತೆ ಜಾರಿಯಲ್ಲಿರುವಾಗ ಮೆರವಣಿಗೆ, ಘೋಷಣೆ ಮತ್ತು ಪಕ್ಷದ ಚಿಹ್ನೆಯುಳ್ಳ ಬಾವುಟ ಬಳಸಿದ್ದು ಅಪರಾಧ ಎಂದು ಉಲ್ಲೇಖಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಟಾಟಾ ಗ್ರೂಪ್ ಒಡೆತನಕ್ಕೆ ಸೇರಿದ ಏರ್ ಇಂಡಿಯಾಗೆ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ ಮತ್ತೆ 80 ಲಕ್ಷ ರೂ. ದಂಡ ವಿಧಿಸಿದೆ. ವಿಮಾನದ ಕರ್ತವ್ಯದ ಸಮಯದ ಮಿತಿಗಳು ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದಂತೆ ನಿಯಮಗಳ ಉಲ್ಲಂಘಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ. “ವರದಿಗಳು ಮತ್ತು ಪುರಾವೆಗಳ ವಿಶ್ಲೇಷಣೆಯ ವೇಳೆ ಏರ್ ಇಂಡಿಯಾದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರೂ ವಿಮಾನ ಸಿಬ್ಬಂದಿಯೊಂದಿಗೆ ಒಟ್ಟಾಗಿ ಕೆಲವು ಸಂದರ್ಭಗಳಲ್ಲಿ ಹಾರಾಟ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಇದು ಏರ್ ಕ್ರಾಫ್ಟ್ ರೂಲ್ಸ್ – 1937ರ ನಿಯಮ 28 ‘ಎ’ನ ಉಪ ನಿಯಮ (2)ರ ಉಲ್ಲಂಘನೆಯಾಗಿದೆ,” ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ. ”ವಿಮಾನಯಾನ ಸಂಸ್ಥೆ ಹಲವು ಬಾರಿ ಸಿಬ್ಬಂದಿಗೆ ಸಾಪ್ತಾಹಿಕ ವಿಶ್ರಾಂತಿ, ಸುದೀರ್ಘ ವ್ಯಾಪ್ತಿಯ ವಿಮಾನಯಾನಗಳ ಮೊದಲು ಮತ್ತು ನಂತರ ಸಾಕಷ್ಟು ವಿಶ್ರಾಂತಿ ನೀಡಿಲ್ಲ ಹಾಗೂ ಫ್ಲೈಟ್ ಸಿಬ್ಬಂದಿಗೆ ಲೇಓವರ್ ನಲ್ಲಿ ಬೇಕಾದಷ್ಟು ವಿರಾಮವನ್ನು ನೀಡಿಲ್ಲ ಎಂದು ಗೊತ್ತಾಗಿದೆ. ಇದು…
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಜೈಲಿನಿಂದಲೇ ಆಡಳಿತ ನಡೆಸುತ್ತೇನೆ ಎಂದು ಹೇಳುವುದು ಪ್ರಾಯೋಗಿಕವಾಗಿ ಸರಿಯಲ್ಲ ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಡಿ.ಟಿ. ಆಚಾರಿ ಹೇಳಿದ್ದಾರೆ. ಗುರುವಾರ(ಮಾ.21) ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಆಮ್ ಆದ್ಮಿ ಪಕ್ಷದ ಮುಖಂಡರು, ಕೇಜ್ರಿವಾಲ್ ಜೈಲಿನಿಂದಲೇ ತಮ್ಮ ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಈ ರೀತಿಯಾದ ಆಡಳಿತ ನಡೆಸಬಹುದೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಪಿ.ಡಿ.ಟಿ. ಆಚಾರಿ ಮಾತನಾಡಿ, ಆಮ್ ಆದ್ಮಿ ಪಕ್ಷವು ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿದೆ. ಆಪ್ ಶಾಸಕಾಂಗ ಪಕ್ಷವು ಕೇಜ್ರಿವಾಲ್ ಅವರ ಮೇಲೆ ಯಾವುದೇ ಅವಿಶ್ವಾಸ ಮಂಡನೆಯ ಪ್ರಸ್ತಾಪ ದಾಖಲಿಸಿಲ್ಲ. ಯಾವುದೇ ನ್ಯಾಯಾಲಯವು ರಾಜೀನಾಮೆ ನೀಡುವಂತೆ ಆದೇಶಿಸಿಲ್ಲ. ಇದನ್ನೆಲ್ಲ ಗಮನಿಸಿದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿ ತಪ್ಪೇನಿಲ್ಲ. ಆದರೆ, ಜೈಲಿನಿಂದಲೇ ಆಡಳಿತ…
ತುಮಕೂರು: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 12 ದಿನಗಳ ಹಿಂದೆ ದಕ್ಷಿಣ ಕನ್ನಡದ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ. ಕ್ರಾನ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು. ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾನ್ ಮಾಡಿ ಕರೆಸಿಕೊಂಡು ನಂತರ…