Author: admin

ಗೃಹಿಣಿಯೊಬ್ಬರು ಡೆತ್‍ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲೂಕು ಕಿಕ್ಕೇರಿ ಹೋಬಳಿ ಲಿಂಗಾಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಲಿಂಗಾಪುರ ಗ್ರಾಮದ ಪ್ರೇಮಕುಮಾರಿ(26) ತನ್ನ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಆಕೆಯ ತಂದೆ ರಾಜೇಂದ್ರ ಪುತ್ರಿಯ ಗಂಡ ಮತ್ತು ಅವರ ಮನೆಯವರ ವಿರುದ್ಧ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2022 ಮಾರ್ಚ್ 6 ರಂದು 150 ಗ್ರಾಂ ಚಿನ್ನಾಭರಣ, 5 ಲಕ್ಷ ರೂ. ವರದಕ್ಷಿಣೆ ನೀಡಿ ರಾಘವೇಂದ್ರನಿಗೆ ಮಗಳನ್ನು ಮದುವೆ ಮಾಡಲಾಗಿತ್ತು. ಮದುವೆಯಾದ ಆರು ತಿಂಗಳ ನಂತರ, ಅಳಿಯ ಮತ್ತು ಮನೆಯವರು ನನ್ನ ಮಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು, ಪ್ರೇಮಕುಮಾರಿ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ. ಕಿರುಕುಳ ತಾಳಲಾರದೆ ಮಗಳು ನಮ್ಮ ಮನೆಗೆ ಬಂದಿದ್ದಳು. ನ್ಯಾಯ ಪಂಚಾಯಿತಿ ಮಾಡಿದರೂ ಪತಿ ಮನೆಯವರು ಕರೆದುಕೊಂಡು ಹೋಗಲಿಲ್ಲ. ನಮ್ಮ…

Read More

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36) ಮೃತ ದುರ್ದೈವಿಯಾಗಿದ್ದಾರೆ. ಮೃತ ದುರ್ದೈವಿಯಾದ ಲಕ್ಷ್ಮೀ ಬಾಯಿ ಜಾದವ್ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದವರಾಗಿದ್ದಾರೆ. ಇತ್ತೀಚೆಗಷ್ಟೇ ಮೃತ ಲಕ್ಷ್ಮೀಬಾಯಿಗೆ ಮದುವೆ ನಿಶ್ಚಯವಾಗಿತ್ತು. ಇವರು ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದ ಲಕ್ಷ್ಮೀಬಾಯಿ, ಕೆಲಸ ಮುಗಿಸಿ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಜೊತೆ ಕುಣಿಗಲ್ ಗೆ ಬೈಕ್ ನಲ್ಲಿ ಲಕ್ಷ್ಮೀ ಬಾಯಿ ಬರುತ್ತಿದ್ದರು. ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್ ಗೆ, ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಕೇಬಲ್ ವೈರ್ ಬಿದ್ದಿದೆ. ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್…

Read More

ಬಿಗ್‌ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರ ಬಂಧನವಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಆಕೆಯನ್ನು ಶುಕ್ರವಾರ(ಮಾ.22) ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಟ್ರೋಲ್ ಆಗುತ್ತಾ ಸುದ್ದಿಯಲ್ಲಿ ಇರುತ್ತಿದ್ದ ಸೋನು ದಿಢೀರನೆ ಪೊಲೀಸರ ಅತಿಥಿಯಾಗಿದ್ದಾರೆ. ಅದಕ್ಕೆ ಕಾರಣ ಆಕೆಯ ಪ್ರಚಾರದ ಹುಚ್ಚು ಎನ್ನಲಾಗಿದೆ. ಸೋನು ಗೌಡ ಜನಪ್ರಿಯತೆಗಾಗಿ ಚಿತ್ರ ವಿಚಿತ್ರ ಪೋಸ್ಟ್‌ಗಳನ್ನು ಮಾಡುತ್ತಿರುತ್ತಾರೆ. ಎಷ್ಟೇ ಟ್ರೋಲ್ ಆದರೂ ಕ್ಯಾರೆ ಎನ್ನದೇ ಹಾಟ್ ಹಾಟ್ ಫೋಟೊ, ವೀಡಿಯೋ ತೇಲಿಬಿಡುತ್ತಿದ್ದರು. ಇಷ್ಟೇ ಆಗಿದ್ದರೆ ಪರವಾಗಿಲ್ಲ. ಇತ್ತೀಚೆಗೆ ಆಕೆ ಮಗುವನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಈ ಸಂಬಂಧ ಪೋಸ್ಟ್ ಕೂಡ ಮಾಡಿದ್ದರು. ಸಾಕಷ್ಟು ಜನ ಆಕೆಯ ನಡೆಗೆ ಮೆಚ್ಚುಗೆ ಸೂಚಿಸಿದ್ದರು. ಸೋನು ಕಾನೂನು ಬಾಹಿರವಾಗಿ ಮಗು ದತ್ತು ಪಡೆದಿದ್ದಾರೆ ಎನ್ನುವ ಆರೋಪದಡಿ ಆಕೆಯನ್ನು ಬಂಧಿಸಲಾಗಿದೆ. ಈ ಬಗ್ಗೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು ಎಂದು ವರದಿ ತಿಳಿಸಿದೆ. ಈ ಸಂಬಂಧ ಜೆ.ಜೆ. ಆ್ಯಕ್ಟ್ ಅಡಿ…

Read More

ಇಂದಿಗೂ ಎಲ್ಲವೂ ಮನುಷ್ಯರ ಕೈಯಲ್ಲಿಲ್ಲ. ಇದಕ್ಕೆ ಹಲವು ಉದಾಹರಣೆಗಳು ಇದೆ. ಅಂತಹ ಒಂದು ಪ್ರಕರಣ ಬ್ರೆಜಿಲ್‌ನಿಂದ ವರದಿಯಾಗಿದೆ. ಡೈಲಿ ಸ್ಟಾರ್ ವರದಿ ಪ್ರಕಾರ ಮಹಿಳೆಯೊಬ್ಬರು 56 ವರ್ಷಗಳ ಕಾಲ ಗರ್ಭಿಣಿಯಾಗಿದ್ದ ವಿಚಿತ್ರ ಪ್ರಕರಣವೊಂದು ನಡೆದಿದೆ.  ಕೊನೆಗೆ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಹೋಗಬೇಕಾಯಿತು. ಮುಂದೆ ಆಕೆ ತನ್ನ ಪ್ರಾಣವನ್ನು ಕಳೆದುಕೊಂಡಳ್ಳಬೇಕಾಯಿತು. 81ರ ಹರೆಯದ ಡೇನಿಯೆಲ್ಲಾ ವೀರಾ ಎಂಬಾಕೆಯೇ ಈ ಮಹಿಳೆ. 56 ವರ್ಷಗಳ ಕಾಲ ಮಹಿಳೆಯ ಹೊಟ್ಟೆಯಲ್ಲಿ ಒಂದು ಮಗು ಉಳಿದುಕೊಂಡಿತು ಮತ್ತು ಅದರ ಬಗ್ಗೆ ಅವಳಿಗೆ ತಿಳಿದಿರಲಿಲ್ಲ. ಬ್ರೆಜಿಲ್‌ನ ಪರಾಗ್ವೆ ಗಡಿ ದಾಟುತ್ತಿದ್ದ ಮಹಿಳೆಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆದರೆ ತಾನು ಮಗುವನ್ನು ಹೊತ್ತಿರುವ ವಿಷಯ ಆಕೆಗೆ ತಿಳಿದಿರಲಿಲ್ಲ. ವೈದ್ಯರ ಬಳಿ ಹೋದಾಗ ಆಕೆಯ ಹೊಟ್ಟೆಯಲ್ಲಿ ಕ್ಯಾಲ್ಸಿಫೈಡ್ ಭ್ರೂಣ (ಕಲ್ಲಿನ ಭ್ರೂಣ) ಇರುವುದು ಪತ್ತೆಯಾಗಿದೆ. 7 ಮಕ್ಕಳ ತಾಯಿ ಡೇನಿಯಲಾ ಅವರಿಗೆ ಈ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಮಾರ್ಚ್ 14 ರಂದು, ವೈದ್ಯರು ಅದನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಿದರು,…

Read More

ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ.80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಕರೆ ನೀಡಿದರು. ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನಾವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು…

Read More

ವಿಪಕ್ಷಗಳ ನಾಯಕರ ಬ್ಯಾಂಕ್ ಖಾತೆ ಸೀಜ್ ವಿಚಾರ ಸಂಬಂಧ, ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದಾಗಿ, ವಿಪಕ್ಷಗಳ ವಿರುದ್ದ ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದರು. ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ ಹೀಗೆ ಷಡ್ಯಂತ್ರ ಮಾಡುತ್ತಿದೆ. ಈ ಬಾರಿ ಲೋಕಸಭೆ ಚುನಾವಣೆ ಸಮಯದಲ್ಲೂ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದೆ. ಆದರೆ, ಎಐಸಿಸಿ ನಾಯಕರು ಬೇಡ ಎಂದರು. ಈಗ ಎಐಸಿಸಿ ಖಾತೆಯಲ್ಲಿನ 290 ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಮೂಲಕ ಮುಟ್ಟುಗೋಲು ಹಾಕಿಸಿದ್ದಾರೆ. ನಮ್ಮದು ವ್ಯವಹಾರಿಕ ಸಂಸ್ಥೆಯಲ್ಲ. ನಾವು ಜನರ ದೇಣಿಗೆ ಮಾತ್ರ ಸಿಗುತ್ತಿದೆ. ನಮಗೆ ಚುನಾವಣಾ ಬಾಂಡ್ ಮೂಲಕ ನಮಗೆ ಸಿಕ್ಕಿರೋದು ಕೇವಲ 11% ಮಾತ್ರ. ಆದರೆ ಬಿಜೆಪಿ ಅವರಿಗೆ 57% ಸಿಕ್ಕಿದೆ. ಇಂದು ಪತ್ರಿಕೆಗಳಲ್ಲಿ ಯಾರು ಯಾರಿಗೆ ಎಷ್ಟು ದೇಣಿಗೆ ನೀಡಿದ್ದಾರೆ…

Read More

ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ, ನಾವು ಯಾವುದೇ ಆಕೌಂಟ್ ಗಳನ್ನ ಸೀಜ್ ಮಾಡಿಲ್ಲ. ಕಾಂಗ್ರೆಸ್ ನವರು ಟ್ಯಾಕ್ಸ್ ಕಟ್ಟಬೇಕಿತ್ತು ಆದರೆ ಕಟ್ಟಿಲ್ಲ ಹೀಗಾಗಿ ಅಕೌಂಟ್ ಸೀಜ್ ಆಗಿದೆ ನಾವು ಕಾಂಗ್ರೆಸ್ ವೀಕ್ ಮಾಡಿಲ್ಲ.  ಜನರೇ ಕಾಂಗ್ರೆಸ್ ವೀಕ್  ಮಾಡಿದ್ದಾರೆ ಎಂದು ಲೇವಡಿ ಮಾಡಿದರು. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಹೀಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜಕುಮಾರಿ ಕೇಟ್‌ ಮಿಡಲ್ಟನ್‌ ಅವರು ಕ್ಯಾನ್ಸರ್‌ ನಿಂದ ಬಳಲುತ್ತಿರುವುದಾಗಿ  ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಬಿಡುಗಡೆಯಾಗಿದೆ. ಹೌದು, ವೇಲ್ಸ್‌ ರಾಜಕುಮಾರಿ ಅವರಿಗೆ ಕಿಮೋಥೆರಪಿ  ಪ್ರಾರಂಭವಾಗಿದ್ದು, ಅವರು ಸಂದೇಶವೊಂದನ್ನು ಜನತೆಗೆ ನೀಡಿದ್ದಾರೆ. ಹಾಗೆನೇ ಯಾವ ಕ್ಯಾನ್ಸರ್‌ ಇದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಗುಣವಾಗಲು ನಮಗೆ ಸ್ವಲ್ಪ ಸಮಯ, ಸ್ಥಳ ಮತ್ತು ಗೌಪ್ಯತೆಯ ಅಗತ್ಯವಿದೆ. ಹೊಟ್ಟೆ ಶಸ್ತ್ರಚಿಕಿತ್ಸೆ ಮಾಡಿದಾಗ ನನಗೆ ಕ್ಯಾನ್ಸರ್‌ನಂತಹ ಖಾಯಿಲೆ ಇದೆ ಎಂದು ಭಾವಿಸಿದ್ದೆವು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆದರೆ ಅನಂತರ ವೈದ್ಯರು ನನ್ನಲ್ಲಿ ಕ್ಯಾನ್ಸರ್‌ ಲಕ್ಷಣವಿದೆ ಎಂದು ಹೇಳಿದರು. ಈಗ ಕಿಮೊಥೆರಪಿ ಪ್ರಾರಂಭವಾಗಿದೆ ಎಂದು ವಿಡಿಯೋ ಸಂದೇಶದಲ್ಲಿ ರಾಜಕುಮಾರಿ ಹೇಳಿದ್ದಾರೆ. ಬ್ರಿಟನ್ ರಾಜ ಚಾರ್ಲ್ಸ್ ವೇಲ್ಸ್ ರಾಜಕುಮಾರಿ ಕೇಟ್ ಬಗ್ಗೆ ಹೆಮ್ಮೆಪಡುವುದಾಗಿ ಬಕಿಂಗ್ಹ್ಯಾಮ್ ಅರಮನೆ ಹೇಳಿದೆ. ಏಕೆಂದರೆ ಕೇಟ್ ಚಿಕಿತ್ಸೆಯ ಬಗ್ಗೆ ಧೈರ್ಯದಿಂದ ಮಾತನಾಡಿದ್ದಾರೆ. ಈ ಕಷ್ಟದ ಸಮಯದಲ್ಲಿ ರಾಜ ಮತ್ತು ಅವರ ಪತ್ನಿ ಕ್ಯಾಮಿಲ್ಲಾ ಇಡೀ ಕುಟುಂಬದೊಂದಿಗೆ ಇದ್ದಾರೆ…

Read More

ಬೆಂಗಳೂರು: ವಿಪಕ್ಷ ನಾಯಕರಿಗೆ ಗಾಳ ಹಾಕುತ್ತಿರುವ ಬಿಜೆಪಿ, ಶಾಸಕರಿಗೆ ಐವತ್ತು ಕೋಟಿ ರೂ. ಆಮಿಷ ಒಡ್ಡಿರುವುದಲ್ಲದೇ ರಾಜೀನಾಮೆ ನೀಡಿದ ಬಳಿಕ ಮರು ಚುನಾವಣೆಯ ವೆಚ್ಚವನ್ನೂ ಸಹ ತಾವೇ ಭರಿಸುವುದಾಗಿ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿವಿಧ ನಾಯಕರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಈ ರೀತಿಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಪಡಿಸುತ್ತಿದೆ ಎಂದು ಹರಿಹಾಯ್ದರು. ಕೇಂದ್ರ ಬಿಜೆಪಿ ಸರ್ಕಾರದಿಂದ ಪ್ರೇರಿತವಾದ ತನಿಖಾ ಸಂಸ್ಥೆಗಳು ಕ್ಷುಲ್ಲಕ ಕಾರಣಗಳನ್ನು ಒಡ್ಡಿ ಕಾಂಗ್ರೆಸ್‌ ನಾಯಕರ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸುತ್ತಿದೆ. ಇದು ಚುನಾವಣೆಯಲ್ಲಿ ಪ್ರತಿಪಕ್ಷನ್ನು ದುರ್ಬಲಗೊಳಿಸುವ ಬಿಜೆಪಿ ತಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು ದೇಶದ ಸ್ವಾತಂತ್ರ್ಯಕ್ಕೆ ದುಡಿದ ಪಕ್ಷವಾದ ಕಾಂಗ್ರೆಸ್‌ ಇಂದು ಸಂಕಷ್ಟದಲ್ಲಿದೆ. ಸ್ವಾತಂತ್ರ್ಯಕ್ಕೆ ಯಾವುದೇ ಕೊಡುಗೆ ನೀಡದ ಬಿಜೆಪಿ ಅಧಿಕಾರದಲ್ಲಿದೆ. ವಾಜಪೇಯಿ ಅವರ ಅವಧಿಯಲ್ಲಿ ಐದು ವರ್ಷ ಹಾಗೂ ನರೇಂದ್ರ ಮೋದಿ ನೇತೃತ್ವದಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿ ಇದೇ ರೀತಿಯಲ್ಲಿ ಅಧಿಕಾರ ಪಡೆಯಲು ಹಾತೊರೆಯುತ್ತಿದೆ…

Read More

ಹುಬ್ಬಳ್ಳಿ: ಪಕ್ಷ ಕಟ್ಟಿದವರನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ. ಬಿಜೆಪಿಯಿಂದ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪ ಅವರನ್ನು ಮನವೊಲಿಸುವ ಕೆಲಸ ಹೈಕಮಾಂಡ್‌ ಮಾಡುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂಬ ಬಯಕೆ ಈಶ್ವರಪ್ಪ ಅವರಿಗಿದೆ. ಅವರ ಮನವೊಲಿಕೆಗೆ ನಮ್ಮ ನಾಯಕರು ಖಂಡಿತಾ ಯಶಸ್ವಿಯಾಗುತ್ತಾರೆ. ಚುನಾವಣೆ ಸಂದರ್ಭ ಅಸಮಾಧಾನ ಸಹಜ. ಸಂಗಣ್ಣ ಕರಡಿ, ಪ್ರತಾಪ್‌ ಸಿಂಹ, ಸದಾನಂದ ಗೌಡ ಅವರೆಲ್ಲರೊಂದಿಗೂ ಮಾತನಾಡಲಾಗುತ್ತಿದೆ. ಇವರೆಲ್ಲರೂ ಪಕ್ಷ ಕಟ್ಟಿದವರು ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು. ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‌ ರಾಜಕೀಯ ನಾಟಕದ ಒಂದು ಭಾಗ. ಅವರು ಮತಗಳಿಗಾಗಿ ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ಮಾಡಿದ್ದರು. ಕಾಂಗ್ರೆಸ್‌ಗೆ ನಿಜವಾಗಿಯೂ ಕಾಳಜಿ ಇದ್ದರೆ ಇಂಡಿಯಾ ಕೂಟದಿಂದ ಹೊರಬರಬೇಕು. ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್‌ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More