Author: admin

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ವಿವರ: ಒಟ್ಟು ಹುದ್ದೆ 257 ಅಂಗನವಾಡಿ ಕಾರ್ಯಕರ್ತರು – 29 ಅಂಗನವಾಡಿ ಸಹಾಯಕರು – 228 ಎಲ್ಲೆಲ್ಲಿ ಎಷ್ಟು ಉದ್ಯೋಗ: ಭರಮಸಾಗರ: 7 ಕಾರ್ಯಕರ್ತೆಯರು, 23 ಸಹಾಯಕಿಯರು ಚಿತ್ರದುರ್ಗ: 2 ಕಾರ್ಯಕರ್ತೆಯರು, 21 ಸಹಾಯಕಿಯರು ಚಳ್ಳಕೆರೆ:  2 ಕಾರ್ಯಕರ್ತೆಯರು, 21 ಸಹಾಯಕಿಯರು ಹಿರಿಯೂರು: 2 ಕಾರ್ಯಕರ್ತೆಯರು,  53 ಸಹಾಯಕಿಯರು ಹೊಳಲ್ಕೆರೆ: 4 ಕಾರ್ಯಕರ್ತೆಯರು, 45 ಸಹಾಯಕಿಯರು ಹೊಸದುರ್ಗ: 11 ಕಾರ್ಯಕರ್ತೆಯರು, 53 ಸಹಾಯಕಿಯರು ಮೊಳಕಾಲ್ಮೂರು: 1 ಕಾರ್ಯಕರ್ತೆಯರು, 21 ಸಹಾಯಕಿಯರು ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಎಸ್ ​ಎಸ್​ ಎಲ್ ​ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/ 3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ…

Read More

ಬೆಂಗಳೂರು: ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ ಎಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹೇಳಿದ್ದು, ನಟ ದರ್ಶನ್ ಕುರಿತಾದ ಹೇಳಿಕೆಗೆ ಅವರು ಹೀಗೆ ಉತ್ತರಿಸಿದರು. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದಿದ್ದಾರೆ. ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ. ಇನ್ನೂ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕೊಪ್ಪಳ: ಕೊಪ್ಪಳದ ಮಸೀದಿಯೊಂದರ ಮುಂಭಾಗ 27 ವರ್ಷದ ಗವಿಸಿದ್ದಪ್ಪ ನಾಯಕ್ ಎಂಬಾತನನ್ನು ಆಗಸ್ಟ್ 3ರಂದು  ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೊಪ್ಪಳ ಠಾಣೆ ಪೊಲೀಸರು ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮೃತ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ತಾಯಿ ಗವಿಸಿದ್ದಪ್ಪನ ಹತ್ಯೆಯಲ್ಲಿ ನನ್ನ ಮಗಳ ಪಾತ್ರವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಬಳಿಕ ದೂರು ದಾಖಲಿಸಿದ್ದರು. ಮುಸ್ಲಿಂ ಬಾಲಕಿ ಜೊತೆಗಿನ ಪ್ರೀತಿ ಹಿನ್ನೆಲೆಯಲ್ಲಿ ಸಾದಿಕ್ ಎಂಬಾತ ಗವಿಸಿದ್ದಪ್ಪನನ್ನು ಮಸೀದಿ ಮುಂದೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದನು ಎನ್ನಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​  ಕಾರಿಗೆ ಮುತ್ತಿಗೆ ಹಾಕಿ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಿದ್ಧಸಿರಿ ಸಹಕಾರಿ ಬ್ಯಾಂಕ್ ಶಾಖೆ ಹಾಗೂ ಎಸ್​​ ಮಾರ್ಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಯತ್ನಾಳ್ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಕೂಡಲೇ ಪೊಲೀಸರು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕರನ್ನು ತಡೆದು, ವಶಕ್ಕೆ ಪಡೆದರು. ಆಲಮೇಲದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ, ಯುವಕರ ಕುಟುಂಬದ ಮಹಿಳೆಯರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರ ಎದುರು ಪಟ್ಟು ಹಿಡಿದರು. ಆದರೆ, ಪೊಲೀಸರು ಭೇಟಿ ಅವಕಾಶ ನೀಡಲಿಲ್ಲ. ದೂರು‌ ಕೊಡಿ ರಜಿಸ್ಟರ್ ಮಾಡಿಕೊಳ್ಳುತ್ತೇವೆ. ಗಲಾಟೆ…

Read More

ಬಳ್ಳಾರಿ: ಕೆಎಸ್ ​ಆರ್​ ಟಿಸಿ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶ್ವೇತಾ (38) ಮತ್ತು ಬಾಲನಾಯಕ್ (42) ಎಂದು ಗುರುತಿಸಲಾಗಿದೆ. ಇತರ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಘಟನೆಯ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್, ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಾತ್ರಿ 11:30ರ ಸುಮಾರಿಗೆ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಹೊಡೆದಿದೆ. ಅಪಘಾತದ ಸ್ಥಳಕ್ಕೆ ಸಿರಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ನಟ ದರ್ಶನ್ ಅವರು ಜೈಲು ಪಾಲಾದ ಬೆನ್ನಲ್ಲೇ  ಅವರ ಸೋಷಿಯಲ್ ಮೀಡಿಯಾವನ್ನು ತಾನೇ ಹ್ಯಾಂಡಲ್ ಮಾಡುವುದಾಗಿ ಪತ್ನಿ ವಿಜಯಲಕ್ಷ್ಮೀ ಘೋಷಿಸಿದ್ದು, ದರ್ಶನ್ ಹಾಗೂ ಸಿನಿಮಾ ಬಗ್ಗೆ ತಾವೇ ಅಪ್ಡೇಟ್ ನೀಡುವುದಾಗಿ ಅವರು ಹೇಳಿದ್ದಾರೆ. ನಿಮ್ಮ ಚಾಲೆಂಜಿಂಗ್ ಸ್ಟಾರ್ ಹೃದಯದಲ್ಲಿ ನೀವೆಲ್ಲರೂ ಇದ್ದೀರಿ. ಅವರು ನೇರವಾಗಿ ನಿಮ್ಮನ್ನು ಸಂಪರ್ಕಿಸುವ ತನಕ ನಾನು ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ನಿರ್ವಹಿಸುತ್ತೇನೆ. ಅವರ ಪರವಾಗಿ ಅಪ್​ ಡೇಟ್​ ನೀಡುತ್ತೇನೆ ಮತ್ತು ಸಿನಿಮಾ ಪ್ರಮೋಷನ್ ಮಾಡುತ್ತೇನೆ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಮಾಡಿದ್ದಾರೆ. ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ತೋರಿಸುವುದನ್ನು ನೀವು ಮುಂದುವರಿಸಿದರೆ ಅದು ದರ್ಶನ್ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಬಲ ನೀಡುತ್ತದೆ. ಪಾಸಿಟಿವ್ ಆಗಿರೋಣ, ಒಂದಾಗಿರೋಣ. ನಿಮಗೆ ತಿಳಿದಿರುವ ಅದೇ ಪ್ರೀತಿ ಮತ್ತು ಎನರ್ಜಿಯೊಂದಿಗೆ ಅವರು ಆದಷ್ಟು ಬೇಗ ವಾಪಸ್ ಬರುತ್ತಾರೆ’ ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಚಾಮರಾಜನಗರ: ಯುವತಿಯ ಎದುರೇ ಯುವಕನೊಬ್ಬ ತನ್ನ ಎದೆಗೆ ಇರಿದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರದೀಪ್ ಎಂಬಾತ ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. ಯುವತಿ ಎದುರೇ ತನ್ನ ಎದೆಗೆ ಚಾಕುವನಿಂದ ಇರಿದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳು ಪ್ರದೀಪ್​​ನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರದೀಪ್ ಚಾಮರಾಜನಗರ ತಾಲೂಕಿನ ಸಾಣೇಗಾಲ ಗ್ರಾಮದ ನಿವಾಸಿಯಾಗಿದ್ದು. ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಎಂದು ತಿಳಿದು ಬಂದಿದೆ. ಸದ್ಯ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಪೋಷಕರ ದೂರಿನನ್ವಯ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’ ಎಂದು ನಟ ಅನಿರುದ್ಧ ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದಾರೆ.  ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗೆ ಹೋರಾಟ ಹಾಗೂ ಸಮಾಧಿ ನೆಲಸಮ ವಿಚಾರವಾಗಿ ಅನಿರುದ್ಧ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನಿವಾಸದಲ್ಲಿ ಸಭೆ ನಡೆಸಿದರು. ಅಭಿಮಾನ್ ಸ್ಟುಡಿಯೋದಲ್ಲಿ ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ. ನಮ್ಮ ಕುಟುಂಬದ ಮೇಲೆ ಒಂದಷ್ಟು ಜನ ಆರೋಪ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮೊದಲು ನಾನು ಮಾತನಾಡುತ್ತೇನೆ. ಇದೇ ಮೊದಲ ಬಾರಿ ಅಲ್ಲ, ಇದಕ್ಕೂ ಮುನ್ನ ಸಾಕಷ್ಟು ಬಾರಿ ಸಭೆ ಮಾಡಿದ್ದೀನಿ. ಎರಡು ವಿಡಿಯೋ ಇದೆ, ಒಂದು ಮೈಸೂರಲ್ಲಿ ಸ್ಮಾರಕ ಉದ್ಘಾಟನೆಗೂ ಮುಂಚೆ ಹಾಗೂ ಹಳೆ ಮನೆಯಲ್ಲಿ ಸಭೆ ಮಾಡಿದ್ದೇವೆ ಎಂದು ವಿಡಿಯೋ ತೋರಿಸಿದರು. ಸಮಾಧಿ ತೆರವು ವಿಚಾರ ನಮಗೆ ಗೊತ್ತಿತ್ತು, ಆ ವಿಚಾರದಲ್ಲಿ ದುಡ್ಡು ಬಂದಿದೆ ಅಂತೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ದಾದಾ ಸಮಾಧಿ ತೆರವು ವಿಚಾರದಲ್ಲಿ ನಾವು ಸಂತೋಷಪಡೋಕೆ ಆಗುತ್ತಾ? ಇದೆಂಥಾ…

Read More

ಪಾವಗಡ: ಕೆ.ಟಿ.ಹಳ್ಳಿ ಗ್ರಾಮ ಪಂಚಾಯತ್ ದೇವಲಕೆರೆ ಗ್ರಾಮದ ST ಕಾಲೋನಿಯಲ್ಲಿ ಸುಮಾರು  ವರ್ಷದಿಂದ CC ರಸ್ತೆ ದುರಸ್ತಿಯಿಂದ ಬೀದಿಯಲ್ಲಿ ಚರಂಡಿ ನೀರು ಹರಿದು ರಸ್ತೆ ಕೆಸರು ಗದ್ದೆಯಂತಾಗಿದ್ದು,  ಯಾವುದೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳುತ್ತಿಲ್ಲ ಎಂದು ಬೀದಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರು ಸರಿಯಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವ ಕಾರಣ ರಸ್ತೆಯಲ್ಲಿಯೇ ನಿಂತು ದೊಡ್ಡ ಹೊಂಡಗಳಾಗಿ ನಿರ್ಮಾಣಗೊಂಡಿದ್ದು, ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಪರಿಣಮಿಸಿವೆ. ಕೊಳಚೆಯಿಂದಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಇಲ್ಲಿಯ ನಿವಾಸಿಗರು ಎದುರಿಸುತ್ತಿದ್ದಾರೆ.  ಮನೆಯ ಮುಂದೆ ಸಾಕಷ್ಟು ನೀರು ಸಂಗ್ರಹಗೊಂಡಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡೆತಡೆಯಾಗಿದೆ. ಈ ಕೊಳಚೆ ನೀರಿನಲ್ಲಿಯೇ ಮಕ್ಕಳು, ವಯೋವೃದ್ಧರು ಹಾಗೂ ಇತರರು ತಿರುಗಾಡುತ್ತಿದ್ದಾರೆ. ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ವ್ಯರಿತಿಕ್ತ ಪರಿಣಾಮ ಬೀರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ಕ್ರಮಕ್ಕೆ ಮುಂದಾಗಬೇಕಾಗಿದೆ. ರಸ್ತೆಯ ಪಕ್ಕದಲ್ಲಿ ಚರಂಡಿ ಇಲ್ಲದ ಕಾರಣ ದಿನಬಳಕೆ ನೀರು ಮುಂದಕ್ಕೆ ಹರಿದುಹೋಗಲು ಸಾಧ್ಯವಾಗದೇ ಇರುವುದರಿಂದ…

Read More

ತಿಪಟೂರು: ಗೌರಿ, ಯುಗಾದಿ, ರಂಜಾನ್, ಹಬ್ಬಗಳನ್ನು ಮನೆಗಳಲ್ಲಿ ಸಂಭ್ರಮಿಸಿದಂತೆ ಆಚರಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಜನಗಳನ್ನು ಸೇರಿಸಿ ಆಚರಿಸಬೇಕೆಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಟೂಡ ಶಶಿಧರ್ ಹೇಳಿದರು. ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು. ಕಾಯಕದ ಮೂಲಕ ದೇಶವನ್ನು ಆರ್ಥಿಕವಾಗಿ ಮುನ್ನಡೆಸುತ್ತಿರುವ ಈ ಶ್ರಮಿಕರು ದೇಶದ ಸ್ವಾತಂತ್ರ್ಯೋತ್ಸವಕ್ಕೆ ಕಾರಣೀಭೂತರು ಎಂದು ತಿಳಿಸಿದರು. ನಗರದ ಕೋಡಿ ಸರ್ಕಲ್ ಇಂದ ಗಾಂಧಿನಗರದ ಟಿಪ್ಪು ಸರ್ಕಲ್ ವರೆಗೆ ಕಾಲ್ನಡಿ ನಡೆಸಿದ್ದೇವೆ. ಜನಸ್ಪಂದನ ಟ್ರಸ್ಟ್ ನ ನಮ್ಮ ನಡಿಗೆ ಬಹಳ ಅರ್ಥಪೂರ್ಣವಾಗಿದೆ, ನಾವು ದೇಶಪ್ರೇಮಿಗಳು ಎಂದರು. ಇದೇ ಸಂದರ್ಭದಲ್ಲಿ 12 ಜನ ಶ್ರಮಿಕರನ್ನು ಮತ್ತು ಸ್ವಾತಂತ್ರ್ಯ ಸೇನಾನಿಗಳನ್ನು ಬೆಳ್ಳಿ ಪದಕಗಳೊಂದಿಗೆ ಪ್ರಶಂಸನಾಪತ್ರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಡ ಶೆಟ್ಟಿಹಳ್ಳಿ ಸತೀಶ ಅತಿಥಿಯಾಗಿ ಭಾಗವಹಿಸಿದ್ದರು. ಸಂವಿಧಾನ ಸಂರಕ್ಷಣೆ  ಪಡೆಯ ಅಧ್ಯಕ್ಷ ಲೋಕೇಶ್, ಅಲ್ಲಾಭಕಾಸ್, ದೇವರಾಜ್ ,ಅನೇಕ ಅಭಿಮಾನಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More