Author: admin

ಬೆಳಗಾವಿ ದಕ್ಷಿಣದಲ್ಲಿ ನಮ್ಮ ಪಕ್ಷ ಗೆಲ್ಲಲು ಈ ಸಭೆ ಮಾಡುತ್ತಿದ್ದೇವೆ, ಬರುವಂತ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕೆ ಗೆಲ್ಲಬೇಕು ಎಂದು ನಿಮಗೆ ಈಗಾಗಲೇ ತಿಳಿದಿದೆ, ಜನರಿಗೆ ಉಪಯೋಗವಾಗುವಂಥ ಗ್ಯಾರೆಂಟಿ ಯೋಜನೆಗಳನ್ನು ನಾವು ಇಡೀ ರಾಜ್ಯಕ್ಕೆ ನೀಡಿದ್ದೇವೆ, ನುಡಿದಂತೆ ನಡೆಸಿದ್ದೇವೆ ಇಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಜನರಿಗೆ ಬೇಕಾದ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡಿದೆ, ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ಸಿಗೆ ನೀವು ಬೆಂಬಲ ನೀಡಬೇಕು ಎಂದು ಕರೆ ನೀಡಿದರು. ಬೆಳಗಾವಿಯ ದಕ್ಷಿಣದಲ್ಲಿ ಇಲ್ಲಿವರೆಗೆ ನಮ್ಮ ಪಕ್ಷ ತೃಪ್ತಿಕರ ಪಲಿತಾಂಶ ನೀಡಿಲ್ಲ, ಅದಕ್ಕೆ ನಾವು ಇಲ್ಲಿ ಹೆಚ್ಚಿನ ಕಾಳಜಿ ನೀಡಿ, ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಸೇರಿ ಗೆಲ್ಲಿಸೋಣ. ಕಳೆದ ಹತ್ತು ವರ್ಷದಲ್ಲಿ ಬೆಳಗಾವಿ ದಕ್ಷಿಣದಲ್ಲಿ ನಾಲ್ಕು ಚುನಾವಣೆ ಮಾಡಿದ್ದೇವೆ. ಈ ಚುನಾವಣೆಯಲ್ಲಿ, ಈ ಕ್ಷೇತ್ರದಲ್ಲಿ ನೀವು ಕೇವಲ 60…

Read More

ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತುನು ಮೇಲೆ ದಾಳಿ ಮಾಡಿರೋ  ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಘಟನೆ ನಡೆದಿದ್ದು, ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು. ಜೆಡಿಎಸ್ ಕಾರ್ಯಕರ್ತರ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿ, 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಂಸದ ಡಿ.ಕೆ ಸುರೇಶ್, ಶಾಸಕ ಡಾ. ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಗಳನ್ನು ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ ಇರಿಸಲಾಗಿತ್ತು. ಮಧ್ಯಾಹ್ನ ಕುಕ್ಕರ್ ಕೇಳಿದ್ದ ಮಹಿಳೆ ಮೇಲೆ‌ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದ ಆರೋಪ ಕೇಲಿ ಬಂದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ಪಟ್ಟಣದಲ್ಲಿ  ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ರಿಂದ ಹಂಚಲಾಗುತ್ತಿರುವ ಕುಕ್ಕರ್ ಎಂಬ ಆರೋಪ ವ್ಯಕ್ತವಾಗಿದ್ದು, ಕುಕ್ಕರ್…

Read More

ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ಮಾ. 20 ರಂದು ನಡೆದಿದೆ. ಮೃತನನ್ನು ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್ ಆಚಾರ್ಯ ಎಂಬುವವರ ಪುತ್ರ ಪ್ರದೀಪ್(19) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡು ಎಂಬಲ್ಲಿಗೆ ತೆರಳಿದ ಪ್ರದೀಪ್ ಕಾವೇರಿ ನದಿಗೆ ಇಳಿದಿದ್ದ. ಈ ಸಂದರ್ಭ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಮೀನಿಗೆ ಹಾಕಿದ್ದ ಗಾಳದ ವಯರ್ ಪ್ರದೀಪ್ ನ ಕುತ್ತಿಗೆಗೆ ಸಿಲುಕಿತ್ತು ಎಂದು ಹೇಳಲಾಗಿದೆ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಜರಾಯಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು, ಕಡಿಮೆ ಆದಾಯ ಇರುವ ‘ಸಿ’ ವರ್ಗದ ದೇವಾಲಯಗಳಿಗೆ ಬಳಸುವ ಉದ್ದೇಶದ ಕಾನೂನು ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ಅರ್ಚಕರಿಗೆ ವಿಮೆ ಮತ್ತಿತರ ಸೌಲಭ್ಯಗಳನ್ನು ಹೆಚ್ಚಿಸುವ ಜತೆಗೆ, ಆದಾಯವಿಲ್ಲದ ದೇವಾಲಯಗಳಿಗೆ ನೀಡುವ ಉದ್ದೇಶದಿಂದ ಕಳೆದ ಅಧಿವೇಶನದಲ್ಲಿ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ -2024’ ಅನ್ನು ರೂಪಿಸಲಾಗಿತ್ತು. 1997ರಲ್ಲಿ ಈ ಕಾಯಿದೆಗೆ ತರಲಾಗಿದ್ದ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಈ ಹಂತದಲ್ಲಿ ಮತ್ತೆ ಕಾಯಿದೆಗೆ ತಿದ್ದುಪಡಿ ಮಾಡಬಹುದೇ ಎಂಬ ಕುರಿತು ಹೆಚ್ಚಿನ ವಿವರಣೆ ಮತ್ತು ಸ್ಪಷ್ಟನೆ ಅಗತ್ಯವಿದೆ ಎಂದು ರಾಜ್ಯಪಾಲರು ವಿಧೇಯಕ ವಾಪಸ್ ಕಳಿಸಿರುವುದಕ್ಕೆ ಕಾರಣ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ. ಈ ನಡುವೆಯೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಉಮೇದುವಾರರ ಆಯ್ಕೆ ಬಾಕಿಯಿದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. ಈಗ 17 ಕ್ಷೇತ್ರಗಳನ್ನು ಒಳಗೊಂಡ ಎರಡನೇ ಪಟ್ಟಿ ಸಿದ್ದಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾವ ನಿರೀಕ್ಷೆಯಿದೆ. ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲಿ ಹೆಚ್ಚಿನವರು ಹೊಸಬರು ಮತ್ತು ಯುವಕರು. ಜತೆಗೆ ರಾಜಕೀಯ ಕುಟುಂಬದ ಕುಡಿಗಳೂ ಇದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಂಡು ಬಳಿಕ ಎಐಸಿಸಿಗೆ ಮಾಹಿತಿ ತಲುಪಿಸಲಾಗುವುದು. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು ಚಿತ್ರದುರ್ಗ – ಚಂದ್ರಪ್ಪ ರಾಯಚೂರು – ಕುಮಾರ…

Read More

ಏಪ್ರಿಲ್ 8, 2024 ರಂದು ಅಮೆರಿಕದಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಈ ಕ್ಷಣಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ವರದಿಯ ಪ್ರಕಾರ ಈ ಅಪರೂಪದ ದೃಶ್ಯ ಹಲವೆಡೆ ಕಾಣಸಿಗುತ್ತಿಲ್ಲ. ಮೆಕ್ಸಿಕೋ, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾವನ್ನು ಹೊರತುಪಡಿಸಿ ಅಮೆರಿಕದ ಕೆಲವು ಭಾಗಗಳಲ್ಲಿ ಇದರ ಪರಿಣಾಮ ಗೋಚರಿಸುತ್ತದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಈ ‘ಮ್ಯಾಪ್ ಆಫ್ ನೋಪ್’ ಎಂದರೇನು? ಬನ್ನಿ ತಿಳಿಯೋಣ. ಸಂಪೂರ್ಣ ಸೂರ್ಯಗ್ರಹಣ ಗೋಚರಿಸದ ಅಮೆರಿಕದ ನಗರಗಳ ನಕ್ಷೆಯನ್ನು ಮಾಡಲಾಗಿದೆ. ಈ ಭಾಗಗಳಲ್ಲಿ ಸೂರ್ಯಗ್ರಹಣದ ಭಾಗಶಃ ಹಂತವನ್ನು ಮಾತ್ರ ಕಾಣಬಹುದು ಎಂದು ಹೇಳಲಾಗುತ್ತಿದೆ. ಗ್ರೇಟ್ ಅಮೇರಿಕನ್ ಎಕ್ಲಿಪ್ಸ್ ಡಾಟ್ ಕಾಮ್ ‌ನ ಸಹ-ಸಂಸ್ಥಾಪಕ ಮೈಕೆಲ್ ಝೈಲರ್ ವಿಶೇಷ ನಕ್ಷೆಯನ್ನು ರಚಿಸಿದ್ದಾರೆ. ಅದರ ಹೆಸರು ‘ಮ್ಯಾಪ್ ಆಫ್ ನೋಪ್’. ಝೈಲರ್ ಮಾಡಿದ ನಕ್ಷೆಯಲ್ಲಿ ಓರೆಯಾದ ಪಟ್ಟಿಯನ್ನು ತೋರಿಸಲಾಗಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸಂಪೂರ್ಣ ಸೂರ್ಯಗ್ರಹಣ ಗೋಚರಿಸುತ್ತದೆ. ಈ ಅವಧಿಯಲ್ಲಿ ಸೂರ್ಯನ ಕಿರಣಗಳು ಭೂಮಿಯ ಕೆಲವು ಭಾಗಗಳನ್ನು ತಲುಪುವುದಿಲ್ಲ. ಈ ವೇಳೆ…

Read More

ಲೋಕಸಭಾ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಇದೀಗ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 102 ಸಂಸದೀಯ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನಾಮಪತ್ರ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ. ಹಬ್ಬದ ಕಾರಣದಿಂದಾಗಿ, ಮೊದಲ ಹಂತದಲ್ಲಿ ಮತದಾನಕ್ಕೆ ಹೋಗುವ ಬಿಹಾರದ ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ಬಿಹಾರದ 40 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 28ರಂದು ನಾಮನಿರ್ದೇಶನ ಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಬಿಹಾರಕ್ಕೆ, ಇದು ಮಾರ್ಚ್ 30 ರಂದು ನಡೆಯಲಿದೆ. ಇನ್ನು ತಮಿಳುನಾಡಿನ ಎಲ್ಲಾ 29 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 20 ಕೊನೆಯ ದಿನವಾಗಿದ್ದರೆ, ಬಿಹಾರಕ್ಕೆ ಏಪ್ರಿಲ್ 2 ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿದೆ. 18ನೇ ಲೋಕಸಭೆಗೆ ಏಪ್ರಿಲ್ 19ರಂದು ಚುನಾವಣೆ ಆರಂಭವಾಗಲಿದ್ದು, ನಂತರದ…

Read More

ಈಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಅವರು ಇತ್ತೀಚೆಗೆ  “ಮೆದುಳಿನ ಶಸ್ತ್ರಚಿಕಿತ್ಸೆಗೆ ” ಒಳಗಾಗಿದ್ದು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಇಶಾ ಫೌಂಡೇಶನ್ ತಿಳಿಸಿದೆ. ಕಳೆದ ವಾರದಿಂದ ತೀರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ವೈದ್ಯರು ಅವರ ತಲೆಯ ಸ್ಕ್ಯಾನಿಂಗ್ ಮಾಡಿಸಿದಾಗ, ಮೆದುಳಿನ ಒಳಗೆ ರಕ್ತಸ್ರಾವ ಆಗಿರುವುದು ಕಂಡುಬಂದಿದೆ ತಕ್ಷಣ ವೈದ್ಯರು ಸದ್ಗುರು ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಸದ್ಗುರು ಅವರ ಆರೋಗ್ಯ ನಿರೀಕ್ಷೆಗೂ ಮೀರಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ” ಎಂದು ಇಶಾ ಫೌಂಡೇಶನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಪೊಲೊ ಆಸ್ಪತ್ರೆಯ ಡಾ. ವಿನಿತ್ ಸೂರಿ ಅವರನ್ನು ಉಲ್ಲೇಖಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭೆ ಚುನಾವಣೆ ಚುನಾವಣೆ ಘೋಷಣೆ ಆದ ಬಳಿಕ ರಾಜ್ಯದಲ್ಲಿ ಅಕ್ರಮ ಹಣ ಸಾಗಾಟ ಹೆಚ್ಚಾಗಿದೆ. ಅಕ್ರಮ ಹಣ ಸಾಗಾಟ ಪತ್ತೆಗೆ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನೂ ನಡೆಸುತ್ತಿದ್ದಾರೆ. ಅದರಲ್ಲೂ ಮಂಗಳವಾರ(ಮಾ.19) ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ಹಣ ಸೀಜ್‌ ಮಾಡಿದ್ದಾರೆ. ಹಲವೆಡೆ, ಕಂತೆ ಕಂತೆ ನಗದು ಪತ್ತೆಯಾಗಿದ್ದರೆ, ರಾಮನಗರದಲ್ಲಿ ಗರಿ ಗರಿ ನೋಟಿನ ಜೊತೆ ರಾಶಿರಾಶಿ ಸೀರೆಗಳು ಸಿಕ್ಕಿವೆ. ಲೋಕಸಭೆ ಚುನಾವಣೆಯ ಹೊತ್ತಲ್ಲೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿರುವ ಖಾಸಗಿ ಗೋದಾಮಿನಲ್ಲಿ ರಾಶಿರಾಶಿ ಸೀರೆಗಳು ಪತ್ತೆಯಾಗಿವೆ. ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಸೀರೆಗಳು ಪತ್ತೆಯಾಗಿವೆ. ಜೆಡಿಎಸ್​ ಕಾರ್ಯಕರ್ಯರು ದಾಳಿ ಮಾಡಿದ್ದು, ಕಾಂಗ್ರೆಸ್​ನವರು ಸೀರೆಗಳನ್ನು ತರಿಸಿದ್ದಾರೆಂದು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್​ಪಿ ದಿನಕರ್ ಶೆಟ್ಟಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿ ಸೀರೆಗಳು ಪತ್ತೆಯಾಗಿರುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ‌ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿಕೆ ನೀಡಿದ್ದು, ಚುನಾವಣೆಗಾಗಿ ಸಂಗ್ರಹಿಸಿಟ್ಟಿದ್ದರಾ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. VRL ಗೋದಾಮಿನಲ್ಲಿ ಪತ್ತೆಯಾದ…

Read More

ತುಮಕೂರು:  ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಗೀತಾ,  ಇಂದು ಬೆಳಗ್ಗೆ 20 ಸಾವಿರ ಹಣ ಲಂಚ ಪಡೆದಿದ್ದರು. ಬಳಿಕ ಸಂಜೆ 30 ಸಾವಿರ ರೂಪಾಯಿ ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್‌ ತನ್ನ ಮನೆಗೆ ಕರೆಸಿಕೊಂಡು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ತಹಶೀಲ್ದಾರ್‌ ಲಾಕ್‌ ಆಗಿದ್ದಾರೆ. ಸದ್ಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಅವರನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು,  ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More