Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ತುಮಕೂರು: ಖಾಸಗಿ ಬಸ್ ನಲ್ಲಿ ಆ್ಯಸಿಡ್ ಸಾಗಿಸುತ್ತಿದ್ದ ವೇಳೆ ಆ್ಯಸಿಡ್ ಇದ್ದ ಡಬ್ಬಿ ಸಿಡಿದು ಐವರು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತುಮಕೂರು ತಾಲೂಕು ಗುಳೂರು ಬಳಿ ನಡೆದಿದೆ. ಟಾಯ್ಲೆಟ್ ಗೆ ಬಳಸುವ ಆ್ಯಸಿಡ್ ಬಾಟಲ್ ಸ್ಪೋಟಹೊಂದಿದೆ. ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿವೆ. ನಾಜೀಯಾ ಸುಲ್ತಾನ್, ರಾಜಲಕ್ಷ್ಮೀ ಗಾಯಗೊಂಡವರಾಗಿದ್ದು, ಆಸಿಡ್ ಸಾಗಿಸುತ್ತಿದ್ದ ಶಕೀಲಾ ಬಾನು ಕೈಗೆ ಸಹ ಗಾಯವಾಗಿದೆ. ಖಾಸಗಿ ಬಸ್ ನಲ್ಲಿ ಆ್ಯಸಿಡ್ ಬಾಟಲ್ ಇಟ್ಟುಕೊಂಡು ತುಮಕೂರು ಕಡೆ ಬರುತ್ತಿದ್ದ ಮಹಿಳೆಯು ತುಮಕೂರು ತಾಲೂಕಿನ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ನಲ್ಲಿ ಬಸ್ ಹತ್ತಿದರು. ಈ ವೇಳೆ ಖಾಸಗಿ ಬಸ್ ನಲ್ಲಿ ಆ್ಯಸಿಡ್ ತುಂಬಿದ್ದ ಬಾಟಲ್ ಸ್ಪೋಟಗೊಂಡಿದೆ. ಒಂದು ಕ್ಷಣ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಶಾಕ್ ಆಗಿದ್ದರು. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯವಾದವರನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಬಾಟಲ್ ನಲ್ಲಿ ಆ್ಯಸಿಡ್…
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ , ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ವತಂತ್ರ್ಯ ಅಭ್ಯರ್ಥಿಯಾಗಿ ಬಿಜೆಪಿ ವಿರುದ್ದ ಸ್ಪರ್ಧಿಸುತ್ತಿರುವ ಬಗ್ಗೆ, ಮಾಜಿ ಸಿಎಂ ಯಡಿಯೂರಪ್ಪ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಥಾ ತೀರ್ಮಾನ ಬೇಡ ಎಂದು ಸಾಕಷ್ಟು ಬಾರಿ ಹೇಳಿದ್ದೇವೆ ಎಂದರು. ನಾನೂ ಸೇರಿದಂತೆ ಹಲವು ಹಿರಿಯ ನಾಯಕರು ಈಶ್ವರಪ್ಪ ಅವರನ್ನು ಮನವೊಲಿಸಲು ಯತ್ನಿಸಿದ್ದೇವೆ. ಆದರೆ ಈಶ್ವರಪ್ಪ ಕೇಳುತ್ತಿಲ್ಲ. ಮುಂದೆ ಏನಾಗುತ್ತದೆಯೋ ನೋಡೋಣ. ಎಲ್ಲವರೂ ಸರಿ ಹೋಗಲಿದೆ ಎಂದು ಭಾವಿಸುತ್ತೇನೆ ಎಂದು ಬಿ.ಎಸ್.ವೈ ಹೇಳಿದರು. ಜೊತೆಗೆ, ಮಾಧುಸ್ವಾಮಿಯವರ ಜೊತೆಗೂ ಮಾತನಾಡಲಿದ್ದೇನೆ ಎಂದರು. ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಜೆಡಿಸ್ ಮತ್ತು ಬಿಜೆಪಿ ಒಟ್ಟಾಗಿ ಪ್ರಚಾರ ನಡೆಸಲಿದೆ. ಮಾಜಿ ಪ್ರಧಾನಿ ದೇವೇಗೌಡರೂ ಸಹ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಈ ಬಾರಿ ಬೆಳಗಾವಿಯಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ. ನಾನು ಅಲ್ಲಿಂದಲೇ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧಾರವಾಡದಿಂದ ಟಿಕೆಟ್ ಸಿಗುವ ಬಗ್ಗೆ ಶೆಟ್ಟರ್ ಮೊದಲು ವಿಶ್ವಾಸ ಹೊಂದಿದ್ದರು. ಆದರೆ ಟಿಕೆಟ್ ಕೈತಪ್ಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಲಭಿಸಿದೆ. ಭಾರೀ ನಿರಾಸೆಯ ಬಳಿಕ ಇದೀಗ ಶೆಟ್ಟರ್ ತಮಗೆ ಬೆಳಗಾವಿಯಿಂದ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಾರೆ. ಬೆಳಗಾವಿಯಿಂದ ನನಗೆ ಟಿಕೆಟ್ ಸಿಗುತ್ತದೆ. ಅಲ್ಲಿಂದ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ಇದರಲ್ಲಿ ಯಾವುದೇ ಸಂಶಯ ಬೇಡ. ಈಗಾಗಲೇ ಬೆಳಗಾವಿಯ ಪ್ರಮುಖರ ಜೊತೆ ಎರಡ್ಮೂರು ಬಾರಿ ಮಾತನಾಡಿದ್ದೇನೆ. ಎಲ್ಲರೂ ಸೇರಿ ಚುನಾವಣೆ ಮಾಡೋಣ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಅಧಿಕೃತವಾಗಿ ಟಿಕೆಟ್ ಘೋಷಣೆಯ ನಂತರ ಬೆಳಗಾವಿಗೆ ಬರುವಂತೆ ಅಲ್ಲಿನ ಮುಖಂಡರು ಹೇಳಿದ್ದಾರೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನೆಗೆ ಚುನಾವಣಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಹೆಬ್ಬಾಳ್ಕರ್ ತಮ್ಮ ಗೃಹ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ನಡೆಸಿದ್ದು, ಇದೇ ವೇಳೆ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಅಧಿಕಾರಿಗಳು ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಸಚಿವೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವನ್ನೂ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಮೂಲಗಳ ಪ್ರಕಾರ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿವಾಸದ ಪಕ್ಕದಲ್ಲಿ ವಿಶಾಲವಾದ ಗೃಹಕಚೇರಿಯಿದೆ. ಬೆಳಗ್ಗೆಯಿಂದ 500ಕ್ಕೂ ಹೆಚ್ಚು ಅಂಗನವಾಡಿ ಆಶಾಕಾರ್ಯಕರ್ತೆಯರು ಸೇರಿದ್ದು, ಈ ಬಗ್ಗೆ ಅಪರಿಚಿತರೊಬ್ಬರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಚುನಾವಣಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿ, ಹಲವರಿಂದ ಮಾಹಿತಿ ಸಂಗ್ರಹಿಸಿ ನಂತರ ಸಚಿವೆಯಿಂದ ವಿವರ ಪಡೆದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆ…
ಬೆಂಗಳೂರು: ʻʻನಾನೇ ಸ್ಟ್ರಾಂಗ್ ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಹೇಗಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲʼʼ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಗೇಲಿ ಮಾಡಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ ಆಡಳಿತ ಸಿದ್ದರಾಮಯ್ಯರದು. ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ ಟೀಕಿಸಿದರು. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು. ಹಿರಿಯ ಸಚಿವರು ಮತ್ತು ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ನಿಮ್ಮ ಸರಕಾರದ ನೀತಿಯ ಪರಿಣಾಮವಾಗಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ ಬೆತ್ತಲೆ ಮೆರವಣಿಗೆ ನಡೆಯುತ್ತಿದೆ.…
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೊ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/110 ಕೆ.ವಿ ಸೋಮಸಮುದ್ರ ವಿದ್ಯುತ್ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಮಾ.21 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ 3 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-3/11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ ಕ್ಯಾಂಪ್ ಸೇರಿ ಮುಂತಾದ…
ಮೈಸೂರು: ಮೈಸೂರಿನ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಯಾಗಿದ್ದ ಎಚ್.ಸಿ. ಹರೀಶ್ (40) ಎಂಬುವರ ಮೃತದೇಹ ಪತ್ತೆಯಾಗಿದೆ. ಸಾಲಿಗ್ರಾಮ ತಾಲೂಕಿನ ಕುಪ್ಪೆ ಅರಣ್ಯದ ಮಳಲಿ- ಹೊಸಕೋಟೆ ರಸ್ತೆಯ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ನೇಹಿತರು ಬಂದು ಕರೆದುಕೊಂಡು ಹೋಗಿ ಇವರನ್ನು ಕೊಲೆ ಮಾಡಿದ್ದಾರೆ ಎಂಬ ಸಂಶಯ ಕೇಳಿಬರುತ್ತಿದೆ. ಮಾಹಿತಿ ತಿಳಿದ ಸಾಲಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕೊಲೆಯ ಹಿಂದಿನ ವಿದ್ಯಮಾನಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬಳು ಹೆತ್ತ ಮಗುವನ್ನು ಉಸಿರುಗಟ್ಟಿಸಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗು ಶೃತಿಕಾ(2) ಸಾವನ್ನಪ್ಪಿದ್ದು, ತಾಯಿ ಚಿನ್ನಾ ಆಸ್ಪತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರತಿನಿತ್ಯ ಗಂಡ ಲಕ್ಷ್ಮೀ ನಾರಾಯಣ ವಿನಾಕಾರಣ ನೀಡುತ್ತಿದ್ದ ಹಿಂಸೆಯಿಂದ ಚಿನ್ನಾ ಬೇಸತ್ತಿದ್ದಳು. ಇದರಿಂದಾಗಿ, ಮಗುವನ್ನು ಉಸಿರುಗಟ್ಟಿಸಿ ಹತ್ಯೆಗೈದ ಚಿನ್ನಾ ತಾನೂ ಸಹ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ. ಪತಿ ಲಕ್ಷ್ಮೀ ನಾರಾಯಣ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಬೆಂಕಿ ಆರಿಸಲು ಹೋದ ರೈತ ಬೆಂಕಿಗಾಹುತಿಯಾದ ದುರಂತ ಘಟನೆ ನಡೆದಿದೆ. ಕೃಷ್ಣೇಗೌಡ (62) ಮೃತರೈತನಾಗಿದ್ದಾನೆ. ಕೃಷ್ಣೇಗೌಡ ತಮ್ಮ ಜಮೀನಿಗೆ ತೆರಳಿದ್ದ ವೇಳೆ, ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿದ್ದನ್ನು ಕಂಡಿದ್ದಾರೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಭೀತಿಗೊಂಡ ಕೃಷ್ಣೇಗೌಡರು ಬೆಂಕಿ ಆರಿಸಲು ಹೋಗಿದ್ದು, ಧಗಧಗಿಸಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿ ಕೃಷ್ಣೇಗೌಡರು ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಗಾಯಗೊಂಡ ರೈತನನ್ನು ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೃಷ್ಣೇಗೌಡರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಎಫ್ ಎಸ್ ಎಲ್ ಸಿಬ್ಬಂದಿ ಮತ್ತು ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296