Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ದೆಹಲಿಯ ಮದ್ರಾಸ್ ಕಾಫಿ ಹೌಸ್ ನ ಈ ವೀಡಿಯೋವನ್ನು ನೋಡಿ ಜನ ಆಶ್ಚರ್ಯಚಕಿತರಾಗಿದ್ದಾರೆ. ಅಷ್ಟೇ ಅಲ್ಲ, ದುಬಾರಿ ಹೋಟೆಲ್ ಗಳಿಗಿಂತಲೂ ಉಳಿದ ಸಣ್ಣ ಪುಟ್ಟ ಹೊಟೇಲ್ ಗಳೇ ವಾಸಿ ಎಂದು ಜನರಾಡಿಕೊಳ್ಳುತ್ತಿದ್ದಾರೆ. ದೇಶದ ರಾಜಧಾನಿ ದೆಹಲಿಯಿಂದ ಈ ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು, ಕನ್ನಾಟ್ ಪ್ಲೇಸ್‌ನಲ್ಲಿರುವ ಪ್ರಸಿದ್ಧ ಮದ್ರಾಸ್ ಕಾಫಿ ಹೌಸ್ ನಲ್ಲಿನ ದೋಸೆಯಲ್ಲಿ 8 ಜಿರಳೆಗಳು ಪತ್ತೆಯಾಗಿವೆ. ಅದರ ವೀಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋವನ್ನು ಇಶಾನಿ ಎಂಬ ಬಳಕೆದಾರರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಾರ್ಚ್ 7 ರಂದು ಈ ಘಟನೆ ಸಂಭವಿಸಿದೆ ಎಂದು ಇಶಾನಿ ಹೇಳಿದ್ದಾರೆ. “ನಾನು ಮಧ್ಯಾಹ್ನ 1 ಗಂಟೆ ಸುಮಾರಿಗೆ ನನ್ನ ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್ ನಲ್ಲಿರುವ ಮದ್ರಾಸ್ ಕಾಫಿ ಹೌಸ್ ಗೆ ಹೋದೆ. ಅಲ್ಲಿ ನಾವು ಎರಡು ದೋಸೆಗಳನ್ನು ಆರ್ಡರ್ ಮಾಡಿದೆವು, ಆದರೆ ನಾನು ದೋಸೆಗಳನ್ನು ತಿಂದಾಗ, ಅವು ವಿಚಿತ್ರವಾದ ರುಚಿಯನ್ನು ಹೊಂದಿದ್ದವು. ಸರಿಯಾಗಿ ನೋಡಿದಾಗ ಅದರಲ್ಲಿ ಜಿರಳೆ ಕಂಡು ಬಂತು. ದೋಸೆಯಲ್ಲಿ ಒಟ್ಟು…
ಇದೊಂದು ಅಪರೂಪದ ಜನನಾಂಗದ ಸ್ಥಿತಿಯಾಗಿದ್ದು, ಇದರಲ್ಲಿ ಬಳಲುತ್ತಿರುವವರು ಎರಡು ಯೋನಿ ಹಾಗೂ ಎರಡು ಗರ್ಭಾಶಯಗಳನ್ನು ಹೊಂದಿರುತ್ತಾರೆ ಎಂದು ಹೇಳಲಾಗಿದೆ. 25ರ ಹರೆಯದ ಆನಿ ಚಾರ್ಲೊಟ್ ಎಂಬ ಯುವತಿಗೆ ಯೂಟರಸ್ ಡಿಡೆಲ್ಸಿಸ್ ಎಂಬ ಅಪರೂಪದ ಸ್ಥಿತಿಯನ್ನು ಹೊಂದಿರುವುದು ಪತ್ತೆಯಾಗಿದೆ. ಈ ಮಹಿಳೆಗೆ ಎರಡು ಯೋನಿ, ಎರಡು ಗರ್ಭಾಶಯವಿದೆಯಂತೆ. ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ಈ ಯುವತಿಯೂ ಇಬ್ಬರೂ ಪುರುಷರಿಂದ ಎರಡು ಮಕ್ಕಳನ್ನು ಪಡೆಯಬಹುದು. ಸಂತಾನೋತ್ಪತ್ತಿ ವ್ಯವಸ್ಥೆಯು ಎರಡು ಭಾಗಗಳಾಗಿ ವಿಭಜಿಸಲ್ಪಟ್ಟಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದ್ದಾರೆ. ಗರ್ಭಾಶಯದ ಡಿಡೆಲ್ಫಿಸ್ ಎಂದರೆ ಮಹಿಳೆಯು ಎರಡು ಗರ್ಭಾಶಯ ಮತ್ತು ಎರಡು ಯೋನಿಗಳೊಂದಿಗೆ ಜನಿಸುವ ಸ್ಥಿತಿಯಾಗಿದೆ. ಇದು ಅತ್ಯಂತ ಅಪರೂಪದ ಪ್ರಕರಣವಾಗಿದ್ದು, ಕೆಲವೊಮ್ಮೆ ಎರಡೂ ಗರ್ಭಾಶಯಗಳಿಗೆ ಒಂದೇ ಗರ್ಭಕಂಠವಿರುತ್ತದೆ. ಕೆಲವೊಮ್ಮೆ ಪ್ರತಿ ಗರ್ಭಾಶಯವು ಗರ್ಭಕಂಠವನ್ನು ಹೊಂದಿರುತ್ತದೆ. ಈ ಸಮಸ್ಯೆಯಿರುವ ಮಹಿಳೆಯರಲ್ಲಿ ಯೋನಿಯನ್ನು ತೆಳುವಾದ ಪೊರೆಯಿಂದ ಎರಡು ಪ್ರತ್ಯೇಕ ತೆರೆಯುವಿಕೆಗಳಾಗಿ ವಿಂಗಡಿಸಲಾಗಿದೆ. ಇಂತಹ ಪ್ರಕರಣಗಳು ಗರ್ಭಾವಸ್ಥೆಯಲ್ಲಿ ಮಗುವಿನ ಬೆಳವಣಿಗೆಯು ಕೇವಲ ಆರರಿಂದ ಇಪ್ಪತ್ತೆರಡು ವಾರಗಳಲ್ಲಿದ್ದಾಗ ಈ ಅಂಗಗಳು ಅಭಿವೃದ್ಧಿಗೊಳ್ಳುತ್ತವೆ.…
ವಿಪರೀತ ಕುಡಿದು ಬಂದು ಗಲಾಟೆ ಮಾಡುತ್ತಿದ್ದನೆಂಬ ಕಾರಣಕ್ಕೆ ಪತಿಯ ಮರ್ಮಾಂಗ ಹಿಚುಕಿ ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಂಬಾಣಿ ತಾಂಡಾದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೋಪಣ್ಣ ಲಮಾಣಿ(44) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ ಶಾಂತವ್ವ ಲಮಾಣಿ ಎಂಬಾಕೆಯೇ ಪತಿಯನ್ನ ಕೊಲೆ ಮಾಡಿದ ಆರೋಪಿಯಾಗಿದ್ದು, ಸಹಜ ಸಾವು ಎಂದು ಅಂತ್ಯಕ್ರಿಯೆ ಮಾಡಿದ ಹದಿನೈದು ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಟೋಪಣ್ಣ. ಪ್ರತಿ ದಿನವೂ ಮದ್ಯ ಸೇವನೆ ಮಾಡಿ ಮನೆಗೆ ಬರುತ್ತಿದ್ದ. ಇದರಿಂದ ಬೇಸತ್ತಿದ್ದ ಪತ್ನಿ ಶಾಂತವ್ವ. ಪತಿಯನ್ನ ಮುಗಿಸಲು ಸಂಚು ಮಾಡಿದ್ದಳು. ಎಂದಿನಂತೆ ಹದಿನೈದು ದಿನಳ ಹಿಂದೆಯೂ ಮದ್ಯ ಸೇವನೆ ಮಾಡಿ ಮನೆಗೆ ಬಂದಿದ್ದ ಪತಿ ಟೋಪಣ್ಣ. ಕುಡಿದು ನಶೆಯಲ್ಲಿದ್ದ ಪತಿಯ ಮರ್ಮಾಂಗ ಹಿಚುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಯಾರಿಗೂ ಅನುಮಾನ ಬಾರದಂತೆ, ಕುಡಿದ ನಶೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ಕತೆ…
ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೇ, ಅತ್ಯುತ್ತಮ ಮಾದರಿ ವ್ಯಕ್ತಿತ್ವದಿಂದಲೂ ಜನರ ಮನಸ್ಸಿನಲ್ಲಿ ಉಳಿದುಕೊಂಡವರು ಪುನೀತ್ ರಾಜಕುಮಾರ್ ಅವರು. ತಮ್ಮದೇ ಪ್ರೊಡಕ್ಷನ್ ಹೌಸ್ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಎಷ್ಟೋ ಜನರ ಜೀವನಕ್ಕೆ ದಾರಿ ದೀಪವಾಗಿದ್ದಾರೆ ನಮ್ಮ ಅಪ್ಪು. ನಟನೆಯೊಂದಿಗೆ ಅನೇಕ ಕಾರ್ಯಕ್ರಮಗಳ ನಿರೂಪಣೆ, ಗಾಯಕನಾಗಿ ಅಪ್ಪು ಎಲ್ಲರನ್ನು ಸೆಳೆಯುವಲ್ಲಿ ಯಶಸ್ವಿಯಾದವರು. ಕನ್ನಡಿಗರ ಎದೆಯಲ್ಲಿ ಎಂದೆಂದಿಗೂ ಜೀವಂತವಾಗಿರುವ ಅಪ್ಪು, ದೊಡ್ಮನೆ ರಾಜಕುಮಾರ ನಮ್ಮೊಡನಿಲ್ಲ ಅಂತ ಅಭಿಮಾನಿಗಳು ಅಂದುಕೊಂಡೇ ಇಲ್ಲ..! ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಷ್ಟೋ ಯುವಜನತೆಗೆ ಸ್ಪೂರ್ತಿ. ಬದುಕಿದರೆ ಅಪ್ಪು ಅವರಂತೆ ಬದುಕಬೇಕು ಎನ್ನುತ್ತಾರೆ ಕನ್ನಡಿಗರು. ಇದೀಗ ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವಿನಯ್ ಗೌಡ ಅವರು ಅಂಧ ಮಗುವನ್ನ ದತ್ತು ಪಡೆದುಕೊಂಡಿದ್ದಾರೆ. ಅಪ್ಪು ಬರ್ತ್ ಡೇ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ಶೇಷಾದ್ರಿಪುರಂನ ಒಂದನೇ ಮುಖ್ಯರಸ್ತೆಯಲ್ಲಿರುವ ಕರ್ನಾಟಕ ಅಂಧರ ಕ್ಷೇಮಾಭ್ಯುದಯ…
ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಎನ್ ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿ ದೇಗುಲದ ರಥಕ್ಕೆ ಆಸಾಮಿಯೊಬ್ಬ ಬೆಂಕಿ ಇಟ್ಟು ಸಂಪೂರ್ಣವಾಗಿ ಸುಟ್ಟು ಹಾಕಿದ್ದನು. ಸುಟ್ಟಿರುವ ರಥವನ್ನು ಹೆಚ್ಚು ದಿನ ನಿಲ್ಲಿಸಬಾರದು ಎಂಬ ಕಾರಣದಿಂದ ಮಂಗಳವಾರ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸೇರಿಕೊಂಡು ಸುಟ್ಟಿರುವ ರಥಕ್ಕೆ ವಿಶೇಷಪೂಜೆ ಸಲ್ಲಿಸಿ ಹೋಮ ಹವನಗಳನ್ನು ನಡೆಸಿ ತೇವಡಿಹಳ್ಳಿ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿಗಳ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಲಾಯಿತು. ರಥ ಕಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ನಿಲ್ಲಿಸಲು ತೀರ್ಮಾನಿಸಿದ್ದ ಗ್ರಾಮಸ್ಥರು ಧಾರ್ಮಿಕ ಗುರುಗಳ ಹಾಗೂ ಸ್ವಾಮೀಜಿಗಳ ಸಲಹೆಯಂತೆ ಜಾತ್ರೆಯನ್ನು ಧಾರ್ಮಿಕವಾಗಿ ನೆರವೇರಿಸಲು ಮುಂದಾಗಿದ್ದಾರೆ. ಕಲ್ಲೇಶ್ವರಸ್ವಾಮಿ ರಥ ಇಲ್ಲದೇ ಇರುವುದರಿಂದ ಗ್ರಾಮದಲ್ಲಿರುವ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ರಥವನ್ನೇ ಬಳಸಿಕೊಂಡು ಈ ಬಾರಿ ಸಂಪ್ರದಾಯ ಬದ್ಧವಾಗಿ ಜಾತ್ರೆಯನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದೊಳಗೆ ಅಗತ್ಯವಿರುವ ಕ್ರಮ ಕೈಗೊಂಡು ನೂತನ ರಥೋತ್ಸವವನ್ನು ಮಾಡಿಸಲೇಬೇಕಿದೆ ಎಂದು ಗ್ರಾಮಸ್ಥರು…
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ ಮತದಾರರನ್ನು ತಲುಪಲು ಇದು ತನ್ನ ʼನ್ಯಾಯ ಪಾತ್ರ’ ಎಂದು ಪಕ್ಷ ಹೇಳುತ್ತದೆ. ಕರಡು ಪ್ರಣಾಳಿಕೆಯ ಮೇಲೆ ಮೂರೂವರೆ ಗಂಟೆಗಳ ಚರ್ಚೆ ನಡೆದಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನುಮೋದನೆ ನೀಡಲು ಮತ್ತು ಅದರ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಲು ಅಧಿಕಾರ ನೀಡಿತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗುವ ಐದು ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಸಮಯದಲ್ಲಿ ಘೋಷಿಸಲಾಯಿತು. ಕಾಂಗ್ರೆಸ್ ಪ್ರಕಾರ, ಅದರ ಪ್ರಣಾಳಿಕೆಯು ಪಕ್ಷದ ಐದು ನ್ಯಾಯಗಳನ್ನು ಒಳಗೊಂಡಿದೆ. ‘ಭಾಗಿತ್ವ ನ್ಯಾಯ’, ‘ಕಿಸಾನ್ ನ್ಯಾಯ’, ‘ಮಹಿಳಾ ನ್ಯಾಯ’, ‘ಕಾರ್ಮಿಕ ನ್ಯಾಯ’ ಮತ್ತು ‘ಯುವ ನ್ಯಾಯ’ಗಳನ್ನು ಆಧರಿಸಿದೆ. ‘ಯುವ ನ್ಯಾಯ’ ಅಡಿಯಲ್ಲಿ ಪಕ್ಷವು ಮಾತನಾಡಿರುವ ಐದು ಖಾತರಿಗಳಲ್ಲಿ…
ತಮ್ಮ ಮಗ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗಿಳಿಯುತ್ತೇನೆಂದು ಮುಂದಾಗಿದ್ದು, ಇದೀಗ ಈ ಬಗ್ಗೆ ಈಶ್ವರಪ್ಪನವರು ಬಿಗ್ ಅಪ್ಡೇಟ್ ನೀಡಿದ್ದಾರೆ. ಹೌದು, ಮನವೊಲಿಕೆಗೆ ಯಾರೇ ಬಂದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ, ಸ್ಪರ್ಧೆ ಮಾಡುವುದು ಅಚಲ. ಈ ಬಗ್ಗೆ ಬಿಜೆಪಿ ಮುಖಂಡರು ವಿಫಲ ಪ್ರಯತ್ನ ನಡೆಸುವುದನ್ನು ನಿಲ್ಲಿಸಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಂದಹಾಗೆ, ತಾಲೂಕಿನ ಜಡೆ ಮಠಕ್ಕೆ ಭೇಟಿ ನೀಡಿ ಡಾ. ಮಹಾಂತ ಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದ ಅವರು, ನಾನು ನನ್ನ ಪುತ್ರನಿಗಾಗಿ ಸ್ಪರ್ಧಿಸುತ್ತಿಲ್ಲ. ಪಕ್ಷ ಸರಿಪಡಿಸಲು ಈ ಸ್ಪರ್ಧೆ. ಈಗ ನನ್ನ ಪುತ್ರ ಕಾಂತೇಶ್ ಗೆ ಹಾವೇರಿಯಿಂದ ಟಿಕೆಟ್ ನೀಡುತ್ತೇನೆ ಎಂದರೂ ಅದು ಬೇಕಾಗಿಲ್ಲ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದವರ ಸ್ವತ್ತಲ್ಲ. ನಾನೂ ಕೂಡ ಪಕ್ಷಕ್ಕಾಗಿ ದುಡಿದಿದ್ದೇನೆ. ಇಡೀ ಪಕ್ಷವನ್ನು ತಮ್ಮ…
ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವು ಆದಿಮಲಿ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಜೊತೆಗೆ 1 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. 14ಜನ ವಾಹನದಲ್ಲಿ ಇದ್ದಿದ್ದು, ಅವರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಈ ಅಪಘಾತವು ಮಂಗಳವಾರ ಸಂಜೆ ಆರು ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೇಗೆ ಸಂಭವಿಸಿತು ಎಂಬ ವಿವರ ಇನ್ನಷ್ಟೇ ತಿಳಿಯಬೇಕಿದೆ. ಗಾಡಿಯಲ್ಲಿ ಪ್ರವಾಸಿಗರಿದ್ದು, ತಮಿಳುನಾಡಿನ ಥೇಣಿಯಿಂದ ಬಂದಿದ್ದು, ಇಲ್ಲಿನ ಮಂಕುಲಂಗೆ ಭೇಟಿ ನೀಡಿ ವಾಪಾಸ್ಸಾಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನಮ್ಮ ಮೆಟ್ರೋ ಸಿಬ್ಬಂದಿಯೋರ್ವ ಅಸಭ್ಯ ವರ್ತನೆಯನ್ನು ತೋರಿದ್ದು, ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ವರ್ತನೆ ತೋರಿದ್ದು, ಈ ಘಟನೆ ಜಾಲಹಳ್ಳಿ ಮೆಟ್ರೋ ಫ್ಲ್ಯಾಟ್‌ಫಾರ್ಮ್‌ನಲ್ಲಿ ನಡೆದಿದೆ. ಈ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾರಣ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ತನ್ನ ಖಾಸಗಿ ಅಂಗವನ್ನು ಸ್ಪರ್ಶ ಮಾಡಿ ಕೆಲವು ಸನ್ನೆಗಳನ್ನು ನಿರಂತರವಾಗಿ ಮಾಡುತ್ತಾ ನನ್ನನ್ನು ದಿಟ್ಟಿಸಿ ನೋಡುತಿದ್ದು, ಇದು ಮಧ್ಯಾಹ್ನ 2.30 ರ ಸುಮಾರಿಗೆ ನಡೆದಿದೆ. ಹಗಲು ಹೊತ್ತಿನಲ್ಲಿಯೇ ಇಂತಹ ಘಟನೆ ನಿಜಕ್ಕೂ ಕೆಟ್ಟದ್ದಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ನಾನು ಆತನನ್ನು ಪ್ರಶ್ನೆ ಮಾಡಿದಾಗ, ಆತ ಕೆಲವು ಸನ್ನೆ ಮಾಡಿ, ನನ್ನನ್ನು ದಿಟ್ಟಿಸಿ ನೋಡುತ್ತಲೇ ಇದ್ದ. ನಾನು ನಂತರ ವಿಡಿಯೋ ಮಾಡಲು ಆರಂಭಿಸಿದ ಬಳಿಕ ಆತ ಅಲ್ಲಿಂದ ಹೊರಟು ಹೋದ ಎಂದು ದೂರಿನಲ್ಲಿ…
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಅಕ್ರಮಗಳ ಹಣ ಮತ್ತು ವಸ್ತುಗಳ ದಾಸ್ತಾನಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಇದರ ಬೆನ್ನಲ್ಲೇ ಯಾವುದೆ ದಾಖಲೆಗಳಿಲ್ಲದೆ ಕೊಂಡೊಯ್ಯುತ್ತಿದ್ದ ಬರೋಬ್ಬರಿ ತೊಂಬತ್ತೊಂಬತ್ತು ಲಕ್ಷದ ಇಪ್ಪತ್ತು ಸಾವಿರ ನಗದು (99,20,000) ಹಣವನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡಘಟ್ಟ ಚೆಕ್ ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಇಷ್ಟೊಂದು ದೊಡ್ಡ ಮೊತ್ತದ ಹಣ ಪತ್ತೆಯಾಗಿದೆ. ಈ ಹಣವನ್ನು ಕ್ರೇಟಾ ಕಾರಿನಲ್ಲಿ ಬೇರೆಡೆಗೆ ಸಾಗಣೆ ಮಾಡಲಾಗುತ್ತಿತ್ತು. ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ ನಡೆಸಿದ ವೇಳೆ ಚೀಲದಲ್ಲಿ ತುಂಬಿಸಿದ್ದ ಕಂತೆಗಟ್ಟಲೆ ಹಣ ಪತ್ತೆಯಾಗಿದೆ. ಚೀಲದಲ್ಲಿ ತುಂಬಿಸಿಟ್ಟಿದ್ದ 99,20,000 ನಗದು, ಕ್ರೇಟಾ ಕಾರನ್ನು ಜಪ್ತಿ ಮಾಡಿರುವ ಪೊಲೀಸರು, ಹಣ ಸಾಗಿಸುತ್ತಿದ್ದ ಗಿರೀಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಪೊಲೀಸರ ವಿಚಾರಣೆ ವೇಳೆಯೂ ಕೊಂಡೊಯ್ಯುತ್ತಿದ್ದ ಹಣಕ್ಕೆ ಸೂಕ್ತ…