Subscribe to Updates
Get the latest creative news from FooBar about art, design and business.
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
- ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
- ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
- 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
Author: admin
ಇಂಡಿಯನ್ ಆಯಿಲ್ ಇಂಧನ ದರಗಳ ವ್ಯತ್ಯಯ ಕಾರ್ಪೊರೇಷನ್ ಲಕ್ಷದ್ವೀಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂ. ವರೆಗೆ ಕಡಿತಗೊಳಿಸಿದೆ. ಒಂದೇ ಬಾರಿಗೆ ಈ ಪ್ರಮಾಣದ ದರ ಕಡಿತ ಮಾಡಿರುವುದು ದೇಶದಲ್ಲಿ ಇದೇ ಮೊದಲು. ಮಾಲ್ಡೀವ್ಸ್ ಜೊತೆಗಿನ ಸಂಬಂಧ ಹದಗೆಟ್ಟಿರುವ ಬೆನ್ನಲ್ಲೇ ಲಕ್ಷದ್ವೀಪವನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರ ಮುಂದಾಗಿರುವ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಂಧನ ದರ ಕಡಿತದ ಹಿಂದೆ ಲಕ್ಷದ್ವೀಪದ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶವಿದೆ. ಇದರಿಂದ ದ್ವೀಪವಾಸಿಗಳ ಬದುಕನ್ನು ಸುಲಭಗೊಳಿಸುವುದಲ್ಲದೆ, ದೀರ್ಘಾವಧಿಯಲ್ಲಿ ಸಕಾರಾತ್ಮಕ ನಿರ್ಮಾಣಗೊಳ್ಳುವ ಸರಕಾರ ವ್ಯಕ್ತಪಡಿಸಿದೆ. ಆಕರ್ಷಿಸುವುದರ ಹೂಡಿಕೆದಾರರನ್ನೂ ವಾತಾವರಣ ವಿಶ್ವಾಸವನ್ನು ಪ್ರವಾಸಿಗರನ್ನು ಜೊತೆಗೆ ಆಕರ್ಷಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತವಾಗಿದೆ. ದೇಶದಲ್ಲಿ ಸದ್ಯ ಅತ್ಯಧಿಕ ಇಂಧನ ದರ ನಿಗದಿಯಾಗಿರುವ ರಾಜ್ಯಗಳ ಪೈಕಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯ ಮುಂಚೂಣಿಯಲ್ಲಿವೆ. ಇದೇ ವೇಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಿಲ್ಲಿ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳು, ಈಶಾನ್ಯ ರಾಜ್ಯಗಳಲ್ಲಿ ಅತಿ ಕಡಿಮೆ ಇಂಧನ ದರ ನಿಗದಿಯಾಗಿದೆ. ಈ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೀಗ ಮಲೆನಾಡಿನ ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ. ಇದೇ ಸಂದರ್ಭ ಸಿಎಂ ಸಿದ್ದರಾಮಯ್ಯ ಅವರು, ರೈತರ ಸಾವಿಗೆ ಕಾರಣರಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ರೈತರ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ…
ದೊಡ್ಡ ಹೊಟ್ಟೆಯನ್ನು ಕರಗಿಸುತ್ತೆ ಈ ಎರಡು ಎಲೆಗಳು: ತುಳಸಿ ಎಲೆಗಳ ಸೇವನೆಯು ಹೊಟ್ಟೆಗೆ ಪ್ರಯೋಜನಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಾಂಗವು ಆರೋಗ್ಯವಾಗಿರುತ್ತದೆ. ತುಳಸಿಯು ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 3 ರಿಂದ 4 ತುಳಸಿ ಎಲೆಗಳನ್ನು ತಿನ್ನಿ. ಕರಿಬೇವಿನ ಎಲೆಗಳಲ್ಲಿರುವ ಅಂಶಗಳು ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಣ್ಣಿನ ಊತ ಕಾಣಿಸಿಕೊಂಡರೆ ಇದನ್ನೊಮ್ಮೆ ಟ್ರೈ ಮಾಡಿ: ಮಾಲಿನ್ಯ ಅಥವಾ ಧೂಳಿನ ಅಲರ್ಜಿಯಿಂದ ಕಣ್ಣಿನ ಅಡಿಯಲ್ಲಿ ಊತ ಕಾಣಿಸಿಕೊಳ್ಳುವುದಿದೆ. ನಿದ್ರಾಹೀನತೆ ಅಥವಾ ಸರಿಯಾಗಿ ನಿದ್ರೆ ಮಾಡದಿರುವುದು ಕೂಡ ಕಣ್ಣಿನ ಕೆಳ ಭಾಗದ ಊತಕ್ಕೆ ಕಾರಣವಾಗಿರುತ್ತದೆ. ಇದರ ಊತ ತಡೆಯಲು ಉಪ್ಪನ್ನು ಮಿತವಾಗಿ ಬಳಸಿ, ಅನಗತ್ಯ ಮೇಕಪ್ ಮಾಡುವುದನ್ನು ನಿಲ್ಲಿಸಿ, ಇದರ ಜೊತೆಗೆ ದಿನಕ್ಕೆ ಕನಿಷ್ಠ 20 ರಿಂದ 30 ಬಾರಿ ಕಣ್ಣುಗಳ ಮೇಲೆ ನೀರು ಚಿಮುಕಿಸಬೇಕು. ಇದರಿಂದ ಕಣ್ಣುಗಳು ಸ್ವಚ್ಛವಾಗಿರುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಶಿವಮೊಗ್ಗ: ಲೋಕಸಭಾ ಸಮರದ ಹಿನ್ನೆಲೆ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು. ಶಿವಮೊಗ್ಗ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕೆಲ ವರ್ಷಗಳ ಹಿಮದೆ ಶಿವಮೊಗ್ಗ ಜನತೆಗೆ ನಾವು ಯಾರು ಎಂದೇ ಗೊತ್ತಿರಲಿಲ್ಲ ಆದರೆ ಅಂತಹ ಸಮಯದಲ್ಲಿ ಬಿ ಎಸ್ ಯೆಇಯೂರಪ್ಪ ತಮ್ಮ ಜೀವನವನ್ನು ಸವೆಸಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ್ದಾರೆ, ಇದು ಅವರ ತಪೋಭೂಮಿ ಎಂದು ಬಿಎಸ್ ವೈ ಅವರನ್ನು ಮೋದಿ ಹಾಡಿ ಹೊಗಳಿದ್ದಾರೆ. ಇಂದು ಸೇರಿರುವ ಜನ ಸಂಖ್ಯೆ ನೋಡಿದರೆ, ಅಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವವರ ನಿದ್ದೆ ಹಾರಿ ಹೋಗಿದೆ ಎಂದು ಮೋದಿ ಟೀಕಿಸಿದರು. ಕರ್ನಾಟಕ ಕಾಂಗ್ರೆಸ್ ವಿರುದ್ಧ ಪಿಎಂ ವಾಗ್ದಾಳಿ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ, ಲೂಟಿ ಭ್ರಷ್ಟಾರ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ ಸರ್ಕಾರ ನಡೆಸಲೂ ಹಣವಿಲ್ಲ. ಇಲ್ಲಿ ದೆಹಲಿಯ ಕಲೆಕ್ಷನ್ ಮಿನಿಸ್ಟರ್, ಸೂಪರ್ ಸಿಎಂ , ಶ್ಯಾಡೋ ಸಿಎಂ, ಭಾವಿ ಸಿಎಂ ಎಲ್ಲಾ ಇದ್ದಾರೆ.…
ಶಿವಮೊಗ್ಗ: ಪುತ್ರನಿಗೆ ಟಿಕೆಟ್ ಸಿಗದ ಬೆನ್ನಲ್ಲೇ ಬಂಡಾಯವೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಗೈರಾಗಿದ್ದಾರೆ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ಸಿಗದಿದ್ದರಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬಂಡಾಯವೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶಿವಮೊಗ್ಗದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಸಮಾವೇಶಕ್ಕೆ ಹಾಜರಾಗುವುದಿಲ್ಲ. ಆದರೆ ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಇದೀಗ ಅದರಂತೆ ಮೋದಿ ಸಮಾವೇಶಕ್ಕೆ ಗೈರಾಗಿದ್ದಾರೆ. ಇಂದು ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಬಿಳಕಿ, ಗೋಣಿಬೀಡು, ತೊಗರ್ಸಿ, ಹಿರೇಮಾಗಡಿ, ಜಡೇ-ಮೂಡಿ, ಶಾಂತಪುರ, ಹಾರ್ನಹಳ್ಳಿ ಚೌಕಿಮಠ, ಮೂಲೆಗದ್ದೆ, ಹುಂಚಾ ಜೈನಮಠ, ಶಿಕಾರಿಪುರದ ಸಾಲೂರು ಸೇರಿದಂತೆ 10ಕ್ಕೂ ಹೆಚ್ಚು ಮಠಗಳ ಭೇಟಿಗೆ ತೆರಳಿದ್ದು, ವೀರಶೈವ-ಲಿಂಗಾಯತ ಹಾಗೂ ಜೈನ ಸಮುದಾಯದ ಶ್ರೀಗಳ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ಮತ್ತೊಂದು ಕಡೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಈಶ್ವರಪ್ಪ ಅವರ ಹೆಸರು ಇಲ್ಲ.…
ಬೀದರ್: ಬೀದರ್ ಜಿಲ್ಲೆಯಲ್ಲಿ ತಲೆನೋವಿನಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೀರ್ತಿ ರಾಮು(22) ಮೃತ ಗರ್ಭಿಣಿಯಾಗಿದ್ದಾಳೆ. 7 ತಿಂಗಳ ಗರ್ಭಿಣಿಯಾಗಿದ್ದ ಕೀರ್ತಿರಾಮು ಅವರು ಹಲವು ತಿಂಗಳುಗಳಿಂದ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಷ್ಟೇ ಚಿಕಿತ್ಸೆ ಮಾಡಿದರೂ ಗುಣವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಕೀರ್ತಿರಾಮು ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾವಿಗೆ ಬಿದ್ದ ಗರ್ಭಿಣಿಯ ಮೃತದೇಹವನ್ನು ಪೊಲೀಸರು ಮೇಲೆಕ್ಕಿತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕುಂಬಳಕಾಯಿ ಹೂವಿನಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?: ಕುಂಬಳಕಾಯಿ ಮತ್ತು ಅದರ ಬೀಜಗಳು ಮಾತ್ರವಲ್ಲದೆ ಅವುಗಳ ಹೂವುಗಳೂ ಔಷಧೀಯ ಗುಣಗಳನ್ನು ಹೊಂದಿವೆ. ಕುಂಬಳಕಾಯಿ ಹೂವು ತಿನ್ನಲು ಸಹ ರುಚಿಕರವಾಗಿರುತ್ತದೆ. ಕುಂಬಳಕಾಯಿ ಹೂವುಗಳು ಸಾಕಷ್ಟು ಕ್ಯಾಲ್ಸಿಯಂ, ರಂಜಕ, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ. ಹೀಗಾಗಿ ಈ ಹೂವು ಅನೇಕ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಕುಂಬಳಕಾಯಿ ಹೂಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಾಗಲಿವೆ. ಕುಂಬಳಕಾಯಿ ಹೂವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಾಳೆಹಣ್ಣಿನ ಜೊತೆ ಹಾಲು ಕುಡಿಯುವುದು ಆರೋಗ್ಯಕ್ಕೆ ಅಪಾಯ?: ಬಾಳೆಹಣ್ಣು ಹಾಗೂ ಹಾಲು ಕುಡಿಯುವುದರಿಂದ ನಿಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಆದರೆ, ಅಸ್ತಮಾದಂತ ಸಮಸ್ಯೆ ಇರುವವರು ಬಾಳೆಹಣ್ಣಿನ ಮಿಲ್ಕ್ ಶೇಕ್ ಕುಡಿಯುವುದು ಒಳ್ಳೆಯದಲ್ಲ. ಬಾಳೆಹಣ್ಣನ್ನು ಹಾಲಿನೊಂದಿಗೆ ಸೇವಿಸುವುದರಿಂದ ದೇಹದಲ್ಲಿ ಜೀರ್ಣಶಕ್ತಿ ದುರ್ಬಲಗೊಳ್ಳುತ್ತದೆ. ಇದರಿಂದ ಶೀತ, ಉಸಿರಾಟದ ತೊಂದರೆ, ಕಫದ ಸಮಸ್ಯೆ ಉಂಟಾಗಬಹುದು. ತಜ್ಞರ ಪ್ರಕಾರ, ಬಾಳೆಹಣ್ಣು ಹಾಗೂ ಹಾಲನ್ನು ಒಟ್ಟಿಗೆ ಸೇವಿಸದಿರುವುದು ಆರೋಗ್ಯಕ್ಕೆ ಒಳ್ಳೆಯದು. ನಮ್ಮತುಮಕೂರಿನ ಕ್ಷಣ ಕ್ಷಣದ…
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೆನ್ನೆಯಿಂದ ಬೆಂಗಳೂರು ಸೇರಿದಂತೆ ರಾಜಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ, ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಎಲ್ಲಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ವಶಪಡಿಸಿಕೊಳ್ಳುವಂತೆ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದರು. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಚೆಕ್ ಪೋಸ್ಟ್ ಗಳಂತೆ ನಗರದಾದ್ಯಂತ ನೂರಾಕ್ಕೂ ಹೆಚ್ಚು ಚೆಕ್‍ಪೋಸ್ಟ್ ಗಳನ್ನು ನಿರ್ಮಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಗಳಲ್ಲೂ ಕಾರ್ಯನಿರ್ವಹಿಸುತ್ತವೆ. ಪಾಳಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿದರು. ಈ ಚೆಕ್‍ಪೋಸ್ಟ್ ಗಳಲ್ಲಿ ನಮ್ಮ ಪೊಲೀಸರು, ಬಿಬಿಎಂಪಿ, ಆರ್‍ಟಿಒ, ಅಬಕಾರಿ, ವಾಣಿಜ್ಯ ತೆರಿಗೆ ಹೀಗೆ ವಿವಿಧ…
ಮಾದರಿ ನೀತಿ ಸಂಹಿತೆ(ಎಂಸಿಸಿ) ಘೋಷಣೆಯಾದ ನಂತರ ಚುನಾವಣಾ ಆಯೋಗವು ಕರ್ನಾಟಕದಲ್ಲಿ ನೀರಿನ ಟ್ಯಾಂಕರ್ ಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ನೀರು ಸರಬರಾಜಿನಲ್ಲಿ ತೀವ್ರ ಕೊರತೆಯ ಮಧ್ಯೆ ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ ಗಳ ಬೆಲೆಯನ್ನು ರಾಜ್ಯ ಸರ್ಕಾರ ಈಗಾಗಲೇ ನಿಯಂತ್ರಿಸಿದೆ. ಈ ನಡುವೆ ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀರಿನ ಟ್ಯಾಂಕರ್ ಗಳ ಮೇಲೆ ಕರ್ನಾಟಕ ಚುನಾವಣಾ ಆಯೋಗ ನಿಗಾ ಇಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಗಳನ್ನು ಅಂಟಿಸಿಕೊಳ್ಳಬೇಕಿದೆ. ಜಲಮಂಡಳಿ ವತಿಯಿಂದ ಸ್ಟಿಕ್ಕರ್ ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಪ್ರತಿ ಟ್ಯಾಂಕರ್ ಮಾಲೀಕರು ನೋಂದಣಿ ಪ್ರಮಾಣ ಪತ್ರ, ಸ್ಟಿಕರ್ ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರುವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರಿಸಲಾಗುವುದು ಎಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಇವಿಎಂ ಇಲ್ಲದೆ ಬಿಜೆಪಿ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನರೇಂದ್ರ ಮೋದಿ ಒಬ್ಬ ಒಳ್ಳೆಯ ನಟ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರಾಹುಲ್, ರಾಜನ ಆತ್ಮ ಇವಿಎಂನಲ್ಲಿದೆ. ನರೇಂದ್ರ ಮೋದಿ ಬಾಲಿವುಡ್ ಅನ್ನು ಸೋಲಿಸಿದ ನಟ. ಇವಿಎಂ ಯಂತ್ರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತೋರಿಸಲು ಮತ್ತು ವಿವಿ ಪ್ಯಾಟ್ ಅನ್ನು ಎಣಿಕೆ ಮಾಡುವಂತೆ ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಕೇಳಿದ್ದವು. ಆದರೆ ಅನುಮತಿ ಸಿಕ್ಕಿರಲಿಲ್ಲ. ಇವಿಎಂ ಮಿತಿಗಳನ್ನು ಪರಿಹರಿಸಲು ಚುನಾವಣಾ ಆಯೋಗಕ್ಕೆ ಆಸಕ್ತಿ ಇಲ್ಲ. ನಮ್ಮ ಹೋರಾಟ ಶಕ್ತಿಯ ವಿರುದ್ಧ. ಮೋದಿ ಅಥವಾ ಬಿಜೆಪಿ ವಿರುದ್ಧ ಅಲ್ಲ. ಮೋದಿ ಆ ಶಕ್ತಿಯ ಮುಖವಾಡವಷ್ಟೇ. ಆ ಶಕ್ತಿ ಮಣಿಪುರದಲ್ಲಿ ಅಂತರ್ಯುದ್ಧ ನಡೆಸುತ್ತಿದೆ. ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಪಕ್ಷ ತೊರೆದಾಗ ಸೋನಿಯಾ ಗಾಂಧಿ ಅವರಿಗೆ ಜೈಲಿಗೆ ಹೋಗುವ ಧೈರ್ಯವಿಲ್ಲ ಎಂದು ಕಣ್ಣೀರಿಟ್ಟರು. ಭಯದಿಂದಲೇ ಎಲ್ಲರೂ ಪಕ್ಷ ತೊರೆಯುತ್ತಾರೆ ಎಂದೂ ರಾಹುಲ್ ಗಾಂಧಿ…