Author: admin

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಹನುಮಾನ ಮಂದಿರವನ್ನು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರೆಲ್ಲ ಮುಂದಾಗಿ ಹನುಮಾನ್ ಗುಡಿ ಕಟ್ಟಬೇಕೆಂದು ನಿರ್ಧರಿಸಿದಾಗ ನನ್ನಿಂದ ಸಾಧ್ಯವಾದ ನೆರವು ನೀಡಿದೆ. ಅದಕ್ಕಿಂತ ಹೆಚ್ಚಾಗಿ ನೀವೆಲ್ಲ ಬಹಳಷ್ಟು ಶ್ರಮ ಪಟ್ಟು ಭಕ್ತಿಯಿಂದ ಈ ಮಂದಿರವನ್ನು ಸುಂದರವಾಗಿ ನಿರ್ಮಾಣ ಮಾಡಿದ್ದೀರಿ. ಗ್ರಾಮದಲ್ಲಿ ಅದ್ದೂರಿಯಿಂದ ನಡೆಯುತ್ತಿರುವ ಮಂದಿರದ ಉದ್ಘಾಟನೆಯ‌ ಕಾರ್ಯಕ್ರಮ ಮನಸ್ಸಿಗೆ ಖುಷಿ ತಂದಿದೆ. ದೇವರ ಆಶೀರ್ವಾದ ನನಗೆ, ನಿಮಗೆ ಎಲ್ಲರಿಗೂ ಸಿಕ್ಕಿದೆ. ನಾನು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಇನ್ನಷ್ಟು ಒಳ್ಳೆಯದಾಗಲಿದೆ ಎಂದು ಹೇಳಿದರು. ಗ್ರಾಮೀಣ ಕ್ಷೇತ್ರಾದ್ಯಂತ ನೂರಾರು ದೇವಸ್ಥಾನಗಳನ್ನು ಕಳೆದ 5 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ, ದೇವರು, ಭಕ್ತಿ ಇವೆಲ್ಲ ನಮ್ಮ ಮನಸ್ಸಿನಲ್ಲಿದೆ. ಜನರು ನನ್ನ ಜೊತೆಗಿದ್ದಾರೆ, ದೇವರ ಆಶಿರ್ವಾದವಿದೆ. ಹಾಗಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ…

Read More

ಹೆಂಡ್ತಿ ಸೆಲೆಕ್ಷನ್‌ ಮಾಡೋದನ್ನು ನೋಡಿ ತಾಳ್ಮೆಯನ್ನು ಕಳ್ಕೊಂಡನೋ ಅಥವಾ ಜವಳಿ ಅಂಗಡಿಯಲ್ಲಿ ಹೆಂಡ್ತಿಗೆ ಬೇಕಾದ ಬಟ್ಟೆಗಳು ಇಲ್ಲವೆಂದೋ ಏನೋ ಒಟ್ಟಿನಲ್ಲಿ ಸೀರೆ ಅಂಗಡಿ ಸಿಬ್ಬಂದಿಗೆ ಗ್ರಾಹಕನೊಬ್ಬ ಸರಿಯಾಗಿ ಬಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹೆಂಡತಿಗೆ ಬೇಕಾಗಿರುವ ಸೀರೆ ನಿನ್ನ ಅಂಗಡಿಯಲ್ಲಿ ಒಂದೂ ಇಟ್ಟುಕೊಂಡಿಲ್ಲ. ನೀನು ಸೀರೆ ಅಂಗಡಿಯನ್ನು ಇಟ್ಟುಕೊಂಡಿರುವುದೇ ವೇಸ್ಟ್‌ ಎಂಬ ಅರ್ಥದಲ್ಲಿ ಸೀರೆ ಅಂಗಡಿ ಸಿಬ್ಬಂದಿಗೆ ಗ್ರಾಹಕನೊಬ್ಬ ಏಟು ಕೊಟ್ಟಿದ್ದಾನೆ ಎನ್ನಲಾಗಿದೆ. ಬಟ್ಟೆ ಖರೀದಿ ವಿಚಾರದಲ್ಲಿ ಅಂಗಡಿಯಲ್ಲಿ ನಡೆದ ಹೊಡೆದಾಟವನ್ನು ಕೇಳಿದರೆ ನಿಮಗೆ ನಗು ಬಾರದೇ ಇರದು. ಕಾರಣ ಸಣ್ಣ ವಿಚಾರಕ್ಕೆ ದೊಡ್ಡ ಮಟ್ಟದ ಹೊಡೆದಾಟವೇ ನಡೆದುಹೋಗಿದ್ದು, ಈಗ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯ ಸಿಪಿ ಬಜಾರದಲ್ಲಿರುವ ಸಾಗರ ಬಟ್ಟೆ ಅಂಗಡಿಯಲ್ಲಿ  ಈ ಘಟನೆ ನಡೆದಿದೆ. ಅಂಗಡಿಯೊಳಗೆ ನಡೆದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಮಹಮ್ಮದ್ ಎಂಬಾತ ಬಟ್ಟೆ ಅಂಗಡಿಗೆ…

Read More

ಪೇಜಾವರ ಮಠದ ಭಕ್ತ, ಮುಂಬೈ ಉದ್ಯಮಿ ನಾಗೇಂದ್ರ ಆಚಾರ್ಯ-ಅರುಣಾ ಆಚಾರ್ಯ ದಂಪತಿ ಅಯೋಧ್ಯೆ ರಾಮನಿಗೆ ವಿಶಿಷ್ಟ ದೀಪಸೇವೆ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಬೆಳ್ಳಿಯ ಎರಡು ಬೃಹತ್ ಕಾಲುದೀಪಗಳನ್ನು ಅಯೋಧ್ಯೆಗೆ ಅರ್ಪಿಸಿದ್ದು, ಪೇಜಾವರ ಮಠದ ಶಿಷ್ಯರಾಗಿರುವ ದಂಪತಿ ರಾಮಸೇವೆ ಮಾಡುವ ಸಂಕಲ್ಪ ಮಾಡಿದ್ದು, ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಮೂಲಕ ಆ ದೀಪಗಳನ್ನು ಅರ್ಪಿಸಿದ್ದಾರೆ ಎನ್ನಲಾಗಿದೆ. ಎರಡು ದೀಪಗಳು ತಲಾ ಮೂರೂವರೆ ಅಡಿ ಎತ್ತರವಿದ್ದು, ತಲಾ 13.5 ಕೆ.ಜಿ. ತೂಕವಿವೆ. ಹೀಗೆ ಕೊಡಲ್ಪಟ್ಟ ಹೊಸ ದೀಪಗಳನ್ನು ರಾಮಮಂದಿರದ ಗರ್ಭಗುಡಿಯ ಮುಂಭಾಗದಲ್ಲಿ ಪೇಜಾವರ ಸ್ವಾಮೀಜಿ ಬೆಳಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಮಣ್ಣಾಗಿದ್ದ ಬಟ್ಟೆಗಳನ್ನು ಧರಿಸಿ ಹಳ್ಳಿಯ ರೈತನೊಬ್ಬ ಮೆಟ್ರೋಗೆ ಟಿಕೆಟ್ ಖರೀದಿಸಿ ಬಂದಿದ್ದ. ಆದರೆ, ಈ ಬಟ್ಟೆಯಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ರೈತನಿಗೆ ಅವಮಾನ ಮಾಡಿ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಘಟನೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದಿದೆ. ಆ ಬಳಿಕ ಕೆಲವೇ ಗಂಟೆಗಳಲ್ಲಿ ಆ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಪ್ರಯಾಣಕ್ಕೆ ಸೂಕ್ತವಲ್ಲದ ಬಟ್ಟೆಗಳನ್ನು ಕಂಡು ನಮ್ಮ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದು ಪ್ರಯಾಣಿಸಲು ಅನುಮತಿ ನೀಡಲಿಲ್ಲ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಕೋಲಾಹಲವನ್ನು ಉಂಟುಮಾಡಿದ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿದೆ. ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಯಿತು. ಭದ್ರತಾ ಚೆಕ್‌ ಪಾಯಿಂಟ್‌ ನಲ್ಲಿ ಲಗ್ಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಸಿ ಐರಾನಿ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ…

Read More

ನಿಂತಿದ್ದ ಎತ್ತಿನ ಬಂಡಿಗೆ, ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಅಪಘಾತ ನಡೆದಿದೆ. ಒಂದೇ ಬೈಕ್‌ನಲ್ಲಿ ಐದು ಜನರು ಪ್ರಯಾಣಿಸ್ತಿದ್ದರು ಎನ್ನಲಾಗಿದೆ. ಬೈಕ್‌ ನಲ್ಲಿದ್ದ ಜಂಬುನಾಥ್‌ ಹಳ್ಳಿಯ ವೆಂಕಟೇಶ, ಹೊಸಪೇಟೆಯ ಅಖಿಲಾ, ಆಶಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಸರಸ್ವತಿ ಮತ್ತು ಜಂಬಕ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು:  ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ 7 ಮಂದಿ ಮಹಿಳೆಯರ ಪೈಕಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಹೆರಿಗೆ ಒಳಗಾಗಿದ್ದ ಮೂವರು ಮಹಿಳೆಯರು. ಐದು ದಿನಗಳ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಫೆಬ್ರವರಿ 22 ನೇ ತಾರೀಕು 7 ಮಂದಿಗೆ ಹೆರಿಗೆ ಸೇರಿದ್ದಂತೆ ವಿವಿಧ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ‌ 30 ವರ್ಷದ ಅನಿತಾ ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದರೆ. ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು.‌ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆಬ್ರವರಿ 24 ರಂದು ಮೃತಪಟ್ಟಿದ್ದಾರೆ.‌ ಬ್ಯಾಡನೂರು ಗ್ರಾಮದ  40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌…

Read More

ನವದೆಹಲಿ: ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ‘ಘೋರ ಅನ್ಯಾಯ’ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಯುವಕರು ತಮ್ಮ ಕನಸುಗಳ ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು ‘ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು’ ಎಂದು ಖರ್ಗೆ ತಿಳಿಸಿದ್ದಾರೆ. ‘ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು…

Read More

ಮಲಬದ್ಧತೆಯಿಂದ ತಕ್ಷಣ ಪರಿಹಾರ ಬೇಕಾದರೆ ಈ ಜ್ಯೂಸ್‌ ಗಳನ್ನು ಸೇವಿಸಿ: ಮಲಬದ್ಧತೆ ಬಹಳ ಹಿಂಸೆ ನೀಡುವ ಸಮಸ್ಯೆಯಾಗಿದೆ. ನಮ್ಮ ದೇಹದಲ್ಲಿ ಸಾಕಷ್ಟು ನೀರಿನಂಶ ಇಲ್ಲದಿದ್ದಾಗ, ಸೇವಿಸುವ ಆಹಾರದಲ್ಲಿ ಫೈಬ‌ರ್ ಅಂಶ ಕಡಿಮೆಯಾದಾಗ ಮಲ ವಿಸರ್ಜನೆ ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಮಲಬದ್ಧತೆ ಎಂದು ಕರೆಯಲಾಗುತ್ತದೆ. ಈ ಸಮಸ್ಯೆಗೆ ಪರಿಹಾರಕ್ಕಾಗಿ ಕೆಲವು ಜ್ಯೂಸ್‌ಗಳನ್ನು ಸೇವಿಸಬಹುದು. ಅಲೋವೆರಾ ಜ್ಯೂಸ್, ಸೇಬಿನ ಜ್ಯೂಸ್, ಕಿತ್ತಳೆ ಜ್ಯೂಸ್, ಪಾಲಕ್ ಜ್ಯೂಸ್, ಪಿಯ‌ರ್ ಜ್ಯೂಸ್, ನಿಂಬೆ ಜ್ಯೂಸ್ ಇವುಗಳು ಮಲಬದ್ಧತೆಯ ಸಮಸ್ಯೆಯಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ. ನಿಮಗೆ ಹುಷಾರಿಲ್ಲದಿರುವಾಗ ಈ 8 ಆಹಾರಗಳನ್ನು ಸೇವಿಸಿ, ಬೇಗ ಗುಣಮುಖರಾಗುತ್ತೀರಿ..! ಶುಂಠಿ ಚಹಾವು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಇದು ವಾಕರಿಕೆ ಕಡಿಮೆ ಮಾಡಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೇನುತುಪ್ಪವು ಆಂಟಿಆಕ್ಸಿಡೆಂಟ್‌ ಗಳನ್ನು ಹೊಂದಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅನ್ನವು ಸುಲಭವಾಗಿ ಜೀರ್ಣವಾಗುತ್ತದೆ. ಹೊಟ್ಟೆನೋವು ಇದ್ದಾಗ ಅನ್ನ ತಿನ್ನುವುದು ಒಳ್ಳೆಯದು.…

Read More

ಕೋಲಾರ: ಕುಮಾರಸ್ವಾಮಿ ಸದಾ ಡಬ್ಬದಲ್ಲಿ ರೀಲು ಇದೆ ಎಂದು ಸುಳ್ಳು ಹೇಳುತ್ತಾರೆ. ಆ ರೀಲು ಹೊರಬಿಡುವುದೇ ಇಲ್ಲ ಎಂದು ಡಿಕೆ ಸೋದರರು ಮಾಡಿರುವ ಟೀಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೊಡ್ಡಾಲಳ್ಳಿ, ಕೋಡಳ್ಳಿ ಮುಂತಾದೆಡೆ ಡಿ.ಕೆ. ಶಿವಕುಮಾರ್‌ ಟೆಂಟ್‌ ಗಳಲ್ಲಿ ತೋರಿಸಿದ ರೀಲನ್ನು ನಾವು ಯಾವತ್ತೂ ತೋರಿಸಿಲ್ಲ ಎಂದು ಪರೋಕ್ಷವಾಗಿ ಬ್ಲೂಫಿಲಂ ದಂಧೆಯ ಆರೋಪವನ್ನು ಕೆದಕಿದ್ದಾರೆ. ತಮ್ಮ ಏಕವಚನದಲ್ಲಿ ಡಿ.ಕೆ. ಶಿವಕುಮಾರ್‌ ಹರಿಹಾಯ್ದಿರುವ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ, ಡಿಕೆಶಿ ಈಗ ಸಂಪೂರ್ಣವಾಗಿ ತಮ್ಮ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಅವರ ಶಾಸಕರಿಗೆ ಬೆದರಿಕೆ ಹಾಕಲಾಗಿದೆ, ಆಮಿಷ ಒಡ್ಡಲಾಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಅವರ ಹಣಬಲ , ತೋಳ್ಬಲ ಮತ್ತು ಅಡ್ಜಸ್ಟ್‌ ಮೆಂಟ್‌ ರಾಜಕಾರಣದ ವಿರುದ್ದ ಜೆಡಿಎಸ್‌ ಎಲ್ಲಾದರೂ ಸೆಣಸಲು ಸಾಧ್ಯವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಯಾವುದೇ ಶಾಸಕರೂ ಇದುವರೆಗೂ ನನ್ನ ವಿರುದ್ದ ಬೆದರಿಕೆ ಆರೋಪ ಮಾಡಿಲ್ಲ. ಆದರೆ ಡಿ.ಕೆ. ಶಿವಕುಮಾರ್‌ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೋಲಾರ: ನಮ್ಮದು ಸಣ್ಣ ಪಕ್ಷ ನಾವು ಏನು ಮಾಡಬೇಕೋ ಮಾಡುತ್ತೇವೆ. ಸುಮಲತಾ ದೊಡ್ಡವರು ಅವರ ಕುರಿತು ಮಾತಾಡಲಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ಕೈ ತಪ್ಪಿ ಹೋಗಿದೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಆದರೆ ಇನ್ನೂ ಸೀಟ್‌ ಹಂಚಿಕೆ ಆಗಿಲ್ಲ. ಸೀಟು ಹೊಂದಾಣಿಕೆ ಆಗಬೇಕು ಎಂದ ಅವರು, ಸುಮಲತಾ ಅವರ ಬಗ್ಗೆ ನಾವು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು. ಮಂಡ್ಯದಿಂದ ತಾನು ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೆ ನನ್ನ ಗಮನವೆಲ್ಲ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ 28 ಸ್ಥಾನ ಗೆದ್ದುಕೊಡುವುದರ ಮೇಲಿದೆ. ವೈಯಕ್ತಿಕ ಸ್ಪರ್ಧೆಯ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದರು. ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರವಿವಾರ ತಡರಾತ್ರಿಯವರೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದು, ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಅವಕಾಶವಿರುವುದರಿಂದ ತಮ್ಮ ಅಭ್ಯರ್ಥಿ ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಅವರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಬಿಜೆಪಿ ವರಿಷ್ಠರಿಗೆ ನೀಡುತ್ತೇವೆ, ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ…

Read More