Subscribe to Updates
Get the latest creative news from FooBar about art, design and business.
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
- ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
- ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
- 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
Author: admin
ಚುನಾವಣಾ ಬಾಂಡ್ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿ ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿ ದಿನಾಂಕ ಮತ್ತು ಉದ್ಯಮಿಗಳು ಚುನಾವಣಾ ಬಾಂಡ್ ಖರೀದಿ ದಿನಾಂಕ ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ರೀತಿ ಕಾಣುತ್ತಿದೆ ಎಂದರು. ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದರು.…
ಬೆಂಗಳೂರು: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಕೂಡಲೇ ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ಲೆಕ್ಸ್, ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಬೇಕು ಎಂದು ಆದೇಶಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕ್ಷುಲ್ಲಕ ಕಾರಣಕ್ಕೆ ಯುವತಿಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ದಿನಸಿ ಅಂಗಡಿಯಲ್ಲಿ ಅಂಜಲಿ ಮತ್ತು ಲಲ್ಲನ್ ಯಾದವ್ ಎಂಬವರಿಗೆ ಪರಿಚಯವಾಗಿತ್ತು. ಬಳಿಕ ಒಟ್ಟಿಗೆ ಜೀವನ ಸಾಗಿಸುವ ನಿರ್ಧಾರ ಮಾಡಿ ಒಟ್ಟಿಗೆ ವಾಸಿಸಲು ಆರಂಭಿಸಿದ್ದರು. ಲಲ್ಲನ್ ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯ ಮಾಡಿಕೊಂಡು ಬಾಡಿಗೆ ಮನೆ ಪಡೆದುಕೊಂಡಿದ್ದ, ಆದರೆ ಅಡುಗೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಲಲ್ಲನ್ ಯಾದವ್ ತನಗಾಗಿ ಮೊಟ್ಟೆ ಕರಿ ಮಾಡಲು ಅಂಜಲಿಯನ್ನು ಕೇಳುತ್ತಾನೆ. ಆದರೆ ಅಂಜಲಿ ನಿರಾಕರಿಸಿದ್ದಳು. ಮದ್ಯದ ಅಮಲಿನಲ್ಲಿದ್ದ ಲಲ್ಲನ್ ಕೋಪಗೊಂಡು ಅಂಜಲಿಯನ್ನು ಸುತ್ತಿಗೆ ಮತ್ತು ಬೆ ಲ್ಟ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದ. ಗುರುಗ್ರಾಮದ ಚೌಮಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ 32 ವರ್ಷದ ಅಂಜಲಿಯ ಶವವನ್ನು ಗುರುಗ್ರಾಮ್ ಪೊಲೀಸರು ಪತ್ತೆ ಮಾಡಿದ್ದಾರೆ. ಮೃತದೇಹವನ್ನು ಮೊದಲು ಕೇರ್ ಟೇಕರ್ ನೋಡಿದ್ದು, ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನೆ ಸಂಬಂಧ ತನಿಖೆ…
ಉತ್ತರ ಪ್ರದೇಶದಲ್ಲಿ 18 ವರ್ಷದ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ನಡೆದಿದೆ. ನೆರೆಹೊರೆಯವರ ನಿರಂತರ ಕಿರುಕುಳ ತಾಳಲಾರದೆ ಯುವತಿ ಸಾವಿಗೆ ಶರಣಾಗಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ಉತ್ತರಪ್ರದೇಶದ ಫತೇಪುರದಲ್ಲಿ ಶನಿವಾರ ಈ ಘಟನೆ ನಡೆದಿದೆ. ಯುವತಿ ಮತ್ತು ಆಕೆಯ ಕುಟುಂಬ ಫತೇಪುರ್‌ನ ಹುಸೈಂಗಂಜ್ ನಲ್ಲಿ ವಾಸಿಸುತ್ತಿದ್ದರು. ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ಯುವತಿ ಸಾವಿಗೆ ಶರಣಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ. ಇಬ್ಬರು ವ್ಯಕ್ತಿಗಳು ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಮಗಳು ಮನೆಯಿಂದ ಹೊರಟಾಗಲೆಲ್ಲ ಅವಳಿಗೆ ತೊಂದರೆಯಾಗುತ್ತದೆ. ಅತ್ಯಾಚಾರ ಯತ್ನವೂ ನಡೆದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಪೂರ್ಣಗೊಳಿಸಿದೆ. ಪೋಷಕರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ವಿಸ್ತೃತ ತನಿಖೆ ಆರಂಭಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಶಂಕರ್ ಮಿಶ್ರಾ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು…
ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪುನರುಚ್ಚರಿಸಿದ್ದಾರೆ. ಪಕ್ಷವು ಒಂದು ಕುಟುಂಬದ ನಿಯಂತ್ರಣದಲ್ಲಿದೆ ಮತ್ತು ರಾಜ್ಯದಲ್ಲಿ ಕಾರ್ಯಕರ್ತರು ಅಕ್ಷರಶಃ ಹೆಣಗಾಡುತ್ತಿದ್ದಾರೆ ಎಂದು ಹೇಳಿದರು . ಪಕ್ಷವನ್ನು ರಕ್ಷಿಸುವ ಸಲುವಾಗಿ, ಚುನಾವಣಾ ಯುದ್ಧದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು. ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಮತದಾರರಿಂದ ಬೆಂಬಲ ಪಡೆಯುವುದಾಗಿ ಈಶ್ವರಪ್ಪ ಹೇಳಿದರು. ಶಿಕಾರಿಪುರ ಶಾಸಕ ಬಿ.ವೈ .ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೆ ಏರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಈಶ್ವರಪ್ಪ , ” ಪಕ್ಷದ ವರಿಷ್ಠರು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತರೂ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಬೇಕಾಗಿತ್ತು . ವಕ್ಕಲಿಗ ಸಮುದಾಯದ , ಸಿ. ಟಿ. ರವಿ ಇದ್ದರು ಮತ್ತು ಹಿಂದುಳಿದ ವರ್ಗದವನಾದ ನನಗಾದರೂ ಆ ಹುದ್ದೆಯನ್ನು ನೀಡಬೇಕಾಗಿತ್ತು. ಈ ಮೂವರಲ್ಲಿ ಒಬ್ಬರನ್ನು ಕರ್ನಾಟಕದಲ್ಲಿ ಪಕ್ಷದ ಮುಖ್ಯಸ್ಥರನ್ನಾಗಿ ಮಾಡಬೇಕಾಗಿತ್ತು . ಆದರೆ ಮಾಜಿ ಮುಖ್ಯಮಂತ್ರಿ ಬಿ…
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಮಧ್ಯೆ , ಮಹೀಂದ್ರಾ ಗ್ರೂಪ್ ನ ಸಿಇಒ ಆನಂದ್ ಮಹೀಂದ್ರಾ ಅವರು ಹವಾನಿಯಂತ್ರಕಗಳಿಂದ ನೀರನ್ನು ಕೊಯ್ಲು ಮಾಡಲು ನವೀನ ಪರಿಹಾರದ ವೀಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಗಮನ ಸೆಳೆದಿರುವ ಈ ವೀಡಿಯೊ, ಎಸಿ ಘಟಕಗಳಿಂದ ಪ್ರತಿದಿನ ನೀರನ್ನು ಸಂಗ್ರಹಿಸುವ ಸರಳ ಹಾಗೂ ಪರಿಣಾಮಕಾರಿ ವಿಧಾನವನ್ನು ತೋರಿಸುತ್ತದೆ. ಆನಂದ್ ಮಹೀಂದ್ರಾ ಅವರು ವಿಡಿಯೋದಲ್ಲಿ ಭಾರತದಾದ್ಯಂತ ಇದನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಒತ್ತಿಹೇಳುತ್ತಾ, ಟ್ವೀಟ್ ಮಾಡಿದ್ದಾರೆ. ಭಾರತದಾದ್ಯಂತ ಎಸಿಗಳನ್ನು ಬಳಸುವಲ್ಲೆಲ್ಲಾ ಇದನ್ನು ಅಳವಡಿಸಬೇಕು. ನೀರು ದೊಡ್ಡ ಸಂಪತ್ತು, ಇದನ್ನು ಸುರಕ್ಷಿತವಾಗಿ ಶೇಖರಿಸಿಡಬೇಕಾಗುತ್ತದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ವೀಡಿಯೊವು ಎಸಿ ಘಟಕದ ಕಂಡೆನ್ಸೇಟ್ ಡ್ರೈನ್ಗೆ ಪೈಪ್ ಅನ್ನು ಜೋಡಿಸಲಾಗಿರುವ ಸೆಟಪ್ ಅನ್ನು ತೋರಿಸುತ್ತದೆ, ನೀರನ್ನು ಸಂಗ್ರಹ ಟ್ಯಾಂಕ್ಗೆ ಅಳವಡಿಸಲಾಗಿದೆ. ಈ ವಿಧಾನವು ಹವಾನಿಯಂತ್ರಕಗಳು ಗಮನಾರ್ಹ ಪ್ರಮಾಣದ ಘನೀಕೃತ ನೀರನ್ನು ಉತ್ಪಾದಿಸುತ್ತವೆ ಎಂಬ ಅಂಶವನ್ನು ತಿಳಿಸುತ್ತದೆ. ಸಾಮಾನ್ಯವಾಗಿ ” ಭಾರತದ ಸಿಲಿಕಾನ್ ಸಿಟಿ ” ಎಂದು ಕರೆಯಲಾಗುವ…
ಕಾಂಗ್ರೆಸ್ ನಿಂದ ಘರ್ ವಾಪ್ಸಿ ಆಗಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇದೀಗ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೀಗ ಈ ಬೆನ್ನಲ್ಲೇ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೂಡ ಇದ್ದು, ಹೈಕಮಾಂಡ್ ಕೂಡ ಶೆಟ್ಟರ್ ಸ್ಪರ್ಧೆಗೇ ಹೆಚ್ಚು ಒಲವು ತೋರಿದೆ ಎನ್ನಲಾಗುತ್ತಿದೆ. ಆದರೆ ಈ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಬಿಜೆಪಿ ಘಟಾನುಘಟಿ ನಾಯಕರು ಹೊರಗಿನ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶವಿಲ್ಲ. ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲದೆ ಯಾವ ಕಾರಣಕ್ಕೂ ಸ್ಥಳೀಯ ನಾಯಕರನ್ನು ಹೊರತುಪಡಿಸಿ ವಲಸಿಗರಿಗೆ ಅವಕಾಶ ನೀಡದಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ. ಅಂದಹಾಗೆ ನಿನ್ನೆ ದಿನ ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಅವರ ನಿವಾಸದಲ್ಲಿ ಶುಕ್ರವಾರ ಬಿಜೆಪಿ ನಾಯಕರ ಮಹತ್ವದ ಸಭೆ ನಡೆದಿದ್ದು ಹೊರಗಿನ ಅಭ್ಯರ್ಥಿಗಳಿಗೆ ಪಕ್ಷ ಮಣೆಹಾಕದೇ ಸ್ಥಳೀಯರಿಗೆ…
ಈ ವರ್ಷ ಎಲ್ಲೆಡೆ ಬಾರಿ ಬರಗಾಲ ಎದುರಾಗಿದೆ. ಹೀಗಾಗಿ ಜನರಿಗೆ ತಣ್ಣೀರು ಎರಚಿದೆ. ರಾಜಧಾನಿ ಬೆಂಗಳೂರಲ್ಲಂತು ಬೋರ್ ವೆಲ್ ಗಳೆಲ್ಲವೂ ಬತ್ತಿ ಹೋಗಿದ್ದು, ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹೀಗಾಗಿ ಹೋಳಿ ಹಬ್ಬಕ್ಕೆ ನೀರಿನಲ್ಲಿ ಜಾಲಿ ಮಾಡೋದಕ್ಕೂ ಜಲಮಂಡಳಿ ರೂಲ್ಸ್ ಜಾರಿ ಮಾಡಿದೆ. ಹೋಳಿ ಆಚರಣೆ ನೆಪದಲ್ಲಿ ಬೇಕಾಬಿಟ್ಟಿ ನೀರು ವ್ಯರ್ಥ ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಜಲಮಂಡಳಿ ನೀಡಿದೆ. ಮನೆಗಳಲ್ಲಿ ನೀರನ್ನು ವ್ಯರ್ಥ ಮಾಡದೇ ಹೋಳಿ ಆಚರಣೆ ಮಾಡಿದರೆ ಯಾವುದೇ ಅಡ್ಡಿ ಇಲ್ಲ. ಆದರೆ ಕಮರ್ಷಿಯಲ್ ಉದ್ದೇಶದಿಂದ ನೂರಾರು ಜನರನ್ನು ಸೇರಿಸಿ ನೀರು ವ್ಯರ್ಥ ಮಾಡಿದರೆ ಅಂತಹ ಹೋಟೆಲ್, ಮಾಲ್‌ಗಳ ಮೇಲೆ ಕ್ರಮವಹಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾಥ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಜಲಸ್ನೇಹಿ ಹೋಳಿ ಆಚರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ನಗರದಲ್ಲಿ ಜಲಕ್ಷಾಮ ಹಿನ್ನೆಲೆಯಲ್ಲಿ ದೊಡ್ಡ ಹೋಟೆಲ್, ಪಬ್ ಸೇರಿದಂತೆ ಹೋಳಿ ರೈನ್ ಡ್ಯಾನ್ಸ್‌ಗಳಿಗೆ ಕಡಿವಾಣ ಹಾಕಲಾಗಿದೆ. ಈಗಾಗಲೇ ಹಲವು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳು ಹೋಳಿ…
ಮುಂಬರುವ ಲೋಕಸಭಾ ಚುನಾವಣೆಗೆ ರಾಜಕೀಯ ನಾಯಕರಿಂದ ಕಸರತ್ತುಗಳು ನಡಿತಿವೆ. ಯಾವ ಕ್ಷೇತ್ರಕ್ಕೆ ಯಾರನ್ನು ಕಣಕ್ಕಿಳಿಸೋದು ಅನ್ನೋ ಲೆಕ್ಕಾಚಾರಗಳು ನಡಿತಿವೆ. ಇದೀಗ ಮೈಸೂರು–ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ. ಈ ಕುರಿತಂತೆ ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ ಎಂದಿದ್ದಾರೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಸ್ಥಳೀಯ ನಾಯಕರಿಗೆ ಸಿಎಂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವರು ಮೈಸೂರು ಲೋಕಸಭಾ ಕ್ಷೇತ್ರದಿಂದ ಸಿಎಂ ಸಿದ್ದು ಮಗನನ್ನು ಕಣಕ್ಕೆ ಇಳಿಸಬೇಕೆಂದು ಒತ್ತಾಯ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಅವರು ಸುತಾರಾಂ ಒಪ್ಪಿಲ್ಲ ಎಂದು ತಿಳಿದು ಬಂದಿದೆ. ಯಾವುದೇ ಕಾರಣಕ್ಕೂ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಅಂತಾ ಕಡ್ಡಿ…
ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಕೇಸಿನ ಬಗ್ಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯವರು, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದೆ. ತನಿಖೆಯಲ್ಲಿ ಯಡಿಯೂರಪ್ಪನವರ ತಪ್ಪು ಸಾಬೀತಾದರೆ ಅವರು ಶಿಕ್ಷೆಗೆ ಗುರಿಯಾಗುತ್ತಾರೆ. ವರದಿ ಬಂದರೆ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು. ಯಡಿಯೂರಪ್ಪನವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ತನಿಖೆಯಿಂದ ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಕಾನೂನಿಗೆ ಯಾರು ಹೊರತಲ್ಲ. ತಪ್ಪು ಸಾಬೀತಾದರೆ ಪೊಕ್ಸೊ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಸಲ್ಲಿಕೆ ಬಳಿಕ ಎಲ್ಲವು ತಿಳಿಯಲಿದೆ ಎಂದು ತಿಳಿಸಿದರು. ದೂರು ನೀಡಿರುವ ಹೆಣ್ಣು ಮಗಳು ಕೆಲವು ಬಾರಿ ಸಹಾಯ ಕೇಳಿ ಕೊಂಡು ನಮ್ಮ ಬಳಿ ಬಂದಿದ್ದರು. ಅದರಂತೆಯ ಇತ್ತೀಚೆಗೆ ತಾಯಿ ಮಗಳ ಮನೆಗೆ ಬಂದಾಗ…