Subscribe to Updates
Get the latest creative news from FooBar about art, design and business.
- ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
- ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
- ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
- ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
- ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
- ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
- ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
- ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
Author: admin
ಶಿರಾ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ಹುಣಸೆಹಣ್ಣಿನ ಬೆಲೆ ಏಕಾಏಕಿ ಕುಸಿತ ಕಂಡಿದ್ದು, ಬೆಳೆಗಾರರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ ಪ್ರತಿ ಕ್ವಿಂಟಲ್ ಗೆ ಸುಮಾರು 1,000 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ. ಮಾರುಕಟ್ಟೆಯಲ್ಲಿ ಮಂಗಳವಾರ ಹರಾಜು ಪ್ರಕ್ರಿಯೆ ಆರಂಭವಾದಾಗ ಬೆಲೆ ಕುಸಿದಿರುವುದನ್ನು ಗಮನಿಸಿದ ರೈತರು ಅಸಮಾಧಾನ ವ್ಯಕ್ತಪಡಿಸಿದರು. ವರ್ತಕರು ಉದ್ದೇಶಪೂರ್ವಕವಾಗಿ ಬೆಲೆ ಇಳಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು ಟೆಂಡರ್ ಪ್ರಕ್ರಿಯೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಮಾರುಕಟ್ಟೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ರೈತರು, ವರ್ತಕರು ಮತ್ತು ಎಪಿಎಂಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅಧಿಕಾರಿಗಳು ಮತ್ತು ವರ್ತಕರು ಬೆಲೆ ಕುಸಿತಕ್ಕೆ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದ ಹಣ್ಣು ಆವಕವಾಗಿರುವುದು ಮತ್ತು ಹವಾಮಾನ ವೈಪರಿತ್ಯವೇ ಕಾರಣ ಎಂದು ವಿವರಿಸಿದರು. ಕಳೆದ ವಾರ ಉತ್ತಮ ಗುಣಮಟ್ಟದ ಹುಣಸೆಹಣ್ಣು ಪ್ರತಿ ಕ್ವಿಂಟಲ್‌ಗೆ ₹8,000 ರವರೆಗೆ ಮಾರಾಟವಾಗಿತ್ತು.ಈ ವಾರ ಅದು ದಿಢೀರ್ ಆಗಿ ₹7,000 ಕ್ಕೆ ಕುಸಿದಿದೆ. ರೈತರ ಪ್ರತಿಭಟನೆ…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ಜನ ಎಂತಹ ಹುಚ್ಚಾಟಕ್ಕೂ ಮುಂದಾಗುತ್ತಾರೆ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಆಘಾತಕಾರಿ ಘಟನೆಯೇ ಸಾಕ್ಷಿ. ಕೇವಲ ಒಂದು ‘ರೀಲ್ಸ್’ (Instagram Reels) ಮಾಡುವುದಕ್ಕಾಗಿ ಮಹಿಳೆಯೊಬ್ಬಳು ತನ್ನ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳವಾರ ವೈಯಾಲಿಕಾವಲ್ ನ ವಿನಾಯಕ ಸರ್ಕಲ್ ಬಳಿ ಇರುವ ಕೊರಿಯರ್ ಕಚೇರಿಗೆ ಇಬ್ಬರು ಮಹಿಳೆಯರು ಸೇರಿದಂತೆ ಐವರ ಗುಂಪು ದೊಡ್ಡದೊಂದು ಗೋಣಿ ಚೀಲದೊಂದಿಗೆ ಆಗಮಿಸಿದೆ. ಈ ಚೀಲವನ್ನು ಪಾರ್ಸೆಲ್ ಮಾಡಬೇಕು ಎಂದು ಅವರು ಸಿಬ್ಬಂದಿಗೆ ತಿಳಿಸಿದ್ದಾರೆ. ಚೀಲದ ಒಳಗಡೆ ಏನಿದೆ ಎಂದು ಸಿಬ್ಬಂದಿ ಪ್ರಶ್ನಿಸಿದಾಗ, ಅವರು ಸರಿಯಾದ ಉತ್ತರ ನೀಡದೆ ಮೌನವಾಗಿದ್ದರು. ಇದರಿಂದ ಅನುಮಾನಗೊಂಡ ಸಿಬ್ಬಂದಿ ಚೀಲವನ್ನು ತೆರೆದು ನೋಡಿದಾಗ ಒಳಗಡೆ ವೃದ್ಧರೊಬ್ಬರು ಇರುವುದು ಕಂಡುಬಂದು ಬೆಚ್ಚಿಬಿದ್ದಿದ್ದಾರೆ. ಗೋಣಿ ಚೀಲದೊಳಗೆ ಕುಳಿತಿದ್ದ ವೃದ್ಧ ಉಸಿರಾಟದ ತೊಂದರೆಯಿಂದ ಒದ್ದಾಡುತ್ತಿದ್ದರು. ಆದರೂ ಆ ತಂಡದವರು, “ನಾವು ಹಣ ಕೊಡುತ್ತೇವೆ, ಇವರನ್ನು ಬೇರೆ…
ಶಿರಾ: ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದಲ್ಲಿದ್ದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಅಮೆರಿಕ–ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಇದು ನೇರವಾಗಿ ಗ್ರಾಹಕರ ಮೇಲೆ ಪರಿಣಾಮ ಬೀರಿದೆ. ಸಿಲಿಂಡರ್‌ಗಾಗಿ ಗ್ರಾಹಕರು ಬೆಳಿಗ್ಗೆ 6 ಗಂಟೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಖಾಲಿ ಸಿಲಿಂಡರ್ ಹಿಡಿದು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ದಿನವಿಡೀ ಕಾಯುವಂತಾಗಿದ್ದರೂ ಸಿಲಿಂಡರ್ ಸಿಗದೆ ನಿರಾಸೆಯಿಂದ ಮರಳುವಂತಾಗಿದೆ. ನಗರದಲ್ಲಿರುವ ಎರಡು ಏಜೆನ್ಸಿಗಳ ಪೈಕಿ ಒಂದು ಏಜೆನ್ಸಿಯಲ್ಲಿ ಯಾವುದೇ ತೊಂದರೆ ಇಲ್ಲದಿದ್ದರೂ, ಮತ್ತೊಂದು ಏಜೆನ್ಸಿಯಲ್ಲಿ ತೀವ್ರ ಅಭಾವ ಕಂಡುಬಂದಿದೆ. “ಮನೆಗಳಿಗೆ ಸರಬರಾಜು ಮಾಡುವ ಬದಲು ಗೋದಾಮಿನ ಬಳಿಯೇ ವಿತರಿಸುತ್ತಿರುವುದು ಏಕೆ?” ಎಂದು ಗ್ರಾಹಕರು ಪ್ರಶ್ನಿಸುತ್ತಿದ್ದಾರೆ. ಏಜೆನ್ಸಿ ಮೂಲಗಳ ಪ್ರಕಾರ, ಈಗಾಗಲೇ 2,500ಕ್ಕೂ ಹೆಚ್ಚು ಬುಕ್ಕಿಂಗ್ ಗಳು ಬಾಕಿ ಇವೆ. ಆದರೆ ಕೇವಲ 525 ಸಿಲಿಂಡರ್ ಗಳು ಮಾತ್ರ ಪೂರೈಕೆಯಾಗಿವೆ. ಮನೆಯಲ್ಲಿ…
ಬಳ್ಳಾರಿ: ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು. ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮಗಳನ್ನು ನಗರದ ಹೊಂಗಿರಣ ಸಭಾಂಗಣದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಬೇಕು. ಅದೇರೀತಿಯಾಗಿ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಪಾರ್ಶ್ವನಾಥ ಬಸದಿಯಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಜಯಂತಿ ಆಚರಣೆಯ ಸಂದರ್ಭದಲ್ಲಿ ಡಿಜೆ ಬಳಕೆ ಮತ್ತು…
ಬಳ್ಳಾರಿ: ಜಿಲ್ಲೆಯಾದ್ಯಂತ 65 ಕೇಂದ್ರಗಳಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 02 ರವರಗೆ ಎಸ್‌ಎಸ್‌ಎಲ್‌ಸಿ ಪರಿಕ್ಷೆ -1 ನಡೆಯಲಿದೆ. ಪರೀಕ್ಷಾ ದಿನದಂದು ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್ ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ. ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ರಾಘವೇಂದ್ರ ಅಡಿಗ ಎಚ್ಚೆನ್. ಬೆಂಗಳೂರು: ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಹಾಗೂ ಸಮುದಾಯ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಅಗತ್ಯವನ್ನು ಗುರುತಿಸಿ, ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆಯಾದ ‘ಮೈಂಡ್ ಅಂಡ್ ಮ್ಯಾಟರ್ ಜೊತೆಗೆ ಸಹಭಾಗಿತ್ವ ಮಾಡಿಕೊಂಡಿದ್ದು, ಈ ವರ್ಷ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಉದ್ದೇಶ ಹೊಂದಿದೆ. “ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ ‘ಟೆಕಿಯಾನ್ ಫಾರ್ ಗುಡ್’ ಅಡಿಯಲ್ಲಿ ಈ ಸಹಭಾಗಿತ್ವವು ಮಾನಸಿಕ ಆರೋಗ್ಯದ ಬಗ್ಗೆ ಇರುವ ಕಳಂಕವನ್ನು ದೂರ ಮಾಡುವ ಉದ್ದೇಶದೊಂದಿಗೆ, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಹಿಂದುಳಿದ ಸಮುದಾಯಗಳಿಗೆ ಉನ್ನತ ಗುಣಮಟ್ಟದ ಮಾನಸಿಕ ಆರೋಗ್ಯ ಸಂಪನ್ಮೂಲಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡಲಿದೆ. “ಮಾನಸಿಕ ಆರೋಗ್ಯವನ್ನು ನಮ್ಮ ಸಮಾಜದ ಅವಿಭಾಜ್ಯ ಭಾಗವಾಗಿ ಸಾಮಾನ್ಯವಾಗಿ ಸ್ವೀಕರಿಸುವುದು ಅಗತ್ಯ,” ಎಂದು ಮೈಂಡ್ ಅಂಡ್ ಮ್ಯಾಟರ್ ಸಂಸ್ಥಾಪಕಿ ದೀಪಿಕಾ ಅಪ್ಪಯ್ಯ ಹೇಳಿದರು. ಈ ಕಾರ್ಯಕ್ರಮವು ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿರುವ…
ಬೆಂಗಳೂರು: ರಾಜ್ಯಾದ್ಯಂತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ನಾಳೆ, ಮಾರ್ಚ್ 18ರಿಂದ ಆರಂಭವಾಗಲಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರಸಕ್ತ ಸಾಲಿನಲ್ಲಿ 8,65,968 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ನಾವು ಜಾರಿಗೆ ತಂದಿರುವ ಸುಧಾರಣೆಗಳಿಂದಾಗಿ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಒಂದು ವೇಳೆ ಮೊದಲ ಹಂತದಲ್ಲಿ ಅನುತ್ತೀರ್ಣರಾದರೂ, 2 ಮತ್ತು 3ನೇ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅವಕಾಶವಿದೆ. ಹೀಗಾಗಿ ಮಕ್ಕಳು ಧೈರ್ಯವಾಗಿ ಪರೀಕ್ಷೆ ಎದುರಿಸಿ,” ಎಂದು ಹಾರೈಸಿದರು. ಒತ್ತಡ ಮುಕ್ತ ಪರೀಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, “ಹಿಂದೆ ಮಕ್ಕಳು ಪರೀಕ್ಷೆ ಎಂದರೆ ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದರು. ಆದರೆ ಈಗ ಮೂರು ಹಂತದ ಪರೀಕ್ಷಾ ವ್ಯವಸ್ಥೆ ಇರುವುದರಿಂದ ಆ ಭಯ ದೂರವಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ಬನ್ನಿ,”…
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ‘ಕೆಡಿ–ದ ಡೆವಿಲ್’ (K.D The Devil) ಸಿನಿಮಾದ ‘ಸರ್ಸೆ ಸರ್ಸೆ ಸೆರಗ ಸರ್ಸೆ’ ಹಾಡಿನ ವಿವಾದ ಈಗ ತಾರಕಕ್ಕೇರಿದೆ. ಈ ಹಾಡಿನಲ್ಲಿರುವ ಸಾಹಿತ್ಯ ಅಶ್ಲೀಲವಾಗಿದೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವಂತಿದೆ ಎಂಬ ಆಕ್ಷೇಪ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗವು ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲ ಅವರಿಗೆ ಪತ್ರ ಬರೆದಿದೆ. ಹಾಡಿನ ಸಾಹಿತ್ಯವು ಅಸಭ್ಯತೆಯಿಂದ ಕೂಡಿದೆ ಎಂದು ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮಂಡಳಿಗೆ ಸೂಚಿಸಿದೆ. ಈ ಹಾಡಿನ ವಿರುದ್ಧ ಈಗಾಗಲೇ ಮುಂಬೈನಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಎಂಬುವವರು ದೂರು ದಾಖಲಿಸಿದ್ದಾರೆ. ನಟಿ ನೋರಾ ಫತೇಹಿ, ಸಂಜಯ್ ದತ್, ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಗೀತರಚನೆಕಾರ ರಕೀಬ್ ಆಲಂ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಅಶ್ಲೀಲತೆ ಹರಡುತ್ತಿರುವ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 294 ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ…
ತಿಪಟೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ತಿಪಟೂರಿನ ಅಡುಗೆಮನೆಗಳಿಗೂ ತಟ್ಟಿವೆ. ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ತಾಲ್ಲೂಕಿನಾದ್ಯಂತ ಸಿಲಿಂಡರ್ ಗಾಗಿ ಗ್ರಾಹಕರು ಪರದಾಡುವಂತಾಗಿದೆ. ಅಡುಗೆ ಅನಿಲದ ಆನ್ ಲೈನ್ ಮತ್ತು ಫೋನ್ ಕರೆ ಬುಕ್ಕಿಂಗ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಬೇಸತ್ತ ಗ್ರಾಹಕರು ನೇರವಾಗಿ ಏಜೆನ್ಸಿಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಸೋಮವಾರ ಬೆಳಿಗ್ಗೆ 9 ಗಂಟೆಯಿಂದಲೇ ಭಾರತ್ ಗ್ಯಾಸ್ ಸೇರಿದಂತೆ ವಿವಿಧ ಏಜೆನ್ಸಿಗಳ ಮುಂದೆ ನೂರಾರು ಜನರು ಬಿರುಬಿಸಿಲಿನಲ್ಲಿ ಸಾಲು ನಿಂತಿದ್ದರು. ಒಂದು ಸಿಲಿಂಡರ್ ಪಡೆಯಲು ಇಡೀ ದಿನ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ. ಸದ್ಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ, ಮಕ್ಕಳಿಗೆ ಅಡುಗೆ ಸಿದ್ಧಪಡಿಸಿ ಶಾಲೆ–ಕಾಲೇಜಿಗೆ ಕಳುಹಿಸುವುದು ಪೋಷಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಗೃಹಿಣಿಯರು ಗ್ಯಾಸ್ ಕೊರತೆಯಿಂದ ಹೈರಾಣಾಗಿದ್ದಾರೆ. ಸಿಲಿಂಡರ್ ವಿತರಣೆಯ ವೇಳೆ ಕೆಲವು ಕಡೆಗಳಲ್ಲಿ ₹20 ರಿಂದ ₹50 ರವರೆಗೆ ಹೆಚ್ಚುವರಿ…
ತುಮಕೂರು: ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಕೊರತೆ ಎದುರಾಗಿದ್ದು, ಇದು ಪವಿತ್ರ ರಂಜಾನ್ ಮಾಸದ ಸಂಭ್ರಮದ ಮೇಲೆ ತಣ್ಣೀರು ಎರಚಿದೆ. ಸಿಲಿಂಡರ್ ಅಭಾವದಿಂದಾಗಿ ಹಬ್ಬದ ವಿಶೇಷ ತಿನಿಸು ‘ಸಮೋಸ’ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಮತ್ತು ವ್ಯಾಪಾರಿಗಳು ಕಷ್ಟ ಅನುಭವಿಸುವಂತಾಗಿದೆ. ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್ ಮತ್ತು ಅಂಗಡಿಗಳಲ್ಲಿ ಸಮೋಸ ಬೆಲೆ ಏರಿಕೆಯಾಗಿದೆ. ₹10 ಇದ್ದ ತರಕಾರಿ ಸಮೋಸ ಈಗ ₹15ಕ್ಕೆ ಏರಿಕೆಯಾಗಿದ್ದರೆ, ಮೊಟ್ಟೆ ಸಮೋಸ ₹20 ಹಾಗೂ ಚಿಕನ್ ಸಮೋಸ ₹25ಕ್ಕೆ ತಲುಪಿದೆ. ಸಿಲಿಂಡರ್ ಸಿಗದೇ ಇರುವ ಕಾರಣ ನಗರದ ಕೆಲವು ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇನ್ನು ಕೆಲವು ವ್ಯಾಪಾರಿಗಳು ಅನಿವಾರ್ಯವಾಗಿ ಸೌದೆ ಒಲೆಗಳನ್ನು ಬಳಸಿ ತಿನಿಸುಗಳನ್ನು ಸಿದ್ಧಪಡಿಸುತ್ತಿದ್ದಾರೆ. “ರಂಜಾನ್ ಸಮಯದಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿತ್ತು, ಆದರೆ ಸಿಲಿಂಡರ್ ಸಮಸ್ಯೆಯಿಂದ ಕಳೆದ ಒಂದು ವಾರದಿಂದ ಹೋಟೆಲ್ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ಸ್ಥಳೀಯ ಹೋಟೆಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಉಪವಾಸದ ಅಂತಿಮ ಹಂತದಲ್ಲಿರುವ ಮುಸ್ಲಿಂ ಬಾಂಧವರು ಹಬ್ಬಕ್ಕೆ ಬಿರುಸಿನ ಸಿದ್ಧತೆ ನಡೆಸುತ್ತಿದ್ದಾರೆ.…