Subscribe to Updates
Get the latest creative news from FooBar about art, design and business.
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
- ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
- ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
- 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
Author: admin
ಮಾನವನ ಕೈಯನ್ನು ಕಚ್ಚಿಕೊಂಡು ಹೋಗುತ್ತಿದ್ದ ನಾಯಿಯನ್ನು ಕಂಡು ಸಾರ್ವಜನಿಕರು ಬೆಚ್ಚಿಬಿದ್ದ ಘಟನೆ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಅಲ್ಲಿನ ಶತಾಬ್ಧಿ ಹಂತ 3 ಆವರಣದಲ್ಲಿ ನಾಯಿ ತನ್ನ ಬಾಯಲ್ಲಿ ಮಾನವನ ಕೈಯನ್ನು ಕಚ್ಚಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂದಿದೆ. ಇದನ್ನು ಜನ ನೋಡಿ ಬೆಚ್ಚಿಬಿದ್ದಿದ್ದಾರೆ. ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ವಕ್ತಾರರಾದ ಸುಧೀರ್ ಸಿಂಗ್ ಈ ಘಟನೆ ಬಗ್ಗೆ ಮಾತನಾಡಿದ್ದಾರೆ, ‘ನಮ್ಮ ತಂಡವು ನಾಯಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಮಾನವನ ಕೈಯ ತುಂಡನ್ನು ನಾಯಿ ಕಚ್ಚಿಕೊಂಡು ಹೋಗುತ್ತಿತ್ತು. ನಾವು ಇದೀಗ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ. ಎಕ್ಸ್ ಬಳಕೆದಾರ ಪಿಯೂಷ್ ರೈ ನಾಯಿಯ ಫೋಟೋವನ್ನು ಸಹ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ‘ಯುಪಿಯ ಅತಿದೊಡ್ಡ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ಶ್ವಾನ ತನ್ನ ದವಡೆಯಲ್ಲಿ ಮಾನವ ಕೈ ಕಚ್ಚಿಕೊಂಡು ಹೋಗುವುದಾಗಿ’ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಟ್ಯಾಟೂ ಅಂದರೆ ಹೆಚ್ಚಿನವರು ಇಷ್ಟ ಪಡುತ್ತಾರೆ.ಸಾಮಾನ್ಯವಾಗಿ ಹದಿಹರೆಯದವರಲ್ಲಿ ಈ ಗೀಳು ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲೂ ಕೈ, ಕಾಲು, ಎದೆ, ಬೆನ್ನಿನ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಳ್ಳೋದನ್ನು ನಾವು ನೋಡಿದ್ದೇವೆ. ಆದರೆ ಇದೀಗ ಇಲ್ಲೊಬ್ಬಳು ಯುವತಿ ಎಲ್ಲಿ ಹಾಕಿಸಿ ಕೊಂಡಿದ್ದಾಳೆ ಗೊತ್ತಾ? ಹೌದು, ಈ ವಿಡಿಯೋ ನೋಡಿದ್ರೆ ನಿಮ್ಗೂ ಶಾಕ್ ಆಗೋದು ಗ್ಯಾರಂಟಿ.. ಮನುಷ್ಯನಿಗೆ ಹುಚ್ಚು ಇರಬೇಕು ಆದರೆ ಈ ರೀತಿಯ ಹುಚ್ಚುಗಳು ಇರಬಾರದು ಎಂದು ಅಂದುಕೊಳ್ಳೋದಂತು ಪಕ್ಕಾ.. ಈ ಯುವತಿ ಒಸಡಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದು, ಟ್ಯಾಟೂ ಹಾಕಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಕಂಡು ಯುವತಿಯ ಟ್ಯಾಟೂ ಹುಚ್ಚಿಗೆ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್ ಮಾಡಿದ್ದಾರೆ.ಇದು ಯಾವ ಚಂದಕ್ಕಾಗಿ ಅಲ್ಲಿ ಹಾಕಿಸಿಕೊಂಡಿದ್ದಾಳೋ ಏನೋ..ಒಟ್ಟಿನಲ್ಲಿ ಇವಳ ಈ ನಡೆಗೆ ನೆಟ್ಟಿಗರಿಂದ ಟೀಕೆ ವ್ಯಕ್ತವಾಗಿದೆ. @liyanhai33 ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಕಂಡಿದೆ. ವಿಡಿಯೋದಲ್ಲಿ ಯುವತಿಯ ಒಸಡಿನ ಮೇಲೆ…
ಕರ್ನಾಟಕ ಸರಕಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು ಮಾರ್ಚ್ 18 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ. ಎರಡುವರೆ ತಿಂಗಳುಗಳ ಅವಧಿಯಲ್ಲಿಯೇ ತರಬೇತಿ ಪಡೆದುಕೊಳ್ಳಬಹುದು. ಕಳೆದ ಎರಡೂವರೆ ವರ್ಷದಿಂದ ಪೊಲೀಸ್, ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ , ಶಿಕ್ಷಕರ ನೇಮಕಾತಿ ಸೇರಿದಂತೆ ನೂರಾರು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿದ್ದಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ PDO ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ. *ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ) *ಆನ್ಲೈನ್ ತರಗತಿಗಳು – ರಾತ್ರಿ 7 ರಿಂದ 8 ರವರೆಗೆ (ವಾರದ…
ತುಮಕೂರು: ತುಮಕೂರು ತಾಲೂಕು ಬೆಳದರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ತಹಶೀಲ್ದಾರ್, ಬಿಇಒ, ಎಸ್ ಡಿ ಎಂ ಸಿ ಸದಸ್ಯರು ಮತ್ತು ಕೋರ ಪೊಲೀಸ್ ಠಾಣಾಧಿಕಾರಿಗಳು ಫೆನ್ಸಿಂಗ್ ನಿರ್ಮಿಸಿ ಸುತ್ತ ಗಿಡಗಳನ್ನು ನೆಟ್ಟಿರುವುದನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಿರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೋರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಈ ಹಿಂದೆ ದಾಖಲಿಸಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ರವರು ದೂರನ್ನು ದಾಖಲಿಸಿದ್ದರು. ಸದರಿ ದೂರಿನ ಅನ್ವಯ ಉಪಲೋಕಾಯುಕ್ತ ನ್ಯಾಯಮೂರ್ತಿ ಪಣಿಂದ್ರರವರು ತುಮಕೂರುಪೊಲೀಸ್ ವರಿಷ್ಠಾಧಿಕಾರಿ( SP) ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳು ದೂರುದರಾದ ಹೆಚ್.ಎಂ ವೆಂಕಟೇಶ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ವಾಸ್ತವಾಂಶದ ವರದಿಯನ್ನು ನೀಡುವಂತೆ ಕೇಳಿದ್ದರು. ಶನಿವಾರ ಬೆಳಧರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆಟದ ಮೈದಾನಕ್ಕೆ ಆಗಮಿಸಿದ ತುಮಕೂರು ಎಸ್ಪಿ(SP) ಸಮ್ಮುಖದಲ್ಲಿ ಕಲ್ಯಾಣ ಮಂಟಪದ ಮಾಲೀಕರಾದ ಚಂದ್ರಪ್ಪನವರು ಆಟದ ಮೈದಾನದಲ್ಲಿ ಹಾಕಿರುವ ಫೆನ್ಸಿಂಗನ್ನು ತೆರವುಗೊಳಿಸಿರುವುದು ನಾನೇ …
ಮಧುಗಿರಿ: ಪಟ್ಟಣದ ಪುರಸಭೆಯಲ್ಲಿನ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶ ಮತ್ತು ಸೂಚನೆಗಳನ್ನು ಗಾಳಿಗೆ ತೂರಿ ನಿಯಮಗಳನ್ನು ಮರೆತು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ. ದಿನಾಂಕ :16/03/2024 ರ ಶನಿವಾರದಂದು ಮಧುಗಿರಿಯ ಪುರಸಭೆ ಕಾರ್ಯಾಲಯದ ಮುಂದೆ ಇರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸದೇ ಅಪಮಾನ ಮಾಡಿರುವ ಪ್ರಕರಣದ ಬೆಳಕಿಗೆ ಬಂದಿದೆ. ಕಾಳಜಿ ಫೌಂಡೇಶನ್ ತುಮಕೂರು ಮತ್ತು ನೈಜ್ಯ ಹೋರಾಟಗಾರರ ವೇದಿಕೆಯ ಕಾರ್ಯಕರ್ತರು, ಪೌರ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಕಾರ್ಮಿಕರ ಕೈ ಸೇರದೆ ವಂಚಿತವಾಗುತ್ತಿರುವ ದೂರಿನ ಮೇರೆಗೆ ಪುರಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಷ್ಟ್ರಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು. ರಾಷ್ಟ್ರ ಧ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ. ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಹ ಪ್ರತಿದಿನ ನಿಯಮಾನುಸಾರ ರಾಷ್ಟ್ರಧ್ವಜ ಹಾರಿಸಬೇಕೆಂಬ…
ಬೆಂಗಳೂರು: ಕಳೆದ ಒಂದು ದಶಕದಲ್ಲಿ ಮೋದಿ ಸರ್ಕಾರವು ಎಲ್ಲಾ ಕಾರ್ಮಿಕ ಕಾನೂನುಗಳನ್ನು ಮತ್ತು ಕಾರ್ಮಿಕರ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಾಗ್ದಾಳಿ ನಡೆಸಿದರು. ವಿಶೇಷ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಕಾಂಗ್ರೆಸ್ ಪಕ್ಷವು ಕಾರ್ಮಿಕರು ಮತ್ತು ಕಾರ್ಮಿಕರ ಹಕ್ಕುಗಳನ್ನು ನಿರಂತರವಾಗಿ ರಕ್ಷಿಸುತ್ತ ಬಂದಿದೆ. ಕೈಗಾರಿಕಾ ವಿವಾದಗಳ ಕಾಯಿದೆ, ಕಾರ್ಖಾನೆಗಳ ಕಾಯಿದೆ, ಕನಿಷ್ಠ ವೇತನ ಕಾಯಿದೆ, ಇಎಸ್‌ಐ ಕಾಯಿದೆ ಮತ್ತು ಇತರ ಹಲವು ಸೇರಿದಂತೆ ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ಸ್ಥಿತಿಗತಿಗಳನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಹಲವಾರು ಕಾನೂನುಗಳನ್ನು ಕಾಂಗ್ರೆಸ್ ಜಾರಿಗೊಳಿಸಿದೆ. ಆದರೆ, ಇವುಗಳನ್ನು ಮೋದಿ ಸರ್ಕಾರ ದುರ್ಬಲ ಮಾಡಿದೆ ಎಂದರು. ನರೇಗಾ ಯೋಜನೆ ಅಡಿ ಕಾರ್ಮಿಕ ಹಣ ಪಾವತಿ ಆಗುತ್ತಿಲ್ಲ. ನಮ್ಮ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುತ್ತದೆ. ಕೇಂದ್ರ ಸರಿಯಾದ ಸಮಯಕ್ಕೆ ಅನುದಾನ ನೀಡಿದರೆ ಯೋಜನೆಗಳು ಸರಿಯಾದ ಸಮಯಕ್ಕೆ ಆರಂಭವಾಗುತ್ತದೆ. ಆದರೆ, ತನ್ನ ಪಾಲು ಕೇಳಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ…
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇವೆ. 1.5 ಕೋಟಿ ಸಿಬ್ಬಂದಿ, 55 ಲಕ್ಷ ಇವಿಎಂಗಳಿಂದ ಚುನಾವಣೆ ನಿರ್ವಹಿಸಲ್ಪಡುತ್ತವೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ಕ್ಕೆ ಮತದಾನ ನಡೆಯಲಿರುವ ಕ್ಷೇತ್ರಗಳು: ಚಿತ್ರದುರ್ಗ ಉಡುಪಿ-ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಸನ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ಮಂಡ್ಯ ಮೈಸೂರು-ಕೊಡಗು ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಬೆಂಗಳೂರು ದಕ್ಷಿಣ ಬೆಂಗಳೂರು ಉತ್ತರ ಬೆಂಗಳೂರು ಕೇಂದ್ರ ಮೇ 7ರಂದು ಮತದಾನ ನಡೆಯಲಿರುವ ಕ್ಷೇತ್ರಗಳು: ಬೆಳಗಾವಿ ಬಳ್ಳಾರಿ ಚಿಕ್ಕೋಡಿ ಹಾವೇರಿ-ಗದಗ ಕಲಬುರಗಿ ಬೀದರ್ ಹುಬ್ಬಳಿ – ಧಾರವಾಡ ಕೊಪ್ಪಳ ರಾಯಚೂರು ಉತ್ತರ ಕನ್ನಡ ದಾವಣಗೆರೆ ಶಿವಮೊಗ್ಗ ಬಾಗಲಕೋಟೆ ವಿಜಯಪುರ ನಮ್ಮತುಮಕೂರಿನ ಕ್ಷಣ ಕ್ಷಣದ…
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರು ಕುಡಿಯಿರಿ: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ವಿಟಮಿನ್ ಬಿ, ಸಿ, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಬೆಂಡೆಕಾಯಿ ತೂಕ ಇಳಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೀರಿಗೆ ನೀರು ಕುಡಿದು ನೋಡಿ.. ಆರೋಗ್ಯಕ್ಕೆ ಬೆಸ್ಟ್: ಪ್ರತಿದಿನ ಜೀರಿಗೆ ನೀರು ಕುಡಿದರೆ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಅಲ್ಲದೆ ಗ್ಯಾಸ್ಟ್ರಿಕ್ ಸಮಸ್ಯೆ ತಡೆಗಟ್ಟಲು ಸಹಕಾರಿ. ಇದು ಅಜೀರ್ಣ, ಬೇಧಿ, ವಾಂತಿ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ. ನೀವು ಊಟವಾದ ಬಳಿಕ ಅಥವಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯಿರಿ. ಇದರ ಜೊತೆಗೆ ಈ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಬಗೆಯ ಕ್ಯಾನ್ಸರ್ ತಡೆಗಟ್ಟಲು…
ಶಿವಮೊಗ್ಗ: ಶಿವಮೊಗ್ಗದಲ್ಲಿ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕನಾಗಿದ್ದಾನೆ. ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇಕಡಾ 17ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೇವು ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಮಾರ್ಚ್ ಏಪ್ರಿಲ್ ನಲ್ಲಿ 7ನೇ ವೇತನ ಆಯೋಗದ ವರದಿ ಬರುತ್ತದೆ ಅಂತ ಗೊತ್ತಿದ್ದರೂ ಕೂಡಾ ಬಜೆಟ್ ನಲ್ಲಿ ಯಾವುದೇ ಹಣ ಮೀಸಲಿಡದೇ. ಸರ್ಕಾರಿ ನೌಕರರಿಗೆ ಮೂಗಿಗೆ ತುಪ್ಪ ಒರಿಸುವ ಕೆಲ್ಸ ಮಾಡಿದ್ದಾರೆ. ವರದಿ ಜಾರಿ ಆಗುತ್ತದೆಯೋ ಇಲ್ಲವೋ ಕಾದು ನೋಡಬೇಕು.. 7ನೇ ವೇತನ ಆಯೋಗದ ವರದಿ ರೆಡಿಯಾಗಿತ್ತು, ಆದರೂ ಆರು ತಿಂಗಳು ಕಾಲಾವಕಾಶ…