Author: admin

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್‌ ಗೆ ಎರಡು ರೂಪಾಯಿ ಇಳಿಕೆಯಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಹೊಸ ದರ ಜಾರಿಯಾಗಲಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ. ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಟ್ವಿಟ್ಟರ್ ಅವರ ಪೋಸ್ಟ್‌ ನಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರೂ. ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಕುಟುಂಬದ ಕಲ್ಯಾಣ ಮತ್ತು ಸೌಕರ್ಯವನ್ನು ತಮ್ಮ ಗುರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (14.2 ಕೆಜಿ) ಮೇಲೆ ರೂ. 100 ಕಡಿಮೆ ಮಾಡಲಾಗಿತ್ತು. ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇರೆಗೆ ಜೈಲು ಸೇರಿದ್ದ ಮೂವರಿಗೆ ನಗರದ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ದಿಲ್ಲಿಯ ಕಿಶನ್ ಗಂಜ್‌ ನ ಮೊಹಮ್ಮದ್ ಇಲ್ವಾಜ್, ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್. ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿರುವ 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ. ವಿಜೇತ್, ಮೂವರಿಗೂ ಷರತ್ತು ಬದ್ಧ ಜಾಮೀನು ನೀಡಿದೆ. ಮೂವರು ಆರೋಪಿಗಳು ಆರೋಪಿಗಳು ಭಾರತ ಬಿಟ್ಟು ಹೋಗಬಾರದು. ತಲಾ ಒಂದು ಲಕ್ಷ ರೂ. ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ತನಿಖೆ ಹಾಗೂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಪ್ರಕರಣ ಪೊಲೀಸರು ದಾಖಲಿಸುವ ಮುನ್ನ ಪೊಲೀಸರು ಪೂರ್ವಾನುಮತಿ ಪಡೆದಿರಲಿಲ್ಲ. ಜತೆಗೆ, ಆರೋಪಿಗಳಿಗೆ ಸಿಆರ್‌ ಪಿಸಿ ಕಲಂ 41ರ ಅನ್ವಯ ನೋಟಿಸ್ ನೀಡಿಲ್ಲ, ಆರೋಪಿಗಳು ಘೋಷಣೆ ಕೂಗಿದ್ದಾರೆ ಎಂಬುದು ಸಾಬೀತಾಗಲು ಅವರ ಧ್ವನಿ ಮಾದರಿ…

Read More

ಬೆಂಗಳೂರು: ಪಿಎಸ್‌ ಐಯೊಬ್ಬ ಮಹಿಳಾ ಪಿಎಸ್ ಐಗೆ ಅನುಚಿತವಾಗಿ ವರ್ತಿಸಿರುವ ಘಟನೆ ಬಗ್ಗೆ ಬೆಂಗಳೂರಿನಿಂದ ವರದಿಯಾಗಿದೆ. ಈತ ಮಹಿಳಾ ಪಿಎಸ್‌ ಐ ಜತೆಗಿನ ಫೋಟೊ ಸೆರೆಹಿಡಿದು ಮದುವೆ ಆಗು ಎಂದು ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ 28 ವರ್ಷದ ಮಹಿಳಾ ಪಿಎಸ್‌ ಐ ಕೊಟ್ಟ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳಾ ಪಿಎಸ್ ‌ಐಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದ ಮತ್ತೊಬ್ಬ ಪಿಎಸ್‌ ಐನನ್ನು ಇದೀಗ ಬಂಧಿಸಲಾಗಿದೆ.ಕೆ.ಎಸ್‌.ಐ.ಎಸ್‌.ಎಫ್‌ನ ಪಿಎಸ್‌ಐ ಸಂಜಯ್ ಕುಮಾರ್ (34) ಬಂಧಿತ ಆರೋಪಿ. ಸಂಜಯ್‌ ಕುಮಾರ್‌ ಹಾಗೂ ಮಹಿಳಾ ಪಿಎಸ್‌ಐ ಬ್ಯಾಚ್ ಮೇಟ್ ಆಗಿದ್ದ. ತರಬೇತಿ ಪಡೆಯುವ ವೇಳೆ ಸಂಜಯ್ ಪ್ರೇಮ ನಿವೇದನೆಯನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಮಹಿಳೆ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದರು ಎಂದು ತಿಳಿದು ಬಂದಿದೆ. ಆದರೂ ಬಿಡದೇ ಹಿಂದೆ ಬಿದ್ದಿದ್ದ ಸಂಜಯ್‌, ಕೆಎಸ್‌ಐಎಸ್‌ಎಫ್ ‌ನಲ್ಲಿ ಪಿಎಸ್‌ ಐ ಆಗಿ ಇದ್ದುಕೊಂಡು ನಿಮ್ಮನ್ನು ವಿವಾಹ ಆಗುವುದಿಲ್ಲ. ಯುಪಿಎಸ್‌ ಸಿ ಮಾಡುತ್ತೇನೆ ನನಗೆ ಓದಲು…

Read More

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೊಂದ ಬಾಲಕಿಯ ತಾಯಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ. ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿಯು ಕಾಂಗ್ರೆಸ್ ‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರೀ ದಂಡವನ್ನು ವಿಧಿಸುತ್ತಿದೆ. ಆದರೆ ಅವರು ಸಾವಿರಾರು ಕೋಟಿ ರೂ. ಬಹಿರಂಗಪಡಿಸಲು ಸಿದ್ಧರಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್ ‌ಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಜನರು ದೇಣಿಗೆಯಾಗಿ ನಮ್ಮ ಪಕ್ಷಕ್ಕೆ ಹಣ ನೀಡಿದ್ದಾರೆ. ಆದರೆ ಬಿಜೆಪಿಯವರು ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಈಗ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ. ಆದರೆ ಬಿಜೆಪಿಯವರು ಪಡೆದಿರುವ ಚುನಾವಣಾ ಬಾಂಡ್ ‌ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ. ಏಕೆಂದರೆ ಅವರ ಕಳ್ಳತನ ಹೊರಗೆ ಬರಬಹುದು. ಅವರ ತಪ್ಪು ಕೆಲಸಗಳು ಹೊರಬರಬಹುದು ಎಂದು ಖರ್ಗೆ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮಹಾರಾಷ್ಟ್ರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಟಿವಿ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳನ್ನು ಜನರಿಗೆ ತೋರಿಸುವ ಬದಲು ಮೋದಿಯವರನ್ನೇ ತೋರಿಸುತ್ತಾರೆ ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ರೈತರ ಸಮಸ್ಯೆಗಳು, ಹಣದುಬ್ಬರ, ನಿರುದ್ಯೋಗ, ಅಗ್ನಿವೀರರ ಸಮಸ್ಯೆಗಳು ಇಂದು ದೇಶದಲ್ಲಿ ಪ್ರಮುಖವಾಗಿವೆ. ಆದರೆ, ಟಿವಿ ಚಾನೆಲ್‌ಗಳಲ್ಲಿ ಈ ವಿಷಯಗಳ ಬಗ್ಗೆ ನೀವು ಎಂದಿಗೂ ಚರ್ಚೆಯನ್ನು ನೋಡುವುದಿಲ್ಲ. ಬದಲಿಗೆ ಟಿವಿ ಚಾನೆಲ್‌ಗಳು ಮೋದಿಜಿಯನ್ನು 24 ಗಂಟೆಗಳ ಕಾಲ ತೋರಿಸುತ್ತವೆ ಎಂದು ಕಿಡಿ ಕಾರಿದರು. ಮಾಧ್ಯಮಗಳ ಕ್ಯಾಮರಾಗಳು ದಿನದ 24 ಗಂಟೆಗಳ ಕಾಲ ಮೋದಿಯವರ ಬೆನ್ನ ಹಿಂದೆಯೇ ಇರುತ್ತವೆ. ಮೋದಿ ಸಮುದ್ರದಾಳಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಕ್ಯಾಮರಾಗಳೂ ಅವರ ಜೊತೆಗೆ ಸಮುದ್ರಕ್ಕೆ ಇಳಿಯುತ್ತವೆ. ದೇಶದಲ್ಲಿನ ಸಮಸ್ಯೆಗಳತ್ತ ಗಮನ ಕೇಂದ್ರಿಕರಿಸಬೇಕಿದ್ದ ಮಾಧ್ಯಮಗಳು ತಮ್ಮ ಕರ್ತವ್ಯ ಮರೆತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಮೈಸೂರು- ಕೊಡಗು ಲೋಕಸಭಾ ಟಿಕೆಟ್‌ ಘೊಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಬಿಜೆಪಿ ಕಚೇರಿಗೆ ಆಗಮಿಸಿ ಹಿರಿಯ ಮುಖಂಡರನ್ನು ಭೇಟಿಯಾಗಿದ್ದಾರೆ. ಕಚೇರಿಗೆ ಆಗಮಿಸಿದ ಯದುವೀರ್‌ ಗೆ ಆರತಿಯಲ್ಲಿ ಸ್ವಾಗತಿಸಲಾಗಿದೆ. ಇನ್ನು ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ನಾನು ಅವರ ಜೊತೆ ಸಂಪರ್ಕದಲ್ಲಿದ್ದೇನೆ, ಅವರ ಬೆಂಬಲ ನನಗಿದೆ ಎಂದು ಹೇಳಿದ್ದಾರೆ. ಪ್ರತಾಪ್‌ ಸಿಂಹ ಮೈಸೂರು ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ, ಒಳ್ಳೆಯ ಅಡಿಪಾಯ ಹಾಕಿದ್ದಾರೆ, ಅವರ ಸಹಕಾರ ಮುಂದುವರೆಯಲಿದೆ ಎಂದು ಹೇಳಿದರು. ಇನ್ನು ರಾಜಕೀಯ ಪ್ರವೇಶ ಬಗ್ಗೆ ಮಾತನಾಡಿದ ಅವರು ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಸೋಲಿನ ಭೀತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಮತ್ತು ಸರ್ಕಾರದ ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಕೆಲ ಬಿಜೆಪಿ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಹೇಳಿದ ನಂತರ ಬೊಮ್ಮಾಯಿ ಈ ಹೇಳಿಕೆ ನೀಡಿದ್ದಾರೆ. ‘ಕಾಂಗ್ರೆಸ್ ಹದಗೆಟ್ಟ ಸ್ಥಿತಿಯಲ್ಲಿದೆ. ಅನುಭವಿ ಮತ್ತು ಹೊಸ ಮುಖಗಳಿಗೆ ಬಿಜೆಪಿ ಆದ್ಯತೆ ನೀಡುತ್ತಿದೆ. ಬಿಜೆಪಿಯಿಂದ ಮಾತ್ರ ಈ ರೀತಿಯ ನಿರ್ಧಾರ ಕೈಗೊಳ್ಳಲು ಸಾಧ್ಯ. ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಹೀಗಿಲ್ಲ, ಸಚಿವರಿಗೂ ಸೋಲಿನ ಭಯ ಕಾಡುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವುದು ಡಿಸಿಎಂ ಡಿಕೆ ಶಿವಕುಮಾರ್‌ ಗೆ ಅಭ್ಯಾಸವಾಗಿದೆ. ಕಾಂಗ್ರೆಸ್‌ಗೆ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ’ ಎಂದು ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಈ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿದೆ. ಯಡಿಯೂರಪ್ಪ…

Read More

ಬೆಂಗಳೂರು: ಬಿಜೆಪಿಯವರು ನಮಗೆ ಹಾಸನ, ಮಂಡ್ಯಮತ್ತು ಕೋಲಾರ ಬಿಟ್ಟುಕೊಟ್ಟಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, 28 ಸ್ಥಾನಗಳ ಪೈಕಿ 25ರಲ್ಲಿ ಬಿಜೆಪಿ ಅಭ್ಯರ್ಥಿಗಳಿರಲಿದ್ದಾರೆ. ಮಂಜುನಾಥ್‌ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸೋಣ ಎಂದು ಅವರೇ ಒತ್ತಾಯಿಸಿದ್ದಕ್ಕೆ ಹೆಚ್‌ ಡಿ ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದರು. ಹೆಚ್‌ ಡಿಕೆ & ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರವೂ ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ. ಇನ್ನು ಮಂಜುನಾಥ್ ಅವರ ಸ್ಪರ್ಧೆ ವಿಚಾರವಾಗಿ ಹಾಸನದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾವ್ಯಾರೂ ಅವರನ್ನ ರಾಜಕೀಯಕ್ಕೆ ತರೋ ಚಿಂತೆಯೇ ಇರಲಿಲ್ಲ. ಆದ್ರೆ ಬಿಜೆಪಿ ಹೈಕಮಾಂಡ್ ನಮ್ಮ ಮೇಲೆ ಒತ್ತಡ ಹೇರಿ, ಸ್ಪರ್ಧೆ ಮಾಡುವಂತೆ ಮನವೊಲಿಸಲು ಹೇಳಿತ್ತು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿಯೇ ಎರಡು ಕೆ ಎಸ್ ಆರ್ ಟಿಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗೌರಿಬಿದನೂರು ನಿಂದ ತುಮಕೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕೊರಟಗೆರೆಯ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ತುಮಕೂರಿನಿಂದ ಪಾವಗಡ ಕಡೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನ ಕೊರಟಗೆರೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾನೆಟ್ ಮೇಲೆ ಕುಳಿತು ನಿದ್ರೆ ಮಾಡುತ್ತಿದ್ದ ಮಹಿಳೆಯರಿಂದ ಈ ಅಪಘಾತ ಜರುಗಿದೆ ಎಂದು ಬಸ್ ಚಾಲಕ ಹೇಳಿದ್ದು, ಬಾನೆಟ್ ಮೇಲೆ ಕುಳಿತುಕೊಳ್ಳಬೇಡಿ ಹಿಂದೆ ಹೋಗಿ ಎಂದು ಹೇಳುವಷ್ಟರಲ್ಲಿ ಅಪಘಾತ ನಡೆದು ಹೋಗಿತ್ತು ಎಂದು ಹೇಳಿದ್ದಾರೆ. ಕೊರಟಗೆರೆಯ KSRTCಬಸ್ ನಿಲ್ದಾಣದಲ್ಲಿರುವ ಸಂಚಾರ ನಿಯಂತ್ರಣ ಸಿಬ್ಬಂದಿಯ ನಿರ್ಲಕ್ಷದಿಂದ ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ನಿಲ್ದಾಣದಲ್ಲಿ ಹೆಚ್ಚು ಬಸ್ ಗಳು ನಿಂತಾಗ ಹಿಂದೆ ಬರುವ ಬಸ್…

Read More