Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಕೊರಟಗೆರೆ: ಪಟ್ಟಣದ ರಾಜೀವ್ ಭವನ ಅವರಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಪ್ರಚಾರ ಚಾಲನೆ ಕಾರ್ಯಕ್ರಮವನ್ನು ಸಚಿವರುಗಳಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಉದ್ಘಾಟಿಸಿದರು. ಕೊರಟಗೆರೆ ರಾಜ್ಯದ ಜನರು ಶೇ. 18 ರಷ್ಟು ಜಿಎಸ್ಟಿ ಮುಖಾಂತರ 4.5 ಲಕ್ಷ ಕೋಟಿ ತೆರಿಗೆ ಹಣವನ್ನು ಕೇಂದ್ರಕ್ಕೆ ಕಟ್ಟಿದರೆ ಅದರಲ್ಲಿ ಕೇಂದ್ರ ಸರ್ಕಾರ ನಮಗೆ ನೀಡುವುದು ಕೇವಲ 50 ಸಾವಿರ ಕೋಟಿ ಮಾತ್ರವಾಗಿದ್ದು ಉಳಿದ ಹಣವನ್ನು ಇತರ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಅವರು ಕೊರಟಗೆರೆ ಪಟ್ಟಣದ ರಾಜೀವ ಭವನ ಆವರಣದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಗೆ ಚಾಲನೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೊದಲಿನಿಂದಲೂ ಅನ್ಯಾಯ ಮಾಡುತ್ತಿದ್ದು ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದ್ದು 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿದ್ದು ಕೇಂದ್ರವು ಎಸ್.ಡಿ.ಆರ್.ಫೆ ನಿಂದ ಒಂದು ರೂ ಸಹ…
ಬೀದರ್: ಔರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗ ಅಪಾಯದಿಂದ ಪಾರಾಗಿದ್ದಾರೆ. ಬೀದರ ಜಿಲ್ಲಾ ಔರಾದ ತಾಲುಕಿನ ಚೌದ್ರಿ ಬೆಳಕುಣಿ ಗ್ರಾಮದ ನಿವಾಸಿ ದಸರಧ ಭರಾಡೆ, ಸಂದಿಪ ಭರಾಡೆ ಅಪಾಯದಿಂದ ಪಾರಾದವರಾಗಿದ್ದಾರೆ. ಜಿರ್ಗಾ ಕ್ರಾಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಂತಪುರ ಪೋಲಿಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಡ ಮಕ್ಕಳ ಶಾಲೆ. ಕೊರಟಗೆರೆ ವಿಧಾನಸಭಾ ಕ್ಷೇತ್ರ ಕೋರ ಹೋಬಳಿಯ ಬೆಳಧರ ಗ್ರಾಮದ ಸರ್ಕಾರಿ ಶಾಲೆ ಇದೀಗ ಅಕ್ಷರಶಃ ಅನಾಥವಾಗಿದೆ. ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ, ಕೊರಟಗೆರೆ ಕ್ಷೇತ್ರದಲ್ಲೇ ಗೃಹ ಸಚಿವರಿದ್ದರೂ, ಅಧಿಕಾರಿಗಳು ಕಾನೂನಿಗೆ ಸರಿಯಾಗಿ ಕಾರ್ಯ ನಿರ್ವಹಿಸದೇ ಜಿಲ್ಲಾಡಳಿತಕ್ಕೆ ಕಳಂಕ ತರುತ್ತಿದ್ದಾರೆ. ಇಂತಹ ಅಧಿಕಾರಿಗಳು ಜಿಲ್ಲೆಯಲ್ಲಿದ್ದು ಏನು ಪ್ರಯೋಜನ? ಎಂದು ಪ್ರಶ್ನಿಸುವಂತಾಗಿದೆ. ಇಲ್ಲಿನ ಮಕ್ಕಳು ಪ್ರತಿದಿನ ಶಬ್ದ ಮಾಲಿನ್ಯದಿಂದ ಬಳಲುತ್ತಾ ಪಾಠ ಕೇಳುವ ಸ್ಥಿತಿ ಇಲ್ಲಿಯದ್ದಾಗಿದೆ. ಶಾಲೆಗೆ ಹೊಂದಿಕೊಂಡಂತಿರುವ ಕಲ್ಯಾಣ ಮಂಟಪದಲ್ಲಿ ವಾದ್ಯ ಮೇಳಗಳ ಗದ್ದಲದ ನಡುವೆ ಶಾಲೆಯ ಮಕ್ಕಳು ಇಲ್ಲಿ ಓದುವಂತಹ ದುಸ್ಥಿತಿ ಇಲ್ಲಿಯದ್ದಾಗಿದೆ. ಪರೀಕ್ಷೆಗಳು ನಡೆಯುತ್ತಿದ್ದರೂ, ಕಲ್ಯಾಣ ಮಂಟಪದ ವಾದ್ಯಗಳ ಸದ್ದಿಗೆ ಕಿರಿಕಿರಿ ಅನುಭವಿಸುತ್ತಾ ವಿದ್ಯಾರ್ಥಿಗಳು ಪಾಠ ಕೇಳುವಂತಿದೆ. ದಿನಾ ಸಾಯುವವರಿಗೆ ಅಳುವವರು ಯಾರು ಅನ್ನೋ ಗಾದೆ ಮಾತಿನಂತೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಶಾಲೆಗೆ ಹೇಳುವವರು ಕೇಳುವವರು ಯಾರೂ ಇಲ್ಲ ಎನ್ನುವಂತಾಗಿದೆ. ಬೆಳಧರ ಸರ್ಕಾರಿ…
ಸ್ಯಾಂಡಲ್ ವುಡ್ ನಟಿ ಸೌಂದರ್ಯ ಅವರನ್ನು ಸಿನಿಪ್ರೇಮಿಗಳು ಎಂದಿಗೂ ಮರೆಯೋದಕ್ಕೆ ಸಾಧ್ಯನೇ ಇಲ್ಲ. ಇವರ ಕಣ್ಣು ಕುಕ್ಕುವಂತಹ ಸುಂದರ ನೋಟ, ನಗು ಮತ್ತು ಮನಮೋಹಕ ಅಭಿನಯಕ್ಕೆ ಅಭಿಮಾನಿಗಳು ಫಿದಾ.. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯ ಹಲವು ಚಿತ್ರಗಳಲ್ಲಿ ತನ್ನ ಅತ್ಯುತ್ತಮ ಅಭಿನಯದ ಮೂಲಕ ಅನೇಕ ಅಭಿಮಾನಿಗಳನ್ನು ಗಳಿಸಿದ್ದು, ಈ ನಟಿ ಸಿನಿಮಾಗೆ ಎಂಟ್ರಿ ಕೊಡಲು ಒಬ್ಬ ವ್ಯಕ್ತಿಯೇ ಕಾರಣ ಎಂದು ಹೇಳಿರುವ ಹಳೆ ವಿಡಿಯೋ ಇದೀಗ ವೈರಲ್ ಆಗಿದೆ. ಸೂಪರ್ ಸ್ಟಾರ್ ಕೃಷ್ಣ, ಅಮಿತಾಬ್ ಬಚ್ಚನ್, ಮೆಗಾಸ್ಟಾರ್ ಚಿರಂಜೀವಿ, ನಾಗಾರ್ಜುನ, ಬಾಲಕೃಷ್ಣ, ರಜನಿಕಾಂತ್, ರವಿಚಂದ್ರನ್, ವಿಷ್ಣುವರ್ಧನ್ ಹೀಗೆ ಎಲ್ಲಾ ಭಾಷೆಗಳ ಸ್ಟಾರ್ ಹೀರೋಗಳು ಒಟ್ಟಿಗೆ ಕಾಣಿಸಿಕೊಂಡಿದ್ದರು. 2004ರಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದ,ಈ ಘಟನೆಯಲ್ಲಿ ಸೌಂದರ್ಯಾ ಜತೆಗೆ ಆಕೆಯ ಸಹೋದರ ಅಮರ್ ಕೂಡ ದುರಂತ ಅಂತ್ಯ ಕಂಡಿದ್ದರು. ಸೌಂದರ್ಯಾ ಕೊನೆಯುಸಿರೆಳೆದು ಸುಮಾರು 20 ವರ್ಷಗಳೇ ಕಳೆದಿವೆ. ಸೌಂದರ್ಯಾಗೆ ಸಂಬಂಧಿಸಿದ ಅಪರೂಪದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…
ಬೆಂಗಳೂರಿನ, ದ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಯುವ ಸಾಧಕರನ್ನು ಗುರುತಿಸಿ ಗೌರವಿಸುವ ಜೀ ಕನ್ನಡ ವತಿಯಿಂದ “ಯುವರತ್ನ” ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ತಳಮಟ್ಟದಿಂದ ಬೆಳೆದು ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರುತಿಸುವ ಕಾರ್ಯಕ್ರಮವೇ ಯುವರತ್ನ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ “ಯುವರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ‘ಯುವರತ್ನ ಅವಾರ್ಡ್ಸ್’ ಕಾರ್ಯಕ್ರಮಕ್ಕೆ ಸಚಿವರಾದ ರಾಮಲಿಂಗರೆಡ್ಡಿ, ಚಲುವರಾಯಸ್ವಾಮೀ, ಸಂತೋಷ್ ಲಾಡ್ ಮತ್ತು ಶಿವರಾಜ್ ತಂಗಡಗಿ ಆಗಮಿಸಿದ್ದರು. ಇವರ ಜೊತೆಗೆ ಚಿತ್ರರಂಗದ ಗಣ್ಯರಾದ ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ನಟ ವಿಜಯರಾಘವೇಂದ್ರ , ಆಕ್ಷನ್ ಪ್ರಿನ್ಸ್ ಧೃವಸರ್ಜಾ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನ ಯುವ ಸಾಧಕರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವರತ್ನ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಕೆಳಕಂಡಂತಿದೆ: 1 ಡಾ. ಮನೋಜ್ ಕುಮಾರ್ ಕೃಷ್ಣಪ್ಪ – ಇಟಾಚಿ ಸಂಸ್ಥೆಯ ಹೋಲ್…
ಅಧಿಕೃತವಾಗಿ 2-3 ದಿನಗಳಲ್ಲಿ ನಾನು ರಾಜಕೀಯಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಹೃದ್ರೋಗ ತಜ್ಞ ಡಾ. ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಮಾರ್ಚ್ 13 ರಂದು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಬಳಿಕ ಮಧ್ಯಮಗಳ ಜೊತೆ ಮಾತನಾಡಿ, ಮೋದಿ ಸರ್ಕಾರ ಸಾಧಕರಿಗೆ, ಪರಿಣಿತರಿಗೆ ಪ್ರೊತ್ಸಾಹ ಕೊಡುತ್ತಿದ್ದಾರೆ. ಹೀಗಾಗಿ ನಾನು ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಹೃದ್ರೋಗ ಕ್ಷೇತ್ರದಲ್ಲಿ ಕಾಂತ್ರಿಕಾರಕ ಕೆಲಸ ಮಾಡಿದ್ದೇವೆ. ಮೋದಿಗೆ ಹ್ರಾಟ್ರಿಕ್ ಎಲೆಕ್ಷನ್ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಯಡಿಯೂರಪ್ಪ ಜೊತೆ ಮಾತಾಡಿದ್ದೇನೆ. ರಾಜಕೀಯದಲ್ಲೂ ನಾನು ರಾಜಕೀಯ ಮಾಡುವುದಿಲ್ಲ ಎಂದು ತಿಳಿಸಿದರು. ಇಡೀ ನಾಡಿಗೆ ಗೊತ್ತಿರುವಂತೆ ಡಾ. ಮಂಜುನಾಥ್ ಲಕ್ಷಾಂತರ ಜನರ ಪ್ರಾಣ ಉಳಿಸಿದ್ಧಾರೆ. ಅವರು ಬಿಜೆಪಿ ಸೇರ್ಪಡೆ ಆಗಲಿದ್ದು, ಇಂತಹವರನ್ನ ಅವಿರೋಧವಾಗಿ ಗೆಲ್ಲಿಸಿಕೊಡಬೇಕಿತ್ತು. ಆದರೆ ಚುನಾವಣಾ ರಾಜಕೀಯ ಅನಿವಾರ್ಯ. ಅವರ ಪಕ್ಷ ಸೇರ್ಪಡೆ ಬಗ್ಗೆ ಮೋದಿ ಅವರಿಗೂ ಮಾಹಿತಿ ನೀಡಿದ್ದೆವು. ಅವರು ಕೂಡ ಬಹಳ ಸಂತೋಷಪಟ್ಟರು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಸ್ನೇಹಿತೆಯನ್ನು ಬೀಳ್ಕೊಡಲು ನಕಲಿ ಟಿಕೆಟ್‍ನೊಂದಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧಿಸಿರುವುದಾಗಿ ವರದಿ ತಿಳಿಸಿದೆ. ಜಾರ್ಖಂಡ್ ಮೂಲದ ಪ್ರಖರ್ ಶ್ರೀವಾಸ್ತವ(24 ವರ್ಷ) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಪ್ರಖರ್ ಶ್ರೀವಾಸ್ತವನ ಸ್ನೇಹಿತೆ ಬೆಂಗಳೂರಿನಿಂದ ಹೊಸದಿಲ್ಲಿಗೆ ವಿಮಾನ ಮೂಲಕ ಪ್ರಯಾಣ ಬೆಳೆಸಲು ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆಯನ್ನು ಕಳುಹಿಸಲು ಪ್ರಖರ್ ಶ್ರೀವಾಸ್ತವ, ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ ಎನ್ನಲಾಗಿದೆ. ನಕಲಿ ಟಿಕೆಟ್ ತೋರಿಸಿ, ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದಾನೆ. ಆದರೆ ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್ ಹಿಂತಿಗಿದ್ದಾನೆ. ಆಗ ಗೇಟ್ ನಂ.9ರ ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ, ನನಗೆ ತುರ್ತು ಕರೆ ಬಂದಿದೆ, ಹೀಗಾಗಿ ಮರಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾನೆ. ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್ ನ ಪ್ರಯಾಣದ ಟಿಕೆಟ್ ಅನ್ನು ಮತ್ತೊಮ್ಮೆ ಪರಿಶೀಲಿಸಿದಾಗ ನಕಲಿ ಎಂಬುವುದು ತಿಳಿದು ಬಂದಿದೆ ಎನ್ನಲಾಗಿದೆ. ಕೂಡಲೆ ಪ್ರಖರ್ ಶ್ರೀವಾಸ್ತವನನ್ನು…
ತುಮಕೂರು: ಮಾಧ್ಯಮಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾರವಾರ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಇತ್ತೀಚಿಗೆ ಅಂಕೋಲ ತಾಲ್ಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಒಂದರಲ್ಲಿ ಮಾಧ್ಯಮಗಳ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕೂಡಲೇ ಅವರು ಬೇಷರತ್ ಮತ್ತು ಬಹಿರಂಗವಾಗಿ ರಾಜ್ಯದ ಪತ್ರಕರ್ತರ ಸಮುದಾಯದ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ತರವಾದ ಸ್ಥಾನವಿದ್ದು, ತಮಗೆ ಬೇಕಾದ ಮಾಧ್ಯಮವನ್ನು ಹೊಗಳುವುದು, ಬೇಡವೆನ್ನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಚಾರವಾಗಿದೆ ಅನಂತ್ ಕುಮಾರ್ ಹೆಗ್ಗಡೆಯವರು ಜವಾಬ್ದಾರಿಯುತ ಸ್ಥಾನದ ಸಂಸದರಾಗಿದ್ದು, ಆಗಿಂದಾಗ್ಗೆ ಮನಸೋ ಇಚ್ಛೆ ತಮ್ಮ ನಾಲಿಗೆಯನ್ನು ಹರಿದು ಬಿಡುತ್ತಿದ್ದಾರೆ. ಇದನ್ನು ಬಿಜೆಪಿ ಪಕ್ಷವು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತಹವರನ್ನು ಸಾರ್ವಜನಿಕ ಚುನಾವಣೆಗಳಿಂದ ಹೊರಗಿಡಬೇಕು ಜೊತೆಗೆ ಇಂತಹವರ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರವೂ…
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಹೈಕಮಾಂಡ್ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಚಿವ ವಿ.ಸೋಮಣ್ಣ ಜಿಲ್ಲೆಯಲ್ಲಿ ಪ್ರಮುಖ ನಾಯಕರಗಳನ್ನು ಭೇಟಿಯಾಗಿ ಬೆಂಬಲವನ್ನು ಕೇಳುತ್ತಿದ್ದಾರೆ. ಮುಖ್ಯವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿ ಸೋಮಣ್ಣ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು ಮುಂಬರುವ ಚುನಾವಣೆಯ ಕಾರ್ಯತಂತ್ರದ ಭಾಗವಾಗಿ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತವೆ. ಇನ್ನೊಂದೆಡೆ ಲೋಕಸಭೆ ಮಾಜಿ ಉಪಸಭಾಪತಿ ದಿ. ಮಲ್ಲಿಕಾರ್ಜುನಯ್ಯ ರವರು ಶಿವೈಕ್ಯರಾಗಿ ದಶಮಾನದ ಹಿನ್ನಲೆಯಲ್ಲಿ ಅವರ ಸ್ವಗೃಹಕ್ಕೆ ತೆರಳಿ ನಮನ ಸಲ್ಲಿಸಿ, ಮಲ್ಲಿಕಾರ್ಜುನ್ ಅವರ ಪತ್ನಿ ಜಯಮ್ಮ ಮಲ್ಲಿಕಾರ್ಜುನಯ್ಯ ರವರ ಆಶೀರ್ವಾದ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಹಾಸ್ಯನಟ ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಹೊಸ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ 42 ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಕಾರು ಅಪಘಾತದಿಂದ ಜಗದೀಶ್ ಅವರ ಎದೆ ಭಾಗ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇವರಿಗೆ ಕುಣಿಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಜಗದೀಶ್ ಅವರ ಸಂಬಂಧಿಕರು ಯಾರು ಕೂಡ ಬಂದಿರಲಿಲ್ಲ. ಮಧ್ಯ ವ್ಯಸನಿಯಾಗಿದ್ದ ಜಗದೀಶ್ ಅನೇಕ ಬಾರಿ ಇಂತಹ ಅಪಘಾತಗಳಿಂದ ಚೇತರಿಸಿಕೊಂಡಿದ್ದರು. ಈ ಬಾರಿಯೂ ಸಾಮಾನ್ಯ ಎಂಬ ಅಪಘಾತದಿಂದ ಇವರು ಚೇತರಿಸಿಕೊಳ್ಳಲಿದ್ದಾರೆ ಎಂಬ ನಂಬಿಕೆ ಅವರ ಕುಟುಂಬದವರಲ್ಲಿತ್ತು. ಆದರೆ ದುರದೃಷ್ಟವಶಾತ್ ಇಂದು ಮುಂಜಾನೆ 3 ಗಂಟೆ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿತ್ತು, ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ಆಟೋವೊಂದಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ ನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…