Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಆರ್ ಸಿಬಿ ಅಭಿಮಾನಿಗಳು ತುಂಬಾನೇ ಜೋಶ್ ನಲ್ಲಿದ್ದಾರೆ. ಈ ಬಾರಿ ಕಪ್ ನಮ್ಮದೆ ಎನ್ನುವ ಕೂಗು ಜೋರಾಗಿಯೆ ಇದೆ. ಹೌದು, ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ(ಐಪಿಎಲ್) 17ನೇ ಆವೃತ್ತಿಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದ್ದು, ವಿಶ್ವದ ಶ್ರೀಮಂತ ಟಿ20 ಲೀಗ್ ಆರಂಭಕ್ಕಾಗಿ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ರೋಚಕ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ತಂಡಗಳು ಮುಖಾಮುಖಿಯಾಗಲಿವೆ. ಈ ವೈಭವದ ಕ್ಷಣಕ್ಕೆ ಎಲ್ಲರೂ ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯ ಆರ್ ಸಿಬಿ ಬಿಡುಗಡೆ ಮಾಡಿದ ಪ್ರೊಮೊವೊಂದು ಇದೀಗ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ತಲೆಗೆ ಹುಳ ಬಿಟ್ಟಂಗಾಗಿದೆ. ಸಮಾರಂಭದ ಪ್ರೊಮೊವೊಂದು ಬಿಡುಗಡೆಯಾಗಿದ್ದು, ಕಂಬಳದ ಕೋಣಗಳೊಂದಿಗೆ ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ…
ರಾಜಕೀಯವಾಗಿ ನನ್ನ ವಿರೋಧ ಮಾಡಿದವರು ಸಾವನ್ನಪ್ಪಿದ್ದಾರೆ. ಅವರಿಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂಬ ತಮ್ಮ ಹೇಳಿಕೆಯನ್ನು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ ಎಂದು ಪುನರುಚ್ಚರಿಸಿದ್ದಾರೆ ಎನ್ನಲಾಗಿದೆ. ನನಗೆ 71 ವರ್ಷ ನಾನು ಉಳಿದಿದ್ದೇನಲ್ಲಾ, ಅವರು ಒಬ್ಬರಾದರೂ ಇದ್ದಾರಾ? ಎಂದು ಹೇಳಿದರು. ನಾನು ಎಂದು ಆಕ್ರೋಶವಾಗಿ ಮಾತನಾಡಿಲ್ಲ. ನೀವು ಆಕ್ರೋಶವಾಗಿ ಮಾತನಾಡಿದರೆ ನಾನು ಹೀಗೆ ಮಾತನಾಡುವೆ. ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ. ನಾನು ಟಿಕೆಟ್ ಆಕಾಂಕ್ಷಿಯಲ್ಲ, ನನಗೆ ಟಿಕೆಟ್ ಸಿಗುತ್ತದೆ. ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ ಎಲ್ಲಿಂದ ಮೆಸೇಜ್ ಬರಬೇಕು ಅಲ್ಲಿಂದ ಬಂದಿದೆ ತಿಳಿಸಿದರು. ನನ್ನ ಟಿಕೆಟ್ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಅದು ದೇವರಿಗೆ ಮಾತ್ರ ಸಾಧ್ಯ. ಬೇಕಾದಷ್ಟು ಹಣವಿದ್ದವರು ಹಣ ಕೊಡುತ್ತೇವೆಂದು ತಿರುಗಾಡಲಿ ಅದು ಕೆಲಸಕ್ಕೆ ಬರಲ್ಲ. ಇದು ಗಟ್ಟಿ ಯಾರೂ ಏನೂ ಮಾಡಲಾಗಲ್ಲ. ರಾಜಕೀಯವಾಗಿ ನನಗೆ ವಿರೋಧ ಮಾಡಲು ಬಂದವರು ಯಾರೂ ರಾಜಕೀಯವಾಗಿ ಉಳಿದಿಲ್ಲ.…
ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಅಮೆರಿಕದ ಕಾಂಗ್ರೆಸ್ ಸದಸ್ಯರು. “ನರೇಂದ್ರ ಮೋದಿ ಜನಪ್ರಿಯ ನಾಯಕ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಮರು ಆಯ್ಕೆಯಾಗಲಿದ್ದಾರೆ” ಎಂದು ರಿಚ್ ಮೆಕ್ ಕಾರ್ಮಿಕ್ ಹೇಳಿದ್ದಾರೆ. ಜಾರ್ಜಿಯಾದ ರಿಪಬ್ಲಿಕನ್ ಸಂಸದರು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಮೋದಿ ಅವರು ನಂಬಲಾಗದಷ್ಟು ಜನಪ್ರಿಯರಾಗಿದ್ದಾರೆ. ನಾನು ಪ್ರಧಾನಿ ಮೋದಿ ಮತ್ತು ಇತರ ಶಾಸಕರೊಂದಿಗೆ ಊಟ ಮಾಡಿದ್ದೇನೆ. ಅವರ ಜನಪ್ರಿಯತೆ ಪಕ್ಷದ ಎಲ್ಲೆ ಮೀರಿ ಕಾಣುತ್ತಿತ್ತು. ಅವರು ಸುಮಾರು 70 ಪ್ರತಿಶತದಷ್ಟು ಜನಪ್ರಿಯರಾಗಿದ್ದಾರೆ ಎಂದು ನಾನು ನಂಬುತ್ತೇನೆ. ಅವರು ಮತ್ತೆ ಭಾರತದ ಪ್ರಧಾನಿಯಾಗುತ್ತಾರೆ ಎಂದು ರಿಚ್ ಮೆಕ್‌ಕಾರ್ಮಿಕ್ ಹೇಳಿದ್ದಾರೆ. ಮೋದಿಯವರ ನಾಯಕತ್ವದಲ್ಲಿ ಭಾರತದ ಆರ್ಥಿಕತೆಯು ವಾರ್ಷಿಕವಾಗಿ ನಾಲ್ಕರಿಂದ ಎಂಟು ಶೇಕಡಾ ದರದಲ್ಲಿ ಬೆಳೆಯುತ್ತಿದೆ ಎಂದು ನಾವು ಗಮನಿಸಿದ್ದೇವೆ. “ಚೀನಾ ಮಾಡಿದ ಕೆಲವು ಕೆಲಸಗಳನ್ನು ಭಾರತವು ನಕಲು ಮಾಡಿದೆ. ಭಾರತೀಯ ಮಾರುಕಟ್ಟೆ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದೆ. ಇದು ವ್ಯಾಪಾರ ಕ್ಷೇತ್ರದಲ್ಲಿ ಭಾರತಕ್ಕೆ ನಂಬಲಾಗದ ಪ್ರಭಾವ ಬೀರಲು ಸಹಾಯ…
ಬಾಲಿವುಡ್ ನಟಿಯರನ್ನು ಡೀಪ್ ಫೇಕ್ ತಂತ್ರಜ್ಞಾನದ ದುರ್ಬಳಕೆ ಮಾಡುವವರು ಮತ್ತೆ ಮತ್ತೆ ಕಾಡುತ್ತಿದ್ದಾರೆ. ಇತ್ತೀಚೆಗೆ ಈ ವಿಷಯವಾಗಿ ಭಾರಿ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ವಿಷಯದಲ್ಲಿ ಆರೋಪಿಯನ್ನು ಸೆರೆಹಿಡಿಯಲಾಗಿತ್ತು. ಡೀಪ್ ಫೇಕ್ ಗೆ ಈಗಾಗಲೇ ಅನೇಕ ನಟಿಯರು ಬಲಿಯಾಗಿದ್ದು ಹಲವರು ಹೇಳಿಕೊಳ್ಳದೆ ಸುಮ್ಮನಿದ್ದಾರೆ ಎನ್ನಲಾಗಿದೆ. ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ ಫೇಕ್ ವೀಡಿಯೋ ವೈರಲ್ ಆಗಿದೆ. ಯಾರದೋ ದೇಹಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ವೀಡಿಯೋ ವೈರಲ್ ಮಾಡಿದ್ದಾರೆ. ರಶ್ಮಿಕಾ ಹೊಸ ಡೀಪ್ ಫೇಕ್ ವೀಡಿಯೋದಲ್ಲಿ ಯುವತಿಯೊಬ್ಬರು ಡ್ಯಾನ್ಸ್ ಮಾಡುತ್ತಿದ್ದಾರೆ. ಯಾರದೊ ಯುವತಿಯ ದೇಹಕ್ಕೆ ರಶ್ಮಿಕಾ ಮುಖ ಎಡಿಟ್ ಮಾಡಲಾಗದೆ. ಈ ವೀಡಿಯೋ ವೈರಲ್ ಆಗ್ತಿದ್ದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಡೀಪ್ ಫೇಕ್ ವೀಡಿಯೋ ಮಾಡಬೇಡಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಾಸ್ತವಕ್ಕೆ ‘ಒಂದು ದೇಶ ಒಂದು ಚುನಾವಣೆ’ ಪ್ರತಿಪಾದನೆ? ಈ ಕುರಿತು ಅಧ್ಯಯನ ನಡೆಸಲು ನೇಮಕಗೊಂಡಿರುವ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ಅಧ್ಯಯನ ವರದಿಯನ್ನು ಸಲ್ಲಿಸಲಿದೆ. 18,000 ಪುಟಗಳ ವರದಿಯು ‘ಒಂದು ದೇಶ ಒಂದು ಚುನಾವಣೆ’ ಯೋಜನೆಯ ಪರವಾಗಿ ಸಲಹೆಗಳನ್ನು ಹೊಂದಿದೆ ಎಂದು ಸೂಚಿಸಲಾಗಿದೆ. ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಅಧ್ಯಯನ ಮಾಡಲು ಐದು ತಿಂಗಳ ಹಿಂದೆ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಇಂದು ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಲಿದೆ. 2029ರ ಸಾರ್ವತ್ರಿಕ ಚುನಾವಣೆಯಿಂದಲೇ ‘ಒಂದು ದೇಶ ಒಂದು ಚುನಾವಣೆ’ ಜಾರಿಯಾಗಬೇಕು ಎಂದು ವರದಿಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ‘ಒಂದು ದೇಶ ಒಂದು ಚುನಾವಣೆ’ ಎಂಬುದು ದೇಶಕ್ಕೆ ಹೊಸದಲ್ಲ ಎಂಬುದು ಸಮಿತಿಯ ಮೌಲ್ಯಮಾಪನ. ‘ಒಂದು ದೇಶ ಒಂದು ಚುನಾವಣೆ’ ಎಂಬುದು ಆರ್ಥಿಕವಾಗಿ ದೇಶಕ್ಕೆ ಹೆಚ್ಚಿನ ಲಾಭ ತರುವ ಪ್ರಸ್ತಾಪವಾಗಿದೆ ಎಂದು ಸಮಿತಿಯು ಕಂಡುಹಿಡಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ)ಯನ್ನ ಕೇಂದ್ರ ಸರ್ಕಾರ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಎಯನ್ನ ಇಡೀ ದೇಶದಲ್ಲಿ ಜಾರಿಗೆ ತಂದಿದೆ. ಆದರೆ ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ನಾವು ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದರು. ಸಿಎಎ ಮೂಲಕ ಮತಗಳನ್ನು ಪಡೆಯುವ ತಂತ್ರ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅಮಿತ್ ಶಾ, ಈ ರೀತಿ ಹೇಳುವುದು ಅವರ ಇತಿಹಾಸ, ಆದರೆ ಸಿಎಎ ಜಾರಿಗೆ ತಂದಿರುವುದು ಮೋದಿ ಇತಿಹಾಸ, ಮೋದಿಯವರ ಪ್ರತಿ ಭರವಸೆಯೂ ಈಡೇರಿದೆ ಎಂದಿದ್ದಾರೆ. ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ ಏಕೆಂದರೆ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ. ಸಿಎಎ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು…
“ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮೂಲಭೂತವಾಗಿ ತಾರತಮ್ಯದ ನಡೆಯಾಗಿದೆ.” ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ‘2019ರಲ್ಲಿ ವಿಶ್ವಸಂಸ್ಥೆ ಅಭಿಪ್ರಾಯಪಟ್ಟಂತೆ ಸಿಎಎ ಸ್ವಾಭಾವಿಕವಾಗಿ ತಾರತಮ್ಯ ಭರಿತವಾಗಿದೆ. ಜತೆಗೆ ಇದು ಭಾರತೀಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ,” ಎಂದು ರಾಯಿಟರ್ಸ್ ಸುದ್ದಿಸಂಸ್ಥೆಗೆ ವಿಶ್ವಸಂಸ್ಥೆಯ ಪ್ರಧಾನ ಆಯುಕ್ತರ ಕಚೇರಿಯ ವಕ್ತಾರರು ತಿಳಿಸಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಎಲ್ಲ ಸಮುದಾಯಗಳಿಗೆ ಸಮಾನ ಹಕ್ಕುಗಳು ನೆಲದ ಕಾನೂನು ಅಡಿಯಲ್ಲಿ ದೊರಕಬೇಕು. ಇದು ಪ್ರಜಾಪ್ರಭುತ್ವದ ಭೌಗೋಳಿಕವಾದ ಮೂಲಭೂತ ಸಿದ್ಧಾಂತಗಳಲ್ಲಿ ಪ್ರತಿಪಾದನೆಯಾಗಿದೆ,” ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವಸಂಸ್ಥೆಯ ನಿಲುವಿಗೆ ಅಮೆರಿಕ ಸರಕಾರದ ಕೆಲವು ಇಲಾಖೆಗಳು ಬೆಂಬಲ ಸೂಚಿಸಿವೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾಂತಾರ ಚಿತ್ರ ಸೂಪರ್ ಹಿಟ್ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಅಧ್ಯಾಯ ೧ರ ಚಿತ್ರೀಕರಣ ಆರಂಭಿಸಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್ ಡೇಟ್ ಒಂದು ಹೊರಬಿದ್ದಿದ್ದು, ಈ ಚಿತ್ರದಲ್ಲಿ ತೆಲುಗು ಸೂಪರ್ ಸ್ಟಾರ್ ನಟ ಜೂ. ಎನ್ ಟಿಆರ್ ನಟಿಸಲಿದ್ದಾರೆ ಎನ್ನಲಾಗಿದೆ ಎನ್ನುವ ವಿಚಾರವೊಂದು ಹೊರ ಬಿದ್ದಿದೆ. ಹೌದು..ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲ್ ನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾ ಬಿಡುಗಡೆಯಾದ ದಿನದಿಂದ ಚಿತ್ರಮಂದಿರಗಳು ತುಂಬಿ ತುಳುಕಿದ್ದವು. ಅಷ್ಟರ ಮಟ್ಟಿಗೆ ಕಾಂತಾರ ಪರಿಣಾಮ ಬೀರಿತ್ತು. ಚಿತ್ರ ಪ್ರೇಮಿಗಳಂತು ಈ ಚಿತ್ರದ ಬಗೆಗಿನ ಮತ್ತಷ್ಟು ವಿವರಗಳನ್ನು ಹುಡುಕೋದಕ್ಕೆ ಶುರು ಮಾಡಿದ್ರು. ಸದ್ಯ ಕಾಂತಾರ ಅಧ್ಯಾಯ ೧ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಸಿನಿಮಾದ ಮುಹೂರ್ತ ನಡೆದಿದ್ದು, ಕಲಾವಿದರ ಆಯ್ಕೆಯೂ ಸಹ ಮುಗಿದಿದೆ. ಪಂಜುರ್ಲಿ ದೈವದ ಮೂಲದ ಕಥಾ ಆಧಾರಿತ ಸಿನಿಮಾ ಇದಾಗಿದ್ದು, ಕುತೂಹಲ ಮೂಡಿಸುತ್ತಿದೆ.…
ನೈಜ್ಯ ಹೋರಾಟಗಾರರ ವೇದಿಕೆ ಖಂಡನೆ ತುಮಕೂರು: ಬ್ಯಾಂಕ್ ನಲ್ಲಿದ್ದ ಡೆಪಾಸಿಟ್ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿರುವ ಘಟನೆ ನಡೆದಿದೆ ಘಟನೆ ಅಂಧ್ರ ಪ್ರದೇಶದ ಮಡಕಶಿರಾ ತಾಲೂಕಿನ ನಿದ್ರಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ಲಕ್ಷ್ಮಿ ಎಂಬ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತನ್ನ ಮಗಳಿಗಾಗಿ ತಾಯಿ 4 ಲಕ್ಷ ಹಣ ಡಿಪಾಸಿಟ್ ಮಾಡಿದ್ದರು. ಈ ಹಣವನ್ನು ಲಪಟಾಯಿಸಲು ಬಾಲಕಿಗೆ ದೊಡ್ಡಮ್ಮ ಹಣಕ್ಕಾಗಿ ಬಾಲಕಿಯ ತೊಡೆಯನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದೆ. ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ತುಮಕೂರು: ಜಿಲ್ಲೆ ಸಿರಾ ತಾಲ್ಲೂಕಿನ ಮೆಳೆಕೋಟೆ ಸರ್ಕಾರಿ ಶಾಲೆಯಲ್ಲಿ ಇಂದು ಶಾಲಾ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅಗ್ನಿ ಅವಘಡಕ್ಕೆ ತುತ್ತಾಗಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಈ ಘಟನೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಸಮಯದಲ್ಲಿ ಮಕ್ಕಳ ರಕ್ಷಣೆಯ ಕುರಿತು ನಿರ್ಲಕ್ಷ್ಯ ವಹಿಸಿದ ಶಿಕ್ಷಕರ ವಿರುದ್ದ ಇಲಾಖಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ನೀಡಲು ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಯೋಗ ಸೂಚಿಸಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ನಮ್ಮತುಮಕೂರಿಗೆ ತಿಳಿಸಿದ್ದಾರೆ. ಅಲ್ಲದೇ ನಾಳೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ದಪಡಿಸಿ ಆಯೋಗಕ್ಕೆ ಸಲ್ಲಿಸಲು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯ ಮಗು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾಳೆ ಮಗುವನ್ನು ಭೇಟಿ ಮಾಡಲಿದ್ದೇನೆ. ನಾಳಿನ ಭೇಟಿ ಹಾಗೂ ಬಂದ ವರದಿಗಳ ಮೇಲೆ ಮುಂದಿನ ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು ಎಂದು…