Author: admin

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಸಾವು ಸಂಭವಿಸಿದೆ. ಅಸ್ಸಾಂ ಮೂಲದ ಮಹಿಳೆ ಅಜಬಾನು(37) ಆನೆ ದಾಳಿಗೆ ಬಲಿಯಾದ ಮಹಿಳೆಯಾಗಿದ್ದಾರೆ. ಅಜಬಾನು ಅವರು ಇತರ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಆಗ ಆನೆ ದಾಳಿ ಮಾಡಿದೆ. ದಾಳಿ ಮಾಡಿದಾಗ ಅಜಬಾನು ಆನೆಯ ದಾಳಿಗೆ ಸಿಲುಕಿದ್ದಾರೆ. ಕೂಡಲೇ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಅಲ್ಲಿನ ಜನರು ಆಕ್ರೋಶಿತರಾಗಿದ್ದಾರೆ. ಆನೆಗಳು ನಿರಂತರ ದಾಳಿ ನಡೆಸಿ ಪ್ರಾಣಗಳನ್ನೇ ಕಿತ್ತುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗದಿರುವುದು ಬಹುತೇಕ ಖಚಿತವಾಗುಗಿದೆ. ಈ ಹಿನ್ನೆಲೆ ಅವರ ಅಭಿಮಾನಿಗಳು ಮೈಸೂರಿನಲ್ಲಿ ಟಿಕೆಟ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್. ಅಶೋಕ್, “ಪ್ರತಾಪ್ ಸಿಂಹ ತಾಳ್ಮೆಯಿಂದರಬೇಕು. ಧೃತಿಗೆಡುವ ಅಗತ್ಯವಿಲ್ಲ. ಇನ್ನು ಯಾವುದು ನಿರ್ಧಾರವಾಗಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಇನ್ನೂ ದೃಢಪಡದ ಕಾರಣ ಪ್ರತಾಪ್ ಸಿಂಹ ಧೃತಿಗೆಡುವ ಅಗತ್ಯವಿಲ್ಲ, ತಾಳ್ಮೆಯಿಂದಿರಬೇಕು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ವರಿಷ್ಠರು ಮೈಸೂರು ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಟಿಕೆಟ್ ಯಾರಿಗೆ ಸಿಕ್ಕರೂ ಜಿಲ್ಲಾ ಘಟಕದ ಕಾರ್ಯಕರ್ತರೆಲ್ಲ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ ಮತ್ತು ಪ್ರತಾಪದ ಸಿಂಹ ಸಹ ಅಭ್ಯರ್ಥಿಯ ಪರ ಕರಪತ್ರಗಳನ್ನು ಹಂಚುವುದಾಗಿ ಹೇಳಿದ್ದಾರೆ ಎಂದು…

Read More

ನವದೆಹಲಿ: ಉತ್ತರಾಖಂಡ ರಾಜ್ಯ ಸರ್ಕಾರ ಸಲ್ಲಿಸಿದ್ದ ಏಕರೂಪ ನಾಗರಿಕ ಸಂಹಿತೆ ಮಸೂದಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದರಿಂದ ಯುಸಿಸಿ ಮಸೂದೆಯು ವಿದ್ಯುಕ್ತವಾಗಿ ಕಾಯಿದೆಯಾಗಿ ಪರಿವರ್ತನೆಯಾಗಲಿದೆ. ಯುಸಿಸಿ ಜಾರಿಯಾದರೆ ಉತ್ತರಾಖಂಡ ದೇಶದಲ್ಲೇ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಮೊದಲ ರಾಜ್ಯವಾಗಿ ಗುರುತಿಸಿಕೊಳ್ಳಲಿದೆ. ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ಪ್ರಸ್ತಾಪ ನೀಡಿತ್ತು. ದೇಶಾದ್ಯಂತ ಯಾವುದೇ ಧರ್ಮ, ಬುಡಕಟ್ಟು, ಮತ ಗಳ ಹೊರತಾಗಿ ಎಲ್ಲರಿಗೂ ಒಂದೇ ಕಾನೂನು ಅನ್ವಯಿಸುವುದು ಯುಸಿಸಿ ಉದ್ದೇಶವಾಗಿದೆ. ಆದರೆ ವಿವಾಹ, ವಿಚ್ಛೇದನ , ಆಸ್ತಿ ಪಾಲು , ದತ್ತು ಮುಂತಾದ ವೈಯಕ್ತಿಕ ವಿಷಯಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸುತ್ತಿದೆ ಎಂದು ಆರೋಪಿಸಿ ಹಲವು ಅಲ್ಪಸಂಖ್ಯಾತರು ಏಕರೂಪ ನಾಗರಿಕ ಸಂಹಿತೆ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ:  ಬಿಜೆಪಿ ಒಂದು ಕೋಮುವಾದಿ ಪಕ್ಷ  ಜೆಡಿಎಸ್ ಒಂದು ನೆಲೆ ಇಲ್ಲದ ಪಕ್ಷ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು. ಕೊರಟಗೆರೆ ರಾಜೀವ್ ಭವನದ ಮುಂಭಾಗದಲ್ಲಿ  ನಡೆದ ಬೃಹತ್ ಲೋಕಸಭಾ ಚುನಾವಣೆ ಪ್ರಚಾರ  ಮತ್ತು ಪಕ್ಷ ಸೇರ್ಪಡೆ  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ತಾಲ್ಲೂಕಿನ ಅನೇಕ ಮುಖಂಡರು ಜೆಡಿಎಸ್ ಪಕ್ಷವನ್ನು ತೊರೆದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಜೆಡಿಎಸ್ ಪಕ್ಷದವರನ್ನ ನಮ್ಮ ಜೊತೆ ಸೇರಿಸಿಕೊಂಡು ನಾವು ಒಂದು ಬಾರಿ ಆ ತಪ್ಪನ್ನು ಮಾಡಿದ್ದೆವು ಎಂದರು. ಬಿಜೆಪಿಯವರಿಗೆ 25 ವರ್ಷಗಳಿಂದ ಮಾತ್ರ ಶ್ರೀರಾಮ ಸಿಕ್ಕಿದ್ದಾನೆ. ನಾವು ಚಿಕ್ಕ ವಯಸ್ಸಿನಿಂದಲೂ ಶ್ರೀರಾಮನ ನೋಡುತ್ತಾ ಬಂದಿದ್ದೇವೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ ಅದು ನಮ್ಮ ಸಂವಿಧಾನದಲ್ಲಿ ಇಲ್ಲ ಎಂದರು. ನುಡಿದಂತೆ ನಡೆದಿರುವ ಪಕ್ಷ ಕಾಂಗ್ರೆಸ್,  ಎಲ್ಲ ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದೇವೆ ಅನುಮೋದನೆಗೆ ತಂದಿದ್ದೇವೆ.  136 ಸೀಟುಗಳನ್ನು ಗೆಲ್ಲುವುದು ಸುಲಭವಲ್ಲ.  ಲೋಕಸಭೆ ಚುನಾವಣೆ ಮುಗಿದ ನಂತರ ಗ್ಯಾರೆಂಟಿಯನ್ನು ನಿಲ್ಲಿಸುತ್ತಾರೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.  ನಾವೀಗಾಗಲೇ ಬಜೆಟ್…

Read More

ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಟೀಕಿಸಿದರು. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ ಎಂದರು. ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ನುಡಿದ ಡಿಕೆಶಿ, ಮತದಾರರು ಹಾಗೂ ಕಾಂಗ್ರೆಸ್ ನಾಯಕರು ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದು, ನಾವು ನಾಯಕರು ನೆಪ ಮಾತ್ರ. ನಾವು ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ…

Read More

ನವದೆಹಲಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದ ಪ್ರೇರಿತವಾಗಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಗೂ ಮಹಿಳೆಯರಿಗೆ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ‘ನಾರಿ ನ್ಯಾಯ ಗ್ಯಾರಂಟಿ’ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ನೀಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಆರ್ಥಿಕ ಸಹಾಯವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವುದಾಗಿ ಮತ್ತು ಕೇಂದ್ರ ಸರ್ಕಾರಿ ಉದ್ಯೋದಗಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷವು ಮಹಿಳೆಯರಿಗೆ “ನಾರಿ ನ್ಯಾಯ ಗ್ಯಾರಂಟಿ”ಯನ್ನು ಘೋಷಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷ ರೈತ ನ್ಯಾಯ ಮತ್ತು ಯುವ ನ್ಯಾಯದ ಭರವಸೆಗಳನ್ನು ಘೋಷಿಸಿದೆ ಎಂದು ಹೇಳಿದರು. ನಮ್ಮ ಗ್ಯಾರಂಟಿಗಳು ಖಾಲಿ ಭರವಸೆ ಮತ್ತು ಹೇಳಿಕೆಗಳಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್‌ ಮಾಡಿದ್ದಾರೆ. ನೀವೆಲ್ಲರೂ ಕಾಂಗ್ರೆಸ್…

Read More

ಪೀಚ್ ಹಣ್ಣಿನ ಪ್ರಯೋಜನಗಳು ಹಲವು!: ಉಷ್ಣವಲಯದ ಮೂಲ ಪ್ರಭೇದವಾಗಿರುವ ಪೀಚ್ ಹಣ್ಣಿನ್ನು ವಿಶ್ವದ ಹಲವಾರು ದೇಶಗಳಲ್ಲಿ ಬೆಳೆಯಲಾಗುತ್ತದೆ. ಒಳಗೊಂದು ಸ್ವಲ್ಪ ದೊಡ್ಡ ಬೀಜ, ಸುತ್ತೆಲ್ಲ ತಿರುಳು ಹೊಂದಿರುವ ಈ ಹಣ್ಣಿನ ಮೇಲ್ಮಯಲ್ಲಿ ತುಪ್ಪಳದಂಥ ಸಣ್ಣ ರೋಮಗಳನ್ನು ಕಾಣಬಹುದು. ಸಿಹಿ ರುಚಿಯ, ರಸಭರಿತವಾದ ಈ ಹಣ್ಣು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದೆ. ಹಲವಾರು ವಿಟಮಿನ್‌ ಗಳು, ಉತ್ಕರ್ಷಣ ನಿರೋಧಕಗಳು, ನಾರು ಸೇರಿದಂತೆ ದೇಹಕ್ಕೆ ಪೋಷಣೆ ಒದಗಿಸಬಲ್ಲದು. ಅದರಲ್ಲೂ ವಿಟಮಿನ್ ಸಿ ಹೇರಳವಾಗಿದ್ದು, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕುಂಬಳಕಾಯಿ ತಿರುಳಿನ ಫೇಸ್ ಪ್ಯಾಕ್ ಮಾಡಿ, ಫುಲ್ ಯಂಗ್ ಆಗಿ!: ನೈಸರ್ಗಿಕ ಕುಂಬಳಕಾಯಿಯ ತಿರುಳಿನಿಂದ ಮನೆಯಲ್ಲಿ ತಯಾರಿಸಬಹುದು. ಫೇಸ್ ಪ್ಯಾಕ್‌ ಗಳು ಚರ್ಮವನ್ನು ಯಂ ಆಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಕುಂಬಳಕಾಯಿ ಫೇಸ್‌ ಪ್ಯಾಕ್‌ಗಳಲ್ಲಿ ಬಳಸಲು, ಮೊದಲು ಅದನ್ನು ಬೇಯಿಸಿ ಮತ್ತು ಮೃದುವಾದ ಪೇಸ್ಟ್ ಮಾಡಬೇಕು. ಕುಂಬಳಕಾಯಿಯ ತಿರುಳಿನ ಪೇಸ್ಟ್, ಮೊಸರು, ಸ್ವಲ್ಪ ಜೇನುತುಪ್ಪ ಮತ್ತು ಕೆಲವು ಹನಿ ನಿಂಬೆ ರಸವನ್ನು ಮಿಶ್ರಣ ಮಾಡಿ ಮತ್ತು…

Read More

ಕಲಬುರ್ಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆಲಸಕ್ಕಿಂತ ಪ್ರಚಾರವೇ ಹೆಚ್ಚು. ಎಲ್ಲಿ ಸಿಕ್ಕಲ್ಲಿ ಅವರು ಬೆಂಕಿ ಇಡುವ ಕೆಲಸವನ್ನು ಮಾಡುತ್ತಾರೆ ಎಂದು ಕಲ್ಬುರ್ಗಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನರೇಂದ್ರ ಮೋದಿ ವಿರುದ್ಧವಾಗಿ ನಡೆಸಿದರು. ಇಂದು ಕಲಬುರ್ಗಿ ನಗರದ ಎನ್. ವಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಒಂದು ನೊಣವನ್ನು ಹೊಡೆದಿಲ್ಲ.ಆದರೆ ಪ್ರಚಾರವೇ ಜಾಸ್ತಿಯಾಗಿದೆ. ಎಲ್ಲಿ ಸಿಕ್ಕಿದರೆ ಅಲ್ಲಿ ಬೆಂಕಿ ಇಡುವ ಕೆಲಸ ಪ್ರಧಾನಿ ಮೋದಿ ಮಾಡುತ್ತಾರೆ ಎಂದು ಕಿಡಿ ಕಾರಿದರು. ಹೇಳಿದಂತೆ ಮಾಡೋದು ಕಷ್ಟ ಆದರೆ ಬೆಂಕಿ ಹಚ್ಚುವುದು ಸುಲಭ ಎಂದು ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.ಗುಜರಾತ್ ನಲ್ಲಿ ಐದು ವರ್ಷದಲ್ಲಿ 500 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬಿಜೆಪಿಯವರು ಮೋಸಗಾರರು, ಬಿಜೆಪಿ ನಾಯಕರ ಮಾತಿಗೆ ಮರುಳಾಗಬೇಡಿ ಎಂದರು. ಸಂವಿಧಾನ ರಕ್ಷಣೆ ಜನರ ಕೆಲಸ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ.ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ 10…

Read More

ದೊಡ್ಡಬಳ್ಳಾಪುರ:  ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ​ನಲ್ಲಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂದ್ರದ ಕರ್ನೂಲ್ ಮೂಲದ ದಾಸ ಬ್ರಹ್ಮಸಾಯಿರೆಡ್ಡಿ ಮೃತ ವಿದ್ಯಾರ್ಥಿಯಾಗಿದ್ದಾನೆ. ಈತ ಗೀತಂ ವಿಶ್ವವಿದ್ಯಾಲಯದಲ್ಲಿ ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡ್ತಿದ್ದ, ರಾತ್ರಿ ಊಟ ಮುಗಿಸಿಕೊಂಡು ಹೊರಟ ನಂತರ ಮಹಡಿ ಮೇಲಿಂದ ಬಿದ್ದು ಸಾವನಪ್ಪಿದ್ದಾನೆ ಎಂದು ಇಲ್ಲಿನ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಕಿರುಕುಳ ನೀಡಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಅಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ನಂಜಮ್ಮ ಇಸ್ತ್ರಿಪೆಟ್ಟಿಗೆಯಿಂದ ಸುಟ್ಟ ಮಹಿಳೆ, ಬಾಲಕಿ ಲಕ್ಷ್ಮಿ, ಬ್ಯಾಂಕ್​ ಖಾತೆಯಲ್ಲಿದ್ದ 4 ಲಕ್ಷ ರೂಗಳ ಹಣವನ್ನು ಬಿಡಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡಿ ಬಾಲಕಿ ತೊಡೆಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ ನೀಡಿದ್ದಾಳೆ, ಈ ಕೃತ್ಯಕ್ಕೆ ನಂಜಮ್ಮನ ಮಗ ಬಸವರಾಜ ಇಸ್ತ್ರಿಪೆಟ್ಟಿಗೆಯಿಂದ ಸುಡುವಾಗ ಬಾಲಕಿ ಕಿರುಚಾಡದಂತೆ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿ ನಂಜಮ್ಮನಿಗೆ ಸಾಥ್ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು, ಸಾಯುವುದಕ್ಕು ಮುನ್ನ ತನ್ನ ಮಗಳಾದ ಲಕ್ಷ್ಮಿ ಭವಿಷ್ಯಕ್ಕಾಗಿ ಬ್ಯಾಂಕ್​ ಖಾತೆಯಲ್ಲಿ ನರಸಮ್ಮ ಜಂಟಿ ಖಾತೆ ಮಾಡಿಸಿ 4 ಲಕ್ಷ ಹಣವನ್ನು ಇಟ್ಟಿದ್ದರು. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮಕ್ಕೆ ಬಂದಿದ್ದ ನಂಜಮ್ಮ, ಶಿವರಾತ್ರಿ ಹಿನ್ನೆಲೆ ಕಳೆದ ಶನಿವಾರ ಬಾಲಕಿಯನ್ನು ಶಿರಾ ತಾಲೂಕಿನ ನಿಡಘಟ್ಟ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾಳೆ. ಈ ವೇಳೆ ಬಾಲಕಿ ಬ್ಯಾಂಕ್ ಖಾತೆಯಲ್ಲಿ ನಾಲ್ಕು…

Read More