Author: admin

ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿ.ಪಂ. ಸಿಇಓ ಹೇಮಂತ್ ಎನ್. ತಿಳಿಸಿದರು. ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪ್ರಕೃತಿ ಎಂಬ ವಿಷಯ ಕುರಿತು ಮಹಿಳೆಯರಿಗೆ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿತ್ರಕಲೆ ಕೇವಲ ಕಲೆ ಮಾತ್ರವಲ್ಲದೆ, ಮನಸ್ಸಿಗೆ ನೆಮ್ಮದಿ ಮತ್ತು ಆನಂದ ನೀಡುವ ಮಾರ್ಗವಾಗಿದೆ. ಆದ್ದರಿಂದ ಆಸಕ್ತಿ ಉಳ್ಳವರು ಹೆಚ್ಚೆಚ್ಚು ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಪಡಿಸಿಕೊಳ್ಳಬೇಕೆಂದು ತಿಳಿಸಿದ ಅವರು ಸ್ಪರ್ಧಾರ್ಥಿಗಳಿಗೆ ಶುಭ ಕೋರಿದರು. 74 ಸ್ಪರ್ಧಾರ್ಥಿಗಳು ಚಿತ್ರಕಲಾ ಸ್ಪರ್ಧೆಗೆ ನೋಂದಾಯಿಸಿಕೊಂಡಿದ್ದರು. ಸ್ಪರ್ಧಿಗಳಿಗೆ 2ಘಿ2.5 ಅಳತೆಯ ಕ್ಯಾನ್ವಾಸನ್ನು ಆಯೋಜಕರಿಂದ ಒದಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿ.ಪಂ ಅಧಿಕಾರಿಗಳು, ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು. ವಿಜೇತರು : ಮೊದಲ ಬಹುಮಾನ (ರೂ.8,000/-)ವನ್ನು ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪಡೆದುಕೊಂಡರು. ದ್ವಿತೀಯ ಬಹುಮಾನ (ರೂ.6,000/-) ನ್ನು ತೀರ್ಥಹಳ್ಳಿಯ ಭಾವನಾ ಹೊಳ್ಳ ಪಡೆದುಕೊಂಡಿದ್ದು, ತೃತೀಯ…

Read More

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 32 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಖುದ್ದಾಗಿ ಪ್ರಕರಣಗಳ ವಿಲೇವಾರಿ ಮಾಡುವಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ನಡೆದ ಲೋಕ್–ಅದಾಲತ್‌ ಗಳನ್ನು ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು–ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳುವುದು ಉತ್ತಮ ಜೀವನ ನಡೆಸಲು ಒಂದು ಸದಾವಕಾಶವಾಗಿದೆ. ತ್ವರಿತ ನ್ಯಾಯಕ್ಕಾಗಿ ಕಕ್ಷಿದಾರರು ಮುತುವರ್ಜಿ ವಹಿಸಿಕೊಂಡು, “ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಭಾಗವಹಿಸಿದರೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಂಡು ಸಾಮರಸ್ಯ ಜೀವನ ನಡೆಸಬಹುದು ಎಂದರು. ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ…

Read More

ಬಳ್ಳಾರಿ: ಹೆರಿಗೆ ನಂತರದಲ್ಲಿ ತಾಯಂದಿರು ನವಜಾತ ಶಿಶುವಿಗೆ ಪದೇ ಪದೇ ಎದೆ ಹಾಲುಣಿಸುವ ಮೂಲಕ ಅಧಿಕ ಬಿಸಿಲಿನಿಂದ ಮಕ್ಕಳಲ್ಲಿ ಉಂಟಾಗುವ ನಿರ್ಜಲೀಕರಣವನ್ನು ತಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ ಬಾಬು ತಿಳಿಸಿದ್ದಾರೆ. ಜಿಲ್ಲೆಯ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಜಾಗೃತಿ ಮೂಡಿಸಿದ ಅವರು, ಸಾಮಾನ್ಯವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ 40 ಡಿಗ್ರಿ ಮೇಲ್ಪಟ್ಟು ದಾಖಲಾಗುತ್ತದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ ನೀಡಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನವಜಾತ ಶಿಶುಗಳು ಮತ್ತು ಮಕ್ಕಳ ಹಾರೈಕೆಯಲ್ಲೂ  ತಾಯಂದಿರು ಮತ್ತು ಪಾಲಕರು ಹೆಚ್ಚಿನ ಜಾಗೃತಿ ವಹಿಸುವುದು ಅವಶ್ಯಕತೆ ಇದೆ. ವಯಸ್ಕರು, ಸಾಮಾನ್ಯ ಮನುಷ್ಯನಿಗಿಂತ ಮಕ್ಕಳಲ್ಲಿ ನಿರ್ಜಲೀಕರಣ ಪ್ರಮಾಣ ಹೆಚ್ಚುತ್ತದೆ. ಹೀಗಾಗಿ ತಾಯಂದಿರು ಮಕ್ಕಳಿಗೆ…

Read More

ತಿಪಟೂರು: ರೈತ ದೇಶದ ಬೆನ್ನೆಲುಬು, ರೈತ ಆರ್ಥಿಕವಾಗಿ ಸದೃಢನಾದರೆ ದೇಶವೂ ಬಲಿಷ್ಠವಾಗುತ್ತದೆ ಎಂದು ತಿಪಟೂರು ಶಾಸಕ ಶಾಸಕ ಕೆ. ಷಡಕ್ಷರಿ ಹೇಳಿದರು. ನಗರದ ಬಂಡಿಹಳ್ಳಿ ಬಳಿಯ ಶ್ರೀಶೈಲ ಎಂಟರ್‌ ಪ್ರೈಸಸ್ ಆವರಣದಲ್ಲಿ ಪವರ್ ಟ್ರ್ಯಾಕ್ಟರ್ ಸಂಸ್ಥೆಯಿಂದ ಹೊಸದಾಗಿ ಬಿಡುಗಡೆಗೊಂಡ “ಯೂರೋ ಶೌರ್ಯ” ಟ್ರ್ಯಾಕ್ಟರ್‌ ನ್ನು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಪಾದಪೂಜೆಯೊಂದಿಗೆ ಲೋಕಾರ್ಪಣೆ ಮಾಡಲಾಯಿತು. ಲೋಕಾರ್ಪಣೆ ನಂತರ ಮಾತನಾಡಿದ ಶಾಸಕ ಕೆ.ಷಡಕ್ಷರಿ, ರೈತರ ಆರ್ಥಿಕ ಅಭಿವೃದ್ಧಿ ದೇಶದ ಪ್ರಗತಿಗೆ ಪ್ರಮುಖವಾಗಿದ್ದು, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಹೆಚ್ಚಾಗಬೇಕು, ಟ್ರ್ಯಾಕ್ಟರ್ ಕಂಪನಿಗಳು ರೈತರಿಗೆ ಲಾಭದಾಯಕವಾಗುವ ಯಂತ್ರಗಳನ್ನು ಒದಗಿಸಿದರೆ ರೈತರಿಗೆ ಸಹಾಯವಾಗುವುದರ ಜೊತೆಗೆ ಕಂಪನಿಗಳಿಗೂ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು. ಪವರ್ ಟ್ರ್ಯಾಕ್ಟರ್ ಕಂಪನಿಯ ರಾಜ್ಯ ಮುಖ್ಯಸ್ಥ ಮಹಮದ್ ಜಖಾ ಉಲ್ಲಾ ಮಾತನಾಡಿ, ಕಂಪನಿ ಸಂಸ್ಥಾಪಕರಾದ ಹೆಚ್.ಪಿ. ನಂದಾ ಅವರು ಸ್ವದೇಶಿ ತಂತ್ರಜ್ಞಾನದಿಂದ ಕೃಷಿ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಟ್ರ್ಯಾಕ್ಟರ್ ಉತ್ಪಾದನೆ ಆರಂಭಿಸಿದ್ದರು. ಕೃಷಿ ಹಾಗೂ ರೈತರಿಗೆ ಅನುಕೂಲಕರ…

Read More

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು, ಬಳಕೆಯ ಪ್ರಮಾಣ ಅಧಿಕವಾಗಿದೆ. ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕರಲ್ಲಿ ಮನವಿ ಮಾಡುತ್ತೇವೆ ಎಂದರು. ರಾಜ್ಯದಲ್ಲಿ ಎಲ್‌ ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ.  ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ. ಅವರಿಗೆ…

Read More

ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಬೇಕಾದ ಸಭೆಯಲ್ಲಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ  ಸಮಾಜದ ಮುಖಂಡರು ಸಭೆಯಿಂದ ಹೊರ ನಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕೊತ್ತೇಗಾಲ ತಿಮ್ಮಯ್ಯ ರವರು  ಸಭೆಯನ್ನು 11 ಗಂಟೆಗೆ ಸಭೆಯನ್ನು ನಿಗದಿ ಮಾಡಿ 1 ಗಂಟೆಯಾದರೂ ಸಭೆಗೆ ಬರಲಿಲ್ಲ. ತಹಶೀಲ್ದಾರ್ ರವರು ಅವರೇ ಪೂರ್ವ ಭಾವಿ ಸಭೆಯ ದಿನಾಂಕವನ್ನು ನಿಗದಿ ಪಡಿಸಿ ಅವರೇ ಸಭೆಗೆ ಬಾರದೆ ನಮ್ಮ ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದ್ದಾರೆ, ಸಮಾಜ ಕಲ್ಯಾಣ ಇಲಾಖೆ ರವರು ಸಮಿತಿ ಕಾರ್ಯದರ್ಶಿಯಾಗಿದ್ದು ಅವರು ಕೂಡಾ ಮುಖಂಡರಿಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಧಿಕಾರಿಗಳ…

Read More

ಕೊರಟಗೆರೆ : ಗ್ಯಾರಂಟಿ ಯೋಜನೆಗೆ ಮಾತ್ರ ದುಡ್ಡು ಕೊಡ್ತಾರೇ, ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ನೀಡುತ್ತಿಲ್ಲ ಎಂಬುದು ವಿರೋಧ ಪಕ್ಷದ ಆರೋಪ. ಟೀಕೆ ಟಿಪ್ಪಣಿಗಳು ಬರುವುದು ಸರ್ವೇ ಸಾಮಾನ್ಯ ಅದಕ್ಕೆ ನನ್ನ ಅಭಿವೃದ್ದಿ ಕಾಮಗಾರಿಗಳೇ ಉತ್ತರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಟಾಂಗ್ ನೀಡಿದರು. ಕೊರಟಗೆರೆ ಪಟ್ಟಣ ಮತ್ತು ತಾಲ್ಲೂಕಿನಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ ಭಾನುವಾರ ಏರ್ಪಡಿಸಲಾಗಿದ್ದ 14 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೇರವೇರಿಸಿ ಮಾತನಾಡಿದರು. ಕೇಂದ್ರ ಸರಕಾರ 53 ಲಕ್ಷ ಕೋಟಿ ಬಜೆಟ್ ಮಂಡಿಸಿದೆ ಅದರಲ್ಲಿ 14 ಲಕ್ಷ ಕೋಟಿ ಸಾಲ ಮಾಡಿದೆ. ನಮ್ಮ ರಾಜ್ಯ ಸರಕಾರ 4 ಲಕ್ಷ 48 ಸಾವಿರ ಬಜೆಟ್ ಮಂಡಿಸಿದೆ. ಬಜೆಟ್ ಗಾತ್ರದಲ್ಲಿ ಶೇ.25ರಷ್ಟು ಒಳಗೆ ಸಾಲ ಮಾಡಲು ನಮ್ಮ ಸರಕಾರಕ್ಕೂ ಅವಕಾಶವಿದೆ. ನಮ್ಮ ದೇಶ ಸೇರಿ ಎಲ್ಲಾ ರಾಜ್ಯಗಳು ಇದನ್ನೇ ಮಾಡುತ್ತವೆ ಇದರ ಮಾಹಿತಿ ವಿರೋಧ ಪಕ್ಷಗಳಿಗೆ ಸರಿಯಾಗಿ ಇಲ್ಲ ಎಂದು ಹೇಳಿದರು. ನಮ್ಮ ರಾಜ್ಯದ ಸಿಎಂ ನನ್ನ ಕ್ಷೇತ್ರದ…

Read More

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಇಂದು ಒಂದು ಅಪರೂಪದ ಹಾಗೂ ನಾಟಕೀಯ ಬೆಳವಣಿಗೆ ಕಂಡುಬಂದಿದೆ. ಶಾಸಕರು ಕೇಳಿದ ಪ್ರಶ್ನೆಗಳಿಗೆ ಸರ್ಕಾರವು ಸಮರ್ಪಕವಾಗಿ ಉತ್ತರ ನೀಡುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಸದನವನ್ನು ಮುಂದೂಡಿ ಸಭಾತ್ಯಾಗ ಮಾಡಿದರು. ಸೋಮವಾರ ವಿಧಾನಸಭೆ ಕಲಾಪ ಆರಂಭವಾದಾಗ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶಾಸಕರು ಕೇಳಿದ್ದ 230 ‘ಅನ್‌ಸ್ಟಾರ್ಡ್’ (ಚುಕ್ಕೆ ಗುರುತಿಲ್ಲದ) ಪ್ರಶ್ನೆಗಳ ಪೈಕಿ ಕೇವಲ 84ಕ್ಕೆ ಮಾತ್ರ ಉತ್ತರಗಳನ್ನು ಮಂಡಿಸಿದರು. ಕಳೆದ ವಾರವೂ ಸರ್ಕಾರ ಕೇವಲ 50 ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿತ್ತು. ಸಚಿವರ ಈ ಕಾರ್ಯವೈಖರಿಯಿಂದ ಸ್ಪೀಕರ್ ತೀವ್ರ ಆಕ್ರೋಶಗೊಂಡರು. ಸಚಿವರ ನಡೆಯನ್ನು ಖಂಡಿಸಿದ ಯು.ಟಿ. ಖಾದರ್, “ಈ ಸದನ ಇರುವುದು ಸಚಿವರಿಗಾಗಿ ಅಲ್ಲ, ಶಾಸಕರಿಗಾಗಿ. ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಚರ್ಚಿಸಲು ಶಾಸಕರು ಮೂರು ತಿಂಗಳಿಗೊಮ್ಮೆ ಇಲ್ಲಿಗೆ ಬರುತ್ತಾರೆ. ನಾನು ನಾಲ್ಕು ಬಾರಿ ಸ್ಪಷ್ಟ ಆದೇಶ ನೀಡಿದ್ದರೂ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಶಾಸಕರ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ ಅವರು…

Read More

ಬೆಂಗಳೂರು: ರಾಜ್ಯದಲ್ಲಿ ತೀವ್ರವಾಗಿ ಕಾಡುತ್ತಿರುವ ಸ್ಮಶಾನ ಭೂಮಿಯ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಮಶಾನಕ್ಕಾಗಿ ಖಾಸಗಿ ಜಮೀನುಗಳನ್ನು ಖರೀದಿಸಲು ಮಾರುಕಟ್ಟೆ ದರಕ್ಕಿಂತ (Guidance Value) ಮೂರು ಪಟ್ಟು ಹೆಚ್ಚು ಹಣವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದ ಹಲವು ಹಳ್ಳಿಗಳಲ್ಲಿ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಜಾಗವಿಲ್ಲದೆ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯನ್ನು ಗಮನಿಸಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸಾಮಾನ್ಯವಾಗಿ ಸರ್ಕಾರಿ ದರದಲ್ಲಿ ಜಮೀನು ನೀಡಲು ಮಾಲೀಕರು ಹಿಂದೇಟು ಹಾಕುವುದರಿಂದ, ಈಗ ಮಾರುಕಟ್ಟೆ ಮೌಲ್ಯಕ್ಕಿಂತ ೩ ಪಟ್ಟು ಅಧಿಕ ಹಣ ನೀಡಲು ನಿರ್ಧರಿಸಲಾಗಿದೆ. ಸ್ಮಶಾನ ಭೂಮಿ ಇಲ್ಲದ ಗ್ರಾಮಗಳನ್ನು ಗುರುತಿಸಿ, ಅಲ್ಲಿ ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ ಭೂಮಿ ಖರೀದಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಉದ್ದೇಶಕ್ಕಾಗಿ ಅಗತ್ಯವಿರುವ ಅನುದಾನವನ್ನು ಒದಗಿಸಲು ಕಂದಾಯ ಇಲಾಖೆ ಸಿದ್ಧವಿದ್ದು, ಭೂಮಿ ಲಭ್ಯವಿದ್ದಲ್ಲಿ ತಕ್ಷಣವೇ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾರ್ವಜನಿಕ ಸಮಸ್ಯೆ…

Read More

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು (ಕೆಪಿಎಸ್) ಆರಂಭಿಸುವ ಸರ್ಕಾರದ ನಿರ್ಧಾರದ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕಳೆದ ಮೂರು ವರ್ಷಗಳಲ್ಲಿ 31 ಹೊಸ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ ಸಿ ಹನುಮಂತ್ ನಿರಾಣಿ ಮತ್ತು ಕಾಂಗ್ರೆಸ್ ಎಂಎಲ್‌ಸಿ ಬಿಲ್ಕಿಸ್ ಬಾನು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 2022 ರಿಂದ 2025ರ ಅವಧಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ವಿಲೀನಗೊಳಿಸುವ ಮೂಲಕ ಈ ಶಾಲೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟು 131 ಕೆಪಿಎಸ್ ಶಾಲೆಗಳು: 2018 ರಿಂದ 2025 ರವರೆಗೆ 35 ಉರ್ದು ಮಾಧ್ಯಮ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗಿತ್ತು. 2025–26ನೇ ಸಾಲಿನಲ್ಲಿ ಸುಮಾರು 100 ಉರ್ದು ಮಾಧ್ಯಮ ಮತ್ತು ಮೌಲಾನಾ ಆಜಾದ್ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಒಟ್ಟು ಸಂಖ್ಯೆ 131ಕ್ಕೆ ಏರಿಕೆಯಾಗಿದೆ. ದ್ವಿಭಾಷಾ ಶಿಕ್ಷಣ:…

Read More