Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಬೀದರ್: ಲಾರಿಯೊಂದನ್ನು ತಡೆದು ಪರಿಶೀಲಿಸಿದ ಪೊಲೀಸರು ಅದರಲ್ಲಿದ್ದ 1596 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ NCB ಬೆಂಗಳೂರು ಮತ್ತು ಬೀದರ್ ಜಿಲ್ಲಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರದೊಳಗೆ ತೆರಳುತ್ತಿದ್ದಂತಹ ಲಾರಿ, ಮಾರ್ಗ ಬದಲಿಸಿ ಕರ್ನಾಟಕದೊಳಗೆ ಪ್ರವೇಶಿಸಲು ಯತ್ನಿಸಿದೆ. ಚೆಕ್ ಪೋಸ್ಟ್ ಬಳಿ ಪೊಲೀಸರು ಲಾರಿಯನ್ನು ಪರಿಶೀಲನೆ ನಡೆಸಿದ ವೇಳೆ ಲಾರಿಯಲ್ಲಿ ಗಾಂಜಾ ಪತ್ತೆಯಾಗಿದೆ. ಸದ್ಯ ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯ ಮಾಲಿಕನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸದಾ ರಾಜ್ಯ ಸರ್ಕಾರದ ಕೆಲಸವನ್ನು ಕೊಂಕಾಡುವ ಬಿಜೆಪಿ ನೀರಿನ ಸಮಸ್ಯೆ ವಿರುದ್ಧ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಜೆಪಿಗರಿಗೆ ಮರ್ಯಾದೆ ಇದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ನೀರಿನ ಸಮಸ್ಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ, ಬಿಜೆಪಿಗರಿಗೆ ಮರ್ಯಾದೆ ಇದ್ರೆ ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ. 150 ದಿನದೊಳಗೆ ಮಾಡಬೇಕೆಂಬ ಕಡ್ಡಾಯವಿದೆ. ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಅದನ್ನು ಮೊದಲು ಕೊಡಿಸಿ. ಅದನ್ನ ಬಿಟ್ಟು ಈ ಕಪಟ ನಾಟಕ ಆಡೋದು ಬಿಡಿ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದರು. ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಪಕ್ಷ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇವೇಗೌಡರು ಅವರ ಕುಟುಂಬದ ರಾಜಕಾರಣ ಉಳಿಯಲು ಏನ್ ಬೇಕಾದ್ರೂ ಮಾಡ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ. ಅವರು ಪ್ರಧಾನಿಯಾಗಿದ್ದವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …
ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕುಡಿಯುವ ನೀರಿಗೆ ತತ್ವಾರ ಇದೆ. ಕಾಂಗ್ರೆಸ್ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ, ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರನ್ನು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ…
ಬೆಂಗಳೂರು: ನಗರದ ರಾಮೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟವನ್ನು ಬಿಜೆಪಿಯವರು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ನಾವು ಕೂಡಾ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ 6 ಬಾಂಬ್ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಈ ವಿಚಾರವನ್ನು ನಾವು ಜನರ ಮುಂದಿಡುತ್ತೇವೆ. ಪ್ರಪಂಚ ಇರುವವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ ಎಂದರು. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್ ಇನ್ಸ್ ಪೆಕ್ಟರ್, ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡುತ್ತಿದ್ದರು. ನಾವು 2 ವರ್ಷಗಳಿಗೊಮ್ಮೆ ಮಾಡುತ್ತಿದ್ದೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ವೊಂದು ಬಂದಿದ್ದು ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರ ಇದಾಗಿದ್ದು,ಇದನ್ನು ಸ್ಫೋಟ ನಡೆಸುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ.ಅಲ್ಲಾಹೋ ಅಕ್ಬರ್ ಎಂದೇ ಆರಂಭವಾಗುವ ಈ ಪತ್ರದಲ್ಲಿ ತಾಕತ್ತಿದ್ದರೆ ತಡೆಯಿರಿ ಎಂಬ ಸವಾಲು ಕೂಡಾ ಹಾಕಲಾಗಿದೆ.ಫೆಬ್ರವರಿ 7 ಮತ್ತು ಫೆಬ್ರವರಿ 28ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ ಮಾರ್ಚ್ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯ ಸಮೀಪ ಪತ್ತೆಯಾಗಿದೆ.ಎರಡನೇ ಪತ್ರ ಮಂದಿರದ ಆವರಣದ ಹನುಮಾನ್ ಮಂದಿರದಲ್ಲಿ ಪತ್ತೆಯಾಗಿವೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಓಲ್ಡ್ ಪಿಬಿ ರಸ್ತೆಯಲ್ಲಿರುವ ಶ್ರೀ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ. ದೇವಸ್ಥಾನದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು…
ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಶ್ಕೋವಾ ವಿಶ್ವ ಸುಂದರಿ. ಭಾರತದಲ್ಲಿ ನಡೆದ ಸ್ಪರ್ಧೆಯಲ್ಲಿ 28 ವರ್ಷಗಳ ನಂತರ, ಭಾರತೀಯ ಸುಂದರಿ ಸಿನಿ ಶೆಟ್ಟಿ ಮೊದಲ ಎಂಟರೊಳಗೆ ಸ್ಥಾನ ಪಡೆದರು. ಆದರೆ ನಂತರ ಅಗ್ರ 4 ರೊಳಗೆ ತಲುಪಲು ವಿಫಲರಾಗಿ, ಭಾರತದ ಅವಕಾಶಗಳನ್ನು ಕೊನೆಗೊಳಿಸಿದರು. ಮುಂಬೈನ JIO ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಲೆಬನಾನ್ ನ ಯಾಸ್ಮಿನ್, ಟ್ರಿನಿಡಾಡ್ ನ ಎಚ್ ಎಚ್ ಅಬ್ರಹಾಮ್ಸ್ ಮತ್ತು ಬೋಟ್ಸ್ ವಾನಾದ ಲೆಸೊಗೊ ಅವರು ಕ್ರಿಸ್ಟಿನಾ ಅವರನ್ನು ಹೊರತುಪಡಿಸಿ ಕೊನೆಯ ನಾಲ್ಕರಲ್ಲಿ ಸ್ಥಾನ ಪಡೆದಿದ್ದಾರೆ. ಮಿಸ್ ಲೆಬನಾನ್ ಮೊದಲ ರನ್ನರ್ ಅಪ್. ಈ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಅವರಿಗೆ ವಿಶ್ವ ಸುಂದರಿ ಮಾನವೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮೊರ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಜಿಲ್ಲೆಯ ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿದ, ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎಚ್. ಕೆಂಚರಾಯ ಆಸ್ಪತ್ರೆಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಕುಳಿತುಕೊಳ್ಳಲು ಆಸನಗಳನ್ನಿಡಲಾಗಿದೆ. ಆದರೆ ಸ್ವಚ್ಛತೆಯ ಬಗ್ಗೆ ಪ್ರಜ್ಞೆ ಇಲ್ಲದ ರೋಗಿಗಳ ಸಹಾಯಕರು ಕಂಡ ಕಂಡಲ್ಲಿ ಊಟದ ಪೇಪರ್ ತಟ್ಟೆ, ಲೋಟ ಹಾಗೂ ಪ್ಲಾಸ್ಟಿಕ್ ಕವರ್ ಗಳನ್ನು ಎಸೆದು, ಆ ಅಶುಚಿತ್ವ ಹೊಂದಿರುವ ಸ್ಥಳದಲ್ಲೇ ಕುಳಿತುಕೊಂಡು ಊಟ ಮಾಡುತ್ತಿರುವುದು ಕಂಡು ಬಂದಿತ್ತು. ಈ ಸ್ಥಳವನ್ನು ಗಮನಿಸಿದ ಭಾರತೀಯ ಪರಿವರ್ತನ ಸಂಘ ತುಮಕೂರು ಜಿಲ್ಲಾಧ್ಯಕ್ಷ ಎಚ್.ಕೆಂಚರಾಯ, ಆಸ್ಪತ್ರೆಯ ಶುಚಿತ್ವಕ್ಕೆ ಆಗುತ್ತಿರುವ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಧ್ಯಕ್ಷರಾದ ಪೂಜಾ ಪೆದ್ದರಾಜು ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಗಮನಕ್ಕೆ ತಂದಿದ್ದಾರೆ. ಈ ದೂರಿಗೆ ತಕ್ಷಣವೇ ಸ್ಪಂದಿಸಿದ ಅವರು, ಆಸ್ಪತ್ರೆಯ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ಇವರ ಕಾರ್ಯಕ್ಕೆ ತುಮಕೂರು…
ಜಗತ್ತಿನಲ್ಲೇ ಅತಿ ಉದ್ದದ ಅವಳಿ ಸುರಂಗ ಎಂಬ ಖ್ಯಾತಿಗೂ ಭಾಜನವಾದ ಸೆಲಾ ಸುರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ, 13,700 ಅಡಿ ಎತ್ತರದಲ್ಲಿ ನಿರ್ಮಿಸಿರುವ ಸಂಪರ್ಕ, ಸಾಗಣೆ ಸೇರಿ ವ್ಯೂಹಾತ್ಮಕವಾಗಿಯೂ ಈ ಸುರಂಗವು ಅತ್ಯಂತ ಪ್ರಾಮುಖ್ಯತೆ ಪಡೆದ ಸುರಗವೆಂದೇ ಹೇಳಲಾಗಿದೆ. ಸುರಂಗಕ್ಕೆ ಬರೋಬ್ಬರಿ 825 ಕೋಟಿ ರೂ. ವ್ಯಯವಾಗಿದ್ದು, ಕೇಂದ್ರ ಸರ್ಕಾರದ ಗಡಿ ರಸ್ತೆ ಸಂಘಟನೆಯು (BRO) ಈ ಸುರಂಗ ನಿರ್ಮಿಸಿದೆ. ಸೆಲಾ ಸುರಂಗ ಯೋಜನೆ ಅಡಿಯಲ್ಲಿ ಎರಡು ಸುರಂಗಗಳನ್ನು ನಿರ್ಮಿಸಲಾಗಿದ್ದು, ಒಂದು ಸುರಂಗವು 980 ಮೀಟರ್ ಉದ್ದವಾಗಿದ್ದು, ಮತ್ತೊಂದು ಸುರಂಗವು 1,550 ಮೀಟರ್ ಉದ್ದ ಇದೆ. ಇದು ತೇಜ್‌ಪುರದಿಂದ ತವಾಂಗ್ ಗೆ ಸಂಪರ್ಕ ಕಲ್ಪಿಸಲಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್ ಉದ್ದದ ಲಿಂಕ್ ರೋಡ್ ಕೂಡ ಇದೆ ಎನ್ನುವುದು ಗಮನಾರ್ಹ. ಅರುಣಾಚಲ ಪ್ರದೇಶದಲ್ಲಿ ಗಡಿ ತಂಟೆ ಮಾಡುವ ಚೀನಾಗೆ ಸೆಲಾ ಸುರಂಗವು ವ್ಯೂಹಾತ್ಮಕವಾಗಿ ಪ್ರಮುಖವಾಗಿದೆ. ಅದರಲ್ಲೂ, ತಮ್ಮ ದೇಶದ…
ಲೋಕಸಭಾ ಚುನಾವಣೆಯಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಕ್ಷದಲ್ಲೇ ಪಿತೂರಿ ನಡೆಯುತ್ತಿದೆಯಾದರೂ, ಇದರಿಂದ ನನಗೆ ಲಾಭವೇ ಆಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಬೆಳಗ್ಗೆ ಮಾತನಾಡಿದ ಅವರು, ಇದೆಲ್ಲ ವರ್ಕೌಟ್ ಆಗಲ್ಲ ಎಂದಿದ್ದಾರೆ. ʻʻಕೆಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ಕೇಂದ್ರ ಚುನಾವಣೆ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎನ್ನುವುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ʻʻಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ.…