Author: admin

ಪಾವಗಡ: ತಾಲ್ಲೂಕಿನ ಹರಿಹರಾಪುರದ ಮಲ್ಲಪ್ಪ ಸ್ವಾಮಿಗಳ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಿತು. ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ವರ್ಷದಿಂದ ವರ್ಷಕ್ಕೆ ಭಕ್ತರು ಆಗಮಿಸುವ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂತು. ಭಕ್ತರು ಕೊಂಡದಲ್ಲಿ ಧೂಪ ಹಾಕುವ ಮೂಲಕ ತಮ್ಮ ಹರಕೆ ತೀರಿಸಿಕೊಂಡಿದ್ದು ಕಂಡು ಬಂತು.. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯನೊಬ್ಬ ಆಸ್ಪತ್ರೆಯ ಆವರಣದಲ್ಲಿ ಬೆತ್ತಲೆಯಾಗಿ ಮಲಗಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಆಘಾತಕಾರಿ ಸಂಗತಿಯೆಂದರೆ ವೈದ್ಯ ದೇಹದ ಮೇಲೆ ಪರಿವೇ ಇಲ್ಲದೆ ಆಸ್ಪತ್ರೆಯ ಆವರಣದಲ್ಲಿ ತಿರುಗಾಡುತ್ತಿದ್ದ ವೀಡಿಯೊ ಕೂಡ ಪೊಲೀಸರ ಕೈಗೆ ಸಿಕ್ಕಿದೆ. ಸ್ಥಳೀಯರ ಪ್ರಕಾರ ವೈದ್ಯ ಮಾದಕ ವ್ಯಸನಿಯಾಗಿದ್ದು ಅದರ ಪ್ರಭಾವದಲ್ಲಿದ್ದ. ಜತೆಗೆ ಕುಡಿದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಪೈಥಾನ್ ತಾಲೂಕಿನ ಬಿಡ್ಕಿನ್​ ನ ಗ್ರಾಮೀಣ ಆಸ್ಪತ್ರೆಯ ವೈದ್ಯರದ್ದು ಎಂದು ಹೇಳಲಾಗಿದೆ. ಇದರಲ್ಲಿ ಸರ್ಕಾರಿ ವೈದ್ಯನೊಬ್ಬ ತಮ್ಮ ದೇಹದ ಮೇಲೆ ಒಂದೇ ಬಟ್ಟೆಯಿಲ್ಲದೆ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವುದನ್ನು ಕಾಣಬಹುದು. ಕುತೂಹಲಕಾರಿ ಸಂಗತಿಯೆಂದರೆ, ಈ ವೀಡಿಯೊ ಬಿಡ್ಕಿನ್ ಗ್ರಾಮೀಣ ಆಸ್ಪತ್ರೆಯ ಐಸಿಯು ಒಳಗಿನ ಸಿಸಿ ಟಿವಿ ಕ್ಯಾಮೆರಾದ್ದು ಎನ್ನಲಾಗಿದೆ. ಈ ವೈದ್ಯ ಮಾದಕವಸ್ತುಗಳಿಗೆ ವ್ಯಸನಿ ಎಂದು ಹೇಳಲಾಗುತ್ತಿದೆ.…

Read More

ಸ್ಟಾರ್‌ ನಟಿ ಮೀನಾ ಈಗಲೂ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿರುವ ನಟಿ. ಇವರು ಕಾರ್ಯಕ್ರಮಕ್ಕೆ ಬಂದಾಗ ಈಗಿನ ಯುವ ನಟಿಯರನ್ನೇ ಮೀರಿಸುವಂತಿದೆ ಇವರ ಸೌಂದರ್ಯ. ಕನ್ನಡ ಮಾತ್ರವಲ್ಲ ದಕ್ಷಿಣ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿಯೂ ಇವರು ನಟಿಸಿದ್ದು, ಜನಮನಗೆದ್ದಿದ್ದಾರೆ. ಇದೀಗ ತನ್ನ 15ನೇ ವಯಸ್ಸಿನಲ್ಲಿ ನಟಿ ಮೀನಾ ಗರ್ಭಿಣಿಯಾಗಿದ್ರಂತೆ. ಹೌದು, 1991ರಲ್ಲಿ ಕಾಲಿವುಡ್‌ನಲ್ಲಿ ಕಸ್ತೂರಿ ರಾಜ ನಿರ್ದೇಶನದಲ್ಲಿ ಎನ್‌ ರಾಸವಿನ್‌ ಮನಸಿಲೇ ಸಿನಿಮಾದಲ್ಲಿ 15 ವರ್ಷ ವಯಸ್ಸಿಗೆ ಗರ್ಭಿಣಿ ಪಾತ್ರದಲ್ಲಿ ನಟಿ ಮೀನಾ ನಟಿಸಿದ್ದರು. ಮೀನಾ ಅವರ 40ನೇ ಹುಟ್ಟುಹಬ್ಬದ ಸಮಯದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಹಿರಿಯ ನಟ ರವಿ ಕಿರಣ್‌, ಮೀನಾ ಅವರ ಕುರಿತು ಈ ವಿಚಾರ ಬಹಿರಂಗಪಡಿಸಿದ್ದಾರೆ. ಆದರೆ ನಟಿ ಮೀನಾ ಈ ವಿಚಾರವನ್ನು ಅಲ್ಲಗಳೆದಿದ್ದರು. ಪತಿ ಅಗಲಿಕೆಯ ನೋವಿನಿಂದ ನಾನಿನ್ನೂ ಹೊರಬಂದಿರಲಿಲ್ಲ. ಅದರ ಮಧ್ಯೆ ಈ ವದಂತಿ ನೋವಿನ ಸಂಗತಿ ಎಂದಿದ್ದರು. ವಿವಿಧ ಭಾಷೆಗಳಲ್ಲಿ ನಟಿಸಿರುವ ನಟಿ ಮೀನಾ ಇತ್ತೀಚೆಗೆ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಪತಿ ವಿದ್ಯಾಸಾಗರ್​…

Read More

ಬೀದರ್: ಲಾರಿಯೊಂದನ್ನು ತಡೆದು ಪರಿಶೀಲಿಸಿದ ಪೊಲೀಸರು ಅದರಲ್ಲಿದ್ದ 1596 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್‌ ಪೋಸ್ಟ್‌ ಬಳಿ ನಡೆದಿದೆ. ವನಮಾರಪಳ್ಳಿ ಚೆಕ್‌ ಪೋಸ್ಟ್ ಬಳಿ NCB ಬೆಂಗಳೂರು ಮತ್ತು ಬೀದರ್ ಜಿಲ್ಲಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರದೊಳಗೆ ತೆರಳುತ್ತಿದ್ದಂತಹ ಲಾರಿ, ಮಾರ್ಗ ಬದಲಿಸಿ ಕರ್ನಾಟಕದೊಳಗೆ ಪ್ರವೇಶಿಸಲು ಯತ್ನಿಸಿದೆ. ಚೆಕ್‌ ಪೋಸ್ಟ್‌ ಬಳಿ ಪೊಲೀಸರು ಲಾರಿಯನ್ನು ಪರಿಶೀಲನೆ ನಡೆಸಿದ ವೇಳೆ ಲಾರಿಯಲ್ಲಿ ಗಾಂಜಾ ಪತ್ತೆಯಾಗಿದೆ. ಸದ್ಯ ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯ ಮಾಲಿಕನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ‌, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಸದಾ ರಾಜ್ಯ ಸರ್ಕಾರದ ಕೆಲಸವನ್ನು ಕೊಂಕಾಡುವ ಬಿಜೆಪಿ ನೀರಿನ ಸಮಸ್ಯೆ ವಿರುದ್ಧ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಜೆಪಿಗರಿಗೆ ಮರ್ಯಾದೆ ಇದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ನೀರಿನ ಸಮಸ್ಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ, ಬಿಜೆಪಿಗರಿಗೆ ಮರ್ಯಾದೆ ಇದ್ರೆ ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ. 150 ದಿನದೊಳಗೆ ಮಾಡಬೇಕೆಂಬ ಕಡ್ಡಾಯವಿದೆ. ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಅದನ್ನು ಮೊದಲು ಕೊಡಿಸಿ. ಅದನ್ನ ಬಿಟ್ಟು ಈ ಕಪಟ ನಾಟಕ ಆಡೋದು ಬಿಡಿ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ಬಿಜೆಪಿ-ಜೆಡಿಎಸ್​ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಹೇಳಿದ್ದರು. ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಪಕ್ಷ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇವೇಗೌಡರು ಅವರ ಕುಟುಂಬದ ರಾಜಕಾರಣ ಉಳಿಯಲು ಏನ್ ಬೇಕಾದ್ರೂ ಮಾಡ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ. ಅವರು ಪ್ರಧಾನಿಯಾಗಿದ್ದವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …

Read More

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕುಡಿಯುವ ನೀರಿಗೆ ತತ್ವಾರ ಇದೆ. ಕಾಂಗ್ರೆಸ್‌ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ, ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರನ್ನು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ…

Read More

ಬೆಂಗಳೂರು: ನಗರದ ರಾಮೇಶ್ವರಂನಲ್ಲಿ ನಡೆದ ಬಾಂಬ್‌ ಸ್ಫೋಟವನ್ನು ಬಿಜೆಪಿಯವರು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ನಾವು ಕೂಡಾ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ 6 ಬಾಂಬ್‌ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ನಡೆದಿತ್ತು. ಈ ವಿಚಾರವನ್ನು ನಾವು ಜನರ ಮುಂದಿಡುತ್ತೇವೆ. ಪ್ರಪಂಚ ಇರುವವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ ಎಂದರು. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್‌ ಇನ್ಸ್‌ ಪೆಕ್ಟರ್‌, ಇನ್ಸ್‌ಪೆಕ್ಟರ್‌ ಗಳ ವರ್ಗಾವಣೆ ಮಾಡುತ್ತಿದ್ದರು. ನಾವು 2 ವರ್ಷಗಳಿಗೊಮ್ಮೆ ಮಾಡುತ್ತಿದ್ದೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಳಗಾವಿ ಜಿಲ್ಲೆಯ  ನಿಪ್ಪಾಣಿಯ ರಾಮ ಮಂದಿರವನ್ನು  ಸ್ಫೋಟಿಸುವುದಾಗಿ ಬೆದರಿಕೆ ಪತ್ರ ವೊಂದು ಬಂದಿದ್ದು ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರ ಇದಾಗಿದ್ದು,ಇದನ್ನು ಸ್ಫೋಟ ನಡೆಸುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ.ಅಲ್ಲಾಹೋ ಅಕ್ಬರ್‌ ಎಂದೇ ಆರಂಭವಾಗುವ ಈ ಪತ್ರದಲ್ಲಿ ತಾಕತ್ತಿದ್ದರೆ ತಡೆಯಿರಿ ಎಂಬ ಸವಾಲು ಕೂಡಾ ಹಾಕಲಾಗಿದೆ.ಫೆಬ್ರವರಿ 7 ಮತ್ತು ಫೆಬ್ರವರಿ 28ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ ಮಾರ್ಚ್‌ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯ ಸಮೀಪ ಪತ್ತೆಯಾಗಿದೆ.ಎರಡನೇ ಪತ್ರ ಮಂದಿರದ ಆವರಣದ ಹನುಮಾನ್ ಮಂದಿರದಲ್ಲಿ ಪತ್ತೆಯಾಗಿವೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಓಲ್ಡ್ ಪಿಬಿ ರಸ್ತೆಯಲ್ಲಿರುವ ಶ್ರೀ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ. ದೇವಸ್ಥಾನದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು…

Read More

ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಶ್ಕೋವಾ ವಿಶ್ವ ಸುಂದರಿ. ಭಾರತದಲ್ಲಿ ನಡೆದ ಸ್ಪರ್ಧೆಯಲ್ಲಿ 28 ವರ್ಷಗಳ ನಂತರ, ಭಾರತೀಯ ಸುಂದರಿ ಸಿನಿ ಶೆಟ್ಟಿ ಮೊದಲ ಎಂಟರೊಳಗೆ ಸ್ಥಾನ ಪಡೆದರು. ಆದರೆ ನಂತರ ಅಗ್ರ 4 ರೊಳಗೆ ತಲುಪಲು ವಿಫಲರಾಗಿ, ಭಾರತದ ಅವಕಾಶಗಳನ್ನು ಕೊನೆಗೊಳಿಸಿದರು. ಮುಂಬೈನ JIO ವರ್ಲ್ಡ್ ಕನ್ವೆನ್ಷನ್ ಸೆಂಟರ್‌ ನಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಲೆಬನಾನ್ ‌ನ ಯಾಸ್ಮಿನ್, ಟ್ರಿನಿಡಾಡ್ ‌ನ ಎಚ್ ‌ಎಚ್ ಅಬ್ರಹಾಮ್ಸ್ ಮತ್ತು ಬೋಟ್ಸ್‌ ವಾನಾದ ಲೆಸೊಗೊ ಅವರು ಕ್ರಿಸ್ಟಿನಾ ಅವರನ್ನು ಹೊರತುಪಡಿಸಿ ಕೊನೆಯ ನಾಲ್ಕರಲ್ಲಿ ಸ್ಥಾನ ಪಡೆದಿದ್ದಾರೆ. ಮಿಸ್ ಲೆಬನಾನ್ ಮೊದಲ ರನ್ನರ್ ಅಪ್. ಈ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಅವರಿಗೆ ವಿಶ್ವ ಸುಂದರಿ ಮಾನವೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮೊರ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More