Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಬೇಸಿಗೆಯಲ್ಲಿ ನಮ್ಮ ತ್ವಚೆ ನಮಗೆ ಗೊತ್ತಿಲ್ಲದೆ ಹಾಳಾಗುತ್ತದೆ. ನೀವು ಬಿಸಿಲಿನಲ್ಲಿ ಇದ್ದರೆ, ಕ್ಯಾನ್ಸರ್ ಅಪಾಯವಿದೆ. ಈ ಸರಳ ಸಲಹೆಗಳೊಂದಿಗೆ ನಿಮ್ಮ ಚರ್ಮವನ್ನು ರಕ್ಷಿಸುವಾಗ ಶಾಖವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸೌತೆಕಾಯಿ ಬೇಸಿಗೆಯಲ್ಲಿ ಅತ್ಯುತ್ತಮವಾಗಿ ದೊರೆಯುತ್ತದೆ. ಇದು ನಮ್ಮ ಚರ್ಮವನ್ನು ರಕ್ಷಿಸಬಲ್ಲದು. ಇದು ಚರ್ಮವನ್ನು ರಕ್ಷಿಸುವುದಲ್ಲದೆ ನಮ್ಮನ್ನು ಆರೋಗ್ಯವಾಗಿಡುತ್ತದೆ. ಸೂರ್ಯನ ಶಾಖದಿಂದ ಪರಿಹಾರವನ್ನು ನೀಡುತ್ತದೆ. ಇದರಲ್ಲಿ ನೀರಿನಂಶ ಅಧಿಕವಾಗಿರುವುದರಿಂದ, ಇದನ್ನು ತಿನ್ನುವುದರಿಂದ ತ್ವಚೆಯು ತೇವಾಂಶದಿಂದ ಕೂಡಿರುತ್ತದೆ ಮತ್ತು ಡಿ-ಹೈಡ್ರೇಟ್ ಆಗುವುದನ್ನು ತಡೆಯುತ್ತದೆ. ಸೌತೆಕಾಯಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅಂಶಗಳಲ್ಲಿ ಸಮೃದ್ಧವಾಗಿದೆ. ಇವು ರಕ್ತ ಸಂಚಾರವನ್ನು ಉತ್ತಮಗೊಳಿಸುತ್ತವೆ. ಇದರಲ್ಲಿರುವ ನೀರು ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸುತ್ತದೆ. ಪರಿಣಾಮವಾಗಿ, ನಾವು ಬಲಶಾಲಿಯಾಗಿದ್ದೇವೆ ಮತ್ತು ನಾವು ಬಿಸಿಲಿನಲ್ಲಿದ್ದಾಗಲೂ ತಕ್ಷಣವೇ ಸುಸ್ತಾಗುವುದಿಲ್ಲ. ಸೌತೆಕಾಯಿ ಬೀಜಗಳಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಇ ಇರುತ್ತದೆ.ಸುಕ್ಕುಗಳು ಮತ್ತು ಸುಕ್ಕುಗಳಿಂದ. ಕೆಲವು ಸೌತೆಕಾಯಿ ಬೀಜಗಳನ್ನು ನೀರಿನಲ್ಲಿ ಬೆರೆಸಿ ಮತ್ತು ನಿಯಮಿತವಾಗಿ ಸೇವಿಸಿ. ಆದ್ದರಿಂದ ನಿಮ್ಮ ಚರ್ಮವು ತುಂಬಾ ಸುಂದರ ಮತ್ತು ಮೃದುವಾಗಿರುತ್ತದೆ. ಕೀರಾ ಸೌತೆಕಾಯಿಯನ್ನು ತಂಪಾಗಿಸುತ್ತದೆ. ಇದನ್ನು…
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕುರಿತು ಬಿಜೆಪಿ ಮಾಡಿದ ಆರೋಪಗಳಿಗೆ ತಿರುಗೇಟು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷಕ್ಕೆ ಟೀಕಿಸೋದು ಬಿಟ್ಟು ಬೇರೇನು ಇಲ್ಲ. ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕಾರ ಮಾಡಲು ರೆಡಿ. ಮೊದಲ ಬಾರಿಗೆ ಟ್ಯಾಂಕರ್ ನಿಯಂತ್ರಣಕ್ಕೆ ತೆಗೆದುಕೊಂಡು ಟ್ಯಾಂಕರ್ ಮಾಫಿಯಾ ತಡೆಗಟ್ಟಲಾಗಿದೆ. ದರ ನಿಗದಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬೇರೆ ಕಡೆ ಟ್ಯಾಂಕರ್ ತರಿಸಲು ಕೂಡ ಸೂಚಿಸಿದ್ದೇನೆ ಎಂದರು. ಕಾವೇರಿ ನೀರು ಜಾಸ್ತಿ ಬರುತ್ತಾ ಇದೆ. ಕಾವೇರಿ ನೀರು 25 ml ನೀರು ಹೆಚ್ಚು ಬರುತ್ತಿದೆ. ಕಾವೇರಿ ನೀರು ಹೆಚ್ಚು ಡ್ರಾ ಮಾಡುತ್ತಿದ್ದೇವೆ. 110 ಹಳ್ಳಿಗಳಿಗೆ ಮೇ ಅಂತ್ಯಕ್ಕೆ 5ನೇ ಹಂತ ಮುಕ್ತಾಯ ಆಗುತ್ತದೆ. ಅಲ್ಲಿಯವರೆಗೆ ನಾವು ಜಾಗೃತರಾಗಿರಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಸಿಕೊಂಡಿದ್ದು, ಹವಲು ಪ್ರದೇಶಗಳ ಬೋರ್ವೆಲ್ಗಳಲ್ಲಿ ನೀರು ಬತ್ತಿ ಹೋಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್. ಅಶೋಕ, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ ಆಗಿದೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡಿಯಿಂದ ನೀರಿನ ಸಮಸ್ಯೆ ಆಗಿದೆ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಒಂದೇ. ಕಾಂಗ್ರೆಸ್ನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ. ಸರ್ಕಾರದ ಬಳಿ ಬೋರ್ ವೆಲ್ ಕೊರಿಸುವುದಕ್ಕೂ ಹಣವಿಲ್ಲ. ನಿಮ್ಮ 2000 ರೂಪಾಯಿಯಿಂದ ಏನು ಆಗುತ್ತದೆ ಎಂದು ಗ್ಯಾರಂಟಿ ಯೋಜನೆಯನ್ನು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ವಿದೇಶ ಚಾನಲ್ನಲ್ಲಿ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ. ನೀರಿನ ಸಮಸ್ಯೆ ಇದೆ, ಅಲ್ಲಿ ಯಾರು ಹೋಗಬೇಡಿ ಅಂತಿದ್ದಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕೊರಟಗೆರೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಹೊಳೆ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಕ್ತ ಸಾಗರವೇ ನೆರೆದಿತ್ತು. ಮುಂಜಾನೆ 3 ಗಂಟೆಯಿಂದಲೇ ನಂಜುಡೇಶ್ವರನ ದರ್ಶನಕ್ಕೆ ಭಕ್ತರು ಆಗಮಿಸಿದರು. ಹೊಳೆ ನಂಜುಂಡೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಅರ್ಚಕರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ಎಲ್ಲ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ಶಿವನನ್ನು ಕಣ್ತುಂಬಿ ಕೊಂಡರು. ಕೊರಟಗೆರೆಯ ಗವಿ ಗಂಗಾಧರೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ ನಡೆಯಿತು. ಹೊಳೆ ನಂಜುಂಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ರಾತ್ರಿ 9 ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ದೇವರ ದರ್ಶನಕ್ಕೆ ಬಂದ ಭಕ್ತರಿಗೆ ಬೆಳಗಿನ ಸಂಜೆವರೆಗೂ ಮಜ್ಜಿಗೆ ಪಾನಕದ ಜೊತೆ ಪ್ರಸಾದ ವಿನಿಯೋಗ ಮಾಡಲಾಯಿತು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೀದರ್: ಜಿಲ್ಲೆಯ ವಿವಿಧೆಡೆ ಮಹಾಶಿವರಾತ್ರಿ ಪ್ರಯುಕ್ತ ವಿಶಿಷ್ಟವಾಗಿ ಸಾಮಾಜಿಕ ಇಷ್ಟಲಿಂಗ ಪೂಜೆ ನಗರದ ಬಸವ ಮಂಟಪ ಕೆ.ಎಚ್.ಬಿ.ಕಾಲೋನಿಯಲ್ಲಿ ನಡೆಯಿತು. ಇಷ್ಟಲಿಂಗ ಪೂಜೆಯಲ್ಲಿ ಎಲ್ಲಾ ಶರಣರು ಪಾಲ್ಗೊಂಡು ನಂತರ ಎಲ್ಲಾ ಭಕ್ತರು ಹಣ್ಣು ಹಂಪಲು ಸೇವಿಸಿದರು. ಪ್ರಮುಖರಾಗಿ ಸುವರ್ಣ ಚಿಮಕೊಡೇ ಅವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ನಡೆಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಗಳಪಾಳ್ಯ ತಾಂಡದಲ್ಲಿ ಸಂತ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಸಮುದಾಯ ವಿಜೃಂಭಣೆಯಿಂದ ಆಚರಿಸಿತು. ಬೆಳಿಗ್ಗೆ ವಿಶೇಷ ಪೂಜೆ ನೆರವೇರಿದ ನಂತರ ಸಮುದಾಯದ ಹಿರಿಯರು ಸೇರಿ ಅಗ್ನಿಕುಂಡಕ್ಕೆ ವಿವಿಧ ವಸ್ತುಗಳನ್ನು ಸಮರ್ಪಿಸುವ ಮೂಲಕ ಬೋಗ್ ಆಚರಣೆ ನೆರವೇರಿಸಿದರು. ಗ್ರಾಮದ ಹೊರವಲಯದಲ್ಲಿರುವ ಆಂಜನೇಯಸ್ವಾಮಿ ದೇವಾಲಯಕ್ಕೆ ತಂಬಿಟ್ಟು ಜ್ಯೋತಿಗಳೊಂದಿಗೆ ಮೆರವಣಿಗೆ ಸಾಗಿದ ಮಹಿಳೆಯರು ಆರತಿ ಬೆಳಗಿದರು. ಸಂತ ಸೇವಾಲಾಲ್ ರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮಾಡಿದರೆ ಯುವಜನತೆ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿದು ಸಂತಸ ಹಂಚಿಕೊಂಡರು. ವರದಿ: ನಂದೀಶ್, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವು ಕೂಡಾ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಶಾರದಾ ಪೂಜಾ ಕಾರ್ಯಕ್ರಮ ಹಾಗೂ ಶಾಲಾ ವಾರ್ಷಿಕೋತ್ಸವ ವನ್ನು ಆಚರಿಸಲಾಯಿತು. ರೇಣುಕರಾಜ್. ಜಿ.ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾದ ರಂಗಸ್ವಾಮಿ ಎಂ. ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕರಾದ ಗೋವಿಂದಪ್ಪ ಓದಿನ ಮಹತ್ವ ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರುರಾಜ್, ಉಪಾಧ್ಯಕ್ಷೆ ಲಕ್ಕಮ್ಮ, ಸದಸ್ಯರುಗಳಾದ ಜಯರಾಮಪ್ಪ, ರತ್ನಮ್ಮ, ಗೀತಮ್ಮ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಸಿದ್ದೇಶ್ವರಪ್ಪ, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕ ವರ್ಗ,ಹಳೆಯ ವಿದ್ಯಾರ್ಥಿಗಳು, ಪೋಷಕರುಗಳು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದಾವಣಗೆರೆ: ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಸಂತೋಷ(26) ಮೃತಪಟ್ಟ ಸವಾರನಾಗಿದ್ದಾನೆ. ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಬೈಕ್ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಕಡೆಯಿಂದ ಸಂತೆ ಬೆನ್ನೂರಿಗೆ ಬರುತ್ತಿದ್ದ ಕಾರು ಹಾಗೂ ಎದುರು ಬರುತ್ತಿರುವ ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದ್ದು, ಬಳಿಕ ಕಾರು ಮತ್ತು ಬೈಕ್ ಗಳು ರಸ್ತೆಯಿಂದ ಕೆಳಗಿನ ಗುಂಡಿಗೆ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಂತೆಬೆನ್ನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಮನಗರ: ರಾಮನಗರದ ಕನಕಪುರ ನಗರದ ಮರಳೇಬೇಕುಪ್ಪೆ ವೃತ್ತ ಬಳಿ ಇರುವ ಅರ್ಕಾವತಿ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುತ್ತು (28) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಕನಕಪುರದ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಮುತ್ತು ಮೂಲತಃ ಮಳವಳ್ಳಿ ತಾಲೂಕಿನ ನಿಂಗನಾಪುರದೊಡ್ಡಿ ನಿವಾಸಿಯಾಗಿದ್ದ. ಬಾಮೈದನ ಜತೆಗೆ ಅರ್ಕಾವತಿ ನದಿ ಬಳಿ ಹೋಗಿದ್ದ ಮುತ್ತು ಬಾಮೈದನಿಗೆ ಕ್ಷಮೆಕೋರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ, ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರ ತೆಗೆಯಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಶಾಲಾ ಆವರಣ ಕಬಳಿಕೆಯಿಂದ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗೆಗಿನ ದೂರಿಗೆ ಸಂಬಂಧಿಸಿದಂತೆ ನಿಗದಿತ ಅವಧಿಯೊಳಗೆ ವರದಿ ಸಲ್ಲಿಸದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆ ಹಾಜರಾಗಲು ಸೂಚಿಸಿದೆ. ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣವನ್ನು ಕೆಲವು ವ್ಯಕ್ತಿಗಳು ಕಬಳಿಸಲು ಅತಿಕ್ರಮ ಪ್ರವೇಶ ಮಾಡುತ್ತಿದ್ದು, ಇದರಿಂದಾಗಿ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಶಾಲೆಯ ಆಸ್ತಿಯನ್ನು ರಕ್ಷಿಸುವ ಸಂಬಂಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ ನಿಗದಿತ ಅವಧಿಯೊಳಗೆ ಯಾವುದೇ ವರದಿ ಬಂದಿಲ್ಲವಾದುದರಿಂದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯಶಿಕ್ಷಕರಿಗೆ ಆಯೋಗವು ಸಮನ್ಸ್ ಜಾರಿಗೊಳಿಸಿದ್ದು ಮಾರ್ಚ್ 19ರಂದು ಈ ಬಗ್ಗೆ ವಿಚಾರಣೆಗೆ…