Author: admin

ದೆಹಲಿ ಪೋಲೀಸ್‌ ನಲ್ಲಿ ಸಬ್ ಇನ್ಸ್‌ ಪೆಕ್ಟರ್ ಆಗಿ ನಿರ್ಮಲಾ ಸಿಂಗ್ ಮಹಿಳೆಯರ ವಿರುದ್ಧ ಕನಿಷ್ಠ 100 ಅಪರಾಧ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಆದರೆ ಈಗ ಅವರು ನ್ಯಾಯಾಧೀಶರಾಗಿ ಹಲವಾರು ಮಹಿಳೆಯರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಸಿದ್ಧರಾಗಿದ್ದಾರೆ. 34 ವರ್ಷದ ನಿರ್ಮಲ ಸಿಂಗ್ ಅವರು 2022 ರ ದೆಹಲಿ ನ್ಯಾಯಾಂಗ ಸೇವೆಗಳ ಪರೀಕ್ಷೆಯನ್ನು (DJS) ಪಡೆದಿರುವುದರಿಂದ ಶೀಘ್ರದಲ್ಲೇ ನ್ಯಾಯಾಧೀಶರಾಗುತ್ತಾರೆ. ಹರಿಯಾಣದ ಪಲ್ವಾಲ್ ಜಿಲ್ಲೆಯ ಸಣ್ಣ ಹಳ್ಳಿಯಿಂದ ಬಂದ ಸಿಂಗ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರು ಸ್ಪರ್ಧೆಗಳಿಗೆ ಅಧ್ಯಯನ ಮಾಡಲು ಪ್ರಾರಂಭಿಸಿದಾಗ, ಅವರು ನ್ಯಾಯಾಧೀಶರಾಗುವ ಬಗ್ಗೆ ಯೋಚಿಸಿರಲಿಲ್ಲ. “ನನ್ನ ಕುಟುಂಬದಲ್ಲಿ ಮತ್ತು ಸಂಬಂಧಿಕರಲ್ಲಿ, ಯಾರೂ ನ್ಯಾಯಾಂಗದಲ್ಲಿ ಅಥವಾ ದೆಹಲಿ ಪೊಲೀಸ್‌ ಇಲಾಖೆಯಲ್ಲಿ ಇರಲಿಲ್ಲ. ನಾನು ಫೌಜಿಗಳ ಕುಟುಂಬದಿಂದ ಬಂದಿದ್ದೇನೆ ಮತ್ತು ಅವರಂತೆಯೇ ನಾನು ಕೂಡ ಏನಾದರೂ ಮಾಡುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ” ಎಂದು ಸಿಂಗ್ ಹೇಳಿದರು, 2014 ರಲ್ಲಿ, ದೆಹಲಿ ವಿಶ್ವವಿದ್ಯಾನಿಲಯದಿಂದ  ಪದವಿಯನ್ನು ಪೂರ್ಣಗೊಳಿಸಿದ ನಂತರ, ದೆಹಲಿ…

Read More

ಬೆಂಗಳೂರು: ಪತ್ರಕರ್ತರ ಜೀವಕ್ಕೆ ಯಾವುದೇ ರಕ್ಷಣೆ ಇಲ್ಲ ರಾಜ್ಯದಲ್ಲಿ ಪತ್ರಕರ್ತರು ಸುದ್ದಿ ಮಾಡುವ ಸಂದರ್ಭದಲ್ಲಿ ಎಷ್ಟು ಹಲ್ಲೆ ಮತ್ತು ಕೊಲೆಗಳಾಗಿರುವ ಉದಾಹರಣೆಗಳಿವೆ. ಆದ್ದರಿಂದ ಸರ್ಕಾರ ಕೂಡಲೇ ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಕಾ.ನಿ.ಪ.ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ  ಮಲ್ಲಿಕಾರ್ಜುನ್ ಬಂಗ್ಲೆ ಸರ್ಕಾರವನ್ನು ಒತ್ತಾಯಿಸಿದರು. ಅವರು ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಕಾ.ನಿ. ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಕಾ.ನಿ.ಪ.ದ್ವನಿ ಕೆಲವೇ ದಿನಗಳಲ್ಲಿ ಪತ್ರಕರ್ತರ ನಾನಾ ಬೇಡಿಕೆಗಳ ಮುಂದಿಟ್ಟು ಸಾವಿರಾರು ಪತ್ರಕರ್ತರ ಜೊತೆ ಹೋರಾಟ ಮಾಡಲಾಗಿದೆ. ಪತ್ರಕರ್ತರ ಜೀವ ರಕ್ಷಣಾ ಕಾಯ್ದೆ ಬಹು ಮುಖ್ಯವಾಗಿದೆ.  ಹಲವು ಮೂಲಭೂತ ಸೌಕರ್ಯಗಳ ಬಗ್ಗೆ ಬೆಂಗಳೂರಿನ ಪ್ರೀಡಂ ಪಾರ್ಕ್ ಸೇರಿದಂತೆ ಹಲವು ಭಾಗಗಳಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಭಾಕರ್ ಅವರೇ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದ್ದರು. ಅದೇ ರೀತಿ ಬೆಳಗಾಂ ಅಧಿವೇಶನ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ…

Read More

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಪ್ರದೇಶದಲ್ಲಿ ಆನೆ ಮತ್ತು ಜೀಪ್ ಸಫಾರಿಯನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ತಮ್ಮ ಮೊದಲ ಭೇಟಿಯಲ್ಲಿ , ಮೊದಲು ಉದ್ಯಾನವನದ ಮಧ್ಯ ಕೊಹೋರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಕೈಗೊಂಡರು ಬಳಿಕ ಜೀಪ್ ನಲ್ಲಿ ಸಫಾರಿಯನ್ನು ಕೈಗೊಂಡಿದ್ದಾರೆ. ಅವರು ಇಂದು ಜೋರ್ಹತ್ನಲ್ಲಿ ಪ್ರಸಿದ್ಧ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 125 ಅಡಿ ಎತ್ತರದ ‘ಶೌರ್ಯದ ಪ್ರತಿಮೆ’ ಯನ್ನು ಉದ್ಘಾಟಿಸಲಿದ್ದು, ನಂತರ ಪ್ರಧಾನಮಂತ್ರಿಯವರು ಜೋರ್ಹತ್ ಜಿಲ್ಲೆಯಲ್ಲಿರುವ ಮೆಲೆಂಗ್ ಮೆಟೆಲಿ ಪೋಥಾರ್ಗೆ ತೆರಳಲಿದ್ದು, ಅಲ್ಲಿ ಅವರು ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ಪ್ರತಿ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಎಲ್ಲೆಡೆ ಚಾಲನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ನವ ದೆಹಲಿಯಲ್ಲಿ ಸಭೆ ನಡೆಸುತ್ತಿರುವ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮೊನ್ನೆ ಮೊನ್ನೆಯಷ್ಟೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ವಲಸೆ ಹೋಗಿರುವ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ಅನ್ನು ನೀಡಲಾಗಿದೆ. ಇನ್ನು ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಕರ್ನಾಟಕದ 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿ 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಎಂಟು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು: ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ – ಬಂಟ್ಸ್ ಚಿತ್ರದುರ್ಗ – ಬಿ.ಎನ್…

Read More

ಮಹಾಶಿವರಾತ್ರಿ ದಿನದಂದು ನಡೆದ ಅದ್ಧೂರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಬಗ್ಗೆ ವರದಿಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಕೆಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ರಾಜಸ್ಥಾನ ಕೋಟಾದ ಕುನ್ಹಾಡಿ ಥರ್ಮಲ್ ಚೌರಾ ಬಳಿ ಈ ಘಟನೆ ನಡೆದಿದೆ.ಗಂಭೀರ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಪೋಷಕರು ತಮ್ಮ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ವೈದ್ಯರ ಬಳಿ ಧಾವಿಸುತ್ತಿರುವುದನ್ನು ತೋರಿಸುತ್ತಿದೆ. ಸದ್ಯಕ್ಕೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಧಾವಿಸಿದ್ದಾರೆ.ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ 14 ಮಕ್ಕಳ ಷೋಷಕರ ರೋಧನೆ ಮುಗಿಲು ಮುಟ್ಟಿದೆ. ಇನ್ನೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಪೋಷಕರಿಗೆ ಸಾಂತ್ವನ ಹೇಳಲು ಜನಪ್ರತಿನಿಧಿಗಳು, ರಾಜಕಾರಣಿಗಳು ಸಂಘ ಸಂಸ್ಥೆ ಮುಖಂಡರು ಅಧಿಕಾರಿಗಳು ಸ್ಥಳಕ್ಕೆ ಬಂದು ಹೋಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ನೀವೇನಾದರೂ ಸುಂದರ ದ್ವೀಪಕ್ಕೆ ಟ್ರಿಪ್‌ ಹೋಗುವ ಯೋಚನೆಯಲ್ಲಿದ್ದರೆ, ಜೊತೆಗೆ ಊಟ, ವಸತಿ ಎಲ್ಲವೂ ನಿಮಗೆ ಉಚಿತವಾಗಿ ದೊರಕಿದರೆ ನಿಮಗೆ ಏನನಿಸಬಹುದು. ಆದರೆ ಈ ಕನಸು ನಿಮ್ಮದು ಕನಸಾಗಿಯೇ ಉಳಿಯಲ್ಲ. ಏಕೆಂದರೆ ಇಲ್ಲೊಂದು ದ್ವೀಪ ನಿಮಗಾಗಿ ದುಡ್ಡು ಖರ್ಚು ಮಾಡಲಿದೆ. ಯಾಕಾಗಿ? ಯಾರಿಗೆ ಈ ಉಚಿತ ಸವಲತ್ತುಗಳು ಸಿಗಲಿದೆ? ಬನ್ನಿ ತಿಳಿಯೋಣ. ಮೆಟ್ರೋ ವರದಿಯ ಪ್ರಕಾರ, ಈ ದ್ವೀಪವು ಸ್ಕಾಟ್ಲೆಂಡ್‌ ನ ಪಶ್ಚಿಮ ಕರಾವಳಿಯಲ್ಲಿದೆ. ಇದರ ಹೆಸರುಗಳು ಉಯಿಸ್ಟ್ ಮತ್ತು ಬೆನ್‌ ಬೆಕುಲಾ. ಪ್ರಸ್ತುತ 40 ಜನರು ಈ ದ್ವೀಪದಲ್ಲಿ ವಾಸಿಸುತ್ತಿದ್ದಾರೆ. ಆದರೆ ಬೇಸಿಗೆಯಲ್ಲಿ ಅನೇಕ ಪ್ರವಾಸಿಗರು ಇಲ್ಲಿಗೆ ಬರುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಡಳಿತವು ಇಲ್ಲಿನ ಕೆಲವು ಪೋಸ್ಟ್‌ಗಳನ್ನು ಹಾಕಿದೆ. ಈ ಪೋಸ್ಟ್‌ಗಳಲ್ಲಿ ಮೊದಲನೆಯದು ವೈದ್ಯರಿಗೆ ಸಂಬಂಧಿಸಿದ್ದು. ಇವರಿಗೆ ನೀಡಲು ಯೋಜಿಸಿದ ಆಕರ್ಷಕ ಯೋಜನೆಗಳು ಇಲ್ಲಿದೆ. ವಾಸ್ತವವಾಗಿ, ಈ ದ್ವೀಪದಲ್ಲಿ ವೈದ್ಯರಿಗೆ ಉದ್ಯೋಗಗಳನ್ನು ಘೋಷಿಸಲಾಗಿದೆ. ಇದಕ್ಕಾಗಿ ಅವರಿಗೆ 1 ಕೋಟಿ ರೂಪಾಯಿ ಸಂಭಾವನೆ ನೀಡಲಾಗುವುದು. ಅಂತಹ ಪರಿಸ್ಥಿತಿಯಲ್ಲಿ, ಈ ಕೆಲಸವನ್ನು ಪಡೆಯಲು…

Read More

ತುಮಕೂರು: ತಾಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸುಮಾರು ನೂರಕ್ಕೂ ಹೆಚ್ಚು ಜನರು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಜೋದನಿ ಪೇಪರ್ ಪೈ. ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಆಕಸ್ಮಿಕ ಘಟನೆ ನಡೆದಿದೆ. ಘಟನೆ ವೇಳೆ ಎಂದಿನಂತೆ ಸುಮಾರು 150 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹತ್ತಿಕೊಂಡ ಬೆಂಕಿ ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆ ಒಳಗಿದ್ದ ನೂರಕ್ಕೂ ಹೆಚ್ಚು ಕಾರ್ಮಿಕರನ್ನ ಸಮಯ ಪ್ರಜ್ಞೆಯಿಂದ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಪೇಪರ್ ಬಂಡಲ್ ಹಾಗೂ ಮಿಷಿನ್ ಸುಟ್ಟುಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಕಿರುತೆರೆ ನಟ ಚರಿತ್ ಬಾಳಪ್ಪ ಹಲ್ಲೆಗೊಳಗಾದವರು.  ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟ ಚರಿತ್ ಬಾಳಪ್ಪ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ಫೆ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶೂಟಿಂಗ್ ಗೆ ಹೋಗುವಾಗ ನಟ ಚರಿತ್ ಬಾಳಪ್ಪ ಖಾಲಿ ಜಾಗದಲ್ಲಿ ಕಸ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಜಗಳ ತಾರಕಕ್ಕೇರಿದೆ. ಈ ವೇಳೆ ಚರಿತ್ ಬಾಳಪ್ಪ ಮೇಲೆ ಹಲ್ಲೆಯಾಗಿದೆ ಎನ್ನಲಾಗಿದೆ.  ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಮೇಶ್ವರಂ  ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ತಂಡ ಇದೀಗ  ಅನುಮಾನಸ್ಪದ 17 ಜನರನ್ನ ವಿಚಾರಣೆಗೊಳಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡ ಬಳ್ಳಾರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಸೈಯದ್ ಸಮೀರ್ ಸಹಚರರು,  ಸುಲೇಮಾನ್ ಟೀಂ,  ಮುನೀರ್ ಸಹಚರರನ್ನ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇದೀಗ NIA ಅಧಿಕಾರಿಗಳ ತಂಡವು ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಯುಎಸ್ ನ್ಯಾಷನಲ್ ಗಾರ್ಡ್ ಹೆಲಿಕಾಪ್ಟರ್ ಅಪಘಾತದಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ ನ ಯುಎಸ್-ಮೆಕ್ಸಿಕೋ ಗಡಿಯ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಹೆಲಿಕಾಪ್ಟರ್‌ನಲ್ಲಿ ರಾಷ್ಟ್ರೀಯ ಕಾವಲುಗಾರ ಮತ್ತು ಮೂವರು ಬಾರ್ಡರ್ ಪೆಟ್ರೋಲ್ ಏಜೆಂಟ್‌ ಗಳು ಇದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ರಿಯೊ ಗ್ರಾಂಡೆ ನದಿಯ ಸ್ಟಾರ್ ಕೌಂಟಿಯ ಗಡಿ ಪಟ್ಟಣವಾದ ಲಾ ಗ್ರುಲ್ಲಾದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ನ್ಯಾಷನಲ್ ಗಾರ್ಡ್ ಲಕೋಟಾ UH-72 ಹೆಲಿಕಾಪ್ಟರ್ ಅಪಘಾತದಲ್ಲಿ ಭಾಗಿಯಾಗಿದೆ. ಸ್ಟಾರ್ ಕೌಂಟಿ ಶೆರಿಫ್ ಕಚೇರಿಯ ಪ್ರತಿನಿಧಿಗಳು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More