Author: admin

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ ತುಮಕೂರು ಇವರುಗಳ ಸಹಯೋಗದೊಂದಿಗೆ 79ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸೈನಿಕ ಸದಾಶಿವಯ್ಯ  ಎಂ.ಸಿ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ  ಆರ್.  ಹಾಗೂ ಪ್ರಾದೇಶಿಕ ಕೇಂದ್ರ ಎಲ್ಲಾ ಸಿಬ್ಬಂದಿ ವರ್ಗ ಮತ್ತು ತುಮಕೂರಿನ ಟೂಡಾ ಲೇಔಟ್, ರಾಜೀವ್ ಗಾಂಧಿನಗರ,  ಹೇಮಾವತಿ ಬಡಾವಣೆಯ “ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ)”ಯ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ನಿರ್ದೇಶಕರುಗಳು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು:  ಪ್ರತಿ ವ್ಯಕ್ತಿಯು ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು, ಹೇಗೆ ಶೀತ, ಜ್ವರ ಬಂದಾಗ ಡಾಕ್ಟರ್ ಗಳ ಬಳಿ ಹೋಗುತ್ತೇವೆ ಹಾಗೆಯೇ ಮನಸ್ಸಿಗೂ ಬೇಜಾರಾದಾಗ ಅಥವಾ ಮಾನಸಿಕ ಅಸ್ವಸ್ಥತೆ ಇದ್ದರೆ ಮಾನಸಿಕ ತಜ್ಞರ ಬಳಿ ತೋರಬೇಕೆಂದು ಮನೋವಿಜ್ಞಾನಿ ಬೇಬಿ ಫಾತಿಮಾ ತಿಳಿಸಿದರು. ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಬುಧವಾರದಂದು ಮಾನಸಿಕ–ಸಾಮಾಜಿಕ ಶಿಕ್ಷಣ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಅಜ್ಞಾನ ಮತ್ತು ಕಳಂಕವನ್ನು ನಿವಾರಿಸುವ ಅಗತ್ಯವಿದೆ ಎಂಬುದನ್ನು ಗಂಭೀರವಾಗಿ ಪ್ರಸ್ತಾಪಿಸಿದರು ಅವರು ತಮ್ಮ ಉಪನ್ಯಾಸದಲ್ಲಿ ಈ ಕೆಳಗಿನ ವಿಷಯಗಳ ಕುರಿತು ಮನದಟ್ಟಾಗಿ ವಿವರಿಸಿದರು: ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಅರ್ಥ, ಮಾನಸಿಕ ಅಸ್ವಸ್ಥತೆಗಳ ವಿವರಣೆ, ಅವುಗಳ ವಿಧಗಳು, ಲಕ್ಷಣಗಳು ಮತ್ತು ಚಿಹ್ನೆಗಳು, ಕಾರಣಗಳು ಮತ್ತು ತಡೆಯುವ ಮಾರ್ಗಗಳು, ಮಿದುಳಿನ ಆರೋಗ್ಯದ ಮಹತ್ವ — “ಮಾನಸಿಕ ಆರೋಗ್ಯವಿಲ್ಲದೆ ದೈಹಿಕ ಆರೋಗ್ಯ ಸಾಧ್ಯವಿಲ್ಲ ಮೊದಲಾದ ಮಾಹಿಗಳನ್ನು ತಿಳಿದರು. ಇದಕ್ಕೂ ಮೇರೆಗೆ, ಬಿಬಿ ಫಾತಿಮಾ ಅವರು ಮಾನಸಿಕ ಒತ್ತಡದ ನಿರ್ವಹಣಾ ತಂತ್ರಗಳು ಕುರಿತು ಪ್ರಾಯೋಗಿಕ ಸೂಚನೆಗಳನ್ನು ನೀಡಿದರು. …

Read More

ವೈ.ಎನ್.ಹೊಸಕೋಟೆ: ವೈ.ಎನ್.ಹೊಸಕೋಟೆಯ RVP ಪ್ರೌಢಶಾಲೆಯಲ್ಲಿ ಮಧುಶ್ರೀನಿವಾಸನ್ ರವರ ಮಾರ್ಗದರ್ಶನದಲ್ಲಿ ರೂಪುಗೊಂಡ ಗಣಿತ –ವಿಜ್ಞಾನ ಪ್ರಯೋಗಶಾಲೆಯನ್ನು ಸಂಸ್ಥೆಯ ಕಾರ್ಯದರ್ಶಿ ಎನ್.ಆರ್. ಅಶ್ವಥ್ ಕುಮಾರ್ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು. ಮುಖ್ಯ ಶಿಕ್ಷಕರಾದ ಬಿ.ತಿಪ್ಪೇಸ್ವಾಮಿ ಒಂದು ಸರಳ ಪ್ರಯೋಗದ ಪ್ರಾತ್ಯಕ್ಷಿಕೆಯನ್ನು ಮಾಡಿದರು. ಮಧುಶ್ರೀನಿವಾಸನ್ ರವರು ಪ್ರಯೋಗಾಲಯದಲ್ಲಿರುವ ಗಣಿತ ಹಾಗೂ ವಿಜ್ಞಾನದ ಮಾದರಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರುಗಳಾದ ಅನಿಲ್ ಕುಮಾರ್, ವಿನೋದ್ ಕುಮಾರ್, ಶಿವಣ್ಣ, ಅನ್ನಪೂರ್ಣ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು: ಹಳೆ ಮೈಸೂರು  ಪ್ರಾಂತ್ಯ ಭಾಗದ ಎಚ್.ಡಿ.ಕೋಟೆ ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಎಸ್ಸಿ ಎಸ್ಟಿ ಅತಿ ಹೆಚ್ಚು ಸಮುದಾಯದ ಇರುವುದರಿಂದ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಅಭಾವೀಲಿಂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ  ಆಗ್ರಹಿಸಿದರು. ನಾಯಕ ಸಮಾಜದ ಪ್ರಮುಖ ನಾಯಕರಾದ  ಶಾಸಕ ಅನಿಲ್ ಕುಮಾರ್  ಅವರು ಎರಡು ಬಾರಿ ಶಾಸಕರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಅವರ ತಂದೆ ದಿವಂಗತ ಎಸ್. ಚಿಕ್ಕಮಾದು ಅವರು ತಾಲೂಕಿನಲ್ಲಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಹಾಗಾಗಿ ತಂದೆಯ ಹಾದಿಯಲ್ಲಿ ಮಗ ನಡೆಯುತ್ತಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ ಎಂದರು. ರಾಜ್ಯದ ಗಡಿ ಭಾಗದಲ್ಲಿ ಇರುವ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿರುವ ಅನೀಲ್ ಚಿಕ್ಕಮಾದು ಅವರಿಗೆ ಒಂದೇ ಪಕ್ಷದಲ್ಲಿ ಬಾರಿ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸದಲ್ಲೇ ಇಲ್ಲ.ಅದನ್ನು ನಮ್ಮ ಶಾಸಕರು…

Read More

ಸರಗೂರು:  ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ 11 ಮತಗಳ ಅಂತರದಿಂದ ಹೆಗ್ಗನೂರು ಮಾರಯ್ಯ ಆಯ್ಕೆಯಾದರು. ಮುತ್ತುರಾಜ್ ಅಧ್ಯಕ್ಷ ಸ್ಥಾನದಿಂದ  ತೇರವಾಗಿದ್ದ ಹಿನ್ನೆಲೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಅಧ್ಯಕ್ಷ ಸ್ಥಾನಕ್ಕೆ ಗುರುವಾರದಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಎಸ್ ಸಿ ಮೀಸಲು ಕ್ಷೇತ್ರದಿಂದ ಹೆಗ್ಗನೂರು ಮಾರಯ್ಯ ಹಾಗೂ ಹುಲ್ಲೇಮಾಳ ಲೋಕೇಶ್ ನಾಮಪತ್ರ ಸಲ್ಲಿಸಿದರು. ಆದರೆ ಇಬ್ಬರಲ್ಲಿ ಯಾರೊಬ್ಬರೂ ನಾಮಪತ್ರ ವಾಪಸ್ ಪಡೆಯದ ಕಾರಣ ಚುನಾವಣೆ ನಡೆಯಿತು. ಪಂಚಾಯಿತಿಯಲ್ಲಿ 14 ಸದಸ್ಯರು ಒಳಗೊಂಡು 13 ಸದಸ್ಯರು ಹಾಜರಿದ್ದರು.ಒಬ್ಬರು ಕಾರಣ ಅಂತರದಿಂದ ಗೈರು ಹಾಜರಾಗಿದ್ದರು. ಹೆಗ್ಗನೂರು ಮಾರಯ್ಯ 11, ಹುಲ್ಲೇಮಾಳ ಲೋಕೇಶ್ 2 ಮತಗಳನ್ನು  ಪಡೆದಿದ್ದರಿಂದ ಹೆಗ್ಗನೂರು ಮಾರಯ್ಯ ಹೆಗ್ಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಕಬಿನಿ ಕಾರ್ಯಪಾಲಕ ಅಭಿಯಂತರರು ಹಾಗೂ ಚುನಾವಣಾಧಿಕಾರಿ ಕೆ.ಆರ್.ಉಷಾ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್ ಘೋಷಿಸಿದರು. ನೂತನವಾಗಿ ಅಧ್ಯಕ್ಷರಾದ ಹೆಗ್ಗನೂರು ಮಾರಯ್ಯ ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷನಾಗಿ  ಆಯ್ಕೆ ಮಾಡಿದ ಎಲ್ಲ…

Read More

ಕಲಬುರಗಿ:  ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ರೂ. ನೀಡಲಾಗುವುದು ಎಂದು ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲಾಗಿದೆ. ಯತ್ನಾಳ್ ವಿರುದ್ಧ ವಿಜಯಪುರ ಹಾಗೂ ಕಲಬುರಗಿಯಲ್ಲಿ ಎಫ್‌ ಐಆರ್ ದಾಖಲಾಗಿದೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುಸ್ಲಿಂ ಹುಡುಗಿ ಪ್ರೀತಿಸಿ ಹಿಂದೂ ಹುಡುಗ ಮದುವೆ ಆದರೆ, 5 ಲಕ್ಷ ನಗದು ಘೋಷಣೆಯನ್ನ ಯತ್ನಾಳ್ ಮಾಡಿದ್ದಾರೆ. ಕೊಪ್ಪಳದಲ್ಲಿ ಈ ರೀತಿ ಹೇಳಿಕೆ ನೀಡಿದ್ದ ಶಾಸಕರ ವಿರುದ್ಧ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ ಬೀಳಗಿ ದೂರು ಕೊಟ್ಟಿದ್ದರು. ಜೊತೆಗೆ ಯತ್ನಾಳ್ ಮೇಲೆ ಕಲಬುರ್ಗಿಯಲ್ಲೂ ದೂರು ದಾಖಲಾಗಿದ್ದು, ಅದನ್ನ ವಿಜಯಪುರ ಗಾಂಧಿಚೌಕ್ ಪೊಲಿಸ್ ಠಾಣೆಗೆ ಕಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಜನರ ಜಾಮೀನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ  ಬೆನ್ನಲ್ಲೇ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ರಮ್ಯಾ ಹೇಳಿದ್ದಾರೆ. ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ರಮ್ಯಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಭಾರತೀಯ ಜನತಾ ಪಾರ್ಟಿ ಮಧುಗಿರಿ ಮಂಡಲ ವತಿಯಿಂದ’ ಮಂಡಲ ಅಧ್ಯಕ್ಷರಾದ ಹನುಮಂತರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 14 ವಿಭಜನೆಯ ಕರಾಳ ಸ್ಮರಣಾ ದಿನ’ ವನ್ನ ಮಧುಗಿರಿ ನಗರದ ಸರ್ಕಲ್ ನಲ್ಲಿ ಕಪ್ಪು ಪಟ್ಟಿ ಧರಿಸಿ ಮೌನವಾಗಿ ಸ್ಮರಿಸಲಾಯಿತು. ಕಾರ್ಯಕ್ರಮದ ಮುಖ್ಯ ಭಾಷಣವನ್ನು ಬಿಜೆಪಿಯ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಸರು ಮಾತನಾಡಿ, ದ್ವೇಷ, ಹಿಂಸಾಚಾರದಿಂದ ದೇಶದ ಲಕ್ಷಾಂತರ ಸಹೋದರ, ಸಹೋದರಿಯರು ನಿರಾಶ್ರಿತರಾಗಿ, ಜೀವ ಕಳೆದುಕೊಂಡ ನೋವು ಎಂದಿಗೂ ಮಾಸದು. ನಮ್ಮ ಜನರ ಹೋರಾಟ, ತ್ಯಾಗದ ಸ್ಮರಣೆಯ ದಿನವಾದ ದೇಶ ವಿಭಜನೆಯ ದಿನವನ್ನು ಮರೆಯಲು ಸಾಧ್ಯವಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಜಿ ಅವರು ಆಗಸ್ಟ್ 14, 2021 ರಲ್ಲಿ ದೇಶ ವಿಭಜನೆ ಕರಾಳ ದಿನವೆಂದು ಘೋಷಿಸಿದ್ದಾರೆ, ಪಾಕಿಸ್ತಾನವನ್ನು ಆಗಸ್ಟ್ 14, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಭಾರತವನ್ನು ಆಗಸ್ಟ್ 15, 1947 ರಂದು ಪ್ರತ್ಯೇಕ ರಾಷ್ಟ್ರ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಅನೇಕ ಜನ ವಲಸೆ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಪಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್‌ ಎಸ್ ತಾ.ಸಂಚಾಲಕ ಡಿ.ಎಲ್.ಶಿವರಾಮ್ ಒತ್ತಾಯಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಆಯೋಗವನ್ನು ರಚಿಸಿ ವರದಿಯನ್ನು ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ವಿಳಂಬ ಮಾಡದೆ, ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು. ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಬಗ್ಗೆ ಈಗಾಗಲೇ ಅನೇಕ ಕೂಗುಗಳು ಕೇಳಿ ಬರುತ್ತಿವೆ. ನಾಗಮೋಹನ್‌ ದಾಸ್‌ ರವರ ವರದಿಯ ಆಧಾರದ ಮೇಲೆ ಒಳಮೀಸಲಾತಿಯನ್ನು ಅಂಗೀಕರಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರಾದ ಡಾ.ಜಿ.ಪರಮೇಶ್ವರ್, ಮಹದೇವಪ್ಪನವರು ಒಳಮೀಸಲಾತಿಯನ್ನು…

Read More