Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ಜಿಲ್ಲೆಯ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಜನವರಿ 16, 2026 ರಂದು ನಿಟ್ರಹಳ್ಳಿಯ ನಿವಾಸಿಯಾದ ವಿನಯ್ ಕುಮಾರ್ ಎನ್.ಕೆ. ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಅವರ ಗೋದಾಮಿನಲ್ಲಿದ್ದ 265 ಅಡಿಕೆ ಚೀಲಗಳಲ್ಲಿ ಸುಮಾರು 40 ಚೀಲ (ಅಂದಾಜು 19 ಕ್ವಿಂಟಾಲ್) ಅಡಿಕೆಯನ್ನು ಕಿಡಿಗೇಡಿಗಳು ತಡರಾತ್ರಿ ಕಳ್ಳತನ ಮಾಡಿದ್ದರು. ಈ ಅಡಿಕೆಯ ಮೌಲ್ಯ ಸುಮಾರು 9,50,000 ರೂ. ಎಂದು ಅಂದಾಜಿಸಲಾಗಿತ್ತು. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾ ತಂಡ ಮತ್ತು ಕಾರ್ಯಾಚರಣೆ: ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. (IPS) ರವರ ಮಾರ್ಗದರ್ಶನದಲ್ಲಿ, ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ಮಂಜುನಾಥ್ ಜಿ ಹಾಗೂ ಮಧುಗಿರಿ ವೃತ್ತದ ಸಿಪಿಐ ಹನುಮಂತರಾಯಪ್ಪ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪಿಎಸ್ಐ ಶ್ರೀನಿವಾಸ ಪ್ರಸಾದ್…
ತುಮಕೂರು: ಲಂಚ ಪಡೆಯುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚೇತನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ, ಠಾಣೆಯ ವಶದಲ್ಲಿ ಇದ್ದ ವಾಹನ ಒಂದನ್ನು ಬಿಡುಗಡೆಗಾಗಿ ಪೊಲೀಸ್ ಸಬ್ ಇನ್ಸೆಕ್ಟರ್ ಚೇತನ್ ರವರು ಬೆಂಗಳೂರು ಮೂಲದ ವಕೀಲರೊಬ್ಬರಿಗೆ 40,000 ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗಾಗಿ ವಕೀಲರು ಲೋಕಾಯುಕ್ತ ಪೊಲೀಸರ ಮೊರೆ ಹೋದ ಕಾರಣ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರು ಲೋಕಾಯುಕ್ತ ಟ್ರ್ಯಾಪ್ ಬಿದ್ದಿದ್ದಾರೆ. ಕಳೆದ ರಾತ್ರಿ 11:30 ಸಂದರ್ಭದಲ್ಲಿ ತುಮಕೂರಿನ ಕ್ಯಾತ್ಸಂದ್ರ ಬಳಿಯ ನಮಸ್ತೆ ತುಮಕೂರು ಹೊಟೇಲ್ ಬಳಿ ರೂ. 40,000 ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಸ್ ಐ ಚೇತನ್ ಹಾಗೂ ಹೋಟೆಲ್ ನ ಸಿಬ್ಬಂದಿ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ಸ್ಯಾಂಡಲ್ ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಶೀಘ್ರದಲ್ಲೇ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಪತ್ನಿ ಧನ್ಯತಾ ಅವರೊಂದಿಗೆ ಜೀವನದ ಹೊಸ ಹಂತಕ್ಕೆ ಕಾಲಿಡುತ್ತಿರುವ ನಟ, ತಮ್ಮ ಈ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಧನಂಜಯ್, ತಾನು ತಂದೆಯಾಗುತ್ತಿರುವ ವಿಷಯ ಇನ್‌ಸ್ಟಾಗ್ರಾಮ್‌ಗೂ (Instagram) ತಿಳಿದಂತಿದೆ ಎಂದು ತಮಾಷೆಯಾಗಿ ಹೇಳಿದ್ದಾರೆ. “ಈಗ ಇನ್‌ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು, ಮಗುವಿಗೆ ಸಂಬಂಧಿಸಿದ ರೀಲ್ಸ್‌ಗಳೇ ಬರುತ್ತವೆ. ನಾನು ತಂದೆಯಾಗುತ್ತಿರುವ ವಿಚಾರ ಆಲ್ಗರಿದಮ್‌ಗೆ ಕೂಡ ಗೊತ್ತಾಗಿಬಿಟ್ಟಿದೆ” ಎಂದು ನಗುತ್ತಾ ತಿಳಿಸಿದ್ದಾರೆ. ಈ ಹೊಸ ಜವಾಬ್ದಾರಿ ಮತ್ತು ಜೀವನದ ಸುಂದರ ಬದಲಾವಣೆಯನ್ನು ಬಹಳ ಖುಷಿಯಿಂದ ಎಂಜಾಯ್ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ. ಧನಂಜಯ್ ಮತ್ತು ಧನ್ಯತಾ ದಂಪತಿಗಳ ಈ ಸಂತಸದ ಸುದ್ದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸಿನಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಧನಂಜಯ್ ಅವರು ಸದ್ಯಕ್ಕೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ವೈಯಕ್ತಿಕ ಜೀವನದ ಈ ಸುಂದರ ಕ್ಷಣಗಳನ್ನು ಸಂಭ್ರಮಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಬೆಂಗಳೂರು: ರಾಜ್ಯದ ರೈತರಿಗೆ ಹಾಗೂ ಭೂ ಮಾಲೀಕರಿಗೆ ಕಂದಾಯ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಜಮೀನಿನ ಮೂಲ ಮಾಲೀಕರು ಮೃತಪಟ್ಟ ಸಂದರ್ಭದಲ್ಲಿ ಅವರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ ಮಾಡುವ ‘ಪೌತಿ ಖಾತೆ’ ಪ್ರಕ್ರಿಯೆಯನ್ನು ಸರ್ಕಾರ ಈಗ ಅತ್ಯಂತ ಸರಳಗೊಳಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯು ‘ಇ-ಪೌತಿ’ (e-Pouthi) ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಮನೆ ಬಾಗಿಲಿಗೆ ಸೇವೆ: ಇನ್ಮುಂದೆ ಪೌತಿ ಖಾತೆ ಮಾಡಿಸಲು ರೈತರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಗ್ರಾಮ ಆಡಳಿತಾಧಿಕಾರಿಗಳೇ (VA) ನೇರವಾಗಿ ರೈತರ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಿದ್ದಾರೆ. ಆಧಾರ್ ಜೋಡಣೆ ಕಡ್ಡಾಯ: ಪಹಣಿಗಳಿಗೆ (RTC) ಆಧಾರ್ ಸಂಖ್ಯೆಯನ್ನು ಜೋಡಿಸುವ ಮೂಲಕ ಮೃತ ಮಾಲೀಕರ ಜಮೀನನ್ನು ಸುಲಭವಾಗಿ ಗುರುತಿಸಿ, ವಾರಸುದಾರರಿಗೆ ಹಕ್ಕು ವರ್ಗಾವಣೆ ಮಾಡಲಾಗುತ್ತಿದೆ. ದಾಖಲೆಗಳ ಸರಳೀಕರಣ: ಮರಣ ಪ್ರಮಾಣಪತ್ರ ಪಡೆಯಲು ವಿಳಂಬವಾಗುವ ಸಂದರ್ಭದಲ್ಲಿ, ವಾರಸುದಾರರ ಅಫಿಡವಿಟ್ ಮತ್ತು ಗ್ರಾಮ ಆಡಳಿತಾಧಿಕಾರಿಯವರ ‘ಮಹಜರ್’ ವರದಿ ಆಧಾರದ ಮೇಲೆ ಪೌತಿ ಖಾತೆ ನೀಡಲು ಅವಕಾಶ ನೀಡಲಾಗಿದೆ. ಇ-ಪೌತಿ…
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು, ಗುರುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಹಣ ಹೂಡಿಕೆ ವಂಚನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ನೆರವು ನೀಡಲು ಮತ್ತು ಅವರನ್ನು ಬಂಧಿಸದಿರಲು ಇನ್ಸ್‌ಪೆಕ್ಟರ್ ಗೋವಿಂದರಾಜು ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಈಗಾಗಲೇ 1 ಲಕ್ಷ ರೂಪಾಯಿಗಳನ್ನು ಪಡೆದಿದ್ದ ಅವರು, ಬಾಕಿ ಇರುವ 4 ಲಕ್ಷ ರೂಪಾಯಿಗಳನ್ನು ಸ್ವೀಕರಿಸಲು ಮೈಸೂರು ರಸ್ತೆಯ ಸಿಎಆರ್ (CAR) ಮೈದಾನಕ್ಕೆ ಬಂದಿದ್ದರು. ಲೋಕಾಯುಕ್ತ ಟ್ರ್ಯಾಪ್: ದೂರುದಾರರಿಂದ ಹಣ ಪಡೆಯುತ್ತಿದ್ದಂತೆಯೇ ಸಂಚು ರೂಪಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಗೋವಿಂದರಾಜು ಅವರನ್ನು ಸುತ್ತುವರಿದು ವಶಕ್ಕೆ ಪಡೆದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮೈದಾನದಲ್ಲಿ ಹೈಡ್ರಾಮಾ: ಲೋಕಾಯುಕ್ತ ಪೊಲೀಸರು ತನ್ನನ್ನು ಹಿಡಿಯುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ಗೋವಿಂದರಾಜು ಮೈದಾನದಲ್ಲೇ ರಂಪಾಟ…
ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮಯ ಅಧ್ಯಕ್ಷ ಸಿ.ಡಿ.ಪ್ರಭಾಕರ್ ಹಾಗೂ ಅಭಿವೃದ್ಧಿ ಅಧಿಕಾರಿ ರಂಗನರಸಯ್ಯ ನೇತೃತ್ವದಲ್ಲಿ ಪಂಚಾಯತಿ ವ್ಯಾಪ್ತಿಯ ವಿಶೇಷ ಚೇತನರ ಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಸಿ.ಡಿ.ಪ್ರಭಾಕರ್ ಮಾತನಾಡಿ, ವಿಶೇಷ ಚೇತನರ ಅಧಿನಿಯಮ 1995ರ ಕಾಯಿದೆಯಡಿ ವಿಶೇಷ ಚೇತನರಿಗೆ ನೀಡಬೇಕಾದ ಸೌಲಭ್ಯಗಳು, ಅನುದಾನ ಮೀಸಲು ಬಳಕೆ, ಸಬಲೀಕರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸಿದರು. ಅನುದಾನದಲ್ಲಿ ಶೇ.3ರಷ್ಟನ್ನು ವಿಶೇಷ ಚೇತನರ ಸಬಲೀಕರಣಕ್ಕೆ ಮೀಸಲಿಡಬೇಕು. ಕ್ರಿಯಾ ಯೋಜನೆ ರೂಪಿಸಿ ಅನುದಾನವನ್ನು ಸದ್ಬಳಕೆ ಮಾಡಿಕೊಡಬೇಕು. ಸರ್ಕಾರವು ಅಂಗವಿಕಲರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಬೇಕು. ಪಡಿತರ ವಿತರಣೆಯಲ್ಲಿ ಅಂಗವಿಕರಿಗೆ ಮೊದಲ ಆದ್ಯತೆ ನೀಡಬೇಕು. ಬಸ್‌ಗಳಲ್ಲಿ ವಿಕಲಚೇತನರಿಗೆ ಮೀಸಲಿರುವ ಆಸನಗಳನ್ನು ವಿಕಲಚೇತನರಿಗೆ ಒದಗಿಸಲು ನಿರ್ವಾಹಕರು ನೆರವಾಗಬೇಕು. ಅಂಗವಿಕಲರ ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಬಸ್ ನಿಲ್ದಾಣದಲ್ಲಿ ಪೆಟ್ಟಿ ಅಂಗಡಿಗಳನ್ನು ಹಾಕಿಕೊಳ್ಳಲು ಅನುಮತಿ ನೀಡಿದರೆ ಅವರು ಸಹ ನಮ್ಮಂತೆಯೇ ಬದುಕು ಕಟ್ಟಿಕೊಂಡು ಜೀವನ ಸಾಗಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸರಸ್ವತಮ್ಮ…
ಗದಗ: ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಪುರಾತತ್ವ ಇಲಾಖೆ ನಡೆಸುತ್ತಿರುವ ಉತ್ಖನನ ಕಾರ್ಯದ ವೇಳೆ ಅಚ್ಚರಿಯ ಘಟನೆಯೊಂದು ಸಂಭವಿಸಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ಉತ್ಖನನ ನಡೆಯುತ್ತಿದ್ದಾಗ ಜೀವಂತ ಹಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭಕ್ತಿ ಮತ್ತು ಕುತೂಹಲ ಮೂಡಿಸಿದೆ. ನಡೆದದ್ದೇನು? ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಭೂಮಿಯನ್ನು ಅಗೆಯುವಾಗ ವಿಶೇಷ ಪ್ರಭೇದದ ಹಾವೊಂದು ಕಾಣಿಸಿಕೊಂಡಿದೆ. ಉತ್ಖನನ ನಡೆಯುತ್ತಿದ್ದ ಜಾಗದಲ್ಲೇ ಹಾವು ಚಲಿಸುತ್ತಿರುವುದನ್ನು ಗೋಳಪ್ಪ ಕೋಳಿವಾಡ ಎಂಬ ಸ್ಥಳೀಯ ಗ್ರಾಮಸ್ಥರು ಮೊದಲು ಗಮನಿಸಿದರು. ತಕ್ಷಣವೇ ಅವರು ಉತ್ಖನನ ಕಾರ್ಯದ ಮೇಲ್ವಿಚಾರಕರಿಗೆ ಮಾಹಿತಿ ನೀಡಿದರು. ಸುರಕ್ಷಿತ ರಕ್ಷಣೆ: ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಉತ್ಖನನ ಸಿಬ್ಬಂದಿ ಮತ್ತು ಸ್ಥಳೀಯರು, ಹಾವಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಿ ಅದನ್ನು ರಕ್ಷಿಸಿದರು. ಬಳಿಕ ಹಾವನ್ನು ಸುರಕ್ಷಿತವಾಗಿ ಸಮೀಪದ ಕಾಡಿನ ಪ್ರದೇಶಕ್ಕೆ ಬಿಡಲಾಗಿದೆ. ಗ್ರಾಮಸ್ಥರ ನಂಬಿಕೆ: ಈ ಘಟನೆ ಗ್ರಾಮಸ್ಥರಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಹಳೆಯ ದೇವಸ್ಥಾನಗಳ ಉತ್ಖನನ ವೇಳೆ ಹಾವು ಕಾಣಿಸಿಕೊಂಡರೆ ಅಲ್ಲಿ…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಕುರುಬ ಸಮಜದ ವಿದ್ಯಾರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ನಗರದ ಕನಕಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ‘ಕನಕಶ್ರೀ ವಿದ್ಯಾರ್ಥಿ ನಿಲಯ’ದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು?: ಬೆಂಗಳೂರಿನಲ್ಲಿ ಈ ಕೆಳಗಿನ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಹರು: ಸ್ನಾತಕೋತ್ತರ ಪದವಿ (PG) ವಿದ್ಯಾರ್ಥಿಗಳು. ವೃತ್ತಿಪರ ಶಿಕ್ಷಣ: ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಇತ್ಯಾದಿ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುತ್ತಿರುವವರು. ವಿದ್ಯಾರ್ಥಿನಿಲಯದ ಸೌಲಭ್ಯಗಳು: ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ನಿಲಯದಲ್ಲಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಲಾಗಿದೆ: ಉಚಿತ ವಸತಿ: ವಿದ್ಯಾರ್ಥಿಗಳಿಗೆ ಉಚಿತವಾಗಿ ಉಳಿದುಕೊಳ್ಳುವ ವ್ಯವಸ್ಥೆ. ಅಧ್ಯಯನಕ್ಕೆ ಪೂರಕ ವಾತಾವರಣ: ಪ್ರತ್ಯೇಕವಾದ ಸ್ಟಡಿ ಕಂಪಾರ್ಟ್‌ಮೆಂಟ್‌ಗಳ ವ್ಯವಸ್ಥೆ. ರಿಯಾಯಿತಿ ದರದ ಊಟ: ಅತ್ಯಂತ ಕಡಿಮೆ ದರದಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಬೆಂಗಳೂರಿನಲ್ಲಿ ನಡೆಯುವ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವಿಶೇಷವಾಗಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು…
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನಲ್ಲಿ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದು, ಈಗ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದೆ. ಘಟನೆಯ ವಿವರ: ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ತಿಮ್ಮನಹಳ್ಳಿ ಗ್ರಾಮದ ಮೋಹನ್ ಕುಮಾರ್ ಮತ್ತು ಲಟ್ಟನಹಳ್ಳಿ ಗ್ರಾಮದ ಸಂಗೀತಾ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅನಿವಾರ್ಯವಾಗಿ ಈ ಜೋಡಿ ಶಿರಾದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾನೂನುಬದ್ಧವಾಗಿ ಮದುವೆಯಾಗಿದ್ದಾರೆ. ಜೀವ ಬೆದರಿಕೆ ಆರೋಪ: ಮದುವೆಯಾದ ಬಳಿಕ ಯುವತಿಯ ತಂದೆ ಹಾಗೂ ಕುಟುಂಬದವರಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ನವದಂಪತಿಗಳು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಯುವತಿ ಸಂಗೀತಾ, “ನಾವು ಮದುವೆಯಾಗಿ ನಮ್ಮ ಊರಿಗೆ ಹೋಗುತ್ತಿದ್ದೇವೆ. ನನ್ನ ತಂದೆಯ ಕಡೆಯಿಂದ ನನ್ನ ಪತಿ ಹಾಗೂ ಅವರ ಕುಟುಂಬಕ್ಕೆ ಅಪಾಯವಿದೆ. ನಮಗೆ ಏನಾದರೂ…
ಬೆಂಗಳೂರು: ಫ್ಯಾಷನ್ ಜಗತ್ತಿನಲ್ಲಿ ಹೊಸ ಹೊಸ ಪ್ರಯೋಗಗಳಿಗೆ ಹೆಸರಾಗಿರುವ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಇದೀಗ ತಮ್ಮ ಹೊಸ ಹೇರ್ ಸ್ಟೈಲ್ ಮೂಲಕ ಸುದ್ದಿಯಲ್ಲಿದ್ದಾರೆ. ಸಾಮಾನ್ಯವಾಗಿ ಮಹಿಳೆಯರು ಬಳಸುವ ‘ಹೇರ್ ಕ್ಲಿಪ್’ ಧರಿಸುವ ಮೂಲಕ ಸುದೀಪ್ ಪುರುಷರ ಫ್ಯಾಷನ್‌ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಪುರುಷರಲ್ಲಿ ಶುರುವಾಯ್ತು ಹೇರ್ ಕ್ಲಿಪ್ ಕ್ರೇಜ್: ಈ ಹಿಂದೆ ಬಿಗ್ ಬಾಸ್ ವೇದಿಕೆಯ ಮೇಲೆ ಸುದೀಪ್ ಹೇರ್ ಬ್ಯಾಂಡ್ ಧರಿಸಿ ಕಾಣಿಸಿಕೊಂಡಾಗ ಅದು ಯುವಕರ ನಡುವೆ ದೊಡ್ಡ ಟ್ರೆಂಡ್ ಆಗಿತ್ತು. ಈಗ ಕೂದಲಿಗೆ ಕ್ಲಿಪ್ ಹಾಕಿಕೊಳ್ಳುವ ಮೂಲಕ ಕಿಚ್ಚ ಮತ್ತೊಂದು ಹೊಸ ಫ್ಯಾಷನ್ ಪರಿಚಯಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಈ ಕ್ಲಿಪ್ ಎಲ್ಲಿ ಸಿಗುತ್ತದೆ? ಯಾವ ಬ್ರ್ಯಾಂಡ್‌ನದ್ದು? ಎಂದು ಹುಡುಕಾಡಲು ಆರಂಭಿಸಿದ್ದಾರೆ. ಬದಲಾಗುತ್ತಿರುವ ಫ್ಯಾಷನ್ ಲೋಕ: ಇತ್ತೀಚಿನ ದಿನಗಳಲ್ಲಿ ಗಂಡು-ಹೆಣ್ಣು ಎಂಬ ಭೇದವಿಲ್ಲದೆ ವೇಷಭೂಷಣಗಳು ಅದಲು ಬದಲಾಗುತ್ತಿವೆ. ಹೆಣ್ಣುಮಕ್ಕಳು ಪುರುಷರ ಉಡುಪುಗಳನ್ನು ಅಳವಡಿಸಿಕೊಳ್ಳುತ್ತಿದ್ದರೆ, ಪುರುಷರು ಕೂಡ ಮಹಿಳೆಯರು ಬಳಸುವ ಹೇರ್ ಆಕ್ಸೆಸರಿಗಳನ್ನು…