Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಮ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸದ್ಯ ಸಮಂತಾ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಗೊತ್ತಾಗಿದೆ. ಸಿನಿಮಾದಿಂದ ದೂರ ಉಳಿದು ಕೆಲ ತಿಂಗಳು ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದಿದ್ದ ಸ್ಯಾಮ್, ಇತ್ತೀಚೆಗಷ್ಟೇ ಅಮೆರಿಕ, ಭೂತಾನ್ ಗೆ ತೆರಳಿ ತಮ್ಮ ಖಾಯಿಲೆಗೆ ಚಿಕಿತ್ಸೆ ತೆಗೆದುಕೊಂಡಿದ್ದರು. ಸದ್ಯ ಹೈದರಾಬಾದ್ ನಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ನಂತರ ಸಮಂತಾ ಹೆಚ್ಚು ಸಕ್ರಿಯರಾದರು. ಮೇಲಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಯಾರ ಮೇಲೂ ಅವಲಂಬಿತರಾಗುವುದು ಸರಿಯಲ್ಲ ಎಂಬಂತೆ ಪೋಸ್ಟ್ ಹಾಕುತ್ತಿದ್ದಾರೆ. ಅವಳು ಅನೇಕ ಉಲ್ಲೇಖಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಭಾವನೆಗಳನ್ನು ವ್ಯಕ್ತಪಡಿಸುತ್ತಾಳೆ. ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ. ಪರಿಪೂರ್ಣ ಆರೋಗ್ಯಕ್ಕಾಗಿ ಅಹರ್ನಿಶಾಲಾ ಶ್ರಮಿಸುತ್ತಿದ್ದು, ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ.…
ಅಡಕೆ ಮಾರಾಟ ಆರಂಭವಾಗಿದ್ದು ರೈತರ ಮುಖದಲ್ಲಿ ಸಂತಸ ಮಡುಗಟ್ಟಿದೆ. ಆದರೆ ಈ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಎಸ್ ರಾಂ ಅಂಡ್ ಎನ್ ರಾಂ ಗ್ರೂಪ್ ಕಂಪೆನಿ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ. ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾರ್ ಪ್ರೈವೇಟ್ ಲಿಮಿಟೆಡ್ ಜತೆ ಅಡಕೆ ಆಮದು ಒಪ್ಪಂದ ಮಾಡಿಕೊಂಡಿರುವುದಾಗಿ ಕಂಪೆನಿಯು ಶುಕ್ರವಾರ ತಿಳಿಸಿದೆ. ಅಂದಹಾಗೆ ಈ ಹಿಂದೆ ವಿದೇಶದಿಂದ ಅಡಕೆ ಆಮದು ಮಾಡಿಕೊಂಡಿದ್ದಾಗ, ಅಡಿಕೆ ದರ ಕುಸಿದಿತ್ತು. ಇದೀಗ ಮತ್ತೊಮ್ಮೆ ಅಡಕೆ ಆಮದು ಬಗ್ಗೆ ಒಪ್ಪಂದಗಳು ನಡೆದಿದೆ. ಲಂಕಾದಿಂದ ಭಾರಿ ಪ್ರಮಾಣದಲ್ಲಿ ಆಮದಿಗೆ ಬ್ರಿಟನ್ ಕಂಪನಿ ಮುಂದಾಗಿದೆ. ಇದು ಅಡಕೆ ಬೆಳೆಗಾರರಿಗೆ ಬೆಲೆ ಕುಸಿತದ ಆತಂಕ ಮೂಡಿಸಿದೆ. ದೇಶದಲ್ಲಿ ಅಡಕೆ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ದೇಶದ ಹಲವು ಸಂಪ್ರದಾಯ…
ಪ್ರಪಂಚದಲ್ಲಿ ಹೆಚ್ಚು ಓದಿದ ವ್ಯಕ್ತಿ ಯಾರು ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡುತ್ತಿರಬಹುದು. ಹೆಚ್ಚು ಅಧ್ಯಯನ ಮಾಡಿದ ದಾಖಲೆ ಬರೆದವರು ಭಾರತೀಯರು ಎಂದರೆ ನಿಮಗೆ ನಿಜಕ್ಕೂ ಆಶ್ಚರ್ಯವಾಗಬಹುದು. ಇಂದು ನಾವು ಆ ವ್ಯಕ್ತಿಯ ಬಗ್ಗೆ ಮತ್ತು ಅವರು ಎಷ್ಟು ಡಿಗ್ರಿಗಳನ್ನು ತೆಗೆದುಕೊಂಡಿದ್ದಾರೆ ಇವುಗಳ ಬಗ್ಗೆ ತಿಳಿದುಕೊಳ್ಳೋಣ. ವಿಶ್ವದಲ್ಲೇ ಅತ್ಯಂತ ವಿದ್ಯಾವಂತ ವ್ಯಕ್ತಿ ಡಾ. ದಶರಥ್ ಸಿಂಗ್. ಅವರನ್ನು ವಿಶ್ವದ ಅತ್ಯಂತ ಅರ್ಹ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ಈ ಸಾಧನೆ ಮಾಡುವ ಮೊದಲು ರಾಜಸ್ಥಾನದ ದಶರಥ್ ಸಿಂಗ್ ಭಾರತೀಯ ಸೇನೆಯಲ್ಲಿ ಯೋಧರಾಗಿದ್ದರು. ಡಾ. ದಶರಥ್ ಸಿಂಗ್ ಅವರು 1988 ರಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದರು ಮತ್ತು ಭಾರತೀಯ ಸೇನೆಗೆ ಸೈನಿಕರಾಗಿ ಸೇರಿದರು. ಅವರು 16 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದರು ಮಾತ್ರವಲ್ಲದೆ ತಮ್ಮ ಮುಂದಿನ ಅಧ್ಯಯನವನ್ನು ಮುಂದುವರೆಸಿದರು. ಈಗ 68 ಕ್ಕೂ ಹೆಚ್ಚು ಡಿಗ್ರಿ ಮತ್ತು ಡಿಪ್ಲೋಮಾಗಳನ್ನು ಹೊಂದಿದ್ದಾರೆ. ಇದೇ ಕಾರಣಕ್ಕೆ ದಶರಥ್ ಗೆ ಭಾರತದ ಅತ್ಯಂತ ಅರ್ಹ ಸೈನಿಕ ಎಂಬ…
ಲೋಕಸಭಾ ಚುನಾವಣೆ ಸದ್ದಿಲ್ಲದೆ ಕಾವೇರುತ್ತಿದೆ. ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ರಣಕಹಳೆ ಊದಿವೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿ ಘೋಷಿಸಿದ್ದಾರೆ. ಹೌದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ, ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಂಬಂಧಿ ಯುವಕನಿಂದಲೇ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿದ್ದಾರೆ.ಈ ವಿಚಾರವನ್ನು ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮುದ್ದಹನುಮೇಗೌಡ ಅವರ ಪಾಲಾಗಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದೀಗ ಬಿಡುಗಡೆಯಾಗಿರುವ 7 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್ ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್ ತುಮಕೂರು: ಮುದ್ದಹನುಮೇಗೌಡ ಹಾಸನ-ಶ್ರೇಯಸ್ ಪಟೇಲ್ ವಿಜಯಪುರ: ಎಸ್.ಆರ್.ಆಲಗೂರು ಹಾವೇರಿ: ಆನಂದ್ ಗಡ್ಡ ದೇವರಮಠ ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಕ್ಕಿ ತೊಳೆದ ನೀರಿನಿಂದ ಆಗುವ ಪ್ರಯೋಜನಗಳು: ಅಕ್ಕಿಯನ್ನು ಸ್ವಲ್ಪ ಸಮಯದವರೆಗೆ ನೀರಿನಲ್ಲಿ ನೆನೆಸಿ ತೊಳೆದ ನೀರಿನಲ್ಲಿ ಅನೇಕ ಜೀವಸತ್ವಗಳು, ಖನಿಜಗಳು, ಅಮೈನೋ ಆಮ್ಲಗಳು ಮತ್ತು ಆರೋಗ್ಯಕರ ಪೋಷಕಾಂಶಗಳಿವೆ. ಇವು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮವನ್ನು ಮೃದುಗೊಳಿಸುವ ಉತ್ಕರ್ಷಣ ನಿರೋಧಕಗಳು ಮತ್ತು ಫೆರುಲಿಕ್ ಆಮ್ಲವನ್ನು ಹೊಂದಿರುತ್ತದೆ. ಇವು ಚರ್ಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ನಿಮ್ಮ ಒಣಕೂದಲನ್ನು ಸುಗಮಗೊಳಿಸುತ್ತದೆ ಮತ್ತು ಹೆಚ್ಚು ಹೊಳಪನ್ನು ನೀಡುತ್ತದೆ.ನಿಮ್ಮ ಕೂದಲಿಗೆ ಅಕ್ಕಿ ನೀರನ್ನು ಹಚ್ಚಿ ಒಂದು ಗಂಟೆಗೂ ಕಾಲ ಹೆಚ್ಚು ಇರಿಸಿ ನಂತರದಲ್ಲಿ ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ. ಅನಂತರದಲ್ಲಿ ಕಂಡೀಷನರ್ ಬಳಸಿ.ಇದು ನೀವು ನಿಮ್ಮ ಕೂದಲಿಗೆ ಮಾಡಿಕೊಳ್ಳುವ ಉತ್ತಮ ಆರೈಕೆಯಾಗಿದೆ. ನಿಮ್ಮ ಸ್ನಾನಕ್ಕೆ ಸ್ವಲ್ಪ ಅಕ್ಕಿ ನೀರು ಸೇರಿಸಿ, ಇದು ನಿಮ್ಮ ದೇಹವನ್ನು ಉದ್ವೇಗ ಮತ್ತು ಆಯಾಸಗೊಂಡಿದ್ದರೆ ಅದನ್ನು ಶಮನಗೊಳಿಸಿ ನಿಮ್ಮ ಮನಸ್ಸನ್ನು ಉಲ್ಲಸಿತವಾಗಿ ಇರುವಂತೆ ಮಾಡುತ್ತದೆ. ಅಕ್ಕಿ ನೀರನ್ನು ಸೇವಿಸುವುದರಿಂದ ಇದು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಬೇಸಿಗೆಗೆ ಉತ್ತಮವಾದ ಪಾನೀಯವಾಗಿದೆ.ನಿಮ್ಮ ದೇಹವನ್ನು ತಂಪಾಗಿಸುತ್ತದೆ ಮತ್ತು ತೇವಾಂಶದಿಂದ…
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದ್ದು, ಗೊಂದಲ ಇರುವ ಕೆಲ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಯ್ತು. ದೆಹಲಿಗೆ ನಮ್ಮನ್ನ ನಮ್ಮ ರಾಷ್ಟ್ರೀಯ ನಾಯಕರು ಕರೆದಿದ್ರು. ರಾಜ್ಯದ ಲೋಕಸಭಾ ಚುನಾವಣೆ ತಯಾರಿ, ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ಜೆ.ಪಿ ನಡ್ಡಾ, ಸಂತೋಷ್ ಅವರ ಜೊತೆ ಚರ್ಚೆ ಆಗಿದೆ. ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತಗೊಂಡಿದ್ದಾರೆ ಎಂದರು. ಈ ಬಾರಿಯೂ ಅಚ್ಚರಿ ಮತ್ತು ಹೊಸಮುಖಗಳಿಗೆ ಟಿಕೆಟ್ ಸಿಗಬಹುದು. ಜೆಡಿಎಸ್ ಗೆ ಯಾವುದೆಲ್ಲ ಕ್ಷೇತ್ರ ಬಿಟ್ಟು ಕೊಡಬೇಕು ಅಂತಾನೂ ಚರ್ಚೆ ಆಗಿದೆ. ಕುಮಾರಸ್ವಾಮಿ ಅವರು ಅರೋಗ್ಯ ಸರಿ ಇಲ್ಲ…
ಕಲಬುರ್ಗಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯತ್ನಾಳ್ ಗೆ ಮಾಡಲು ಕೆಲಸವಿಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಜನರನ್ನು ಹುಚ್ಚರನ್ನಾಗಿಸುತ್ತಿದೆ ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ತಿರುಗೇಟು ನೀಡಿರುವ ಸಚಿವರು, ಅನಂತ ಕುಮಾರ್ ಹೆಗಡೆಯೇ ದೊಡ್ಡ ಹುಚ್ಚ. ಆತ ಎಲೆಕ್ಷನ್ ಬರುವವರೆಗೂ ಮಲ್ಕೊಂಡಿರ್ತಾನೆ. ಎಲೆಕ್ಷನ್ ಬಂದ ಬಳಿಕ ಎದ್ದು ಬರ್ತಾನೆ. ಈ ಬಾರಿ ಆತನನ್ನು ರಾಜಕೀಯವಾಗಿ ಪರ್ಮನೆಂಟ್ ಆಗಿ ಮಲಗಿಸುತ್ತೇವೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಸಂಭವಿಸಿದೆ. ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರಾದ ವಿನೋದ್, ಸಚಿನ್, ಶ್ರೀನಿವಾಸ್ ಎಂಬ ಯುವಕರು ಮೃತಪಟ್ಟಿದ್ದಾರೆ. ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296