Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ರೈತರು ಇಂದು ದೆಹಲಿಗೆ ಮರಳಿದ್ದಾರೆ. ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿರುವ ರೈತರು ಇಂದು ಬಸ್ ಮತ್ತು ರೈಲುಗಳಲ್ಲಿ ದೆಹಲಿ ತಲುಪಲಿದ್ದಾರೆ. ಮೆರವಣಿಗೆ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದಲ್ಲದೇ ರೈಲು ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುವುದು. ಕಳೆದ ಕೆಲವು ದಿನಗಳ ಹಿಂದೆ ದೆಹಲಿ-ಹರಿಯಾಣ ಹೆದ್ದಾರಿ ಗಡಿಯನ್ನು ಸಾರ್ವಜನಿಕ ಸಂಚಾರಕ್ಕೆ ತೆರೆಯಲಾಗಿತ್ತು. ಆದರೆ ರೈತರು ಆಗಮಿಸುತ್ತಾರೆ ಎಂಬ ಎಚ್ಚರಿಕೆ ಇದ್ದ ಕಾರಣ ಮಧ್ಯರಾತ್ರಿಯಿಂದಲೇ ಮತ್ತೆ ಭದ್ರತೆ ಬಿಗಿಗೊಳಿಸಲಾಗಿದೆ. ನಗರದ ವಿವಿಧೆಡೆ ತಪಾಸಣೆ ನಡೆಯಲಿದೆ. ಇದಕ್ಕೂ ಮುನ್ನ ಹರ್ಯಾಣ-ಪಂಜಾಬ್ ಗಡಿಯಲ್ಲಿ ಟ್ರ್ಯಾಕ್ಟರ್ ಗಳಲ್ಲಿ ಬಂದ ರೈತರನ್ನು ಭದ್ರತಾ ಪಡೆಗಳು ತಡೆದಿದ್ದರು. ರೈತರ ಮುಷ್ಕರದ ವೇಳೆ ಮತ್ತೊಬ್ಬ ರೈತ ಸಾವನ್ನಪ್ಪಿದ್ದ. ಖಾನೌರಿ ಗಡಿಯಲ್ಲಿ ಹೋರಾಡಿದ ಪಟಿಯಾಲ ಮೂಲದ ಕರ್ನೈಲ್ ಸಿಂಗ್ ಮೃತಪಟ್ಟರು. ಅಶ್ರುವಾಯು ಬಳಕೆಯಿಂದ ಶ್ವಾಸಕೋಶದ ಸೋಂಕಿನಿಂದ ಕಳೆದ ತಿಂಗಳು ಅವರು ನಿಧನರಾದರು. ಮುಷ್ಕರದ ವೇಳೆ ಸಾವನ್ನಪ್ಪಿದ ಆರನೇ ರೈತ ಕರ್ನೈಲ್ ಸಿಂಗ್. ಹರ್ಯಾಣ ಪೊಲೀಸರ ದೌರ್ಜನ್ಯಕ್ಕೆ ಬಲಿಯಾದ ಸುಭ್ ಕರಣ್ ಸಿಂಗ್…
ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್ ಆಗಿದೆ. ಫೋಟೋದಲ್ಲಿ ರೌಡಿಶೀಟರ್ ಇಸ್ತಿಯಾಕ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ಹೂಗುಚ್ಛ ನೀಡಿ ಶುಭ ಕೋರುತ್ತಿದ್ದಾರೆ. ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಗಲಿಗರು ವಿಜಯೋತ್ಸವದ ವೇಳೆ, ವಿಧಾನಸೌಧದ ಒಳಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸಾರಂಗ ಬೇಟೆ ಮಾಡಿ, ಮಾಂಸ ಸಾಗಾಟ ಮಾಡಲು ಯತ್ನಿಸಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮನದ ಕೋಣನಕೆರೆ ಬಳಿ ಬಂಧನವಾಗಿದೆ. ಸರಕು ಸಾಗಾಣಿಕೆ ವಾಹನದಲ್ಲಿ ಜಿಂಕೆ ಮಾಂಸ ಸಾಗಾಟ ಮಾಡಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ಬಸಪ್ಪನ ದೊಡ್ಡಿ ಗ್ರಾಮದ ಇರ್ಫಾನ್, ವಹೀದ್, ಅಂಬಿಕಾಪುರದ ಕುಮಾರಸ್ವಾಮಿ, ಅಪ್ಪು, ಕಾಂಚಳ್ಳಿ ಗ್ರಾಮದ ಯಶ್ವಂತ್, ಕುರುಬರದೊಡ್ಡಿ ಗ್ರಾಮದ ಸೈಯದ್ ಆರೀಪ್ ಬಂಧಿತ ಆರೋಪಿಗಳು. ಎಸಿಎಫ್ ಚಂದ್ರಶೇಖರ್ ಪಾಟೀಲ್ ,ರಾಮಾಪುರ ಆ ಎಫ್ ಓ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತರಿಂದ ಸಾರಂಗ ಮಾಂಸ, ವಾಹನ ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಡವರಿಗಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಹೃದಯ ಮಿಡಿದಿದೆ. ಹೌದು,ಬಹುಸಂಖ್ಯಾ ಅಭಿಮಾನಿಗಳನ್ನು ಹೊಂದಿರುವ ನಟ ಇದೀಗ ೧೨ ಎಕರೆ ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಲು ತಲೈವಾ ಮುಂದಾಗಿದ್ದಾರೆ. ಸದ್ಯ ‘ಲಾಲ್ ಸಲಾಂ’ ಸಿನಿಮಾದ ಬಳಿಕ ‘ವೆಟ್ಟೈಯನ್’ ಸಿನಿಮಾದಲ್ಲಿ ರಜನಿ ಬ್ಯುಸಿಯಾಗಿರುವ ನಟ ಇದೇ ವರ್ಷ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆಯಾದರೂ ನಟ ರಜನಿಕಾಂತ್ ಬಡವರ ಚಿಕಿತ್ಸೆಗಾಗಿ ಚೆನ್ನೈನಲ್ಲಿ ಆಸ್ಪತ್ರೆ ನಿರ್ಮಿಸುತ್ತಿದ್ದಾರೆ. 12 ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಲು ತಲೈವಾ ಮುಂದಾಗಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ಚೆನ್ನೈನ ತಿರುಪ್ಪೋರೂರಿನ ರಿಜಿಸ್ಟಾರ್ ಕಚೇರಿ ಭೇಟಿ ಕೊಟ್ಟಿದ್ದರು. ಅಲ್ಲಿ ಹೊಸದಾಗಿ ನಿರ್ಮಿಸಿರುವ ಜಮೀನಿನ ದಾಖಲೆ ಪತ್ರ ಪರಿಶೀಲನೆ ನಡೆಸಿದ್ದರು. ಇನ್ನು ತಿರುಪ್ಪೋರೂರಿಗೆ ತಲೈವಾ ಬರುತ್ತಾರೆಂದು ಗೊತ್ತಾಗುತ್ತಿದ್ದಂತೆ ಅಭಿಮಾನಿಗಳು ಸೇರಿದ್ದರು. ಮಾಹಿತಿಯಂತೆಯೇ, ರಜನಿಕಾಂತ್ ಚೆನ್ನೈನಿಂದ ಒಎಂಆರ್ ರಸ್ತೆಯ ಮೂಲಕ ತಲಂಬೂರಿಗೆ ಹೋಗುವ ಮಾರ್ಗದಲ್ಲಿ ಆಸ್ಪತ್ರೆ ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಾರು 12 ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರ ಕೋರ ಹೋಬಳಿಯ ಬೆಳಧರ ಗ್ರಾಮದ ಸರ್ಕಾರಿ ಶಾಲೆಯ ಆಟದ ಮೈದಾನದ ಉಳಿವಿಗಾಗಿ ತುಮಕೂರು ನಗರದ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಮೌನ ಮೆರವಣಿಗೆ ಇಂದು ಕಾಳಜಿ ಫೌಂಡೇಶನ್ ತುಮಕೂರು ವತಿಯಿಂದ ನಡೆಯಿತು. ಈ ಹೋರಾಟಕ್ಕೆ ಸಾಮಾಜಿಕ ಕಳಕಳಿಯ ಅನೇಕ ಸಂಘ ಸಂಸ್ಥೆಗಳು, ವಿವಿಧ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಳಕಳಿಯುಳ್ಳ ಸಾರ್ವಜನಿಕರು ಕೈ ಜೋಡಿಸಿ, ಶಾಲೆಯ ಆಟದ ಮೈದಾನದ ಉಳಿವಿಗಾಗಿ ಧ್ವನಿಯೆತ್ತಿದರು. ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವ್ಯಾಪ್ತಿಗೆ ಹೊಂದಿಕೊಂಡಂತೆ ಎರಡು ಎಕರೆ ಭೂಮಿ ಗ್ರಾಮಠಾಣಾಗೆ ಸೇರಿದ್ದು, ರಾಜ್ಯ ಸರ್ಕಾರ ಶಾಲಾ ಮಕ್ಕಳ ಆಟದ ಮೈದಾನದ ಉದ್ದೇಶಕ್ಕಾಗಿ 3 ಎಕರೆ ಮೂರು ಗಂಟೆ ಜಮೀನು ಮಂಜೂರು ಮಾಡಿದ್ದು, ಸುಮಾರು ನಾಲ್ಕೈದು ಬಾರಿ ಕಂದಾಯ ಇಲಾಖೆಯಿಂದ ಸರ್ವೇ ಮಾಡಿ ಹದ್ದುಬಸ್ತು ಮಾಡಲಾಗಿದೆ ಹಾಗೂ ಇ ಸ್ವತ್ತು ಸಹ ಮಾಡಲಾಗಿದೆ. ಶಾಲೆ…
ನವದೆಹಲಿ: ದೇಶದಲ್ಲಿನ ನಿರುದ್ಯೋಗದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ದೇಶವು ‘ಜೈ ಶ್ರೀ ರಾಮ್ ಎಂದು ಜಪಿಸಬೇಕು ಮತ್ತು ಹಸಿವಿನಿಂದ ಸಾಯಬೇಕು’ ಎಂದು ಅವರು ಬಯಸುತ್ತಾರೆ ಎಂದು ಹೇಳಿದರು. ಮಧ್ಯಪ್ರದೇಶದ ಸಾರಂಗ್ಪುರದಿಂದ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪುನರಾರಂಭಗೊಂಡ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸಂಸದರನ್ನು ಬಿಜೆಪಿ ಕಾರ್ಯಕರ್ತರು “ಮೋದಿ, ಮೋದಿ” ಮತ್ತು “ಜೈ ಶ್ರೀ ರಾಮ್” ಘೋಷಣೆಗಳೊಂದಿಗೆ ಸ್ವಾಗತಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಎತ್ತಿದ ಘೋಷಣೆಗಳನ್ನು ಸ್ವಾಗತಿಸಿದ ರಾಹುಲ್ ಗಾಂಧಿ, ನಿರುದ್ಯೋಗದ ವಿರುದ್ಧ ಪ್ರಧಾನಿಯನ್ನು ಟೀಕಿಸಿದರು, ಯುವ ನಿರುದ್ಯೋಗಿ ವ್ಯಕ್ತಿಗಳು “ದಿನವಿಡೀ ರೀಲ್ಗಳನ್ನು (ಸಾಮಾಜಿಕ ಮಾಧ್ಯಮಗಳಲ್ಲಿ) ನೋಡುತ್ತಲೇ ಇರುತ್ತಾರೆ” ಎಂದು ಹೇಳಿದರು. “ನೀವು ದಿನವಿಡೀ ನಿಮ್ಮ ಫೋನ್ ಗಳನ್ನು ನೋಡಬೇಕು, ಜೈ ಶ್ರೀ ರಾಮ್ ಎಂದು ಜಪಿಸಬೇಕು ಮತ್ತು ನಂತರ ಹಸಿವಿನಿಂದ ಸಾಯಬೇಕು ಎಂದು ಪ್ರಧಾನಿ ಬಯಸುತ್ತಾರೆ” ಎಂದು ಅವರು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಗ್ನಿವೀರ್…
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. 3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ರೂ. ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು. ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ…
ಬೆಂಗಳೂರು ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರು ನೀರಿನ ಅಭಾವ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದೇನೆ. ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ 16,791 ಬೋರ್ ವೆಲ್‌ಗಳಿವೆ. ಈ ಪೈಕಿ ಬೆಂಗಳೂರಿನಲ್ಲಿ 6,997 ಬೋರ್ ವೆಲ್ ಡ್ರೈ ಆಗಿವೆ. ಈ ಪೈಕಿ ಒಟ್ಟು 7784 ಪ್ರಗತಿಯಲ್ಲಿದೆ ಎಂದರು. ಬಿಬಿಎಂಪಿಯಲ್ಲಿ ಕಾಲ್ ಸೆಂಟರ್ ಮಾಡುತ್ತೇವೆ. ಕಾಲ್ ಸೆಂಟರ್ ಮಾಡಿ ಸಮಸ್ಯೆ ಬಗೆಹರಿಸುತ್ತೇವೆ ಬಿಬಿಎಂಪಿಯಿಂದ 148 ಕೋಟಿ ರೂ. ಹಣ ಜಲಮಂಡಳಿಯಿಂದ 128 ಕೋಟಿ ರೂ. ಹಣ ಒಟ್ಟು 556 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. 3500 ಟ್ಯಾಂಕರ್ ಗಳಿವೆ. ಅದರಲ್ಲಿ 200 ಮಾತ್ರ ನೋಂದಣಿಯಾಗಿವೆ. ಸದ್ಯ 219 ವಾಟರ್ ಟ್ಯಾಂಕರ್ ಸದ್ಯಕ್ಕೆ ನಮ್ಮಲ್ಲಿ ರಿಜಿಸ್ಟರ್ ಆಗಿದೆ. ನೀರಿನ ಪೂರೈಕೆಗೆ ಬಿಬಿಎಂಪಿಯಲ್ಲಿ ಕಟ್ರೋಲ್ ರೂಂಗೆ ಕರೆ ಮಾಡಿದರೆ ನೀರು ಬರುತ್ತೆ. 556 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ನೀರು ಪೂರೈಕೆ ಮಾಡಲಾಗುವುದು. ಬೋರ್ ವೆಲ್…
ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ಇವರ ನಡೆ ಆತಂತಕ್ಕೆ ಕಾರಣವಾಗಿದೆ ಎಂದು ಹೇಳಿದರು. ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್ ಐಎ ಎಫ್ ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಮಾಡುತ್ತಿರುವ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,…
ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಭವಾನಿ(26) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಭವಾನಿ ಸಂಜೆ ವೇಳೆಗೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ತಾಯಿ & ಮಗು ಇಬ್ಬರು ಆರೋಗ್ಯವಾಗಿದ್ದರು. ಆದರೆ ಮಧ್ಯರಾತ್ರಿ ವೇಳೆಗೆ ತೀವ್ರ ನೋವು ಕಾಣಿಸಿಕೊಂಡ ಹಿನ್ನಲೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದಾದ ನಂತರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಭವಾನಿ ಕೊನೆಯುಸಿರೆಳೆದಿದ್ದಾರೆ. ತೀವ್ರ ನೋವಿನಿಂದ ಬಳಲುತ್ತಿದ್ದ ಬಾಣಂತಿಗೆ ವೈದ್ಯರು ಇಂಜೆಕ್ಷನ್ ನೀಡಿದ ಸ್ವಲ್ಪ ಹೊತ್ತಿನ ನಂತರ ಬಾಣಂತಿ ಭವಾನಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕುಟುಂಬಸ್ಥರು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…