Subscribe to Updates
Get the latest creative news from FooBar about art, design and business.
- ಬಿಡದಿ ಟೌನ್ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
- ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
- ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
- ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
Author: admin
ಚಿಕ್ಕಮಗಳೂರು: ಮಂಗನ ಕಾಯಿಲೆಗೆ 71 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಎನ್.ಆರ್. ಪುರ ತಾಲೂಕಿನ ಮೇಲ್ಪಾಲ ಗ್ರಾಮದ ಬಸವ ಪೂಜಾರಿ ಮೃತ ದುರ್ದೈವಿಯಾಗಿದ್ದಾರೆ. ಕಳೆದ 3 ದಿನದ ಹಿಂದೆ ವೃದ್ಧನಲ್ಲಿ KFD ಸೋಂಕು ಪತ್ತೆಯಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ KFDಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಹೆಚ್ಚಳವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಲಬುರಗಿ: ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಅಭಿಷೇಕ್(18) ಮೃತಪಟ್ಟ ಯುವಕನಾಗಿದ್ದಾನೆ. ಮಾರ್ಚ್ 3ರಂದು ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಮಧ್ಯೆ ಜಗಳವಾಗಿ ಅಭಿಷೇಕ್ ಎಂಬ ಯುವಕನನ್ನು ಥಳಿಸಲಾಗಿತ್ತು. ಈ ಗಲಾಟೆಯಲ್ಲಿ ಗಾಯಗೊಂಡು ಅಭಿಷೇಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಈ ಸಿನಿಮಾ ಅಂದಿನಕಾಲದಲ್ಲಿ ದೊಡ್ಡ ಮಟ್ಟದ ಗೆಲುವು ಪಡೆದಿತ್ತು. ಈ ಚಿತ್ರದಿಂದ ರವಿಚಂದ್ರನ್ ಖ್ಯಾತಿ ಹೆಚ್ಚಿತು. ಈಗ ರವಿಚಂದ್ರನ್ ‘ಪ್ರೇಮಲೋಕ 2’ ಮಾಡಲು ಹೊರಟಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕೊಪ್ಪಳದ ಕನಕಗಿರಿ ಉತ್ಸವದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪ್ರೇಮಲೋಕ’ ಸಿನಿಮಾದಲ್ಲಿ 11 ಹಾಡುಗಳು ಇದ್ದವು. ಈ ವಿಚಾರ ಕೇಳಿ ಯಾರೊಬ್ಬರೂ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿರಲಿಲ್ಲ. ಹೀಗಾಗಿ, ಅವರೇ ನಿರ್ಮಾಣ ಮಾಡಿದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಸಿನಿಮಾ ಮಾಡಲು ಬೆಂಬಲ ಕೊಟ್ಟರು. ಈ ಚಿತ್ರ ಯಾರೂ ಊಹಿಸದ ರೀತಿಯಲ್ಲಿ ಗೆಲುವು ಕಂಡಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ರವಿಚಂದ್ರನ್ ಮಾತನಾಡಿದ್ದಾರೆ. ಮೇ 30ಕ್ಕೆ ಪ್ರೇಮಲೋಕ 2 ಸಿನಿಮಾ ಶುರುವಾಗುತ್ತದೆ. ದೊಡ್ಡ ಮಗ ಮನೋರಂಜನ್…
ಲೋಕಸಭೆ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ಬಿಜೆಪಿ ‘ಪಕ್ಷ ನಿಧಿ’ಯಾಗಿ ಎಲ್ಲಾ ನಾಯಕರು ದೇಣಿಗೆ ನೀಡುತ್ತಿದ್ದಾರೆ. ಜೊತೆಗೆ ಜನತೆಗೂ ದೇಣಿಗೆ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇದರ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2,000 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ತಾವು ದೇಣಿಗೆ ನೀಡಿರುವ ರಸೀದಿಯನ್ನು ಫೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಎಲ್ಲರೂ ಕೊಡುಗೆ ನೀಡುವಂತೆ ಒತ್ತಾಯಿಸಿದ್ದಾರೆ. ‘NaMo ಅಪ್ಲಿಕೇಶನ್’ ಮೂಲಕ ‘ರಾಷ್ಟ್ರ ನಿರ್ಮಾಣಕ್ಕಾಗಿ ದೇಣಿಗೆ’ ಅಭಿಯಾನದ ಭಾಗವಾಗುವಂತೆ ನಾಗರಿಕರನ್ನು ಒತ್ತಾಯಿಸಿದ್ದಾರೆ. ನನಗೆ ಬಿಜೆಪಿಗೆ ಕೊಡುಗೆ ನೀಡಲು ಮತ್ತು ವಿಕ್ಷಿತ್ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಲು ನನಗೆ ಸಂತೋಷವಾಗಿದೆ. NaMoApp ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ದೇಣಿಗೆ ಅಭಿಯಾನದ ಭಾಗವಾಗಲು ನಾನು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇನೆ” ಎಂದು ಪಕ್ಷಕ್ಕೆ ನೀಡಿದ ದೇಣಿಗೆಯ ರಸೀದಿಯೊಂದಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ದೇಣಿಗೆ ಅಭಿಯಾನವನ್ನು ಮಾರ್ಚ್ 1 ರಂದು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಾರಂಭಿಸಿದ್ದರು. ಜೆಪಿ ನಡ್ಡಾ ಅವರು ಪಕ್ಷಕ್ಕೆ 1,000…
ಸಾವರ್ಕರ್ ಬೋರ್ಡ್ ಸಮೇತ ಧ್ವಜ ಕಟ್ಟೆ ತೆರವು ಮಾಡಲಾಗಿತ್ತು. ಇದೀಗ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅದೇ ಸ್ಥಳದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ. ಹನುಮ ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನುಮ ಧ್ವಜವನ್ನು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ಆ ಮೂಲಕ ಸಂಸದರು ಮತ್ತೆ ಧ್ವಜ ದಂಗಲ್ ಕಿಡಿ ಹೊತ್ತಿಸಿದ್ದಾರೆ. ಅನಧಿಕೃತವಾಗಿ ಧ್ವಜ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಜೊತೆಗೆ ತೆಂಗಿನಗುಂಡಿ ಗ್ರಾಮದಲ್ಲಿ ಕಟ್ಟಲಾಗಿದ್ದ ಧ್ವಜ ಕಟ್ಟೆ ಹಾಗೂ ಸಾವರ್ಕರ್ ಬೋರ್ಡ್ ಅನ್ನು ತೆರವು ಮಾಡಲಾಗಿತ್ತು. ಇದಕ್ಕೆ ಸ್ಥಳಿಯ ಹಿಂದೂ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. (ಮಾರ್ಚ್ 4) ಕಾರ್ಯಕರ್ತರ ಸಭೆಗೆಂದು ಅನಂತ್ ಕುಮಾರ್ ಹೆಗಡೆ ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾನಿದ್ದೇನೆ ನಡೀರಿ ಎಂದು ಹೇಳಿ ಅನಂತ್ ಕುಮಾರ್ ಹೆಗಡೆ ತೆರವು ಮಾಡಲಾಗಿದ್ದ ಸ್ಥಳದಲ್ಲೇ ಹನುಮ ಧ್ವಜ ಹಾರಿಸಿದ್ದಾರೆ…
ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿ, ರಸ್ತೆಯಲ್ಲಿ ಎಸೆದಿರುವ ಅಮಾನವೀಯ ಘಟನೆ ಬಿಹಾರದ ಬಕ್ಸಾರ್ ನಲ್ಲಿ ನಡೆದಿದೆ. ಘಟನೆಯ ವಿವರ: ಯುವಕನ ಸಹೋದರ ಪ್ರಮೋದ್ ಕುಮಾರ್ ಚೌಧರಿಯ ಪ್ರಕಾರ ಸಂತ್ರಸ್ತ ಅನಿಲ್ ತನ್ನ ಪ್ರೇಯಸಿ ಮನೆಗೆ ಕರೆದಿದ್ದಾಳೆ ಎಂದು ಆಕೆಯ ಮನೆಗೆ ಹೋಗಿದ್ದಾನೆ. ಇದೇ ಸಮಯದಲ್ಲಿ ಯುವತಿ ಆತನ ಮೇಲೆ ಹಲ್ಲೆ ನಡೆಸಿ, ಆತನ ಖಾಸಗಿ ಅಂಗಗಳನ್ನು ಕತ್ತರಿಸಿ ತನ್ನ ಮನೆಯ ಹೊರಗಿನ ರಸ್ತೆಯಲ್ಲಿ ಎಸೆದಿದ್ದಾಳೆ.ನಂತರ ಘಟನಾಸ್ಥಳದಿಂದ ಯುವತಿ ತಪ್ಪಿಸಿಕೊಂಡಿದ್ದಾಳೆ . ಯುವತಿಯ ದಾಳಿಯಿಂದ ತೀವ್ರ ಗಾಯಗೊಂಡ ಆತನನ್ನು ಸ್ಥಳೀಯರು ಬಕ್ಸಾರ್ನ ವಿಕೆ ಗ್ಲೋಬಲ್ ಆಸ್ಪತ್ರೆಯಗೆ ದಾಖಲಿಸಿದ್ದಾರೆ ನಂತರ ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸ್ಥಿತಿ ಗಂಭೀರವಾಗಿದ್ದುಆತನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಡುಮ್ರಾನ್ ಪೊಲೀಸ್ ಅಧಿಕಾರಿ ಅನಿಶಾ ರಾಣಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಉಪೇಂದ್ರ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಕಳೆದ ದಿನ ಹೊರಬಂದ ನಂತರ ಹಿಂಪಡೆಯಲಾಗಿದೆ. ನಿರಪರಾಧಿ ಎಂದು ಸಾಬೀತಾಗುವವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಸಿಂಗ್ ರಾವತ್ ಉತ್ತರ ಪ್ರದೇಶದ ಬಾರಾಬಂಕಿಯ ಸಂಸದ. ಈ ಬಾರಿಯೂ ಪಕ್ಷ ಅದೇ ಸ್ಥಾನದಲ್ಲಿ ಅವರಿಗೆ ಟಿಕೆಟ್ ನೀಡಿದೆ. ಅಭ್ಯರ್ಥಿ ಘೋಷಣೆ ಬಳಿಕ ಉಪೇಂದ್ರ ಸಿಂಗ್ ಅವರ ಅಶ್ಲೀಲ ವಿಡಿಯೋ ಹೊರಬಿದ್ದಿದೆ. ವಿದೇಶಿ ಮಹಿಳೆಯೊಂದಿಗೆ ರಾವತ್ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಡೀಪ್ ಫೇಕ್ ವೀಡಿಯೊವನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಸಂಸದರು ಹೇಳಿಕೊಂಡಿದ್ದಾರೆ. ಇದು ಅವರ ಮಾನಹಾನಿ ಮಾಡುವ ವಿರೋಧಿಗಳ ಷಡ್ಯಂತ್ರ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ವಿವರವಾದ ತನಿಖೆ ನಡೆಯುತ್ತಿದೆ. ನಿರಪರಾಧಿ ಎಂದು ಸಾಬೀತಾಗುವವರೆಗೆ ಸಾರ್ವಜನಿಕ ಜೀವನದಲ್ಲಿ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡುವ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮನು ಕುಮಾರ್(26) ಮೃತ ದುರ್ದೈವಿಯಾಗಿದ್ದಾರೆ. ಮೈಸೂರಿನಲ್ಲಿ ಬಿಹಾರ ಮೂಲದ ಮನು ಕುಮಾರ್ ಮೊಬೈಲ್ ನಲ್ಲಿ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಾ ರೈಲ್ವೇ ಟ್ರ್ಯಾಕ್ ಮೇಲೆ ನಡೆದುಕೊಂಡು ರೈಲ್ವೇ ಹಳಿ ಕ್ರಾಸಿಂಗ್ ಮಾಡಲು ಹೋಗಿದ್ದಾನೆ, ಈ ವೇಳೆ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಪೊಲೀಸರು ಹಾಗೂ ರೈಲ್ವೇ ಅಧಿಕಾರಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೃದಯದ ಆರೋಗ್ಯಕ್ಕೆ ಸೂಕ್ತ ಈ ಎಣ್ಣೆಗಳು: ಮಾರುಕಟ್ಟೆಯಲ್ಲಿ ಹಲವು ರೀತಿಯ ಎಣ್ಣೆಗಳು ಲಭ್ಯವಿದ್ದು ಉತ್ತಮ ಆರೋಗ್ಯಕ್ಕಾಗಿ ಯಾವ ಎಣ್ಣೆಯನ್ನು ಬಳಸಬೇಕು ಎಂದು ಹಲವಾರು ಜನರು ಗೊಂದಲದಲ್ಲಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ ಆಲಿವ್ ಎಣ್ಣೆ, ಅವಕ್ಯಾಡೋ ಎಣ್ಣೆ, ಕಡಲೆಕಾಯಿ ಎಣ್ಣೆ(ಶೇಂಗಾ ಎಣ್ಣೆ), ಎಳ್ಳಿನ ಎಣ್ಣೆ, ದ್ರಾಕ್ಷಿ ಬೀಜದ ಎಣ್ಣೆ ಹಾಗೂ ಸೋಯಾಬಿನ್ ಎಣ್ಣೆಯನ್ನು ಬಳಸಬಹುದು ಎಂದು ಹೇಳಲಾಗಿದೆ. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಮತ್ತು ವೈದ್ಯರು ಸೂಚಿಸುವ ಔಷಧಿಗಳ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ತುಳಸಿಯಿಂದ ಇಷ್ಟು ಕೆಲಸ ಮಾಡಿ ಸಾಕು.. ಮತ್ತೆ ನೀವೇ ಬ್ಯೂಟಿಫುಲ್.. ತುಳಸಿ ಎಲೆಗಳನ್ನು ರುಬ್ಬಿಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ, ನಿಂಬೆ ರಸ ಬೆರಸಿ ಮುಖಕ್ಕೆ ತೆಳುವಾಗಿ ಪ್ಯಾಕ್ ಹಾಕಿಕೊಳ್ಳಿ. ಒಣಗಿದ ಮೇಲೆ ಮಸಾಜ್ ಮಾಡುತ್ತಾ ಮುಖ ತೊಳೆಯಿರಿ. ಇದರಿಂದ ಮೊಡವೆ ಮತ್ತು ಮೊಡವೆ ಕಲೆಗಳು ನಿವಾರಣೆಯಾಗುತ್ತವೆ. ತುಳಸಿ ಪೇಸ್ಟ್ ಜೊತೆ ಸ್ವಲ್ಪ ಕೇಸರಿಯನ್ನು ಬರೆಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳಬಹುದು. ಇದರಲ್ಲಿ ಬ್ಯಾಕ್ಟಿರಿಯಾ ಗುಣಗಳಿದ್ದು ಮುಖದ ಚರ್ಮವನ್ನು ಸೋಂಕಿನಿಂದ ರಕ್ಷಣೆ…
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ. ರೋಸ್ ಅವೆನ್ಯೂ ನ್ಯಾಯಾಲಯದ ಜಮೀನಿನಲ್ಲಿ ಪಕ್ಷದ ಪ್ರಧಾನ ಕಚೇರಿಯನ್ನು ನಿರ್ಮಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಜೂನ್ 15ರೊಳಗೆ ಕಚೇರಿ ಖಾಲಿ ಮಾಡುವಂತೆಯೂ ಸೂಚಿಸಲಾಗಿದೆ. ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಹೈಕೋರ್ಟ್‌ಗೆ ಮಂಜೂರು ಮಾಡಿದ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಕಚೇರಿಗಳಿಗೆ ಸೂಕ್ತ ಜಾಗ ಮಂಜೂರು ಮಾಡಲು ಭೂಮಿ ಮತ್ತು ಅಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದಿಂದ ಈ ಆದೇಶ ಹೊರಬಿದ್ದಿದೆ. 2015 ರ ನಂತರ ಆಮ್ ಆದ್ಮಿ ಪಕ್ಷವು ಕಾನೂನುಬದ್ಧವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿಲ್ಲ ಎಂದು ಪೀಠ ಹೇಳಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೂನ್ 15ರವರೆಗೆ ಕಚೇರಿ ತೆರವಿಗೆ ಕಾಲಾವಕಾಶ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…