Author: admin

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್‌ ಎಸ್ ತಾ.ಸಂಚಾಲಕ ಡಿ.ಎಲ್.ಶಿವರಾಮ್ ಒತ್ತಾಯಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಆಯೋಗವನ್ನು ರಚಿಸಿ ವರದಿಯನ್ನು ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ವಿಳಂಬ ಮಾಡದೆ, ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು. ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಬಗ್ಗೆ ಈಗಾಗಲೇ ಅನೇಕ ಕೂಗುಗಳು ಕೇಳಿ ಬರುತ್ತಿವೆ. ನಾಗಮೋಹನ್‌ ದಾಸ್‌ ರವರ ವರದಿಯ ಆಧಾರದ ಮೇಲೆ ಒಳಮೀಸಲಾತಿಯನ್ನು ಅಂಗೀಕರಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರಾದ ಡಾ.ಜಿ.ಪರಮೇಶ್ವರ್, ಮಹದೇವಪ್ಪನವರು ಒಳಮೀಸಲಾತಿಯನ್ನು…

Read More

ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್, ಜೂಜಾಟ ಸೇರಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿಪಾಲನೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್  ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗೌರಿಗಣೇಶ ಹಾಗೂ ಬಕ್ರೀದ್ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಉದ್ದೇಶಿಸಿ ಅವರು ಮಾತನಾಡಿದರು. 25 ಮತ್ತು 26 ರಂದು ನಡೆಯುವ ಗೌರಿ–ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಸೌಹಾರ್ದಯುತವಾಗಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಅನ್ಯೂನ್ಯತೆಯಿಂದ   ಹಬ್ಬ ಆಚರಿಸಬೇಕು,  ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಸ್ಥಳೀಯ ಆಡಳಿತದಲ್ಲಿ, ಅಗ್ನಿಶಾಮಕ ಠಾಣೆ, ವಿದ್ಯುತ್ ಇಲಾಖೆ ಹಾಗೂ ಧ್ವನಿವರ್ಧಕ ಅಳವಡಿಸಲು ತಹಶೀಲ್ದಾರ್ ಅನುಮತಿ ಪಡೆದು ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು. ಅನುಮತಿ ನೀಡಲಾಗುವ ಸಮಯದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು. ಗ್ರಾಮಗಳಲ್ಲಿ ಯಾವುದೇ ಸಂದರ್ಭದಲ್ಲಿ ಡಿಜೆ ಬಳಸಬಾರದು’…

Read More

ಸರಗೂರು: ಎಚ್.ಡಿ.ಕೋಟೆ ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಹಾಗೂ ಸೇರಿದಂತೆ ಅನೇಕ ಸದಸ್ಯರು ಒತ್ತಾಯ ಮಾಡಿದರು. ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಅನಿಲ್ ಕುಮಾರ್ ಅವರು ಎರಡು ಬಾರಿ ಶಾಸಕರಾಗಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಅವರ ತಂದೆ ದಿವಂಗತ ಎಸ್.ಚಿಕ್ಕಮಾದು ಅವರು ತಾಲೂಕಿನಲ್ಲಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ, ಹಾಗಾಗಿ ತಂದೆಯ ಹಾದಿಯಲ್ಲಿ ಮಗ ನಡೆಯುತ್ತಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ ಎಂದರು. ರಾಜ್ಯದ ಗಡಿ ಭಾಗದಲ್ಲಿ ಇರುವ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಗೊಂಡಿರುವ ಅನಿಲ್ ಚಿಕ್ಕಮಾದು ಅವರಿಗೆ ಒಂದೇ ಪಕ್ಷದಲ್ಲಿ ಬಾರಿ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸದಲ್ಲೇ ಇಲ್ಲ. ಅದನ್ನು ನಮ್ಮ ಶಾಸಕರು ಮಾಡಿ ತೋರಿಸಿದ್ದಾರೆ. ಸುಮಾರು ಸಚಿವ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ಕೈ…

Read More

ಬೀದರ್: ಜಿಲ್ಲೆಯ ಕೊಟ್ಟ ಮಾತಿನಂತೆ ಸಿಎಂ ಸಿದ್ದರಾಮಯ್ಯನವರು ಆ.16 ರಂದು ಒಳಮೀಸಲಾತಿ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ  ಯುವ ಮುಖಂಡ ಸುಧಾಕರ ಕೋಟೆ ಒತ್ತಾಯಿಸಿದ್ದಾರೆ. ಸುಮಾರು 30ರಿಂದ 35 ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ನಮ್ಮ ಹಿರಿಯರು ನಿರಂತರವಾಗಿ ಹೋರಾಟ ಮಾಡಿದರೂ, ಜಾರಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ, ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದೆ. ಸುಮಾರು 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಸುತ್ತಿದೆಯಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ, ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಳಮೀಸಲಾತಿ ಜಾರಿ ಮಾಡಬೇಕು, ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸತ್ತಿದೆ ಎಂದು ಸುಧಾಕರ ಕೋಟೆ  ಆಕ್ರೋಶ ವ್ಯಕ್ತಪಡಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು:  ಓದುವುದು ಜೀವನದ ಮುಖ್ಯ ಉದ್ದೇಶವಾಗಬೇಕು. ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ’ ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹದೇವಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ಗ್ರಂಥಾಲಯ ಪಿತಾಮಹ ಹಾಗೂ ಗ್ರಂಥಪಾಲಕರ ದಿನಾಚರಣೆಯನ್ನು  ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯದೊಂದಿಗೆ ಮಂಗಳವಾರದಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಗೂರು ಸಮೃದ್ಧಿಯಾದ ತಾಲೂಕು. ಈ ತಾಲೂಕಿನಿಂದ ಹಲವಾರು ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳಾಗಿದ್ದಾರೆ. ಕೆ.ಎ.ಎಸ್ ಹಾಗೂ ಐ.ಎ.ಎಸ್ ಓದುವ ಗುರಿಯನ್ನು ಹೊಂದುವ ಮೂಲಕ ಜೀವನದ ದಿಕ್ಕನ್ನು ನಾವು ಗುರುತಿಸಿಕೊಳ್ಳಬೇಕಾಗಿದೆ’ ಎಂದರು ವನಜಲಸಿರಿ ನಾಡು ಪ್ರಸಿದ್ಧ ದೇವಾಲಯಗಳು ಹಾಗೂ ಜಲಾಶಯಗಳು ಹಾಗೂ ಸಮೃದ್ಧಿ ಸಂಪನ್ಮೂಲಗಳನ್ನು ಹೊಂದಿದೆ. ಇಂಥ ತಾಲೂಕಿನ ಇರುವುದು ನಮ್ಮ ಅದೃಷ್ಟ. ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ವಿದ್ಯಾರ್ಥಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಉತ್ತಮ ವ್ಯವಸ್ಥೆ ಇದ್ದು, ಸದುಪಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿಯಿಂದ ಗ್ರಂಥಾಲಯಕ್ಕೆ…

Read More

ಪಾವಗಡ:  ಸಚಿವ ಕೆ .ಎನ್. ರಾಜಣ್ಣ ಸಚಿವರಾಗಿ ಮುಂದುವರೆಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಶಕ್ತಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವವರು, ಸಹಕಾರ ಕ್ಷೇತ್ರಕ್ಕೆ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕ ಉತ್ತಮ ಸೇವೆಯನ್ನು ಸಲ್ಲಿಸಿರುವ ಕೆ. ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಪಡೆದಿರುವ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರ ರಾಜಣ್ಣ ಅವರನ್ನು ಸಚಿವರಾಗಿ ಮುಂದುವರಿಸದಿದ್ದಲ್ಲಿ ರಾಜ್ಯದಾದ್ಯಂತ ವಾಲ್ಮೀಕಿ ಸಮಾಜ ಹಾಗೂ ಶೋಷಿತ ಸಮುದಾಯಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಇಂತಹ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗುವುದು ಎಂದು ತಿಳಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ನಾವು ನೀವೆಲ್ಲಾ 4–5 ನೇ ತರಗತಿ ಯಲ್ಲಿ ಇರುವಾಗಲೇ ನಮ್ಮ ವಿಜ್ಞಾನ ಶಿಕ್ಷಕರು ಬೆಳಕು ಒಂದು ಸೆಕೆಂಡಿಗೆ 3 ಲಕ್ಷ ಕಿಲೋಮೀಟರ್ ವೇಗದಲ್ಲಿ ಚಲಿಸುತ್ತದೆ ಎಂದು ಬೋಧಿಸಿರುವುದು ಸರಿಯಷ್ಟೆ. ಒಮ್ಮೆ ನೆನಪು ಮಾಡಿಕೊಳ್ಳಿ, ಹಾಗೆಯೇ ನಾವು ಬೆಳೆಯುತ್ತಾ ಕಾಲಾಂತರಗಳಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಕೆಲವು ವಿಜ್ಞಾನ ಲೇಖನಗಳ ಅಂಕಣಗಳನ್ನು ಓದಿರುತ್ತೀರಿ ಬೆಳಕಿನ ವೇಗದ ಬಗ್ಗೆ; ಅದು ಸೆಕೆಂಡಿಗೆ 3 ಲಕ್ಷ ಕಿಲೋಮೀಟರ್ ವೇಗದಲ್ಲಿ ಚಲಿಸುತ್ತದೆ ಎಂದು. ಇದನ್ನು ವಿಜ್ಞಾನ ಹೇಳಿದ್ದು, ವಿಜ್ಞಾನಿಗಳ ಸತತ ಸಂಶೋಧನೆಯಿಂದ ಸಾಬೀತಾಗಿರುವ ಈ ನಿಯಮವನ್ನು ನಾವು ಒಪ್ಪಲೇ ಬೇಕು. ಹೀಗಿರುವಾಗ ನನ್ನ ಕಲ್ಪನೆ ಮೂಲಕ ಬಂದಿದ್ದ ಒಂದು ವಿಷಯವನ್ನು ಈಗ ಒಂದು ಆಲೋಚನೆ ಮೂಲಕ ವಿಮರ್ಷೆ ಮಾಡೋಣ… ಅದು ಏನೆಂದರೆ ಉದಾಹರಣೆಗೆ ಒಂದು ಹಣತೆ ದೀಪ ಬೆಳಗಿಸೋಣ, ಒಂದು ಪುಟ್ಟ ಹಣತೆಯ ಮಂದಗತಿಯ ಬೆಳಕು ಅಂದರೆ ತೀಕ್ಷಣೆ ತೀರಾ ಕಡಿಮೆ ಇರುವ ಬೆಳಕು ಕೂಡ ಒಂದು ಸಕೆಂಡಿಗೆ 3 ಲಕ್ಷ ಕಿಲೋಮೀಟರ್ ಚಲಿಸಬಲ್ಲದೇ? ಹಾಗೆಯೇ ಒಂದು 1.5 ವೋಲ್ಟ್…

Read More

ತುಮಕೂರು: ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತುಮಕೂರಿನಾದ್ಯಂತ ಅವರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕುಣಿಗಲ್‌, ಮಧುಗಿರಿ, ಕೊರಟಗೆರೆ ಸೇರಿದಂತೆ ಹಲವು  ಪ್ರದೇಶಗಳಲ್ಲಿರುವ ರಾಜಣ್ಣ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಖಂಡಿಸಿದ್ದಾರೆ,  ರಾಜಣ್ಣ ಅಬಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು ತುಮಕೂರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರಿನ ಟೌನ್‌ ಹಾಲ್ ಮುಂಭಾಗ ಜಮಾಯಿಸಿದ್ದ ಸಾವಿರಾರು ಅಭಿಮಾನಿಗಳು, ಕೈಯಲ್ಲಿ ರಾಜಣ್ಣ ಫೋಟೋ ಇರುವ ಫ್ಲೆಕ್ಸ್ ಹಿಡಿದು ಘೋಷಣೆ ಕೂಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಮಂಗಳವಾರ ಮಧುಗಿರಿಯಲ್ಲಿ ದೊಡ್ಡ ಡ್ರಾಮವೇ ನಡೆದಿತ್ತು. ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ ತುಮಕೂರಿನಲ್ಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ತಾಲ್ಲೂಕಿನ ಮಾವತ್ತೂರು ಗ್ರಾಮ ಪಂಚಾಯತಿ ಕೊರಟಗೆರೆ ತಾಲೂಕಿನಲ್ಲಿಯೇ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳಲ್ಲಿ ಉತ್ತಮ ಪಂಚಾಯಿತಿ ಎಂದು ರಾಜ್ಯ ಮಟ್ಟದ ಪ್ರಶಸ್ತಿ ಬಂದಿದ್ದು ಕೆಲವರ ಸುಳ್ಳು ಹೇಳಿಕೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ ವ್ಯಕ್ತಪಡಿಸಿದರು. ಮಾವತ್ತೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಂಚಾಯಿತಿ ಅಧ್ಯಕ್ಷೆ ಮತ್ತು ಹುರುಳುಗೆರೆ ಕ್ಷೇತ್ರದ ಸದಸ್ಯೆಯಾಗಿದ್ದು ಹುರುಳುಗೆರೆ ಗ್ರಾಮದ ಶಾಲೆಗೆ ಕಾಂಪೌಂಡ್, ಶೌಚಾಲಯ, ಸಿಸಿ ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗಿದೆ, ಆದರೆ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಹೊಲದಲ್ಲಿ ಮನೆ ಕಟ್ಟಿಕೊಂಡಿರುವ 12 ಮನೆಗಳ ಜನರು ಓಡಾಡಲು ಖಾಸಗಿ ಜಮೀನಿನಲ್ಲಿ ರಸ್ತೆ ಹಾದು ಹೋಗುವುದರಿಂದ ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆ ಇದೆ, ಈಗ ಆ ಸಮಸ್ಯೆಯನ್ನು ಜಮೀನು ಮಾಲೀಕರು ಮತ್ತು ಜನರು ಬಗೆಹರಿಕೊಂಡಿದ್ದು ರಸ್ತೆ ಮಾಡಿಕೊಡಲು ಪಂಚಾಯಿತಿಯು ಬದ್ದವಾಗಿದೆ, ಅದರೆ ಕೆಲವರು ವಿನಾಕಾರಣ ಯಾವ ಅಭಿವೃದ್ದಿಯೂ ಆಗಿಲ್ಲ ಎನ್ನುವ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಸತ್ಯಕ್ಕೆ…

Read More

ಬೀದರ್: ನಗರದ ಜಾನಸನ್ ಘೋಡೆ ಅವರನ್ನು ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಜಂಟಿ ಸಂಯೋಜಕರಾಗಿ ನೇಮಕ ಮಾಡಲಾಗಿದೆ. ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸುಖ್ ಪಾಲ್ ಸಿಂಗ್ ಖೈರಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಾನಸನ್ ಘೋಡೆ ಎರಡು ದಶಕದಿಂದ ಕಾಂಗ್ರೆಸ್ ನಲ್ಲಿದ್ದಾರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಕಾಂಗ್ರೆಸ್ ಬೀದರ್ ನಗರ ಯುವ ಘಟಕದ ಉಪಾಧ್ಯಕ್ಷ ‌ ರಾಜ್ಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪಕ್ಷ ನಿಷ್ಠೆಗೆ ಈಗ ಕಿಸಾನ್ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಹುದ್ದೆ ಒಲಿದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More