Author: admin

ಕಡಿಮೆ ವೆಚ್ಚದ ತಿನಿಸು, ಜಾತ್ರೆಗಳಲ್ಲೂ ಮಕ್ಕಳ ಮನಸೆಳೆಯೊ ಬಾಂಬೆ ಮಿಠಾಯಿ ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಎನ್ನಲಾಗಿದೆ. ನೋಡಲು ಆಕರ್ಷಕವಾಗಿದ್ದು, ದರವೂ ಕಡಿಮೆ ಇರುವುದರಿಂದ ಎಲ್ಲರ ಕೈಗೆಟುಕುವ ರುಚಿಯಾದ ಸಿಹಿ ತಿಂಡಿಗಳಲ್ಲಿ ಬಾಂಬೆ ಮಿಠಾಯಿ ಪ್ರಮುಖವಾಗಿತ್ತು. ಆದರೆ ಇದೀಗ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ. ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಕ್ಕಳಿಗೆ…

Read More

ಮಡಿಕೇರಿಯಲ್ಲಿ ಕಳೆದ ಶುಕ್ರವಾರ ನಡೆದ ಎರಡು ಬೈಕ್‌ ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಸಾವನ್ನಪ್ಪಿದ್ದನು. ಆದರೆ, ಈ ಅಪಘಾತಕ್ಕೆ ತಾನೇ ಕಾರಣವೆಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ. ರಸ್ತೆ ಅಪಘಾತಕ್ಕೆ ನಾನೇ ಕಾರಣವೆಂದು ದ್ವಿಚಕ್ರ ವಾಹನ ಸವಾರ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಡಿಕೇರಿಯಲ್ಲಿ ನಡೆದಿದೆ. ಹೆರವನಾಡಿನ ತಮ್ಮಯ್ಯ (57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. ಮಡಿಕೇರಿಯಲ್ಲಿ ಶುಕ್ರವಾರ(9.ಫೆ) ಧನಲ್ ಸುಬ್ಬಯ್ಯ ಹಾಗೂ ತಮ್ಮಯ್ಯ ಎಂಬವರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಮಡಿಕೇರಿಯ ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ಮಾಸ್ಟರ್ ಡಿಗ್ರಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಬೆಳಗ್ಗಿನ ಜಾವ ಧನಲ್ ಸಾವನ್ನಪ್ಪಿದ್ದನು. ಮೃತ ಯುವಕ ಧನಲ್ ಸುಬ್ಬಯ್ಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ…

Read More

ಮೊನ್ನೆಯಷ್ಟೇ ಬಿಜೆಪಿ ಮುಖಂಡ ಪ್ರಮೋದ್‌ ಮಧ್ವರಾಜ್ ಅವರು ಬೆಲೆ ಬಾಳುವ ಹೊಸ ಕಾರು ಖರೀದಿಸಿ ಭಾರಿ ಸುದ್ದಿಯಾಗಿದ್ದರು. ಇದೀಗ ಸ್ಪೀಕರ್ ಯು.ಟಿ. ಖಾದರ್ ಅವರ ಪ್ರಯಾಣಕ್ಕಾಗಿ ಸರಕಾರದಿಂದ ಐಶಾರಾಮಿ ಕಾರು ಬಂದಿದೆ. ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಐಶಾರಾಮಿ ಫಾರ್ಚೂನರ್ ಕಾರು ಹಲವು ವಿಶೇಷತೆಗಳನ್ನು ಕೂಡಾ ಹೊಂದಿದೆ. ನೋಡೋ ಹೊತ್ತಿಗೆ ಆಕರ್ಷಕವಾಗಿ ಕಾಣುವ ಈ ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಈ ಫಾರ್ಚೂನರ್ ಗೆ ವಿಶೇಷ ವಿನ್ಯಾಸ ಮಾಡಿರುವುದರಿಂದ ಒಟ್ಟು 41 ಲಕ್ಷ ರೂ. ವೆಚ್ಚವಾಗಿದೆ ಎಂದು ತಿಳಿದುಬಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದೆ. ರಾಜ್ಯಪಾಲರಿಗೆ ಹೊರತಾಗಿ ಸ್ಪೀಕರ್ ಗೆ ಮಾತ್ರ ಇದನ್ನು ಹಾಕಲು ಅವಕಾಶ ಇದೆ. ಇತ್ತೀಚೆಗೆ ರಾಜ್ಯ…

Read More

ಮೀಸಲು ಅರಣ್ಯದ ಬಳಿ ಇರುವ ಸೋಮವಾರಪೇಟೆ ತಾಲೂಕಿನ ಕಾಜೂರಿನ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಕಾಡಾನೆ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಠಿಸಿದ ಘಟನೆ ಫೆ.12 ರಂದು ನಡೆದಿದೆ. ಕಾಡಾನೆಗಳು ಹಗಲಲ್ಲೇ ಸಂಚರಿಸುತ್ತಿರುವುದರಿಂದ ಅಲ್ಲಿರುವ ಜನರಿಗೆ ಸಂಚರಿಸಲು ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ ಎನ್ನಲಾಗಿದೆ. ಕೋವರ್ ಕೊಲ್ಲಿಯ ಟಾಟಾ ಕಾಫಿ ಸಂಸ್ಥೆಯ ತೋಟದಲ್ಲಿದ್ದ ಒಂಟಿ ಸಲಗವನ್ನು ಆರ್.ಆರ್.ಟಿ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಕಾಡಿಗಟ್ಟಲು ಮುಂದಾದ ಸಂದರ್ಭದಲ್ಲಿ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಕಾಜೂರು ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ನಡೆದಿತ್ತು. ಕಾಜೂರಿನ ಆರ್.ಆರ್.ಟಿ ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ತಂಗಿರುವ ವಸತಿಗೃಹದ ಬಳಿಗೆ ಬಂದು ಮತ್ತೆ ಕಾಡಾನೆ ಕಾಣಿಸಿಕೊಂಡಿದೆ. ಕಾಡಾನೆ ಹಗಲಿನಲ್ಲಿಯೇ ಓಡಾಡುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಕೂಲಿ ಕಾರ್ಮಿಕರು ಭಯದಿಂದಲೇ ಸಂಚರಿಸುತ್ತಿದ್ದಾರೆ.

Read More

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದು ನನ್ನ ಸೌಭಾಗ್ಯವೆಂದು ಭಾವಿಸುತ್ತಾ ತಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಹೊಸ ಕನಸು ಹೊತ್ತು ಜನರ ಮುಂದೆ ಹೋಗಿ ಅವರ ಬೆಂಬಲ, ಮನ್ನಣೆ ಮತ್ತು ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ನನ್ನ ಸರ್ಕಾರವು ನಡೆ-ನುಡಿಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಮಾತು ಸ್ಪಟಿಕದ ಸಲಾಕೆಯಂತಿರಬೇಕು. ಕೊಟ್ಟ ಮಾತನ್ನು ಪಾಲಿಸಬೇಕೆನ್ನುವುದು ನಮ್ಮ ವಚನಕಾರರ ನಿಲುವು. ಹಾಗಾದಾಗಲೇ ಮಾತಿಗೆ ಬೆಲೆ. ಹೇಳುವ ಮಾತಿಗೆ ಬೆಲೆ ನೀಡದೆ, ಭರವಸೆಗಳನ್ನೇ ಅವಹೇಳನ ಮಾಡುವ ರಾಜಕೀಯ ವಾತಾವರಣವೆ ಎಲ್ಲೆಡೆ ತುಂಬಿರುವಾಗ ನನ್ನ ಸರ್ಕಾರವು ಹೊಸ ಸಂಸ್ಕೃತಿಗೆ ನಾಂದಿ ಹಾಡಿದೆ. ನನ್ನ ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ವಚನಗಳನ್ನು ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ಜನರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಿದೆ ಎಂದು ಹೇಳಲು ಹೆಮ್ಮೆ ಎನ್ನಿಸುತ್ತದೆ. ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ. ಸಂತಸದ,…

Read More

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್‌ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರುವಂತೆ ರೈತರಿಂದ ಬೇಡಿಕೆ ಇದ್ದು, ಸದ್ಯದಲ್ಲೇ ಆ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ರೈತ ಸಂಘ ಮಂಡಿಸಿರುವ ಎಲ್ಲಾ ಹಕ್ಕೊತ್ತಾಯಗಳ ಬಗ್ಗೆ ಪರಿಶೀಲನೆ ನಡೆಸಿ ಈಡೇರಿಸಲು ಪ್ರಯತ್ನಿಸಲಾಗುತ್ತದೆ. ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿಯ ಸಂಸದರಾಗಿದ್ದಾರೆ. ಇದೇ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗಿದೆ. ಫೆಬ್ರವರಿ 26 ರಂದು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಕಾಂಗ್ರೆಸ್ ಇನ್ನೂ ಹೆಸರು ಪ್ರಕಟಿಸಿಲ್ಲ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಕಾಂಗ್ರೆಸ್‌ ನ ರಾಜ್ಯಸಭಾ ಅಭ್ಯರ್ಥಿಯಾಗಬಹುದು. ಅಭಿಷೇಕ್ ಮನು ಸಿಂಘ್ವಿ ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಬಹುದಾದ್ರೆ, ಅಖಿಲೇಶ್ ಪ್ರಸಾದ್ ಸಿಂಗ್ ಬಿಹಾರದಿಂದ ಸ್ಪರ್ಧಿಸಬಹುದು. ಪಕ್ಷವು ಮತ್ತೊಮ್ಮೆ ಸೈಯದ್ ನಾಸಿರ್ ಹುಸೇನ್ ಮತ್ತು ಅಜಯ್ ಮಾಕನ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಘೋಷಿಸಬಹುದು. ಮಾಹಿತಿ ಪ್ರಕಾರ ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಬಹುದು.

Read More

ಬೆಂಗಳೂರು : ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ.ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು ಸಂಪೂರ್ಣ ಸಹಕಾರ ನೀಡುತ್ತೇವೆ. ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ ಆನೇಕಲ್ ವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ರಾಮನಗರ ಜಿಲ್ಲೆಗೆ ಯಾವ ಯಾವ ಇಲಾಖೆಗಳಲ್ಲಿ ಏನೆಲ್ಲಾ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ತಿಳಿಸುತ್ತೇನೆ ಎಂದು ಅವರು ತಿಳಿಸಿದರು. ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದಾರೆ. ಕೆಂಗಲ್ ಹನುಮಂತಯ್ಯ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು, ಶ್ರೀ ಶಿವಕುಮಾರ ಸ್ವಾಮೀಜಿಗಳು ಇದೇ ಜಿಲ್ಲೆಯವರು. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ…

Read More

ಕೊರಟಗೆರೆ:  ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟದ ಗ್ರಾಮ ಪಂಚಾಯಿತಿ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಬೆಂಗಳೂರು ಮೂಲದ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸುಮಾರು 17 ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಂದು ದಿನದ ಶ್ರಮದಾನ  ನಡೆಸಿದರು. ಇದೇ ವೇಳೆ ಬೂದಗವಿ ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಅಭಿನಂದನಾ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್, ಕಾರ್ಯದರ್ಶಿ ನರಸಿಂಹಮೂರ್ತಿ, ಬಿಲ್ ಕಲೆಕ್ಟರ್ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ರವಿ ಕುಮಾರ್,ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

Read More

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಕಾರು- ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟ ಘಟನೆ ನಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಬಸ್ ಟೈರ್ ಒಡೆದ ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಗೆ ಡಿಕ್ಕಿ ಹೊಡೆದಿತ್ತು. ಹಿಂದಿನಿಂದ ಬಂದ ಕಾರು ಬಸ್‌ ಗೆ ಡಿಕ್ಕಿ ಹೊಡೆದು ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಸಂತ್ರಸ್ತರಲ್ಲಿ ಒಬ್ಬನನ್ನು ಗುರುತಿಸಲಾಗಿದೆ ಮತ್ತು ನಾವು ಇತರ ಪ್ರಯಾಣಿಕರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಪಾಂಡೆ ತಿಳಿಸಿದ್ದಾರೆ. ಮಥುರಾದ ಮಹಾವನಡಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದ ಕಾರು ವಾಕುಜ ಬಸ್‌ ಗೆ ಢಿಕ್ಕಿಯಾಗಿದೆ. ವಾಹನ ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ತಂಡವನ್ನು ಕರೆಸಲಾಯಿತು.

Read More