Subscribe to Updates
Get the latest creative news from FooBar about art, design and business.
- ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
- ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
- ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
- ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
- ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
- ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
- ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
Author: admin
ಮುಂಬೈ: ವ್ಯಕ್ತಿಯೊಬ್ಬ ಇಬ್ಬರು ಹಿರಿಯ ನಾಗರೀಕರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ನಂತರ ಅರಣ್ಯ ಪ್ರದೇಶದಲ್ಲಿರುವ ಕೊಳಚೆ ಗುಂಡಿಯಲ್ಲಿ ಅವಿತುಕೊಂಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಬಲ್ ಮರ್ಡರ್ ಮಾಡಿದ ಆರೋಪಿಯನ್ನು ಕಿಶೋರ್ ಕುಮಾರ್ ಮಂಡಲ್ ಎಂದು ಗುರುತಿಸಲಾಗಿದ್ದು, ಈತನು ಒಬ್ಬ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈತ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ಬೋಯಿಸರ್ ನ ಕೂಡನ್ ಎಂಬ ಕುಗ್ರಾಮದಲ್ಲಿ ಜೋಡಿ ಕೊಲೆ ಮಾಡಿದ್ದಾನೆ. ಇಬ್ಬರು ಹಿರಿಯ ನಾಗರೀಕರನ್ನು ಕೊಡಲಿಯಿಂದ ಕೊಚ್ಚಿ ಕ್ರೂರವಾಗಿ ಕೊಂದಿದ್ದಾನೆ. ಕೊಲೆ ನಡೆಯುತ್ತಿದ್ದ ಸ್ಥಳದಲ್ಲಿ ಜನರು ಜಮಾಯಿಸುತ್ತಿದ್ದಂತಯೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಇತ್ತ ಆರೋಪಿ ಅರಣ್ಯ ಪ್ರದೇಶವೊಂದರ ಕೊಳಚೆ ಗುಂಡಿಯಲ್ಲಿ ಅಡಗಿ ಕುಳಿತಿರುವ ಮಾಹಿತಿ ಸಿಕ್ಕಿದೆ. ತಕ್ಷಣವೇ ಅಲೆರ್ಟ್ ಆದ ಫಾಲ್ಗರ್ ಪೊಲೀಸರು ಆತನನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆಯಾಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. 55 ವರ್ಷದ ವ್ಯಕ್ತಿ ಗುರುವಾರ ತನ್ನ ಶ್ವಾಸಕೋಶದಲ್ಲಿ ಏನೋ ಸಿಲುಕಿಕೊಂಡಿದ್ದ ಕಾರಣ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ. ಎಕ್ಸ್ ರೇ ವೇಳೆ ಶ್ವಾಸಕೋಶದಲ್ಲಿ ಏನೋ ವಸ್ತು ಇರುವುದು ತಿಳಿದುಬಂದಿದೆ. ಇದಾದ ಬಳಿಕ ಬ್ರಾಂಕೋಸ್ಕೋಪಿ ಪರೀಕ್ಷೆಯಿಂದ ಶ್ವಾಸಕೋಶದಲ್ಲಿ ಜಿರಳೆ ಇರುವುದು ಪತ್ತೆಯಾಗಿದೆ. ಸುಮಾರು 8ಗಂಟೆಗಳ ಸತತ ಪ್ರಯತ್ನದ ನಂತರ ವೈದ್ಯರು ರೋಗಿಯ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು ಹೊರತೆಗೆದಿದ್ದಾರೆ ಎಂದು ವರದಿ ತಿಳಿಸಿದೆ. ವೈದ್ಯರ ತಂಡವು ರೋಗಿಯ ಶ್ವಾಸಕೋಶದಿಂದ ಜಿರಳೆಯನ್ನು ತೆಗೆದುಹಾಕಲು ಎಂಟು ಗಂಟೆಗಳ ಕಾಲ ಹರಸಾಹಸವನ್ನು ಮಾಡಿದ್ದಾರೆ. ಅದಾಗಲೇ ಸತ್ತಿದ್ದ ಜಿರಳೆ ಒಂದು ಸಣ್ಣ ಭಾಗವು ದೇಹದ ಒಳಗೆ ಉಳಿಯದಂತೆ ತೆಗೆದು ಹಾಕಿದ್ದಾರೆ. ಇಲ್ಲದಿದ್ದರೆ ಭವಿಷ್ಯದಲ್ಲಿ ಸೋಂಕಿಗೆ ಕಾರಣವಾಗಬಹುದು ಎಂದು ಎಂಟು ಗಂಟೆಗಳ ಕಾಲ ಹರಸಾಹಸ ಮಾಡಿ 4 ಸೆಂಟಿ ಮೀಟರ್ ಉದ್ದದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುತ್ತ ಸುತ್ತಿಕೊಂಡಿರೋ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಇತ್ತೀಚೆಗೆ ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವಿನ ‘ಕಾಟೇರ’ ಟೈಟಲ್ ವಿವಾದ ಬೇರೆ ಕಡೆಗೆ ತಿರುಗಿತ್ತು. ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದರ್ಶನ್ ಕೊಟ್ಟ ಹೇಳಿಕೆ ವಿರುದ್ಧ ಮಹಿಳಾ ಸಂಘಟನೆಯೊಂದು ಆಕ್ರೋಶ ಹೊರಹಾಕಿತ್ತು. ದರ್ಶನ್ ತಮ್ಮ 25ನೇ ವರ್ಷದ ಸಿನಿ ಜರ್ನಿ ಸಂಭ್ರಮದ ವೇಳೆ “ಇವತ್ತು ಇವಳು ಇರುತ್ತಾಳೆ.. ನಾಳೆ ಅವಳು ಇರುತ್ತಾಳೆ” ಅಂತ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಯನ್ನು ಗೌಡತಿಯರ ಸೇನೆಯ ಮಹಿಳೆಯರು ಖಂಡಿಸಿದ್ದರು. ಅಷ್ಟೇ ಅಲ್ಲದೆ ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರನ್ನೂ ನೀಡಿದ್ದರು. ದರ್ಶನ್ ಕೊಟ್ಟ ಹೇಳಿಕೆಗಳಿಂದ ಮಹಿಳೆಯರಿಗೆ ಸಾರ್ವಜನಿಕವಾಗಿ ಅವಮಾನ ಆಗಿದೆ ಎಂದು ಆ ದೂರಿನಲ್ಲಿ ತಿಳಿಸಲಾಗಿತ್ತು ಎಂದು ವರದಿ ತಿಳಿಸಿದೆ. ಈ ಸಂಬಂಧ ಇಂದು (ಮಾರ್ಚ್ 1) ಕರ್ನಾಟಕ ರಾಜ್ಯ ಮಹಿಳಾ ಆಯೋಗ ದರ್ಶನ್ ಗೆ ನೋಟಿಸ್ ನೀಡಿದೆ.…
ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗೆ ಬಳ್ಳಾರಿಗೆ ಹೋಗಿದ್ದರು. ಈ ನಟ ಬೆಂಗಳೂರಿನಿಂದ ಸ್ಪೆಷಲ್ ಪ್ರಯಾಣ ಮಾಡಿದ್ದು, ಅಲ್ಲಿಯ ಜನರು ನೆಚ್ಚಿನ ನಟನನ್ನು ನೋಡಿ ಹುಚ್ಚೆದ್ದು ಕುಣಿದಿದ್ದಾರೆ. ಈ ನಟ ಕೆರೆಯ ಜೀರ್ಣೋದ್ಧಾರ ಕೆಲಸ ಮಾಡಲು ಹೋಗಿದ್ದರು. ಆದರೇ ಈ ಬಾರಿ ರಾಕಿಭಾಯ್ ಬಳ್ಳಾರಿಗೆ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದರು. ಇದಕ್ಕೆ ಕಾರಣ ಹಂಚಿಕೆದಾರ ಸಾಯಿಯವರು. ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-1 ಅನ್ನು ಅದ್ಧೂರಿಯಾಗಿ ಅಷ್ಟೇ ಪ್ಯಾಶಿನೇಟ್ ರೀತಿಯಲ್ಲಿ ಸಾಯಿ ರಿಲೀಸ್ ಮಾಡಿದ್ದರು. ರಾಕಿಂಗ್ ಸ್ಟಾರ್ ಬಳ್ಳಾರಿಗೆ ಬಂದಾಗ ಬಿಳಿ ಧೋತಿ ಮತ್ತು ಶಾಲು ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇದನ್ನು ನೋಡ್ತಾಯಿದ್ದರೇ ಯಶ್ ರಾಜಕೀಯ ಎಂಟ್ರಿ ಎಂಬುದರ ಬಗ್ಗೆ ಪ್ರಶ್ನೆ ಕಾಡ್ತಾಯಿದ್ದು, ಸದ್ಯ ಈ ನಟ ಪ್ರತಿಕ್ರಿಯಿಸಿದ್ದಾರೆ. ನಟ ಯಶ್ ಮಾತನಾಡುತ್ತಾ “ನಾನು ರಾಜಕೀಯಕ್ಕೆ ಬರಲ್ಲ. ನನಗೆ ಆಸಕ್ತಿ ಇಲ್ಲ. ‘ಟಾಕ್ಸಿಕ್’ ಸಿನಿಮಾ ಬಿಟ್ಟು ಯಾವುದರ ಕಡೆ ಕೂಡ…
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ. ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ನ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ ಎಂದರು. ಕಾಂಗ್ರೆಸ್ ಗೆ 136 ಸ್ಥಾನವಿದ್ದರೂ ಬಿಜೆಪಿ ಸರ್ಕಾರ ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಬಿಜೆಪಿಗೆ ಸರ್ಕಾರಗಳನ್ನ ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಗಾಜಾಕ್ಕೆ ನೆರವು ನೀಡಿದ ಅಮೆರಿಕ. ಯು ಎಸ್ ಪಡೆಗಳು ಗಾಜಾಕ್ಕೆ ಆಹಾರವನ್ನು ತರುತ್ತವೆ ಅಗತ್ಯ ವಸ್ತುಗಳನ್ನು ಸಹ ವಿತರಿಸಲಾಗುವುದು ಎಂದು ಅಧ್ಯಕ್ಷ ಜೋ ಬಿಡನ್ ಘೋಷಿಸಿದರು. ಗಾಜಾದಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದವರ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಯುನೈಟೆಡ್ ಸ್ಟೇಟ್ಸ್ ನ ಘೋಷಣೆ ಬಂದಿದೆ. ಅಗತ್ಯ ಸಾಮಗ್ರಿಗಳನ್ನು ವಿಮಾನದಲ್ಲಿ ಇಳಿಸಲಾಗುವುದು ಮತ್ತು ಸಮುದ್ರದ ಮೂಲಕ ಸಹಾಯವನ್ನು ತರಲಾಗುವುದು ಎಂದು ಬಿಡೆನ್ ಘೋಷಿಸಿದರು. ಗಾಜಾದ ಆಹಾರ ವಿತರಣಾ ಕೇಂದ್ರದಲ್ಲಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ 104 ಜನರು ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್ ಆರೋಗ್ಯ ಕಾರ್ಯಕರ್ತರ ಪ್ರಕಾರ ಸುಮಾರು 700 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್ ಸೇನೆ ಕೂಡ ಗುಂಡಿನ ದಾಳಿಯನ್ನು ದೃಢಪಡಿಸಿದೆ. ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಈ ದಾಳಿಯನ್ನು ಖಂಡಿಸಿದ್ದು, ಇದೊಂದು ಹತ್ಯಾಕಾಂಡ ಎಂದು ಬಣ್ಣಿಸಿದೆ. ಪಶ್ಚಿಮ ಗಾಜಾದ ನಬುಲ್ಸಿ ವೃತ್ತದಲ್ಲಿ ಆಹಾರ ಟ್ರಕ್ ಗಳನ್ನು ಸಮೀಪಿಸುತ್ತಿದ್ದ ಜನರನ್ನು ಸೇನೆಯು ಗುಂಡು ಹಾರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಗಾಜಾದ…
ಅಯೋಧ್ಯೆಯ ರಾಮಮಂದಿರ ಪ್ರತಿಷ್ಠಾ ಸಮಾರಂಭಗಳಲ್ಲಿ 27ರಿಂದ ರಾಗಸೇವೆ ಎಂಬ ಕಲಾ ಪ್ರದರ್ಶನಗಳು ನಡೆಯುತ್ತವೆ. ರಾಗ ಸೇವೆಯನ್ನು ಬಾಲಿವುಡ್ ತಾರೆಯರು ಕೂಡ ಮಾಡುತ್ತಾರೆ. ಆ ಪೈಕಿ ಖ್ಯಾತ ನಟಿ ಹಾಗೂ ನರ್ತಕಿ ವೈಜಯಂತಿಮಾಲಾ ಅವರ ನೃತ್ಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಪ್ಪಾಳೆ ತಟ್ಟುತ್ತಿದೆ. 90ರ ಹರೆಯದಲ್ಲೂ ವೈಜಯಂತಿಮಾಲಾ ವಯಸ್ಸಿಗೆ ಮೀರಿದ ಪ್ರದರ್ಶನ ನೀಡಿದ್ದಾರೆ. ಇತ್ತೀಚಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾದ ಪದ್ಮ ಪ್ರಶಸ್ತಿಗಳಲ್ಲಿ ವೈಜಯಂತಿಮಾಲಾ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಯಿತು. ಪದ್ಮಶ್ರೀ, ಕಲೈಮಾಮಣಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮುಂತಾದ ಅನೇಕ ಗೌರವಗಳನ್ನು ಪಡೆದಿದ್ದಾರೆ. ವಯಸ್ಸಿನ ಸವಾಲುಗಳನ್ನು ಮೆಟ್ಟಿ ನಿಲ್ಲಲು ವೈಜಯಂತಿಮಾಲಾ ಅವರ ಭರತನಾಟ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿರಾಮದ ನಂತರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪುನರಾರಂಭಗೊಳ್ಳಲಿದೆ. ವಿವಿಧ ಪ್ರದೇಶಗಳಲ್ಲಿನ ರೈತರು, ಮಾಜಿ ಸೈನಿಕರು, ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಪಂಗಡದ ಜನರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಪ್ರದೇಶ ತಲುಪಲಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಆರನೇ ದಿನದವರೆಗೆ ರಾಜ್ಯದ ವಿವಿಧೆಡೆ ಸಂಚರಿಸಲಿದೆ. ರಾಜಸ್ಥಾನದಿಂದ ಆರಂಭವಾಗಿ ಮಧ್ಯಪ್ರದೇಶದ ಮೂಲಕ ಪ್ರಯಾಣ ಮುಂದುವರಿಯಲಿದೆ. 7ರಂದು ರಾಜಸ್ಥಾನ ಮಾರ್ಗವಾಗಿ ಗುಜರಾತ್ ಪ್ರವೇಶಿಸಲಿದೆ. ಕಾಂಗ್ರೆಸ್ ಭದ್ರಕೋಟೆ ಗ್ವಾಲಿಯರ್‌ನಲ್ಲಿ ರೋಡ್ ಶೋ ಮತ್ತು ಹಜಿರಾದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. 20 ರಂದು ಮುಂಬೈನಲ್ಲಿ ಪ್ರಯಾಣ ಕೊನೆಗೊಳ್ಳಲಿದೆ ಎಂದು ಮೊದಲು ಘೋಷಿಸಲಾಗಿತ್ತು. ಕನಿಷ್ಠ ಐದು ದಿನ ಮುಂಚಿತವಾಗಿ ಸಮಾರೋಪ ಸಮಾರಂಭ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಒಂದು ಕಾಲದಲ್ಲಿ ರಾಹುಲ್ ಗಾಂಧಿಗೆ ನಿಷ್ಠರಾಗಿ ನಂತರ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸ್ಥಾನವಾದ ಗ್ವಾಲಿಯರ್‌ನಲ್ಲಿ ಹತ್ತಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.…
ಯುವರಾಜ್ ಸಿಂಗ್ ಅಭ್ಯರ್ಥಿಯಾಗುವ ವರದಿಗಳನ್ನು ನಿರಾಕರಿಸಿದ್ದಾರೆ. ಅವರು ಗುರುದಾಸ್‌ಪುರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ತಮ್ಮ ಪ್ರತಿಷ್ಠಾನದ ಮೂಲಕ ಜನರ ಸೇವೆಯನ್ನು ಮುಂದುವರಿಸುವುದಾಗಿ ಯುವರಾಜ್ ಹೇಳಿದ್ದಾರೆ. ಗುರುದಾಸ್ ಪುರದಲ್ಲಿ ಸನ್ನಿ ಡಿಯೋಲ್ ಬದಲಿಗೆ ಯುವರಾಜ್ ಸಿಂಗ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ವರದಿಗಳು ಬಂದಿದ್ದವು. “ನಾನು ಗುರುದಾಸ್ ಪುರದಿಂದ ಸ್ಪರ್ಧಿಸುತ್ತಿಲ್ಲ. ಜನರಿಗೆ ಸಹಾಯ ಮಾಡುವುದರಲ್ಲಿ ನನ್ನ ಸಂತೋಷವಿದೆ. ನನ್ನ ಕಾರಂಜಿ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ. ಈ ಜಗತ್ತಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬದಲಾವಣೆ ತರಲು ಪ್ರಯತ್ನಿಸೋಣ”- ಯುವರಾಜ್ ಎಕ್ಸ್ ನಲ್ಲಿ ಬರೆದಿದ್ದಾರೆ. ಯುವರಾಜ್ ಸಿಂಗ್ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ನಂತರ, ಯುವರಾಜ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಇದ್ದವು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಬರಪರಿಸ್ಥಿತಿ ಆವರಿಸಿದ್ದು, ಬರ ನಿರ್ವಹಣೆ ಕಡೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ ನೀಡಲಾಗಿದೆ. ಬೋರ್ ವೆಲ್ ಮೂಲಕವೂ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ವಿಕಾಸಸೌಧದಲ್ಲಿ ಡಿಸಿ, ಎಸಿ, ಸರ್ವೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ಇನ್ಮೇಲೆ ಸಮಸ್ಯೆ ಉಲ್ಬಣ ಆಗಲಿದೆ ಮೇ ತಿಂಗಳಲ್ಲಿ ಸಮಸ್ಯೆ ಹೆಚ್ಚಾಗಬಹುದು. ಹೀಗಾಗಿ ಬರ ನಿರ್ವಹಣೆಗೆ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ತಿದ್ದೇವೆ. ಕುಡಿಯುವ ನೀರು, ಮೇವಿಗೆ ಆದ್ಯತೆ ಕೊಟ್ಟಿದ್ದೇವೆ, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ತಾಲೂಕು, ಗ್ರಾ.ಪಂ ಲೆವೆಲ್ ನಲ್ಲಿ ಟೆಂಡರ್ ಗೆ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ತುರ್ತು ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. 24 ಗಂಟೆಯೊಳಗೆ ನೀರು ಕೊಡುವುದು ಕಷ್ಟ ಅದಕ್ಕೆ ಟ್ಯಾಂಕರ್ ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಟ್ಯಾಂಕರ್ ಮೂಲಕ ನೀರು ಪೂರೈಕೆ…