Author: admin

ದೊಡ್ಡಆಲದಮರ(ಹನುಮಂತನಗರ), ಜೋಡಿದೇವರಹಳ್ಳಿ, ನಾಗೇನಹಳ್ಳಿ, ಜೋಗಿಹಳ್ಳಿ, ಸೀಬಿಅಗ್ರಹಾರ, ಕುಂಟೇಗೌಡನಹಳ್ಳಿ, ನೆಲದಿಮ್ಮನಹಳ್ಳಿ, ಬಾಳಬಸವನಹಳ್ಳಿ, ಕಾಳೆನಳ್ಳಿ, ಅಮಲಗುಂದಿ, ಎಲ್. ಎಚ್. ಪಾಳ್ಯ, ಅಜ್ಜಯನಪಾಳ್ಯ, ಕಾಗೆನಿಂಗನಹಳ್ಳಿ, ಭೋವಿಪಾಳ್ಯ,  ಎಲದಬಾಗಿ, ಮತ್ತು ಜವನಹಳ್ಳಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ ಅಡಿಯಲ್ಲಿ ಮುಚ್ಚುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಇಂದು ದೊಡ್ಡಆಲದಮರದಲ್ಲಿ ಬೃಹತ್ ಪೋಷಕರ ಪ್ರತಿಭಟನಾ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ AIDSO ರಾಜ್ಯ ಉಪಾಧ್ಯಕ್ಷರಾದ  ಚಂದ್ರಕಲಾರವರು ಮಾತನಾಡುತ್ತಾ,  “ಅಕ್ಟೋಬರ್ 15 ಹಾಗೂ ಡಿಸೆಂಬರ್ 30 2025 ರಂದು ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ, ರಾಜ್ಯಾದಾದ್ಯಂತ ಗ್ರಾಮ ಪಂಚಾಯಿತಿಗೆ ಒಂದು ಸರ್ಕಾರಿ ಶಾಲೆಯಂತೆ, ಕೇವಲ ೬೦೦೦ ಶಾಲೆಗಳು ಉಳಿದು ೪೦,೦೦೦ ಸರ್ಕೆಕಾರಿ ಶಾಲೆಗಳು ನಶಿಸುವವು.  ಅಂದರೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯ ಉಳಿದ ಎಲ್ಲಾ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ. ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ…

Read More

ಗುಬ್ಬಿ: ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜನವರಿ 30ರಂದು ನೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗದ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು. ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತ್ಯಾಗಟೂರು ಸರ್ಕಾರಿ ಶಾಲೆ ನೂರು ದಿನದ ಸಂಭ್ರಮಾಚರಣೆಯಲ್ಲಿದೆ. ಈ ಸರ್ಕಾರಿ ಶಾಲೆಯಲ್ಲಿ 130‌ ಮಕ್ಕಳು ಇದ್ದು, ಇಲ್ಲಿನ ಶಿಕ್ಷಕರು ಶಿಕ್ಷಕಿಯರು ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಶತಮನೋತ್ಸವ ಆಚರಿಸಿಕೊಳಲು ಸಿದ್ದವಾಗಿದೆ. ಶತಮಾನೋತ್ಸವಕ್ಕೆ ಕಾರ್ಯಕ್ರಮಕ್ಕೆ ತುಮಕೂರು ರಾಮಕೃಷ್ಣ ಮಠದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ವಹಿಸಲಿದ್ದು, ಅಧ್ಯಕ್ಷತೆಯನ್ನು ತೆಂಗು ನಾರು ಮಹಾಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಟಿಎಸ್ ಕಿಡಿಗಾರಪ್ಪ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ತುಮಕೂರು ಉಸ್ತುವಾರಿ ಸಚಿವ ಜಿ ಪರಮೇಶ್ವರ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ವಹಿಸಲಿದ್ದಾರೆ. ಎಂದು ತಿಳಿಸಿದರು. ಗ್ರಾಮ…

Read More

ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್‌ ಐ ತೀರ್ಥೇಶ್ ತಿಳಿಸಿದರು. ಪಟ್ಟಣದಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಸಂಚಾರ ನಿಯಮಗಳನ್ನು ಅನುಸರಿಸಬೇಕು ಹಾಗೂ ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾವು, ನೋವುಗಳನ್ನು ತಪ್ಪಿಸಬಹುದು ಎಂದು ಹೇಳಿದರು. ದಲಿತ ಸಂಘರ್ಷ ಸಮಿತಿ ತಾ.ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಅಪಘಾತಗಳನ್ನು ತಡೆಯಲು ಹಲವು ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕು, ದ್ವಿಚಕ್ರ ವಾಹನ ಸವಾರರು ಮನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದ್ದು, ಅಪಘಾತಗಳ ತಡೆಗೆ ಇಂತಹ ಅಭಿಯಾನಗಳು ಸಹಕಾರಿಯಾಗಲಿವೆ…

Read More

ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ  (ಮೂಲ ಸಂಘಟನೆ) ತಾಲೂಕು ಅಧ್ಯಕ್ಷರಾಗಿ ಕಣಕೂರು ಚಂದ್ರಶೇಖರ್ ರವರು ಆಯ್ಕೆಯಾಗಿದ್ದಾರೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಶ್ರೀ ಕ್ಷೇತ್ರ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ತಾಲೂಕುಗಳ ಅಧ್ಯಕ್ಷರ ಆಯ್ಕೆಯ ಸಭೆಯಲ್ಲಿ  ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷರಾದ ಮಹದೇವಯ್ಯ ಮತ್ತು ಜಿಲ್ಲಾಧ್ಯಕ್ಷರಾದ ಬಿ.ಆರ್.ಯೋಗೇಶ್ ಗೌಡ ರವರು ಅಧಿಕೃತವಾಗಿ ಆದೇಶ ಪತ್ರ ನೀಡಿದ್ದಾರೆ ಎಂದು ನೂತನ ಅಧ್ಯಕ್ಷರಾದ “ಕಣಕೂರು ಚಂದ್ರಶೇಖರ್ “ಮಾಧ್ಯಮಕ್ಕೆ ತಿಳಿಸಿದ್ದಾರೆ. ಸಭೆಯಲ್ಲಿ ಹಾಸನ ಜಿಲ್ಲಾಧ್ಯಕ್ಷರಾದ ರೂಪತಾರ, ತಿಪಟೂರು ತಾಲೂಕು ಅಧ್ಯಕ್ಷರಾದ ಈಶ್ವರ್, ಶಿರಾ ತಾಲೂಕು ಮಹಿಳಾ ಅಧ್ಯಕ್ಷರಾದ ನಾಗರತ್ನ, ತುಮಕೂರು ಗ್ರಾಮಾಂತರ ಅಧ್ಯಕ್ಷರಾದ ನಟರಾಜು ಸೇರಿದಂತೆ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ವಿವಿಧ ತಾಲೂಕುಗಳ ಅಧ್ಯಕ್ಷರುಗಳು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಶುಭ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸತ್ನಾ (ಮಧ್ಯಪ್ರದೇಶ): ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ ಆಂಬುಲೆನ್ಸ್ ವ್ಯವಸ್ಥೆಯ ನಿರ್ಲಕ್ಷ್ಯದಿಂದಾಗಿ 67 ವರ್ಷದ ವೃದ್ಧರೊಬ್ಬರು ಆಸ್ಪತ್ರೆಯ ಗೇಟ್ ತಲುಪಿದರೂ ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ಘಟನೆಯ ವಿವರ: ರಾಮನಗರ ನಿವಾಸಿ ರಾಮ್ ಪ್ರಸಾದ್ (67) ಎಂಬುವವರು ಶನಿವಾರ ಬೆಳಿಗ್ಗೆ ಚಳಿ ಕಾಯಿಸಿಕೊಳ್ಳುತ್ತಿದ್ದಾಗ ದಿಢೀರನೆ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಸತ್ನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕುಟುಂಬಸ್ಥರು ರಾಮ್ ಪ್ರಸಾದ್ ಅವರನ್ನು 108 ಆಂಬುಲೆನ್ಸ್ ಮೂಲಕ ಸತ್ನಾ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಆದರೆ, ಆಸ್ಪತ್ರೆಯ ಆವರಣ ತಲುಪಿದಾಗ ಆಂಬುಲೆನ್ಸ್‌ನ ಹಿಂಭಾಗದ ಬಾಗಿಲು (Door) ಒಳಗಿನಿಂದ ಜಾಮ್ ಆಗಿತ್ತು. ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಪ್ರಾಣ ಉಳಿಸಲು ಹರಸಾಹಸ: ರೋಗಿಯ ಸ್ಥಿತಿ ಗಂಭೀರವಾಗಿದ್ದರಿಂದ ಆತಂಕಕ್ಕೊಳಗಾದ ಸಂಬಂಧಿಕರು ಮತ್ತು ಆಂಬುಲೆನ್ಸ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಚಾಲಕ ಕಿಟಕಿಯ ಮೂಲಕ ಒಳಗೆ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ-ರಿಪೋರ್ಟ್’ (ಅಂತಿಮ ವರದಿ) ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ (ಜನವರಿ 28) ಅಂಗೀಕರಿಸಿದೆ. ಸಿಎಂ ಕುಟುಂಬಕ್ಕೂ ಕ್ಲೀನ್ ಚಿಟ್: ಕೇವಲ ಸಿದ್ದರಾಮಯ್ಯ ಮಾತ್ರವಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜ್ ಅವರಿಗೂ ನ್ಯಾಯಾಲಯ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ನಡೆಸಿದ ಸುದೀರ್ಘ ತನಿಖೆಯಲ್ಲಿ ಸಿಎಂ ಕುಟುಂಬಸ್ಥರ ವಿರುದ್ಧ ಯಾವುದೇ ಅಕ್ರಮ ನಡೆದಿಲ್ಲ ಎಂಬ ಅಂಶ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ವರದಿಯನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎತ್ತಿ ಹಿಡಿದಿದ್ದಾರೆ. ಇತರರ ವಿರುದ್ಧ ತನಿಖೆ ಮುಂದುವರಿಕೆ: ಮುಖ್ಯಮಂತ್ರಿಗಳ ವಿರುದ್ಧದ…

Read More

ಸರಗೂರು:   ವಿದ್ಯಾರ್ಥಿಗಳು ಪದವಿ ಪೂರ್ವ ಹಂತದಲ್ಲಿ ಪುಸ್ತಕವನ್ನು  ಓದುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ಬದುಕಿನ ಶೈಲಿಯಾಗಬೇಕು. ಇದರಿಂದ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಮೈಸೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮಾನಂದ ತಿಳಿಸಿದರು. ತಾಲೂಕಿನ ಸಮೀಪದ ತುಂಬಸೋಗೆ ಎಂಎಂಕೆ ಸ್ವತಂತ್ರ ಪದವಿ ಪೂರ್ವ ಕಾಲೇಜು ಶಾಲಾ ಮತ್ತು ಕಾಲೇಜಿ ಕಾಲೇಜು  ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಆತ್ಮವಿಶ್ವಾಸ ಮತ್ತು ದೃಢತೆಯಿಂದ ಮಾತನಾಡಬೇಕು. ನಿಮ್ಮನ್ನು ನೀವೇ ನಂಬಬೇಕು. ನಿಮ್ಮಲ್ಲಿ ಸಾಧನೆ ಆಟ ಮತ್ತು ಛಲ ಇರಬೇಕು, ಪ್ರತಿ ವಿದ್ಯಾರ್ಥಿ ಕೈಯಲ್ಲಿ ಇದು ಸಾಧ್ಯ. ಆದ್ದರಿಂದ ಸಾಮಾನ್ಯ ಜ್ಞಾನ ಸಂಪಾದಿಸಬೇಕು. ಇದು ಮುಂದಿನ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುತ್ತದೆ. ನೀವು ಶಿಕ್ಷಣದಲ್ಲಿ ಸಾಧನೆ ಮಾಡಿದರೆ ನಿಮ್ಮ ಪೋಷಕರು ಖುಷಿಯಾಗಿರುತ್ತಾರೆ. ಅವರ ಆಸೆ ಈಡೇರುತ್ತದೆ.  ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆ ಶಿಕ್ಷಣ ಅಗತ್ಯ ಎಂದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮೇಗೌಡ ಮಾತನಾಡಿ, ಮಕ್ಕಳಿಗೆ ಸಾಧನೆ ಮುಖ್ಯ. ಈ ಸಾಧನೆಯಿಂದ ಪರೀಕ್ಷೆ ಫಲಿತಾಂಶ ಉತ್ತಮಗೊಂಡು ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ…

Read More

ತುಮಕೂರು: ಸಂವಿಧಾನದ ರಕ್ಷಣೆ ಮತ್ತು ಶೋಷಿತ ವರ್ಗಗಳ ಹಿತಕಾಯುವ ಉದ್ದೇಶದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆಯ ಉದ್ಘಾಟನಾ ಸಮಾರಂಭವು ಇಂದು (ಜನವರಿ 26, 2026) ನಗರದ ಎಂ.ಜಿ. ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾವಿರಾರು ಸೈನಿಕರ ಸಮ್ಮುಖದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನೆರವೇರಿತು. ರಾಜ್ಯಾಧ್ಯಕ್ಷರಾದ ಎಂ. ನರಸಿಂಹರಾಜು ಅವರು ಸಸಿಗೆ ನೀರೆರೆಯುವ ಮೂಲಕ ಸಂಘಟನೆಗೆ ಚಾಲನೆ ನೀಡಿದರು. ನಂತರ ಮಾತನಾಡಿ,  ಉದ್ಘಾಟನಾ ಭಾಷಣ ಮಾಡಿದ ರಾಜ್ಯಾಧ್ಯಕ್ಷ ಎಂ.ನರಸಿಂಹರಾಜು ಅವರು, “ಇಂದಿನ ರಾಜಕೀಯ ಸನ್ನಿವೇಶದಲ್ಲಿ ಮನುವಾದಿ ಶಕ್ತಿಗಳ ಕುತಂತ್ರದಿಂದಾಗಿ ಸಂವಿಧಾನವು ಅಪಾಯದಲ್ಲಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಹಕ್ಕುಗಳಿಂದಲೇ ಇಂದು ಬಹುಜನರು ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದರೆ, ಅಧಿಕಾರಕ್ಕಾಗಿ ಜಾತಿ-ಧರ್ಮಗಳ ಹೆಸರಿನಲ್ಲಿ ಜನರ ನಡುವೆ ಕಂದಕ ಸೃಷ್ಟಿಸುವ ಕೆಲಸವಾಗುತ್ತಿದೆ,” ಎಂದು ಆತಂಕ ವ್ಯಕ್ತಪಡಿಸಿದರು. ಬಂಗಾರಪ್ಪ (ಉಪಾಧ್ಯಕ್ಷರು) ಮಾತನಾಡಿ, ಸಂಘಟನೆಯಲ್ಲಿ ಎಲ್ಲಾ ಸಮುದಾಯದ ಪದಾಧಿಕಾರಿಗಳಿದ್ದು, ಸರ್ವರಿಗೂ ಸಮಾನ ನ್ಯಾಯ ಒದಗಿಸಲು…

Read More

ಗುಬ್ಬಿ: ತಾಲೂಕಿನ ಚೇಳೂರು ಹೋಬಳಿಯ ಬಿದರೆ ಗ್ರಾಮಠಾಣಾ ವ್ಯಾಪ್ತಿಯ ಸಾರ್ವಜನಿಕ ಆಸ್ತಿ ಹಾಗೂ ಪುರಾತನ “ಗಂಗಸ ಕಟ್ಟೆ” (ಗೋಕಟ್ಟೆ) ಒತ್ತುವರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿದರೆ ಗ್ರಾಮಕ್ಕೆ ಸೇರಿದ ಗಂಗಸ ಕಟ್ಟೆಯು ಪುರಾತನ ಕಾಲದಿಂದಲೂ ಹಸು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಸಾಕುಪ್ರಾಣಿಗಳ ಕುಡಿಯುವ ನೀರಿನ ಆಧಾರವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಕಟ್ಟೆಗೆ ಮಣ್ಣು ಸುರಿದು ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. “ಸಾರ್ವಜನಿಕ ಆಸ್ತಿಯನ್ನು ರಕ್ಷಿಸಬೇಕಾದ ಅಧಿಕಾರಿಗಳು ಒತ್ತುವರಿದಾರರ ಪರವಾಗಿ ನಿಂತಿರುವುದು ವಿಪರ್ಯಾಸ. ಬಿದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಣ್ಣು ತೆರವುಗೊಳಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ರೈತ ಮುಖಂಡರು ಆರೋಪಿಸಿದರು. ಗುಬ್ಬಿ ತಾಲೂಕಿನಾದ್ಯಂತ ಕೆರೆ-ಕಟ್ಟೆಗಳು ಹಾಗೂ ಗುಂಡು-ದೋಪುಗಳು ಒತ್ತುವರಿಯಾಗುತ್ತಿದ್ದರೂ ಅಧಿಕಾರಿಗಳು ಕಣ್ಣು…

Read More

ಬೆಂಗಳೂರು: ದಕ್ಷ ಹಾಗೂ ಜನಸ್ನೇಹಿ ಆಡಳಿತಕ್ಕೆ ಹೆಸರಾಗಿದ್ದ ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ರಾಜ್ಯ ಸರ್ಕಾರವು ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಿದೆ. ಇಂದು (ಜನವರಿ 28) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ನೇಮಕಾತಿ ಆದೇಶದ ಪ್ರತಿಯನ್ನು ಹಸ್ತಾಂತರಿಸಿದರು. ಪ್ರಾಮಾಣಿಕ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ 2025ರ ನವೆಂಬರ್ 25ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಕಾಲಿಕ ನಿಧನ ಹೊಂದಿದ್ದರು. ಅವರ ನಿಧನವು ಇಡೀ ರಾಜ್ಯಕ್ಕೆ ದೊಡ್ಡ ನಷ್ಟವಾಗಿತ್ತು. ಕುಟುಂಬದ ಆಧಾರಸ್ತಂಭವಾಗಿದ್ದ ಅವರ ಅಗಲಿಕೆಯಿಂದ ಸಂಕಷ್ಟಕ್ಕೀಡಾಗಿದ್ದ ಕುಟುಂಬಕ್ಕೆ ನೆರವಾಗಲು ಸರ್ಕಾರಿ ನೌಕರಿ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ಅನ್ವಯ ಈ ನೇಮಕಾತಿ ಮಾಡಲಾಗಿದೆ.  ಚೈತನ್ಯಾ ಬೀಳಗಿ ಅವರಿಗೆ ಪ್ರಥಮ ದರ್ಜೆ ಸಹಾಯಕಿ (FDA) ಹುದ್ದೆಯನ್ನು ನೀಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ (Commercial Tax Department) ನೇಮಕ ಮಾಡಲಾಗಿದೆ.…

Read More